ಪರಮಗೀತೆ 6:9 - ಕನ್ನಡ ಸತ್ಯವೇದವು J.V. (BSI)9 ನನ್ನ ಪಾರಿವಾಳವು, ನನ್ನ ನಿರ್ಮಲೆಯು, ಒಬ್ಬಳೇ, ಇವಳು ತಾಯಿಗೆ ಏಕಪುತ್ರಿಯು, ಹೆತ್ತವಳಿಗೆ ಆಪ್ತಳು. ಯುವತಿಯರು ನೋಡಿದಾಗ ಧನ್ಯಳೆಂದು ಹೇಳಿದರು. ರಾಣಿಯರೂ ಉಪಸ್ತ್ರೀಯರೂ ಕಂಡಾಗ ಹೀಗೆ ಪ್ರಶಂಸಿಸಿದರು - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನನ್ನ ಪಾರಿವಾಳವು, ನನ್ನ ನಿರ್ಮಲೆಯು ಒಬ್ಬಳೇ, ಇವಳು ಏಕಮಾತ್ರ ಪುತ್ರಿ ತಾಯಿಗೆ, ಮುದ್ದುಮಗಳು ಹೆತ್ತವಳಿಗೆ. ಧನ್ಯಳೆಂದು ಹೊಗಳಿದರು ಯುವತಿಯರು ನೋಡಿ, ರಾಣಿಯರೂ, ಉಪಪತ್ನಿಯರೂ ಕೊಂಡಾಡಿದರು ಈ ರೀತಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನನ್ನ ಪಾರಿವಾಳ, ನನ್ನ ನಿರ್ಮಲೆ ಇವಳೇ ಏಕಮಾತ್ರ ಪುತ್ರಿ ತಾಯಿಗೆ ಮುದ್ದುಮಗಳು ಹೆತ್ತವಳಿಗೆ. ಈಕೆ ಧನ್ಯಳೆಂದು ಹೊಗಳಿದರು ಯುವತಿಯರು ನೋಡಿ ರಾಣಿಯರು, ಉಪಪತ್ನಿಯರು ಕೊಂಡಾಡಿದರು ಈ ಪರಿ : ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆದರೆ ನನ್ನ ಪಾರಿವಾಳವೂ ನಿರ್ಮಲೆಯೂ ಒಬ್ಬಳೇ ಒಬ್ಬಳು. ಆಕೆಯು ತನ್ನ ತಾಯಿಗೆ ಅಚ್ಚುಮೆಚ್ಚಿನವಳು. ಯುವತಿಯರು ಆಕೆಯನ್ನು ಕಂಡು ಹೊಗಳುವರು. ಹೌದು, ರಾಣಿಯರೂ ಉಪಪತ್ನಿಯರೂ ಆಕೆಯನ್ನು ಹೊಗಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆದರೆ ನನಗೆ ನನ್ನ ಪಾರಿವಾಳವು, ನನ್ನ ಪರಿಪೂರ್ಣಳು ಒಬ್ಬಳೇ. ಇವಳು ತನ್ನ ತಾಯಿಗೆ ಒಬ್ಬಳೇ ಮಗಳು. ತನ್ನ ಹೆತ್ತವಳಿಗೆ ಪ್ರಿಯಳು. ಕನ್ನಿಕೆಯರು ಇವಳನ್ನು ಕಂಡು ಆಶೀರ್ವದಿಸಿದರು. ಹೌದು, ರಾಣಿಯರೂ ಉಪಪತ್ನಿಯರೂ ಇವಳನ್ನು ಹೀಗೆಂದು ಹೊಗಳಿದರು: ಅಧ್ಯಾಯವನ್ನು ನೋಡಿ |
ಇಸ್ರಾಯೇಲ್ಯರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಡಾಲೂ ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ.