ಪರಮಗೀತೆ 7:9 - ಕನ್ನಡ ಸತ್ಯವೇದವು J.V. (BSI)9 ನಿನ್ನ ಮುದ್ದುಗಳು ಉತ್ತಮದ್ರಾಕ್ಷಾರಸದ ಹಾಗಿರಲಿ; ನಿದ್ರಿಸುವವರ ತುಟಿಗಳಲ್ಲಿ ಸರಾಗವಾಗಿ ಹರಿಯುವ ಈ ರಸವು ನನ್ನ ನಲ್ಲೆಯಾದ ನಿನ್ನಲ್ಲಿಯೂ ಮೆಲ್ಲನೆ ಇಳಿದು ಬರುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಿನ್ನ ಚುಂಬನ ಉತ್ತಮ ದ್ರಾಕ್ಷಾರಸದ ಹಾಗಿರಲಿ, ನಿದ್ರಿಸುವವರ ತುಟಿಗಳಲ್ಲಿ ನಯವಾಗಿ ಹರಿಯುವ ಈ ರಸವು ನನ್ನ ನಲ್ಲೆಯಾದ ನಿನ್ನಲ್ಲಿಯೂ ಮೆಲ್ಲನೆ ಇಳಿದು ಬರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಿನ್ನ ಚುಂಬನ ಶ್ರೇಷ್ಠವಾದ ಮಧುಪಾನ ನನ್ನ ಇನಿಯನ ಬಾಯಲ್ಲಿಳಿಯಲಿ ಆ ರಸಪಾನ ನಿದ್ರಿಸುವವನಾ ತುಟಿಗಳಲಿ ಹರಿಯಲಿ ಆ ಪಾನ ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಿನ್ನ ಬಾಯಿ ಉತ್ತಮವಾದ ದ್ರಾಕ್ಷಾರಸದಂತಿರಲಿ. ನನ್ನ ಪ್ರಿಯೆಗಾಗಿ ಈ ದ್ರಾಕ್ಷಾರಸವು ಮೆಲ್ಲನೆ ಇಳಿದುಹೋಗುವುದು. ನಿದ್ರಿಸುವವರ ತುಟಿಗಳಲ್ಲಿ ಅದು ಸರಾಗವಾಗಿ ಹರಿದುಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಿನ್ನ ಬಾಯಿಯ ಮುದ್ದುಗಳು ಉತ್ತಮ ದ್ರಾಕ್ಷಾರಸದ ಹಾಗಿರಲಿ. ನನ್ನ ಪ್ರಿಯಕರನ ತುಟಿ, ಹಲ್ಲುಗಳಲ್ಲಿ ದ್ರಾಕ್ಷಾರಸವು ನೇರವಾಗಿ ಹರಿದು ಇಂಪಾಗಿ ರುಚಿಸಲಿ. ಅಧ್ಯಾಯವನ್ನು ನೋಡಿ |