Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 7:6 - ಕನ್ನಡ ಸತ್ಯವೇದವು J.V. (BSI)

6 ಪ್ರೇಮವೇ, ಸಕಲ ಸಂತೋಷಗಳಿಗಿಂತ ನೀನು ಎಷ್ಟೋ ಮನೋಹರ, ಎಷ್ಟೋ ರಮ್ಯ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಪ್ರೇಯಸಿಯೇ, ಸಕಲ ಸೌಂದರ್ಯ ಸೊಬಗಿನಿಂದ ನೀನೆಷ್ಟು ಸುಂದರ, ನೀನೆಷ್ಟು ಮನೋಹರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಪ್ರೇಮವೇ, ಸಕಲ ಸೌಭಾಗ್ಯಗಳಿಂದ ನೀನೆಷ್ಟು ಸುಂದರ? ನೀನೆಷ್ಟು ಮನೋಹರ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಪ್ರಿಯಳೇ, ನೀನೆಷ್ಟೋ ಸೌಂದರ್ಯವತಿ. ನಿನ್ನ ರೂಪ ಮನೋಹರ; ನಿನ್ನ ಪ್ರೇಮವು ಆನಂದ ಪೂರ್ಣವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನನ್ನ ಪ್ರೇಮವೇ, ನೀನು ನಿನ್ನ ಹರ್ಷದಿಂದ ಎಷ್ಟೋ ಸುಂದರಿಯೂ ಎಷ್ಟೋ ಮನೋಹರಳೂ ಆಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 7:6
10 ತಿಳಿವುಗಳ ಹೋಲಿಕೆ  

ಪ್ರಿಯಳೇ, ವಧುವೇ, ನಿನ್ನ ಪ್ರೀತಿಯು ಎಷ್ಟೋ ರಮ್ಯ! ನಿನ್ನ ಪ್ರೇಮವು ದ್ರಾಕ್ಷಾರಸಕ್ಕಿಂತ ಎಷ್ಟೋ ಮೇಲು! ನಿನ್ನ ತೈಲದ ಪರಿಮಳವು ಸಕಲಸುಗಂಧ ದ್ರವ್ಯಗಳಿಗಿಂತ ಎಷ್ಟೋ ಮನೋಹರ!


ಆಗ ರಾಜನು ನಿನ್ನ ಲಾವಣ್ಯವನ್ನು ನೋಡಲಪೇಕ್ಷಿಸುವನು. ಆತನೇ ನಿನಗೆ ಒಡೆಯನು; ಆತನಿಗೆ ನಮಸ್ಕರಿಸು.


ನಾನು ನನ್ನ ನಲ್ಲನವಳೇ, ಅವನ ಆಶೆಯು ನನ್ನ ಮೇಲೇ ಇದೆ.


ನನ್ನ ಪ್ರಿಯಳೇ, ನೀನು ಸರ್ವಾಂಗಸುಂದರಿ, ನಿನ್ನಲ್ಲಿ ಯಾವ ದೋಷವೂ ಇಲ್ಲ.


ಬಂಡೆಯ ಬಿರುಕುಗಳಲ್ಲಿಯೂ ಜರಿಯ ಮರೆಯಲ್ಲಿಯೂ ಇರುವ ನನ್ನ ಪರಿವಾಳವೇ! ನಿನ್ನ ರೂಪು ನನಗೆ ಕಾಣಿಸು, ನಿನ್ನ ದನಿ ಕೇಳಿಸು; ನಿನ್ನ ದನಿ ಎಷ್ಟೋ ಇಂಪು, ನಿನ್ನ ರೂಪು ಎಷ್ಟೋ ಅಂದ.


ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ಮುಣುಗಿ ಮೌನವಾಗಿರುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು ಎಂದು ಹೇಳೋಣವಾಗುವದು.


ಈ ನಿನ್ನ ನೀಳವಾದ ಆಕಾರವು ಖರ್ಜೂರವೃಕ್ಷ, ನಿನ್ನ ಸ್ತನಗಳೇ ಅದರ ಗೊಂಚಲುಗಳು.


ನೀನು ಈಗ ಎಲ್ಲಾ ಇಸ್ರಾಯೇಲ್ಯರನ್ನೂ ಈಜೆಬೆಲಳಿಂದ ಪೋಷಣೆ ಹೊಂದುವ ಬಾಳನ ನಾನೂರೈವತ್ತು ಮಂದಿ ಪ್ರವಾದಿಗಳನ್ನೂ ಅಶೇರದೇವತೆಯ ನಾನೂರು ಮಂದಿ ಪ್ರವಾದಿಗಳನ್ನೂ ಕರ್ಮೆಲ್‍ಬೆಟ್ಟಕ್ಕೆ ಕರಿಸು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು