Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 4:5 - ಕನ್ನಡ ಸತ್ಯವೇದವು J.V. (BSI)

5 ನಿನ್ನ ಎರಡು ಸ್ತನಗಳು ನೆಲದಾವರೆಗಳ ಮಧ್ಯದಲ್ಲಿ ಮೇಯುವ ಎರಳೆಯ ಅವಳಿಮರಿಗಳಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿನ್ನ ಎರಡು ಸ್ತನಗಳು ನೆಲದಾವರೆಗಳ ಮಧ್ಯದಲ್ಲಿ ಮೇಯುತ್ತಿರುವ ಅವಳಿ ಜಿಂಕೆಮರಿಗಳಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹುಲ್ಲೆಯ ಅವಳಿಮರಿಗಳು ನಿನ್ನ ಸ್ತನಗಳೆರಡು ನೆಲದಾವರೆಯ ನಡುವೆ ಮೇಯುತ್ತಿರುವವು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಿನ್ನ ಎರಡು ಸ್ತನಗಳು ಅವಳಿಜವಳಿ ಜಿಂಕೆಮರಿಗಳಂತೆಯೂ ನೆಲದಾವರೆಗಳ ಮಧ್ಯದಲ್ಲಿ ಮೇಯುತ್ತಿರುವ ಅವಳಿಜವಳಿ ಸಾರಂಗಗಳಂತೆಯೂ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿನ್ನ ಎರಡು ಸ್ತನಗಳು ನೆಲದಾವರೆಯ ನಡುವೆ ಮೇಯುವ ಹುಲ್ಲೆಯ ಅವಳಿಮರಿಗಳ ಹಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 4:5
12 ತಿಳಿವುಗಳ ಹೋಲಿಕೆ  

ನಿನ್ನ ಎರಡು ಸ್ತನಗಳು ಎರಳೆಯ ಅವಳಿಮರಿಗಳೇ.


ಎನ್ನಿನಿಯನು ನನ್ನವನೇ, ನಾನು ಅವನವಳೇ, ನೆಲದಾವರೆಗಳ ಮಧ್ಯದಲ್ಲಿ [ಮಂದೆಯನ್ನು] ಮೇಯಿಸುವವನಾಗಿದ್ದಾನೆ.


ಎನ್ನಿನಿಯನು ನನ್ನವನೇ, ನಾನು ಅವನವಳೇ, ನೆಲದಾವರೆಗಳ ಮಧ್ಯದಲ್ಲಿ [ಮಂದೆಯನ್ನು] ಮೇಯಿಸುವವನಾಗಿದ್ದಾನೆ.


ಎಲ್ಲಾ ತರದ ನಿಂದೆಯನ್ನೂ ವಿಸರ್ಜಿಸಿ ಹಸುಮಕ್ಕಳಂತೆ ಪಾರಮಾರ್ಥಿಕವಾದ ಶುದ್ಧ ಹಾಲನ್ನು ಬಯಸಿರಿ; ಅದರಿಂದ ಬೆಳೆಯುತ್ತಾ ರಕ್ಷಣೆಯನ್ನು ಹೊಂದುವಿರಿ; ಕರ್ತನು ದಯಾಳುವೆಂದು ನೀವು ಅನುಭವದಿಂದ ತಿಳಿದುಕೊಂಡಿದ್ದೀರಲ್ಲವೋ?


ನಾನು ಕೋಟೆ; ನನ್ನ ಸ್ತನಗಳು ಅದರ ಬುರುಜುಗಳು, ಹೀಗಿದ್ದು ಸೊಲೊಮೋನನ ದೃಷ್ಟಿಯಲ್ಲಿ [ಜಯಶಾಲಿನಿಯಾಗಿ] ಸಮಾಧಾನ ಹೊಂದಿದೆನು.


ಆಕೆ ಮನೋಹರವಾದ ಜಿಂಕೆಯಂತೆಯೂ ಅಂದವಾದ ದುಪ್ಪಿಯ ಹಾಗೂ ಇರುವಳಲ್ಲಾ; ಆಕೆಯ ಸ್ತನಗಳು ನಿನ್ನನ್ನು ಸರ್ವದಾ ತೃಪ್ತಿಪಡಿಸಲಿ, ಆಕೆಯ ಪ್ರೀತಿಯಲ್ಲೇ ನಿರಂತರ ಲೀನವಾಗಿರು.


ನೀನು ನನ್ನ ತಾಯಿಯ ಸ್ತನ್ಯವನ್ನು ಕುಡಿದ ನನ್ನ ಅಣ್ಣನ ಹಾಗಿದ್ದರೆ ಎಷ್ಟೋ ಚೆನ್ನಾಗಿತ್ತು! ನಾನು ನಿನ್ನನ್ನು ಹೊರಗೆ ಕಂಡು ಮುದ್ದಿಟ್ಟರೂ ಯಾರೂ ಹೀನೈಸುತ್ತಿರಲಿಲ್ಲ.


ಈ ನಿನ್ನ ನೀಳವಾದ ಆಕಾರವು ಖರ್ಜೂರವೃಕ್ಷ, ನಿನ್ನ ಸ್ತನಗಳೇ ಅದರ ಗೊಂಚಲುಗಳು.


ಎನ್ನಿನಿಯನು ನನ್ನ ಸ್ತನಗಳ ಮಧ್ಯದಲ್ಲಿನ ರಕ್ತಬೋಳದ ಚೀಲ;


ನನ್ನ ಕಾಂತನು ಉದ್ಯಾನಗಳಲ್ಲಿ [ಮಂದೆಯನ್ನು] ಮೇಯಿಸುತ್ತಾ ನೆಲದಾವರೆಗಳನ್ನು ಕೊಯ್ಯಬೇಕೆಂದು ಸುಗಂಧಸಸ್ಯದ ಪಾತಿಗಳಿರುವ ತನ್ನ ತೋಟಕ್ಕೆ ಹೋಗಿದ್ದಾನೆ.


ನಿನ್ನ ಕಂಠವು ದಂತದ ಗೋಪುರ; ನಿನ್ನ ನೇತ್ರಗಳು ಹೆಷ್ಬೋನಿನಲ್ಲಿನ ಬತ್‍ರಬ್ಬೀಮ್ ಬಾಗಿಲ ಬಳಿಯ ಕೊಳಗಳಂತಿವೆ. ನಿನ್ನ ನಾಸಿಕವು ದಮಸ್ಕದ ಕಡೆಗಿರುವ ಲೆಬನೋನಿನ ಬುರುಜಿನ ಹಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು