ಪರಮಗೀತೆ 7:1 - ಕನ್ನಡ ಸತ್ಯವೇದವು J.V. (BSI)1 ರಾಜಪುತ್ರಿಯೇ, ಪಾದರಕ್ಷೆಗಳಲ್ಲಿನ ನಿನ್ನ ಚರಣಗಳು ಎಷ್ಟೋ ಚಂದ! ದುಂಡಾದ ನಿನ್ನ ತೊಡೆಗಳು ಕುಶಲಶಿಲ್ಪಿಯು ಮಾಡಿದ ಆಭರಣಗಳಂತಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ರಾಜಪುತ್ರಿಯೇ, ಪಾದರಕ್ಷೆಗಳಲ್ಲಿನ ನಿನ್ನ ಪಾದಗಳು ಎಷ್ಟೋ ಅಂದ! ದುಂಡಾದ ನಿನ್ನ ತೊಡೆಗಳು ಕುಶಲ ಶಿಲ್ಪಿಯು ಮಾಡಿದ ಆಭರಣಗಳಂತಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅರಸಕುವರಿಯೇ, ಕೆರಗಳನ್ನು ಮೆಟ್ಟಿ ನಿಂತಿರುವ ನಿನ್ನ ಪಾದಗಳೆಷ್ಟು ಚೆಂದ ! ದುಂಡಾದ ನಿನ್ನ ತೊಡೆಗಳು ಕುಶಲ ಶಿಲ್ಪಿಮಾಡಿದ ಸ್ತಂಭ ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ರಾಜಕುಮಾರಿಯೇ, ಪಾದರಕ್ಷೆಗಳಲ್ಲಿರುವ ನಿನ್ನ ಪಾದಗಳು ಎಷ್ಟೋ ಸುಂದರವಾಗಿವೆ. ನಿನ್ನ ದುಂಡಾದ ತೊಡೆಗಳು ಶಿಲ್ಪಿಯು ಮಾಡಿದ ಆಭರಣಗಳಂತಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಓ ರಾಜಪುತ್ರಿಯೇ! ಕೆರಗಳನ್ನು ಮೆಟ್ಟಿರುವ ನಿನ್ನ ಪಾದಗಳು ಎಷ್ಟು ಸುಂದರವಾಗಿವೆ! ನಿನ್ನ ಅಂದದ ಕಾಲುಗಳು ಶಿಲ್ಪಿಯ ಕೈಕೆಲಸದ ಆಭರಣಗಳಂತಿವೆ. ಅಧ್ಯಾಯವನ್ನು ನೋಡಿ |
ತಮಗೆ ದರ್ಶನಗಳಾದವೆಂದು ಕೊಚ್ಚಿಕೊಳ್ಳುತ್ತಾರೆ, ಮತ್ತು ಪ್ರಾಪಂಚಿಕ ಬುದ್ಧಿಯಿಂದ ನಿರಾಧಾರವಾಗಿ ಉಬ್ಬಿಕೊಂಡಿದ್ದಾರೆ, ಆದರೆ ಕ್ರಿಸ್ತನೆಂಬ ಶಿರಸ್ಸಿನ ಹೊಂದಿಕೆಯನ್ನು ಬಿಟ್ಟವರಾಗಿದ್ದಾರೆ. ಇಂಥವರು ನಿಮಗೆ ದೊರಕಿರುವ ಬಿರುದನ್ನು ಅಪಹರಿಸುವದಕ್ಕೆ ಅವಕಾಶಕೊಡಬೇಡಿರಿ. ಆ ಶಿರಸ್ಸಿನಿಂದಲೇ ದೇಹವೆಲ್ಲಾ ಕೀಲುನರಗಳ ಮೂಲಕ ಬೇಕಾದ ಸಹಾಯವನ್ನು ಹೊಂದಿ ಒಂದಾಗಿ ಕೂಡಿಸಲ್ಪಟ್ಟು ದೇವರು ಕೊಡುವ ವೃದ್ಧಿಯಿಂದ ಅಭಿವೃದ್ಧಿಯಾಗುತ್ತಾ ಬರುತ್ತದೆ.
ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.