Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 1:16 - ಕನ್ನಡ ಸತ್ಯವೇದವು J.V. (BSI)

16 ಆಹಾ, ಎನ್ನಿನಿಯನೇ, ನೀನು ಎಷ್ಟು ಸುಂದರ, ಎಷ್ಟು ರಮ್ಯ! ಚಿಗುರುಗಳು ನಮ್ಮ ಮಂಚ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಹಾ, ಎನ್ನಿನಿಯನೇ, ನೀನೆಷ್ಟು ಸುಂದರ, ನೀನೆಷ್ಟು ಮನೋಹರ! ಹಚ್ಚ ಹಸಿರು ಚಿಗುರುಗಳು ನಮ್ಮ ಮಂಚ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಹಾ, ಎನ್ನಿನಿಯಾ, ನೀನೆಷ್ಟು ಸುಂದರ ನೀನೆಷ್ಟು ಮನೋಹರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನನ್ನ ಪ್ರಿಯನೇ, ನೀನು ಬಹು ಸುಂದರ! ಹೌದು, ನೀನು ಎಷ್ಟೋ ಮನೋಹರ! ನಮ್ಮ ಹಾಸಿಗೆ ಎಷ್ಟೋ ಉಲ್ಲಾಸಕರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನನ್ನ ಪ್ರಿಯನೇ, ಇಗೋ, ನೀನು ಎಷ್ಟು ಸೌಂದರ್ಯವಂತನು! ಹೌದು, ರಮ್ಯವಾದವನು! ಹಸಿರು ಚಿಗುರುಗಳೇ ನಮ್ಮ ಮಂಚವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 1:16
13 ತಿಳಿವುಗಳ ಹೋಲಿಕೆ  

ಉದ್ಯಾನ ವೃಕ್ಷಗಳಲ್ಲಿ ಸೇಬು ಹೇಗೋ ಪುರುಷರಲ್ಲಿ ನನ್ನ ಕಾಂತನು ಹಾಗೆಯೇ ಇಷ್ಟನು. ನಾನು ಅವನ ನೆರಳಿನಲ್ಲಿ ಕೂತು ಸಂತಸಗೊಂಡೆನು, ಅವನ ಫಲವು ನನ್ನ ನಾಲಿಗೆಗೆ ರುಚಿಯಾಗಿತ್ತು.


ನೀನು ಎಲ್ಲಾ ಮನುಷ್ಯರಿಗಿಂತ ಅತಿಸುಂದರನು; ನಿನ್ನ ಮಾತುಗಳು ಬಹಳ ಮಧುರ; ಇದರಿಂದಲೇ ದೈವಾನುಗ್ರಹವು ಯಾವಾಗಲೂ ನಿನ್ನ ಮೇಲಿದೆ ಎಂಬದು ನಿನ್ನ ಬಾಯ ಮಾತುಗಳಿಂದ ಸ್ಪಷ್ಟವಾಗುತ್ತದೆ.


ಆಹಾ, ಅವರ ಸೌಖ್ಯವೆಷ್ಟು, ಅವರ ಸೌಂದರ್ಯವೆಷ್ಟು! ಧಾನ್ಯವು ಯುವಕರನ್ನು, ದ್ರಾಕ್ಷಾರಸವು ಯುವತಿಯರನ್ನು ಪುಷ್ಟಿಗೊಳಿಸುವದು.


ನೋಡು, ಅದು ಸೊಲೊಮೋನನ ಪಾಲಕಿ; ಇಸ್ರಾಯೇಲಿನ ಶೂರರಲ್ಲಿ ಅರುವತ್ತು ಮಂದಿ ಅದರ ಸುತ್ತಲಿದ್ದಾರೆ.


ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವಕ ಸೈನಿಕರು ಉದಯಕಾಲದ ಇಬ್ಬನಿಯಂತಿರುವರು.


ಆಹಾ, ನನ್ನ ಪ್ರಿಯಳೇ, ನೀನು ಎಷ್ಟು ಚೆಲುವೆ! ಆಹಾ, ನೀನು ಎಷ್ಟು ಸುಂದರಿ! ನಿನ್ನ ನೇತ್ರಗಳು ಪಾರಿವಾಳಗಳಂತಿವೆ.


ಎನ್ನಿನಿಯನು ಜಿಂಕೆಯಂತೆಯೂ ಪ್ರಾಯದ ಎರಳೆಯ ಹಾಗೂ ಇದ್ದಾನೆ. ಆಹಾ, ನಮ್ಮ ಗೋಡೆಯ ಆಚೆ ನಿಂತಿದ್ದಾನೆ, ಕಿಟಕಿಗಳಲ್ಲಿ ನೋಡುತ್ತಾನೆ, ಜಾಲಾಂತರಗಳಲ್ಲಿ ಇಣಿಕುಹಾಕುತ್ತಾನೆ!


ನಾನು ನಿದ್ರೆಗೊಂಡಿದ್ದರೂ ನನ್ನ ಹೃದಯವು ಎಚ್ಚರಗೊಂಡಿತ್ತು; ಇಗೋ, ಎನ್ನಿನಿಯನು ಕದ ತಟ್ಟಿ ಪ್ರಿಯಳೇ, ಕಾಂತಳೇ, ಪಾರಿವಾಳವೇ, ನಿರ್ಮಲೆಯೇ, ಬಾಗಿಲು ತೆಗೆ! ನನ್ನ ತಲೆಯ ಮೇಲೆಲ್ಲಾ ಇಬ್ಬನಿಯು ಬಿದ್ದಿದೆ, ನನ್ನ ಕೂದಲು ರಾತ್ರಿ ಬೀಳುವ ಹನಿಗಳಿಂದ ತುಂಬಿದೆ ಅಂದನು.


ನನ್ನ ನಲ್ಲನಿಗೆ ಕದತೆಗೆಯಬೇಕೆಂದು ಏಳಲು ಅಗುಳಿಯ ಹಿಡಿಗಳಲ್ಲಿ ನನ್ನ ಕೈಗಳಿಂದ ರಕ್ತಬೋಳವು, ನನ್ನ ಬೆರಳುಗಳಿಂದ ಅಚ್ಚರಕ್ತಬೋಳವು ಸುರಿಯಿತು.


ಪ್ರೇಮವೇ, ಸಕಲ ಸಂತೋಷಗಳಿಗಿಂತ ನೀನು ಎಷ್ಟೋ ಮನೋಹರ, ಎಷ್ಟೋ ರಮ್ಯ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು