Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 1:12 - ಕನ್ನಡ ಸತ್ಯವೇದವು J.V. (BSI)

12 ರಾಜನು ಅತ್ತ ಓಲಗದಲ್ಲಿದ್ದಾಗ ನನ್ನ ಜಟಾಮಾಂಸಿಯು ಇತ್ತ ಪರಿಮಳವನ್ನು ಬೀರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ರಾಜನು ಔತಣದಲ್ಲಿದ್ದಾಗ ಇತ್ತ ನನ್ನ ಸುಗಂಧತೈಲವು ಪರಿಮಳವನ್ನು ಬೀರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅತ್ತ ರಾಜನು ಮಂಚದ ಮೇಲೆ ಮಲಗಿಕೊಂಡಿರಲು ಇತ್ತ ಬೀರುತ್ತಿತ್ತು ನನ್ನ ಪರಿಮಳ ತೈಲ ಸುವಾಸನೆಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಓಲಗದ ಮೇಲೆ ಮಲಗಿರುವ ರಾಜನಿಗೆ ನನ್ನ ಸುಗಂಧದ್ರವ್ಯದ ಪರಿಮಳವು ಹರಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅರಸನು ಮೇಜಿನ ಬಳಿಯಲ್ಲಿ ಕೂತಿದ್ದಾಗ, ನನ್ನ ಪರಿಮಳ ತೈಲವು ಸುವಾಸನೆಯನ್ನು ಬೀರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 1:12
14 ತಿಳಿವುಗಳ ಹೋಲಿಕೆ  

ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೇಕೂದಲಿನಿಂದ ಆತನ ಪಾದಗಳನ್ನು ಒರಸಿದಳು. ಆ ತೈಲದ ಪರಿಮಳವು ಮನೆಯಲ್ಲೆಲ್ಲಾ ತುಂಬಿಕೊಂಡಿತು.


ಇಗೋ, ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಶಬ್ದವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟಮಾಡುವೆನು, ಅವನು ನನ್ನ ಸಂಗಡ ಊಟಮಾಡುವನು.


ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.


ಆತನು ಬೇಥಾನ್ಯದಲ್ಲಿ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಇದ್ದು ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ತೈಲದ ಭರಣಿಯನ್ನು ತೆಗೆದುಕೊಂಡು ಬಂದು ಆ ಭರಣಿಯನ್ನು ಒಡೆದು ತೈಲವನ್ನು ಆತನ ತಲೆಯ ಮೇಲೆ ಹೊಯಿದಳು.


ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ - ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವಾಸ್ತ್ಯವಾಗಿ ತೆಗೆದುಕೊಳ್ಳಿರಿ.


ಹೀಗೆ ಮನೆತುಂಬ ಊಟಕ್ಕೆ ಕೂತರು. ಆಮೇಲೆ ಅರಸನು ಕೂತವರನ್ನು ನೋಡುವದಕ್ಕೆ ಒಳಕ್ಕೆ ಬರಲಾಗಿ ಮದುವೇಬಟ್ಟೆಯನ್ನು ಹಾಕಿಕೊಳ್ಳದ ಒಬ್ಬನನ್ನು ಕಂಡು


ತಿರಿಗಿ ಬೇರೆ ಆಳುಗಳನ್ನು ಕರೆದು - ನೀವು ಊಟಕ್ಕೆ ಹೇಳಿಸಿಕೊಂಡವರ ಬಳಿಗೆ ಹೋಗಿ - ಇಗೋ, ಅಡಿಗೆ ಸಿದ್ಧವಾಗಿದೆ; ನನ್ನ ಹೋರಿಗಳನ್ನೂ ಕೊಬ್ಬಿದ ಪಶುಗಳನ್ನೂ ಕೊಯಿಸಿದ್ದೇನೆ; ಎಲ್ಲಾ ಸಿದ್ಧವಾಗಿದೆ; ಮದುವೆಯ ಊಟಕ್ಕೆ ಬನ್ನಿರೆಂಬದಾಗಿ ಅವರಿಗೆ ಹೇಳಿರೆಂದು ಅಪ್ಪಣೆ ಕೊಟ್ಟು ಕಳುಹಿಸಿದನು.


ನಿನ್ನ ಶಿರಸ್ಸು ಕರ್ಮೆಲ್ ಬೆಟ್ಟದಂತೆ ಗಂಭೀರ; ನಿನ್ನ ತಲೆಯ ಕೂದಲು ಧೂಮ್ರವರ್ಣವು; ರಾಜನು ಅದರ ತೆಕ್ಕೆತೆಕ್ಕೆಗಳಲ್ಲಿ ಕಟ್ಟುಬಿದ್ದಿದ್ದಾನೆ.


ಒಂದು ದಿವ್ಯ ವಿಷಯವನ್ನು ಹೇಳುವದಕ್ಕೆ ನನ್ನ ಹೃದಯವು ತವಕಪಡುತ್ತದೆ; ನಾನು ರಾಜನನ್ನು ಕುರಿತು ಈ ಪದ್ಯವನ್ನು ರಚಿಸುವೆನು. ನನ್ನ ನಾಲಿಗೆಯು ಒಳ್ಳೇ ಬರವಣಿಗಸ್ತನ ಲೇಖನಿಯಂತೆ ಸಿದ್ಧವಾಗಿದೆ.


ನಾವು ನಿನಗೆ ಬೆಳ್ಳಿಯ ತಿರುಪಿನ ಜಡೆ ಬಂಗಾರಗಳನ್ನು ಮಾಡಿಸುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು