ಪರಮಗೀತೆ 7:5 - ಕನ್ನಡ ಸತ್ಯವೇದವು J.V. (BSI)5 ನಿನ್ನ ಶಿರಸ್ಸು ಕರ್ಮೆಲ್ ಬೆಟ್ಟದಂತೆ ಗಂಭೀರ; ನಿನ್ನ ತಲೆಯ ಕೂದಲು ಧೂಮ್ರವರ್ಣವು; ರಾಜನು ಅದರ ತೆಕ್ಕೆತೆಕ್ಕೆಗಳಲ್ಲಿ ಕಟ್ಟುಬಿದ್ದಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಕರ್ಮೆಲ್ ಬೆಟ್ಟದಂತೆ ಗಂಭೀರವಾಗಿದೆ ನಿನ್ನ ಶಿರಸ್ಸು, ನಿನ್ನ ತಲೆಗೂದಲಿಗಿದೆ ಥಳಥಳಿಸುವ ನುಣುಪುಹೊಳಪಿನ ಬಣ್ಣ, ಅದರಲ್ಲಿದೆ ಅರಸನನ್ನೇ ಸೆರೆಹಿಡಿಯುವಂಥ ಆಕರ್ಷಣೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಿನ್ನ ಶಿರ ಎತ್ತರವಾದ ಕಾರ್ಮೆಲ್ ಶಿಖರದಂತೆ ಗಂಭೀರ ನಿನ್ನ ತಲೆಗೂದಲಿಗಿದೆ ಥಳಥಳಿಸುವ ನುಣುಪು ಹೊಳಪಿನ ಬಣ್ಣ ತನ್ನ ತೆಕ್ಕೆಯಲ್ಲಿ ಅರಸನನೇ ಸೆರೆಹಿಡಿಯುವಂಥ ಆಕರ್ಷಣ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಿನ್ನ ತಲೆಯು ಕರ್ಮೆಲ್ ಬೆಟ್ಟದಂತಿದೆ. ನಿನ್ನ ತಲೆಕೂದಲು ರೇಷ್ಮೆಯಂತಿದೆ. ನಿನ್ನ ಉದ್ದವಾದ, ಸುಂದರವಾದ ಕೂದಲು ರಾಜನನ್ನು ಸಹ ಆಕರ್ಷಿಸುತ್ತದೆ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಿನ್ನ ತಲೆಯು ಕರ್ಮೆಲ್ ಬೆಟ್ಟದಂತೆ ವೈಭವ. ನಿನ್ನ ತಲೆಕೂದಲು ಧೂಮ್ರ ಬಣ್ಣದ ಹಾಗೆ ಇದೆ. ಹೆಣೆದ ಆ ಜಡೆಯಿಂದ ಅರಸನಿಗೂ ಆಕರ್ಷಣ. ಅಧ್ಯಾಯವನ್ನು ನೋಡಿ |
ತಮಗೆ ದರ್ಶನಗಳಾದವೆಂದು ಕೊಚ್ಚಿಕೊಳ್ಳುತ್ತಾರೆ, ಮತ್ತು ಪ್ರಾಪಂಚಿಕ ಬುದ್ಧಿಯಿಂದ ನಿರಾಧಾರವಾಗಿ ಉಬ್ಬಿಕೊಂಡಿದ್ದಾರೆ, ಆದರೆ ಕ್ರಿಸ್ತನೆಂಬ ಶಿರಸ್ಸಿನ ಹೊಂದಿಕೆಯನ್ನು ಬಿಟ್ಟವರಾಗಿದ್ದಾರೆ. ಇಂಥವರು ನಿಮಗೆ ದೊರಕಿರುವ ಬಿರುದನ್ನು ಅಪಹರಿಸುವದಕ್ಕೆ ಅವಕಾಶಕೊಡಬೇಡಿರಿ. ಆ ಶಿರಸ್ಸಿನಿಂದಲೇ ದೇಹವೆಲ್ಲಾ ಕೀಲುನರಗಳ ಮೂಲಕ ಬೇಕಾದ ಸಹಾಯವನ್ನು ಹೊಂದಿ ಒಂದಾಗಿ ಕೂಡಿಸಲ್ಪಟ್ಟು ದೇವರು ಕೊಡುವ ವೃದ್ಧಿಯಿಂದ ಅಭಿವೃದ್ಧಿಯಾಗುತ್ತಾ ಬರುತ್ತದೆ.