Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 6:11 - ಕನ್ನಡ ಸತ್ಯವೇದವು J.V. (BSI)

11 ದ್ರಾಕ್ಷೆಯು ಚಿಗುರಿದೆಯೋ, ದಾಳಿಂಬರಗಳು ಹೂಬಿಟ್ಟಿವೆಯೋ ಎಂದು ತಗ್ಗಿನ ಸಸ್ಯಗಳನ್ನು ನೋಡಲು ಬಾದಾವಿುಯ ತೋಟಕ್ಕೆ ನಾನು ಹೋಗಿದ್ದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದ್ರಾಕ್ಷಿಯು ಚಿಗುರಿದೆಯೋ, ದಾಳಿಂಬೆ ಗಿಡಗಳು ಹೂಬಿಟ್ಟಿವೆಯೋ ಎಂದು ತಗ್ಗಿನಲ್ಲಿ ಬೆಳೆದ ಸಸ್ಯಗಳನ್ನು ನೋಡಲು ಬಾದಾಮಿಯ ತೋಟಕ್ಕೆ ನಾನು ಹೋಗಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ದ್ರಾಕ್ಷಾಬಳ್ಳಿ ಚಿಗುರಿದೆಯೋ ದಾಳಿಂಬೆಗಿಡ ಹೂಬಿಟ್ಟಿದೆಯೋ ಎಂದು ನೋಡಲಿಕೆ ಕಣಿವೆಯಲ್ಲಿರುವ ಕುಸುಮಗಳನು ಕಾಣಲಿಕೆ ನಾ ನಡೆದೆ ಬಾದಾಮಿಯ ತೋಟಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಕಣಿವೆಯ ಸಸ್ಯಗಳು ಹಣ್ಣುಬಿಟ್ಟಿವೆಯೋ ದ್ರಾಕ್ಷಿಬಳ್ಳಿಗಳು ಚಿಗುರಿದೆಯೋ ದಾಳಿಂಬರಗಳು ಹೂ ಬಿಟ್ಟಿವೆಯೋ ಎಂದು ನೋಡಲು ಬಾದಾಮಿ ಮರಗಳ ತೋಟಕ್ಕೆ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದ್ರಾಕ್ಷಿಬಳ್ಳಿಯು ಚಿಗುರಿದೆಯೋ, ದಾಳಿಂಬೆ ಗಿಡ ಹೂಬಿಟ್ಟಿದೆಯೋ ಎಂದು ಕಣಿವೆಯಲ್ಲಿನ ಫಲಗಳನ್ನು ನೋಡಲು ನಾನು ಬಾದಾಮಿಯ ತೋಟಕ್ಕೆ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 6:11
14 ತಿಳಿವುಗಳ ಹೋಲಿಕೆ  

ತೋಟಗಳಿಗೆ ಹೊತ್ತಾರೆ ಹೊರಟು ದ್ರಾಕ್ಷೆಯು ಚಿಗುರಿದೆಯೋ, ಅದರ ಹೂವು ಅರಳಿದೆಯೋ, ದಾಳಿಂಬರಗಳು ಪುಷ್ಟಿಸಿವೆಯೋ ನೋಡೋಣ! ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ಸಲ್ಲಿಸುವೆನು.


ಕೆಲವು ದಿವಸಗಳಾದ ಮೇಲೆ ಪೌಲನು ಬಾರ್ನಬನಿಗೆ - ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಊರುಗಳಿಗೆ ತಿರಿಗಿ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ ಎಂದು ಹೇಳಿದನು.


ಮತ್ತು ಎಲೆಬಿಟ್ಟಿದ್ದ ಒಂದು ಅಂಜೂರದ ಮರವನ್ನು ದೂರದಲ್ಲಿ ಕಂಡು ಅದರಲ್ಲಿ ತನಗೇನಾದರೂ ಹಣ್ಣು ಸಿಕ್ಕೀತೆಂದು ಅಲ್ಲಿಗೆ ಹೋದನು. ಅದರ ಹತ್ತಿರಕ್ಕೆ ಬಂದಾಗ ಅದರಲ್ಲಿ ಬರೀ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ; ಅದು ಅಂಜೂರದ ಹಣ್ಣಿನ ಕಾಲವಲ್ಲ.


ನನ್ನ ಕಾಂತನು ಉದ್ಯಾನಗಳಲ್ಲಿ [ಮಂದೆಯನ್ನು] ಮೇಯಿಸುತ್ತಾ ನೆಲದಾವರೆಗಳನ್ನು ಕೊಯ್ಯಬೇಕೆಂದು ಸುಗಂಧಸಸ್ಯದ ಪಾತಿಗಳಿರುವ ತನ್ನ ತೋಟಕ್ಕೆ ಹೋಗಿದ್ದಾನೆ.


ಪ್ರಿಯಳೇ, ವಧುವೇ, ಇಗೋ ನನ್ನ ತೋಟದೊಳಗೆ ಬಂದೆನು, ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ತೆಗೆದೆನು, ನನ್ನ ಜೇನುಕೊಡವನ್ನೂ ಜೇನುತುಪ್ಪವನ್ನೂ ತಿಂದೆನು, ನನ್ನ ದ್ರಾಕ್ಷಾರಸವನ್ನೂ ಕ್ಷೀರವನ್ನೂ ಕುಡಿದೆನು. ವಿುತ್ರರೇ, ಊಟಮಾಡಿರಿ; ಪ್ರಿಯರೇ, ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ.


ಮತ್ತು ಯೆಹೋವದೇವರು ನೋಟಕ್ಕೆ ರಮ್ಯವಾಗಿಯೂ ಊಟಕ್ಕೆ ಅನುಕೂಲವಾಗಿಯೂ ಇರುವ ಎಲ್ಲಾ ತರದ ಮರಗಳನ್ನು ಆ ಭೂವಿುಯಲ್ಲಿ ಬೆಳೆಯ ಮಾಡಿದನು. ಅದಲ್ಲದೆ ಆ ವನಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳೇದರ ಕೆಟ್ಟದ್ದರ ಅರುಹನ್ನು ಹುಟ್ಟಿಸುವ ವೃಕ್ಷವನ್ನೂ ಬೆಳೆಯಿಸಿದನು.


ನೀವು ನನ್ನನ್ನು ಆರಿಸಿ ತೆಗೆದುಕೊಂಡಿಲ್ಲ; ನಾನು ನಿಮ್ಮನ್ನು ಆರಿಸಿ ತೆಗೆದುಕೊಂಡೆನು. ನೀವು ಹೊರಟುಹೋಗಿ ಫಲಕೊಡುವವರಾಗಬೇಕೆಂತಲೂ ನೀವು ಕೊಡುವ ಫಲವು ನಿಲ್ಲುವಂಥದಾಗಬೇಕೆಂತಲೂ ನಿಮ್ಮನ್ನು ನೇವಿುಸಿದ್ದೇನೆ. ಹೀಗಿರಲಾಗಿ ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ ಅದನ್ನು ಆತನು ನಿಮಗೆ ಕೊಡುವನು.


ಬಳಿಕ ಅವನು ತೋಟ ಮಾಡುವವನಿಗೆ - ನೋಡು, ನಾನು ಮೂರು ವರುಷದಿಂದಲೂ ಈ ಅಂಜೂರದ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದಿದ್ದೇನೆ; ಆದರೂ ನನಗೆ ಸಿಕ್ಕಲಿಲ್ಲ. ಇದನ್ನು ಕಡಿದು ಹಾಕು; ಇದರಿಂದ ಭೂವಿುಯೂ ಯಾಕೆ ಬಂಜೆಯಾಗಬೇಕು ಎಂದು ಹೇಳಿದನು.


ಅದಕ್ಕೆ ಮೂರು ಕವಲುಗಳಿದ್ದವು. ಅದು ಚಿಗುರುತ್ತಲೇ ಹೂವುಗಳನ್ನು ಬಿಟ್ಟಿತು; ಆ ಹೂವುಗಳು ಗೊಂಚಲುಗಳಾಗಿ ಹಣ್ಣಾದವು.


ನನ್ನ ತವಕವು ನನ್ನ ದೇಶದ ಪ್ರಧಾನರ ರಥಗಳ ನಡುವೆ ಅಕಸ್ಮಾತ್ತಾಗಿ ನನ್ನನ್ನು ಸಿಕ್ಕಿಸಿತು.


ಕಾಮಜನಕ ವೃಕ್ಷಗಳು ಪರಿಮಳಬೀರುತ್ತವೆ, ನನ್ನ ಕಾಂತನೇ, ನಾನು ನಿನಗಾಗಿ ಇಟ್ಟುಕೊಂಡ ಒಳ್ಳೊಳ್ಳೆಯ ಬಗೆಬಗೆಯ ಹಳೆ ಹೊಸ ಹಣ್ಣುಗಳು ನಮ್ಮ ಬಾಗಿಲುಗಳ ಬಳಿ ಸಿದ್ಧವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು