ಪರಮಗೀತೆ 8:6 - ಕನ್ನಡ ಸತ್ಯವೇದವು J.V. (BSI)6 ನಿನ್ನ ಹೃದಯದ ಮೇಲೆ, ನಿನ್ನ ಕೈಯಲ್ಲಿ, ನನ್ನನ್ನು ಮುದ್ರೆಯನ್ನಾಗಿ ಧರಿಸಿಕೋ. ಪ್ರೀತಿಯು ಮರಣದಷ್ಟು ಬಲವಾಗಿದೆ, [ಪ್ರೀತಿದ್ರೋಹದಿಂದ ಹುಟ್ಟುವ] ಮತ್ಸರವು ಪಾತಾಳದಷ್ಟು ಕ್ರೂರ, ಅದರ ಜ್ವಾಲೆಯು ಬೆಂಕಿಯ ಉರಿ, ಅದು ಯೆಹೋವನ ರೋಷಾಗ್ನಿಯು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಿನ್ನ ಕೈಯಲ್ಲಿನ ಮುದ್ರೆಯ ಹಾಗೆ ನಿನ್ನ ಹೃದಯದ ಮೇಲೆ ನನ್ನನ್ನು ಧರಿಸಿಕೋ. ಪ್ರೀತಿ ಮೃತ್ಯುವಿನಷ್ಟು ಶಕ್ತಿಶಾಲಿ, ಪ್ರೀತಿದ್ರೋಹದಿಂದ ಹುಟ್ಟುವ ಮತ್ಸರವು ಪಾತಾಳದಷ್ಟು ಕ್ರೂರ, ಅದರ ಜ್ವಾಲೆಯು ಬೆಂಕಿಯ ಉರಿ, ಧಗಧಗಿಸುವ ಕೋಪಾಗ್ನಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಿನ್ನ ವೃಕ್ಷದಲಿ, ನಿನ್ನ ಹಸ್ತಗಳಲಿ ಧರಿಸಿಕೊ ನನ್ನನ್ನು ಪ್ರೇಮ ಮುದ್ರೆಯಾಗಿ. ಪ್ರೀತಿ ಮೃತ್ಯುವಿನಷ್ಟು ಶಕ್ತಿಶಾಲಿ ! ಮತ್ಸರ ಪಾತಾಳದಷ್ಟು ಕ್ರೂರಿ ಅದರ ಜ್ವಾಲೆ ಬೆಂಕಿಯ ಉರಿ ಧಗಧಗಿಸುವ ಕೋಪಾಗ್ನಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನನ್ನನ್ನು ನಿನ್ನ ಹೃದಯದ ಮೇಲೆ ಮುದ್ರೆಯನ್ನಾಗಿಯೂ, ನಿನ್ನ ಬೆರಳಿನಲ್ಲಿರುವ ಮುದ್ರೆಯೊತ್ತಿದ ಉಂಗುರದಂತೆಯೂ ಇಟ್ಟುಕೋ. ಪ್ರೀತಿಯು ಮರಣದಷ್ಟೇ ಬಲಿಷ್ಠ; ಕಾಮೋದ್ರೇಕವು ಸಮಾಧಿಯಷ್ಟೇ ಬಲಿಷ್ಠ. ಅದರ ಜ್ವಾಲೆಗಳು ಧಗಧಗಿಸುವ ಬೆಂಕಿ. ಅದು ಅತಿ ತೀಕ್ಷ್ಣವಾದ ಅಗ್ನಿಯೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನನ್ನನ್ನು ನಿನ್ನ ಹೃದಯದ ಮೇಲೆ ಒಂದು ಮುದ್ರೆಯಾಗಿ ಧರಿಸಿಕೋ. ನಾನು ನಿನ್ನ ಕೈಮೇಲೆ ಒಂದು ಮುದ್ರೆಯಾಗಿರುವೆ. ಪ್ರೀತಿಯು ಮರಣದಷ್ಟು ಬಲವಾಗಿದೆ. ಮತ್ಸರವು ಸಮಾಧಿಯಷ್ಟು ಕ್ರೂರ. ಪ್ರೀತಿಯು ಉರಿಯುವ ಬೆಂಕಿ ಪ್ರಜ್ವಲಿಸುವ ಜ್ವಾಲೆಯ ಹಾಗಿರುವುದು. ಅಧ್ಯಾಯವನ್ನು ನೋಡಿ |