Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 5:9 - ಕನ್ನಡ ಸತ್ಯವೇದವು J.V. (BSI)

9 ಸ್ತ್ರೀರತ್ನವೇ, [ಇತರರ] ಕಾಂತರಿಗಿಂತ ನಿನ್ನ ಕಾಂತನ ಅತಿಶಯವೇನು? ನಮ್ಮಿಂದ ನೀನು ಹೀಗೆ ಪ್ರಮಾಣ ಮಾಡಿಸುವದಕ್ಕೆ [ಇತರರ] ಕಾಂತರಿಗಿಂತ ನಿನ್ನ ಕಾಂತನಲ್ಲಿ ಅತಿಶಯವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸ್ತ್ರೀರತ್ನವೇ, ಇತರರ ಕಾಂತರಿಗಿಂತ ನಿನ್ನ ಕಾಂತನ ವಿಶೇಷತೆಯೇನು? ನಮ್ಮಿಂದ ನೀನು ಹೀಗೆ ಪ್ರಮಾಣಮಾಡಿಸುವುದಕ್ಕೆ ಇತರರ ಕಾಂತರಿಗಿಂತ ನಿನ್ನ ಕಾಂತನ ಅತಿಶಯವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ಬೇರೆಯವರ ಕಾಂತರಿಗಿಂತ ನಿನ್ನ ಕಾಂತನಲ್ಲಿ ಏನು ವಿಶೇಷ? ಬೇರೆಯವರ ಇನಿಯರಿಗಿಂತ ನಿನ್ನ ಕಾಂತನಲ್ಲಿ ಅದೇನು ಅತಿಶಯ? ಸ್ತ್ರೀರತ್ನವೇ, ಹೇಳು ನಮಗೆಂತು ಈ ಪ್ರಮಾಣ?” ನಲ್ಲೆ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಸ್ತ್ರೀಯರಲ್ಲಿ ಅತ್ಯಂತ ಸೌಂದರ್ಯವತಿಯೇ, ನಿನ್ನ ಪ್ರಿಯನ ಅತಿಶಯವೇನು? ನೀನು ಹೀಗೆ ನಮ್ಮಿಂದ ಪ್ರಮಾಣ ಮಾಡಿಸಲು ನಿನ್ನ ಪ್ರಿಯನ ಅತಿಶಯವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಸ್ತ್ರೀಯರಲ್ಲಿ ಅತಿ ಸುಂದರಿಯೇ, ಬೇರೆಯವರ ಪ್ರಿಯನಿಗಿಂತ ನಿನ್ನ ಪ್ರಿಯನ ಅತಿಶಯವೇನು? ನೀನು ನಮಗೆ ಹೀಗೆ ಆಣೆ ಇಡುವುದಕ್ಕೆ ಬೇರೆಯವರ ಪ್ರಿಯರಿಗಿಂತ ನಿನ್ನ ಪ್ರಿಯನ ವಿಶೇಷವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 5:9
11 ತಿಳಿವುಗಳ ಹೋಲಿಕೆ  

ಮಹಿಳಾಮಣಿಯೇ, ನಿನ್ನಿನಿಯನು ಎಲ್ಲಿ ಹೋದನು? ನಾವು ನಿನ್ನೊಂದಿಗೆ ಅವನನ್ನು ಹುಡುಕುವಂತೆ ತಿಳಿಸು. ನಿನ್ನ ನಲ್ಲನು ಎಲ್ಲಿಗೆ ತೆರಳಿರುವನು?


ನಾರೀಮಣಿಯೇ, ನಿನಗೆ ಗೊತ್ತಿಲ್ಲವಾದರೆ ಹಿಂಡಿನ ಹೆಜ್ಜೆಯ ಜಾಡನ್ನು ಹಿಡಿದು ಹೋಗಿ ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಮರಿಗಳನ್ನು ಮೇಯಿಸು.


ಒಣನೆಲದೊಳಗೆ ಬೇರಿನಿಂದ ಹೊರಡುವ ಅಂಕುರದಂತೆಯೂ ಬುಡದಿಂದ ಒಡೆಯುವ ಚಿಗುರಿನ ಹಾಗೂ ಅವನು ಯೆಹೋವನ ದೃಷ್ಟಿಯಲ್ಲಿ ಬೆಳೆದನು. ಅವನಲ್ಲಿ ಯಾವ ಅಂದಚಂದಗಳೂ ಇರಲಿಲ್ಲ; ನಾವು ಅವನನ್ನು ನೋಡಿದಾಗ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ.


ದೇವನಗರವೇ, ನಿನ್ನ ವಿಷಯವಾದ ಗೌರವೋಕ್ತಿಯೇನಂದರೆ - ಸೆಲಾ.


ಅಂತಃಪುರದಲ್ಲಿ ರಾಜಕುಮಾರಿಯು ಎಷ್ಟೋ ವೈಭವದಿಂದಿದ್ದಾಳೆ; ಆಕೆಯು ಜರತಾರಿಯ ವಸ್ತ್ರವನ್ನು ಧರಿಸಿಕೊಂಡಿದ್ದಾಳೆ.


ಆ ವಾಕ್ಯವೆಂಬವನು ನರಾವತಾರ ಎತ್ತಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು; ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ಆತನು ಯೆರೂಸಲೇಮನ್ನು ಸೇರಲು ಪಟ್ಟಣವೆಲ್ಲಾ ಗದ್ದಲವಾಗಿ, ಈತನು ಯಾರು? ಅಂದರು.


ಯೆರೂಸಲೇವಿುನ ಸ್ತ್ರೀಯರೇ, ಉಚಿತಕಾಲಕ್ಕೆ ಮುಂಚೆ ಪ್ರೀತಿಯನ್ನು ಹುಟ್ಟಿಸಿ ಬೆಳೆಯಿಸಬಾರದೆಂದು ಅಡವಿಯ ಹುಲ್ಲೆಗಳ ಮೇಲೆಯೂ ಹರಿಣಿಗಳ ಮೇಲೆಯೂ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು