Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 3:3 - ಕನ್ನಡ ಸತ್ಯವೇದವು J.V. (BSI)

3 ಊರಲ್ಲಿ ತಿರುಗುವ ಕಾವಲುಗಾರರ ಕೈಗೆ ಸಿಕ್ಕಿದೆನು; ನನ್ನ ಪ್ರಾಣಪ್ರಿಯನನ್ನು ಕಂಡಿರಾ ಎಂದು ಅವರನ್ನು ವಿಚಾರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಊರಿನಲ್ಲಿ ತಿರುಗುವ ಕಾವಲುಗಾರರ ಕೈಗೆ ಸಿಕ್ಕಿದೆನು, “ನನ್ನ ಪ್ರಾಣಪ್ರಿಯನನ್ನು ಕಂಡಿರಾ?” ಎಂದು ಅವರನ್ನು ವಿಚಾರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಊರಲ್ಲಿ ತಿರುಗುವ ಪಹರೆಯವರ ಕೈಗೆ ಸಿಕ್ಕಿಬಿದ್ದೆ “ನನ್ನ ಪ್ರಾಣಕಾಂತನನ್ನು ಕಂಡಿರಾ?’ ಎಂದು ವಿಚಾರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಗರದಲ್ಲಿ ಗಸ್ತು ತಿರುಗುವ ಕಾವಲುಗಾರರನ್ನು ಕಂಡು, “ನನ್ನ ಪ್ರಿಯನನ್ನು ನೋಡಿದಿರಾ?” ಎಂದು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾನು ಪಟ್ಟಣವನ್ನು ಕಾಯುವ ಕಾವಲುಗಾರರಿಗೆ ಸಿಕ್ಕಿಬಿದ್ದಾಗ, “ನನ್ನ ಪ್ರಾಣ ಪ್ರಿಯನನ್ನು ನೀವು ಕಂಡಿರಾ?” ಎಂದು ವಿಚಾರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 3:3
10 ತಿಳಿವುಗಳ ಹೋಲಿಕೆ  

ಊರಲ್ಲಿ ಸುತ್ತುತ್ತಿರುವ ಕಾವಲುಗಾರರು ನನ್ನನ್ನು ಕಂಡು ಹಿಡಿದು ಹೊಡೆದು ಗಾಯಪಡಿಸಿದರು; ಪವುಳಿಯ ಕಾವಲುಗಾರರು ಮೇಲುಹೊದಿಕೆಯನ್ನು ನನ್ನಿಂದ ಕಿತ್ತುಕೊಂಡರು.


ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವಂತೆ ನೋಡಿರಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.


ಯೇಸು ಆಕೆಯನ್ನು - ಅಮ್ಮಾ, ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ? ಎಂದು ಕೇಳಲು ಆಕೆ ಆತನನ್ನು ತೋಟಗಾರನೆಂದು ನೆನಸಿ ಆತನಿಗೆ - ಅಯ್ಯಾ, ನೀನು ಆತನನ್ನು ಎತ್ತಿಕೊಂಡು ಹೋಗಿದ್ದರೆ ಎಲ್ಲಿ ಇಟ್ಟಿದ್ದೀ ನನಗೆ ಹೇಳು; ನಾನು ತೆಗೆದುಕೊಂಡು ಹೋಗುತ್ತೇನೆ ಎಂದು ಹೇಳಿದಳು.


ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇವಿುಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ ನನ್ನ ಪರವಾಗಿ ಅವರನ್ನು ಎಚ್ಚರಿಸು.


ಯೆರೂಸಲೇಮೇ, ನಾನು ನಿನ್ನ ಪೌಳಿಗೋಡೆಗಳಲ್ಲಿ ಕಾವಲುಗಾರರನ್ನು ನೇವಿುಸಿದ್ದೇನೆ; ಅವರು ಹಗಲೂ ಇರುಳೂ ಮೌನವಾಗಿರರು.


ಇವರ ಕಾವಲುಗಾರರು ಕುರುಡರು, ಇವರಲ್ಲಿ ಯಾರಿಗೂ ತಿಳುವಳಿಕೆಯಿಲ್ಲ; ಇವರೆಲ್ಲರೂ ಬೊಗಳಲಾರದ ಮೂಗನಾಯಿಗಳು, ನಿದ್ರೆಯನ್ನಾಶಿಸಿ ಮಲಗಿಕೊಂಡು ಕನವರಿಸುವ ನಾಯಿಗಳು.


ನನ್ನ ಪ್ರಾಣಪ್ರಿಯನೇ, [ಮಂದೆಯನ್ನು] ಎಲ್ಲಿ ಮೇಯಿಸುತ್ತೀ, ಮಧ್ಯಾಹ್ನಕ್ಕೆ ಎಲ್ಲಿ ಮಲಗಿಸುತ್ತೀ? ನನಗೆ ತಿಳಿಸು. ನಾನು ಏಕೆ ನಿನ್ನ ಒಡನಾಡಿಗಳ ಮಂದೆಗಳ ಹತ್ತಿರ ಮುಸುಕಿನವಳಂತಿರಬೇಕು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು