Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 8:5 - ಕನ್ನಡ ಸತ್ಯವೇದವು J.V. (BSI)

5 ನಲ್ಲನನ್ನು ಒರಗಿಕೊಂಡು ಅಡವಿಯಿಂದ ಬರುವ ಇವಳು ಯಾರು? ಆ ಸೇಬುಮರದ ಕೆಳಗೆ ನಿನ್ನನ್ನು ಎಬ್ಬಿಸಿದೆನಲ್ಲಾ! ಇಗೋ, ಅಲ್ಲಿ ನಿನ್ನ ತಾಯಿಯು ನಿನ್ನನ್ನು ಹೆತ್ತಳು, ಅಲ್ಲೇ ಪ್ರಸವವೇದನೆ ಪಟ್ಟು, ನಿನ್ನನ್ನು ಪಡೆದಳು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಲ್ಲನನ್ನು ಒರಗಿಕೊಂಡು ಅಡವಿಯಿಂದ ಬರುವ ಇವಳು ಯಾರು? ಎಬ್ಬಿಸಿದೆನಲ್ಲಾ ನಿನ್ನನ್ನು ಆ ಸೇಬಿನ ಮರದಡಿಯಲ್ಲಿ ಇಗೋ, ಅಲ್ಲಿ ನಿನ್ನ ತಾಯಿ ನಿನ್ನನ್ನು ಗರ್ಭಧರಿಸಿದ್ದು, ಅಲ್ಲೇ ನಿನ್ನನ್ನು ಪ್ರಸವವೇದನೆಯಿಂದ ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಲ್ಲನನ್ನು ಒರಗಿಕೊಂಡು ಅಡವಿಯಿಂದ ಬರುವ ಈಕೆ ಯಾರು? ನಲ್ಲೆ : ಎಬ್ಬಿಸಿದೆ ನಿನ್ನನ್ನು ಸೇಬುಮರದ ಅಡಿಯಲಿ ನಿನ್ನ ತಾಯಿ ಪ್ರಸವವೇದನೆಯಿಂದ ಹಡೆದಾ ಸ್ಥಳದಲಿ ನಿನ್ನನ್ನು ಆಕೆ ಗರ್ಭಧರಿಸಿದಾ ಜಾಗದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ತನ್ನ ಪ್ರಿಯನನ್ನು ಒರಗಿಕೊಂಡು ಅಡವಿಯಿಂದ ಬರುತ್ತಿರುವ ಈ ಯುವತಿ ಯಾರು? ನಾನು ನಿನ್ನನ್ನು ಸೇಬಿನ ಮರದ ಕೆಳಗೆ ಎಬ್ಬಿಸಿದೆನು. ನಿನ್ನ ತಾಯಿಯು ನಿನ್ನನ್ನು ಗರ್ಭಧರಿಸಿದ್ದು ಅಲ್ಲಿಯೇ. ನೀನು ಹುಟ್ಟಿದ್ದೂ ಅಲ್ಲಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ತನ್ನ ಪ್ರಿಯನನ್ನು ಒರಗಿಕೊಂಡು ಅಡವಿಯಿಂದ ಬರುವ ಇವಳು ಯಾರು? ಸೇಬುಗಿಡದ ಕೆಳಗೆ ನಿನ್ನನ್ನು ಪ್ರೇರಿಸಿದೆನು. ಅದು ನಿನ್ನ ತಾಯಿ ನಿನ್ನನ್ನು ಗರ್ಭಧರಿಸಿದ ಸ್ಥಳ. ಅಲ್ಲಿ ನಿನ್ನ ತಾಯಿ ಪ್ರಸವವೇದನೆಯಿಂದ ನಿನ್ನನ್ನು ಹಡೆದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 8:5
29 ತಿಳಿವುಗಳ ಹೋಲಿಕೆ  

ರಕ್ತಬೋಳ, ಧೂಪ, ವರ್ತಕರ ಸಕಲಸುಗಂಧ ದ್ರವ್ಯಗಳನ್ನು ಧೂಪಿಸಿದ ಧೂಮಸ್ತಂಭಗಳಂತೆ ಅರಣ್ಯದಿಂದ ಬರುವ ಈ ಮೆರವಣಿಗೆ ಯಾರದು?


ಇಗೋ ಒಂದು ವಾಣಿ! - ಅರಣ್ಯದಲ್ಲಿ ಯೆಹೋವನ ದಾರಿಯನ್ನು ಸರಿಪಡಿಸಿರಿ, ಅಡವಿಯಲ್ಲಿ ನಮ್ಮ ದೇವರಿಗೆ ರಾಜ ಮಾರ್ಗವನ್ನು ನೆಟ್ಟಗೆ ಮಾಡಿರಿ;


ಉದ್ಯಾನ ವೃಕ್ಷಗಳಲ್ಲಿ ಸೇಬು ಹೇಗೋ ಪುರುಷರಲ್ಲಿ ನನ್ನ ಕಾಂತನು ಹಾಗೆಯೇ ಇಷ್ಟನು. ನಾನು ಅವನ ನೆರಳಿನಲ್ಲಿ ಕೂತು ಸಂತಸಗೊಂಡೆನು, ಅವನ ಫಲವು ನನ್ನ ನಾಲಿಗೆಗೆ ರುಚಿಯಾಗಿತ್ತು.


ನನ್ನ ಆತ್ಮವು ನಿನ್ನನ್ನು ಅಂಟಿಕೊಂಡು ಹಿಂಬಾಲಿಸಿರುವದು; ನಿನ್ನ ಬಲಗೈ ನನಗೆ ಆಧಾರವಾಗಿರುವದು.


ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ, ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ, ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ; ಆದರೂ ಯೆಹೋವನ ಮೇಲೆ ಭಾರಹಾಕಿ - ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು ಅಂದುಕೊಳ್ಳುತ್ತಾರೆ.


ಅರುಣೋದಯವು ದೃಷ್ಟಿಸುವಂತಿರುವ ಇವಳಾರು? ಚಂದ್ರನಂತೆ ಸೌಮ್ಯಳು, ಸೂರ್ಯನಂತೆ ಶುಭ್ರಳು, ಪತಾಕಿನಿಯಂತೆ ಭಯಂಕರಳು ಆಗಿರುವ ಇವಳಾರು?


ಅವರನ್ನು ಬಿಟ್ಟ ತುಸು ಹೊತ್ತಿನೊಳಗೆ ನನ್ನ ಪ್ರಾಣಪ್ರಿಯನನ್ನು ಕಂಡುಕೊಂಡು ತಾಯಿಯ ಮನೆಗೆ, ನನ್ನನ್ನು ಹೆತ್ತವಳ ಕೋಣೆಗೆ, ಸೇರುವ ತನಕ ಬಿಡದೆ ಹಿಡಿದುಕೊಂಡೇ ಹೋದೆನು.


ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾದಿರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡವೆ.


ಶಿಷ್ಯರೊಳಗೆ ಯೇಸುವಿಗೆ ಪ್ರಿಯನಾಗಿದ್ದ ಒಬ್ಬನು ಆತನ ಎದೆಯ ಹತ್ತರ ಒರಗಿಕೊಂಡಿದ್ದನು;


ಹೌದು, ದೇವದೂತನ ಸಂಗಡ ಹೋರಾಡಿ ಗೆದ್ದನು; ಅಳುತ್ತಾ ಆತನ ಕೃಪೆಯನ್ನು ಬೇಡಿಕೊಂಡನು; ಯೆಹೋವನೆಂಬ ಸೇನಾಧೀಶ್ವರನಾದ ದೇವರು ಅವನನ್ನು ಬೇತೇಲಿನಲ್ಲಿಯೂ ಕಂಡು ಅಲ್ಲಿ ನಮ್ಮೊಡನೆ ಮಾತಾಡಿದನು;


ನೀನು ಹೋಗಿ ಯೆರೂಸಲೇವಿುನ ಕಿವಿಗೆ ಮುಟ್ಟುವಂತೆ ಈ ಮಾತುಗಳನ್ನು ಸಾರು - ಯೆಹೋವನು ಹೀಗನ್ನುತ್ತಾನೆ, ನೀನು ಯೌವನದಲ್ಲಿ [ನನ್ನ ಮೇಲೆ] ಇಟ್ಟಿದ್ದ ಪ್ರೀತಿಯನ್ನೂ ವಿವಾಹ ಕಾಲದ ನಿನ್ನ ಪ್ರೇಮವನ್ನೂ ಬೀಜಬಿತ್ತಿಯೇ ಇಲ್ಲದ ಅರಣ್ಯದಲ್ಲಿ ನೀನು ನನ್ನನ್ನು ಹಿಂಬಾಲಿಸಿದ ನಿನ್ನ ಪಾತಿವ್ರತ್ಯವನ್ನೂ ನಿನ್ನ ಹಿತಕ್ಕಾಗಿ ಜ್ಞಾಪಕದಲ್ಲಿಟ್ಟಿದ್ದೇನೆ.


ಇಗೋ, ಹೊಸ ಕಾರ್ಯವನ್ನು ಮಾಡುವೆನು, ಈಗ ತಲೆದೋರುತ್ತಲಿದೆ, ನಿಮಗೆ ಕಾಣುವದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಏರ್ಪಡಿಸಿ ಅಡವಿಯಲ್ಲಿ ನದಿಗಳನ್ನು ಹರಿಸುವೆನು.


ನೀನು ನನ್ನ ತಾಯಿಯ ಸ್ತನ್ಯವನ್ನು ಕುಡಿದ ನನ್ನ ಅಣ್ಣನ ಹಾಗಿದ್ದರೆ ಎಷ್ಟೋ ಚೆನ್ನಾಗಿತ್ತು! ನಾನು ನಿನ್ನನ್ನು ಹೊರಗೆ ಕಂಡು ಮುದ್ದಿಟ್ಟರೂ ಯಾರೂ ಹೀನೈಸುತ್ತಿರಲಿಲ್ಲ.


ಚೀಯೋನಿನ ನಾರಿಯರೇ, ಹೊರಟು ಹೋಗಿ ರಾಜನಾದ ಸೊಲೊಮೋನನನ್ನು ನೋಡಿರಿ. ಅವನು ವಿವಾಹವಾಗಿ ಉಲ್ಲಾಸಪಟ್ಟ ದಿನದಲ್ಲಿ ತಾಯಿಯು ಅವನ ತಲೆಗಿಟ್ಟ ಕಿರೀಟವನ್ನು ಧರಿಸಿಕೊಂಡಿದ್ದಾನೆ.


ಅವನಿಗಿರುವ ಸಹಾಯವು ಮಾಂಸದ ತೋಳು; ನಮಗಾದರೋ ನಮ್ಮ ದೇವರಾದ ಯೆಹೋವನೇ. ಆತನು ನಮಗೆ ನೆರವಾಗಿ ಯುದ್ಧಗಳಲ್ಲಿ ನಮಗೋಸ್ಕರ ಕಾದಾಡುವನು ಎಂದು ಹೇಳಿ ಧೈರ್ಯಪಡಿಸಿದನು. ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸವುಳ್ಳವರಾದರು.


ಆ ಸ್ತ್ರೀಯು ಅರಣ್ಯಕ್ಕೆ ಓಡಿಹೋದಳು; ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರುವತ್ತು ದಿನಗಳವರೆಗೆ ಪೋಷಣೆಯಾಗಬೇಕೆಂದು ದೇವರು ಸ್ಥಳವನ್ನು ಸಿದ್ಧಮಾಡಿದ್ದನು.


ನನ್ನ ಪ್ರಿಯವಾದ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಿಮಗೋಸ್ಕರ ತಿರಿಗಿ ಪ್ರಸವವೇದನೆ ಪಡುತ್ತೇನೆ.


ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತಿರಿ. ದೇವರಿಗೆ ಫಲವಾಗುವದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತು ಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿರಿ.


ಜಜ್ಜಿದ ದಂಟಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತೀಯಷ್ಟೆ. ಒಬ್ಬನು ಅಂಥ ಕೋಲನ್ನು ಊರಿಕೊಳ್ಳುವದಾದರೆ ಅದು ಅವನ ಕೈಯನ್ನು ತಿವಿದು ಒಳಕ್ಕೆ ಹೋಗುತ್ತದೆ! ಐಗುಪ್ತದ ಅರಸನಾದ ಫರೋಹನಲ್ಲಿ ಭರವಸವಿಟ್ಟವರಿಗೆ ಅದೇ ಗತಿಯಾಗುವದು.


ಎನ್ನೊಂದಿಗೆ ಲೆಬನೋನಿನಿಂದ ಬಾ! ವಧುವೇ, ಲೆಬನೋನಿನಿಂದ ನನ್ನೊಂದಿಗೆ ಬಾ! ಅಮಾನದ ತುದಿ, ಶೆನೀರ್ ಮತ್ತು ಹೆರ್ಮೋನ್ ಶಿಖರಗಳು, ಸಿಂಹಗಳ ಗವಿಗಳು, ಚಿರತೆಗಳ ಗುಡ್ಡಗಳು, ಇವುಗಳಿಂದ ಹೊರಟು ಬಾ!


ನನ್ನ ಜೀವಕ್ಕೆ ಕೇಡುಬಗೆಯುವವರೋ ಅಧೋಲೋಕಕ್ಕೆ ಇಳಿದುಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು