Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 4:6 - ಕನ್ನಡ ಸತ್ಯವೇದವು J.V. (BSI)

6 ನಾನು ರಕ್ತಬೋಳದ ಬೆಟ್ಟಕ್ಕೂ ಧೂಪದ ಗುಡ್ಡಕ್ಕೂ ತೆರಳಿ ಹಗಲು ತಂಪಾಗಿ ನೆರಳು ಇಳಿಯುವ ತನಕ ಚರಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕತ್ತಲು ಕಳೆಯುವ ತನಕ, ಹೊತ್ತು ಮೂಡುವವರೆಗೆ ರಕ್ತಬೋಳದ ಬೆಟ್ಟಕ್ಕೂ, ಧೂಪದ ಗುಡ್ಡಕ್ಕೂ ತೆರಳಿ ಸಂಚರಿಸುವೆ ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಕತ್ತಲು ಕಳೆಯುವ ಮುನ್ನ ಹೊತ್ತು ಮೂಡುವ ಮುನ್ನ ಪರಿಮಳದ ಬೆಟ್ಟಕೆ ತೆರಳುವೆ ಧೂಪದ ಗುಡ್ಡದೊಳು ಅಡ್ಡಾಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಹಗಲು ತನ್ನ ಕೊನೆ ಉಸಿರೆಳೆಯುವವರೆಗೆ ಮತ್ತು ನೆರಳುಗಳೆಲ್ಲಾ ಓಡಿಹೋಗುವವರೆಗೆ ನಾನು ಗೋಲರಸದ ಬೆಟ್ಟಕ್ಕೂ ಧೂಪದ ಗುಡ್ಡಕ್ಕೂ ಹೋಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಹೊತ್ತು ಮೂಡುವವರೆಗೂ ನೆರಳು ಓಡಿ ಹೋಗುವವರೆಗೂ ನಾನು ರಕ್ತಬೋಳದ ಪರ್ವತಕ್ಕೂ ಸಾಂಬ್ರಾಣಿಯ ಗುಡ್ಡಕ್ಕೂ ಹೋಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 4:6
19 ತಿಳಿವುಗಳ ಹೋಲಿಕೆ  

ನನ್ನ ಕಾಂತನೇ, ಹೊರಡು, ಹಗಲು ತಂಪಾಗಿ ನೆರಳು ಇಳಿದು ಹೋಗುವ ತನಕ ವಿಯೋಗವೆಂಬ ಪರ್ವತಗಳಲ್ಲಿ ಜಿಂಕೆಯಂತೆಯೂ ಪ್ರಾಯದ ಎರಳೆಯಂತೆಯೂ ಇರು.


ಜಟಾಮಾಂಸಿ, ಕುಂಕುಮ, ಬಜೆ, ಲವಂಗಚಕ್ಕೆ, ಸಮಸ್ತವಿಧಧೂಪ, ರಕ್ತಬೋಳ, ಅಗುರು, ಸಕಲ ಮುಖ್ಯ ಮುಖ್ಯ ಸುಗಂಧದ್ರವ್ಯ ಇವುಗಳೇ ಚಿಗುರುತ್ತವೆ.


ಯೇಸುವೆಂಬ ನಾನು ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ವಿಷಯದಲ್ಲಿ ನಿಮಗೆ ಸಾಕ್ಷಿಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದವಂಶವೆಂಬ ಬುಡದಿಂದ ಹುಟ್ಟಿದ ಚಿಗುರೂ ಅವನ ಸಂತತಿಯೂ ಉದಯಸೂಚಕವಾದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.


ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತುನಾಲ್ಕು ಮಂದಿ ಹಿರಿಯರೂ ಯಜ್ಞದ ಕುರಿಯಾದಾತನ ಪಾದಕ್ಕೆ ಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ, ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.


ಆದರೂ ನಾನು ನಿಮಗೆ ಬರೆಯುವದು ಹೊಸ ಅಪ್ಪಣೆಯೇ; ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ; ಹೇಗಂದರೆ ಕತ್ತಲೆಯು ಕಳೆದುಹೋಗುತ್ತದೆ, ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.


ಇದಲ್ಲದೆ ಪ್ರವಾದನವಾಕ್ಯವು ನಮಗೆ ಮತ್ತೂ ದೃಢವಾಗಿದೆ. ನಿಮ್ಮ ಹೃದಯದೊಳಗೆ ಬೆಳ್ಳಿಯು ಮೂಡಿ ಅರುಣೋದಯವಾಗುವ ಪರ್ಯಂತರ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪವೆಂದೆಣಿಸಿ ಅದಕ್ಕೆ ಲಕ್ಷ್ಯಕೊಡುವದೇ ಒಳ್ಳೇದು.


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ [ದೇವರ] ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ;


ಸೂರ್ಯನು ಮೂಡುವ ದಿಕ್ಕಿನಿಂದ ಮುಣುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನೂ ಶುದ್ಧನೈವೇದ್ಯವನ್ನೂ ಅರ್ಪಿಸುತ್ತಾರೆ; ಹೌದು, ಅನ್ಯಜನಾಂಗಗಳಲ್ಲಿಯೇ ನನ್ನ ನಾಮವು ಘನವಾಗಿದೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವದು; ಆಗ ಸಕಲದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.


ನಿನಗೆ ಟಗರು ಮುಂತಾದ ಪುಷ್ಟಪಶುಗಳನ್ನು ಯಜ್ಞರೂಪವಾಗಿ ಸಮರ್ಪಿಸಿ ಸುವಾಸನೆಯನ್ನುಂಟುಮಾಡುವೆನು; ಯಜ್ಞಕ್ಕಾಗಿ ಹೋತಹೋರಿಗಳನ್ನು ತರುವೆನು. ಸೆಲಾ.


ಅದಲ್ಲದೆ ಅವನು ದೇವರ ಸೇವೆಗೆ ನೇಮಕವಾದ ಪಟ್ಟಾಭಿಷೇಕತೈಲವನ್ನೂ ಪರಿಮಳ ದ್ರವ್ಯಗಳಿಂದುಂಟಾದ ಸ್ವಚ್ಫವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಕಾರರ ವಿದ್ಯೆಯ ಮೇರೆಗೆ ಮಾಡಿದನು.


ಸಾಯಂಕಾಲದಲ್ಲಿ ದೀಪಗಳನ್ನು ಹೊತ್ತಿಸುವಾಗಲೂ ಅದರ ಮೇಲೆ ಸುಗಂಧದ್ರವ್ಯಗಳಿಂದ ಧೂಪವನ್ನು ಹಾಕಬೇಕು. ಹೀಗೆ ನಿಮ್ಮಿಂದಲೂ ನಿಮ್ಮ ಸಂತತಿಯವರಿಂದಲೂ ಯೆಹೋವನ ಸನ್ನಿಧಿಯಲ್ಲಿ ನಿತ್ಯವಾದ ಧೂಪ ಸಮರ್ಪಣೆಯು ಇರಬೇಕು.


ನೀವು ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡಬೇಕು. ನೀವು ಸರ್ವಾಂಗ ಹೋಮಮಾಡುವಾಗಲೂ ಸಮಾಧಾನ ಯಜ್ಞಮಾಡುವಾಗಲೂ ನಿಮ್ಮ ಕುರಿದನಗಳನ್ನು ಅಂಥ ವೇದಿಯಲ್ಲಿಯೇ ಸಮರ್ಪಿಸಬೇಕು. ನಾನು ನನ್ನ ಹೆಸರನ್ನು ನಿಮ್ಮ ನೆನಪಿಗೆ ಬರಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.


ರಕ್ತಬೋಳ, ಧೂಪ, ವರ್ತಕರ ಸಕಲಸುಗಂಧ ದ್ರವ್ಯಗಳನ್ನು ಧೂಪಿಸಿದ ಧೂಮಸ್ತಂಭಗಳಂತೆ ಅರಣ್ಯದಿಂದ ಬರುವ ಈ ಮೆರವಣಿಗೆ ಯಾರದು?


ಎನ್ನಿನಿಯನೇ, ತ್ವರೆಪಡು, ಸುಗಂಧಸಸ್ಯಪರ್ವತಗಳಲ್ಲಿ ಜಿಂಕೆಯಂತೆಯೂ ಪ್ರಾಯದ ಎರಳೆಯಂತೆಯೂ ಇರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು