Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 1:15 - ಕನ್ನಡ ಸತ್ಯವೇದವು J.V. (BSI)

15 ಆಹಾ, ನನ್ನ ಪ್ರಿಯಳೇ, ನೀನು ಎಷ್ಟು ಚೆಲುವೆ! ಆಹಾ, ನೀನು ಎಷ್ಟು ಸುಂದರಿ! ನಿನ್ನ ನೇತ್ರಗಳು ಪಾರಿವಾಳಗಳಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಹಾ, ನನ್ನ ಪ್ರಿಯಳೇ, ನೀನು ಎಷ್ಟು ಚೆಲುವೆ, ಆಹಾ, ನೀನು ಎಷ್ಟು ಸುಂದರಿ! ನಿನ್ನ ನೇತ್ರಗಳು ಪಾರಿವಾಳಗಳಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಹಾ, ನನ್ನ ಪ್ರಿಯಳೇ, ನೀನೆಷ್ಟು ಚೆಲುವೆ ಆಹಾ, ನೀನೆಷ್ಟು ಕೋಮಲೆ ನಿನ್ನ ನೇತ್ರಗಳು ಪಾರಿವಾಳಗಳಂತೆ! ನಲ್ಲೆ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನನ್ನ ಪ್ರಿಯೆ, ನೀನು ರೂಪವತಿ! ನೀನು ಸುಂದರಿ! ನಿನ್ನ ಕಣ್ಣುಗಳು ಪಾರಿವಾಳಗಳಂತೆ ಕೋಮಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನನ್ನ ಪ್ರಿಯಳೇ, ನೀನು ಎಷ್ಟು ಸೌಂದರ್ಯವಂತೆ! ಆಹಾ, ನೀನು ಸೌಂದರ್ಯವಂತಳೇ! ನಿನ್ನ ಕಣ್ಣುಗಳು ಪಾರಿವಾಳಗಳಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 1:15
17 ತಿಳಿವುಗಳ ಹೋಲಿಕೆ  

ಆಹಾ, ನನ್ನ ಪ್ರಿಯಳೇ, ನೀನು ಎಷ್ಟು ಚೆಲುವೆ! ಆಹಾ, ನೀನು ಎಷ್ಟು ಸುಂದರಿ! ಮುಸುಕಿನೊಳಗಿನ ನಿನ್ನ ನೇತ್ರಗಳು ಪಾರಿವಾಳಗಳು, ನಿನ್ನ ಕೂದಲು ಗಿಲ್ಯಾದ್ ಬೆಟ್ಟದ ಪಾರ್ಶ್ವದಲ್ಲಿ ಮಲಗಿರುವ ಆಡುಮಂದೆ.


ಅವನ ಕಣ್ಣುಗಳೋ ತುಂಬಿತುಳುಕುವ ತೊರೆಗಳ ಹತ್ತಿರ ತಂಗುತ್ತಲೂ ಕ್ಷೀರದಲ್ಲಿ ಸ್ನಾನಮಾಡುತ್ತಲೂ ಇರುವ ಪಾರಿವಾಳಗಳಂತಿವೆ.


ನನ್ನ ಪ್ರಿಯಳೇ, ನೀನು ಸರ್ವಾಂಗಸುಂದರಿ, ನಿನ್ನಲ್ಲಿ ಯಾವ ದೋಷವೂ ಇಲ್ಲ.


ಇದೇಕೆ ಅನ್ನುತ್ತೀರಾ? ನಿನಗೂ ನಿನ್ನ ಯೌವನದ ಹೆಂಡತಿಗೂ ಆದ ಒಡಂಬಡಿಕೆಗೆ ಯೆಹೋವನೇ ಸಾಕ್ಷಿಯಾಗಿದ್ದಾನಲ್ಲಾ. ನಿನ್ನ ಸಹಚಾರಿಣಿಯೂ ನಿನ್ನ ಒಡಂಬಡಿಕೆಯ ಪತ್ನಿಯೂ ಆದ ಆಕೆಗೆ ದ್ರೋಹಮಾಡಿದ್ದೀ.


ಪ್ರೇಮವೇ, ಸಕಲ ಸಂತೋಷಗಳಿಗಿಂತ ನೀನು ಎಷ್ಟೋ ಮನೋಹರ, ಎಷ್ಟೋ ರಮ್ಯ!


ನನ್ನ ಪ್ರಿಯಳೇ, ನೀನು ತಿರ್ಚದಂತೆ ಸುಂದರಿ, ಯೆರೂಸಲೇವಿುನ ಹಾಗೆ ಮನೋಹರಿ ಪತಾಕಿನಿಯಂತೆ ಭಯಂಕರಿ!


ನಾನು ನಿದ್ರೆಗೊಂಡಿದ್ದರೂ ನನ್ನ ಹೃದಯವು ಎಚ್ಚರಗೊಂಡಿತ್ತು; ಇಗೋ, ಎನ್ನಿನಿಯನು ಕದ ತಟ್ಟಿ ಪ್ರಿಯಳೇ, ಕಾಂತಳೇ, ಪಾರಿವಾಳವೇ, ನಿರ್ಮಲೆಯೇ, ಬಾಗಿಲು ತೆಗೆ! ನನ್ನ ತಲೆಯ ಮೇಲೆಲ್ಲಾ ಇಬ್ಬನಿಯು ಬಿದ್ದಿದೆ, ನನ್ನ ಕೂದಲು ರಾತ್ರಿ ಬೀಳುವ ಹನಿಗಳಿಂದ ತುಂಬಿದೆ ಅಂದನು.


ಪ್ರಿಯಳೇ, ವಧುವೇ, ನಿನ್ನ ಪ್ರೀತಿಯು ಎಷ್ಟೋ ರಮ್ಯ! ನಿನ್ನ ಪ್ರೇಮವು ದ್ರಾಕ್ಷಾರಸಕ್ಕಿಂತ ಎಷ್ಟೋ ಮೇಲು! ನಿನ್ನ ತೈಲದ ಪರಿಮಳವು ಸಕಲಸುಗಂಧ ದ್ರವ್ಯಗಳಿಗಿಂತ ಎಷ್ಟೋ ಮನೋಹರ!


ಅಂಜೂರದ ಮರವು ಕಾಯಿಗಳನ್ನು ಪಕ್ವಕ್ಕೆ ತರುತ್ತದೆ, ದ್ರಾಕ್ಷೆಯ ಬಳ್ಳಿಗಳು ಹೂಬಿಟ್ಟು ಪರಿಮಳವನ್ನು ಬೀರುತ್ತವೆ. ನನ್ನ ಪ್ರಿಯಳೇ, ಎನ್ನ ಸುಂದರಿಯೇ, ಎದ್ದು ಬಾ!


ನನ್ನ ನಲ್ಲನು ಎನಗೆ ಹೀಗೆಂದನು - ನನ್ನ ಪ್ರಿಯಳೇ, ಎನ್ನ ಸುಂದರಿಯೇ, ಎದ್ದು ಬಾ!


ನಾರೀಮಣಿಯೇ, ನಿನಗೆ ಗೊತ್ತಿಲ್ಲವಾದರೆ ಹಿಂಡಿನ ಹೆಜ್ಜೆಯ ಜಾಡನ್ನು ಹಿಡಿದು ಹೋಗಿ ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಮರಿಗಳನ್ನು ಮೇಯಿಸು.


ಪ್ರಿಯಳೇ, ನಿನ್ನನ್ನು ಫರೋಹನ ರಥಗಳ ಕುದುರೆಗೆ ಹೋಲಿಸಿದ್ದೇನೆ.


ಆಹಾ, ಎನ್ನಿನಿಯನೇ, ನೀನು ಎಷ್ಟು ಸುಂದರ, ಎಷ್ಟು ರಮ್ಯ! ಚಿಗುರುಗಳು ನಮ್ಮ ಮಂಚ,


ಅರುಣೋದಯವು ದೃಷ್ಟಿಸುವಂತಿರುವ ಇವಳಾರು? ಚಂದ್ರನಂತೆ ಸೌಮ್ಯಳು, ಸೂರ್ಯನಂತೆ ಶುಭ್ರಳು, ಪತಾಕಿನಿಯಂತೆ ಭಯಂಕರಳು ಆಗಿರುವ ಇವಳಾರು?


ಈ ನಿನ್ನ ನೀಳವಾದ ಆಕಾರವು ಖರ್ಜೂರವೃಕ್ಷ, ನಿನ್ನ ಸ್ತನಗಳೇ ಅದರ ಗೊಂಚಲುಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು