Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 5:7 - ಕನ್ನಡ ಸತ್ಯವೇದವು J.V. (BSI)

7 ಊರಲ್ಲಿ ಸುತ್ತುತ್ತಿರುವ ಕಾವಲುಗಾರರು ನನ್ನನ್ನು ಕಂಡು ಹಿಡಿದು ಹೊಡೆದು ಗಾಯಪಡಿಸಿದರು; ಪವುಳಿಯ ಕಾವಲುಗಾರರು ಮೇಲುಹೊದಿಕೆಯನ್ನು ನನ್ನಿಂದ ಕಿತ್ತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಊರಲ್ಲಿ ಸುತ್ತುತ್ತಿರುವ ಕಾವಲುಗಾರರು ನನ್ನನ್ನು ಕಂಡುಹಿಡಿದು, ಹೊಡೆದು ಗಾಯಪಡಿಸಿದರು, ಪೌಳಿಯ ಕಾವಲುಗಾರರು ಮೇಲೊದಿಕೆಯನ್ನು ನನ್ನಿಂದ ಕಿತ್ತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸುತ್ತುತ್ತಿದ್ದರು ಬೀದಿಗಳಲಿ ಪಹರೆಯವರು ನನ್ನನ್ನು ಕಂಡುಹಿಡಿದರು, ಹೊಡೆದು ಗಾಯಗೊಳಿಸಿದರು. ಕಿತ್ತುಕೊಂಡರು ಮೇಲುಹೊದಿಕೆಯನು ಆ ಪೌಳಿಗೋಡೆಯ ಕಾವಲುಗಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಗರದಲ್ಲಿ ಗಸ್ತು ತಿರುಗುವ ಕಾವಲುಗಾರರು ನನ್ನನ್ನು ಕಂಡು ಹೊಡೆದು ಗಾಯಮಾಡಿದರು. ಕೋಟೆಯ ಕಾವಲುಗಾರರು ನನ್ನ ಮೇಲ್ಹೋದಿಕೆಯನ್ನು ತೆಗೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಪಟ್ಟಣದಲ್ಲಿ ಸಂಚರಿಸುವ ಕಾವಲುಗಾರರು ನನ್ನನ್ನು ಕಂಡುಹಿಡಿದರು. ನನ್ನನ್ನು ಹೊಡೆದು, ಗಾಯ ಮಾಡಿದರು. ಗೋಡೆಗಳನ್ನು ಕಾಯುವವರು ನನ್ನ ಮುಸುಕನ್ನು ಕಸಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 5:7
25 ತಿಳಿವುಗಳ ಹೋಲಿಕೆ  

ಊರಲ್ಲಿ ತಿರುಗುವ ಕಾವಲುಗಾರರ ಕೈಗೆ ಸಿಕ್ಕಿದೆನು; ನನ್ನ ಪ್ರಾಣಪ್ರಿಯನನ್ನು ಕಂಡಿರಾ ಎಂದು ಅವರನ್ನು ವಿಚಾರಿಸಿದೆನು.


ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸ್ಥಿರಚಿತ್ತದಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡು ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾಗಿದ್ದಾನೆ.


ಮತಾಸಕ್ತಿಯನ್ನು ನೋಡಿದರೆ ನಾನು ಕ್ರೈಸ್ತಸಭೆಯ ಹಿಂಸಕನು, ಧರ್ಮಶಾಸ್ತ್ರದಲ್ಲಿ ಹೇಳಿರುವ ನೀತಿಯನ್ನು ನೋಡಿದರೆ ನಾನು ನಿರ್ದೋಷಿ.


ಆದರೆ ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಾಗಿ ಕಾಣಿಸುವದಕ್ಕೆ ವೇಷ ಹಾಕಿಕೊಳ್ಳುವವರೂ ಆಗಿದ್ದಾರೆ.


ನಿಮಗೆ ಬಹಿಷ್ಕಾರ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಯಜ್ಞವನ್ನು ಮಾಡಿದ್ದೇನೆಂದು ನೆನಸುವ ಕಾಲ ಬರುತ್ತದೆ.


ಮನುಷ್ಯಕುಮಾರನ ನಿವಿುತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು.


ಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಪೀಠದಲ್ಲಿ ಕೂತುಕೊಂಡಿದ್ದಾರೆ;


ಆದಕಾರಣ ನಾನು ನಿಮ್ಮ ಜನರನ್ನು ಪ್ರವಾದಿಗಳ ಮೂಲಕ ಹತಿಸಿದ್ದೇನೆ, ನನ್ನ ಬಾಯಿ ಮಾತುಗಳಿಂದ ಸಂಹರಿಸಿದ್ದೇನೆ; ನನ್ನ ನ್ಯಾಯದಂಡನೆಯು ವಿುಂಚಿನಂತೆ ಹೊರಡುವದು.


ಯೆರೂಸಲೇಮೇ, ನಾನು ನಿನ್ನ ಪೌಳಿಗೋಡೆಗಳಲ್ಲಿ ಕಾವಲುಗಾರರನ್ನು ನೇವಿುಸಿದ್ದೇನೆ; ಅವರು ಹಗಲೂ ಇರುಳೂ ಮೌನವಾಗಿರರು.


ಸೊಲೊಮೋನನು ನೋಡಿಕೊಳ್ಳುವವರಿಗೆ ಬಾಲ್ಹಾಮೋನಿನಲ್ಲಿ ಇದ್ದ ತನ್ನ ತೋಟವನ್ನು ಕೊಟ್ಟನು, ಅದರ ಫಲದಿಂದ ಯಾರಾದರೂ ಸಾವಿರ ರೂಪಾಯಿಯನ್ನು ಪಡೆಯಬಹುದು.


ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗುಪಕಾರ; ಅವರು ನನ್ನನ್ನು ಶಿಕ್ಷಿಸಲಿ, ಅದು ನನ್ನ ತಲೆಗೆ ಎಣ್ಣೆಯಂತಿದೆ; ನನ್ನ ತಲೆಯು ಅದನ್ನು ಬೇಡವೆನ್ನದಿರಲಿ. ಆದರೆ ದುಷ್ಟರ ಕೆಟ್ಟತನಕ್ಕೆ ವಿರೋಧವಾಗಿ ದೇವರನ್ನು ಪ್ರಾರ್ಥಿಸುತ್ತಿರುವೆನು.


ನನ್ನ ಇನಿಯನಿಗೆ ಕದತೆಗೆದೆನು; ಅಷ್ಟರಲ್ಲಿ ಅವನು ಹಿಂದಿರುಗಿ ಹೋಗಿದ್ದನು. ಆಹಾ, ಅವನು ಮಾತಾಡಿದಾಗ ನಾನು ಮೂರ್ಛೆ ಹೋಗಿದ್ದೆನಲ್ಲಾ. ಎಷ್ಟು ಹುಡುಕಿದರೂ ಸಿಕ್ಕಲಿಲ್ಲ, ಎಷ್ಟು ಕೂಗಿದರೂ ಉತ್ತರವಿಲ್ಲ.


ಯೆರೂಸಲೇವಿುನ ಮಹಿಳೆಯರೇ, ನೀವು ನನ್ನ ಕಾಂತನನ್ನು ಕಂಡರೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆಂಬದನ್ನು ಅವನಿಗೆ ತಿಳಿಸಬೇಕೆಂದು ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.


ಶಾಲು, ಚೀಲ, ಕೈಗನ್ನಡಿ, ನಾರುಮಡಿ, ಶಿರೋವೇಷ್ಟನ, ಮೇಲ್ಹೊದಿಕೆ, ಈ ಭೂಷಣಗಳನ್ನೆಲ್ಲಾ ತೆಗೆದುಹಾಕುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು