Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 8:7 - ಕನ್ನಡ ಸತ್ಯವೇದವು J.V. (BSI)

7 ಜಲದ ರಾಶಿಗಳೂ ಪ್ರೀತಿಯನ್ನು ನಂದಿಸಲಾರವು. ಪ್ರವಾಹಗಳಿಗೂ ಅದನ್ನು ಮುಣುಗಿಸಲು ಶಕ್ತಿಯಿಲ್ಲ. ಒಬ್ಬನು ತನ್ನ ಮನೆಮಾರನ್ನೆಲ್ಲಾ ಕೊಟ್ಟು ಪ್ರೀತಿಯನ್ನು ಪಡೆಯಲು ಯತ್ನಿಸಿದರೆ ಕೇವಲ ತಿರಸ್ಕಾರಕ್ಕೆ ಗುರಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಂದಿಸಲಾರವು ಪ್ರೀತಿಯನ್ನು ಜಲರಾಶಿಗಳು, ಮುಣುಗಿಸಲಾರವು ಅದನ್ನು ಪ್ರವಾಹಗಳು. ಪ್ರೀತಿಯನ್ನು ಗಳಿಸಲು ಮನೆಮಾರುಗಳನ್ನು ಮಾರಿದರೂ ಸಿಗುವುದು ಅವನಿಗೆ ತಿರಸ್ಕಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಂದಿಸಲಾರವು ಪ್ರೀತಿಯನ್ನು ಜಲರಾಶಿಗಳು ಮುಳುಗಿಸಲಾರವು ಅದನು ಪ್ರವಾಹಗಳು. ಪ್ರೀತಿಯನು ಗಳಿಸಲು ಮನೆಮಾರುಗಳ ಮಾರಿದರೂ ತಿರಸ್ಕಾರವೆ ಅಂಥವನಿಗೆ ಸಿಗುವುದು. ಸೋದರರು :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಜಲರಾಶಿಗಳು ಪ್ರೀತಿಯನ್ನು ನಂದಿಸಲಾರವು; ನದಿಗಳು ಪ್ರೀತಿಯನ್ನು ಮುಳುಗಿಸಲಾರವು. ಒಬ್ಬನು ಪ್ರೀತಿಗೋಸ್ಕರ ತನ್ನ ಆಸ್ತಿಯನ್ನೆಲ್ಲ ಕೊಟ್ಟುಬಿಟ್ಟರೆ ಅವನು ಕೇವಲ ತಿರಸ್ಕಾರಕ್ಕೆ ಗುರಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಜಲರಾಶಿಗಳು ಪ್ರೀತಿಯನ್ನು ನಂದಿಸಲಾರವು. ಪ್ರವಾಹಗಳು ಸಹ ಪ್ರೀತಿಯನ್ನು ಮುಳುಗಿಸಲಾರವು. ಒಬ್ಬನು ತನ್ನ ಆಸ್ತಿಯನ್ನೆಲ್ಲಾ ಪ್ರೀತಿಗೋಸ್ಕರ ಕೊಟ್ಟರೂ, ಆ ಪ್ರೀತಿಗೆ ಬದಲಾಗಿ ಅಂಥವನಿಗೆ ಸಂಪೂರ್ಣ ನಿಂದೆಯೇ ಸಿಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 8:7
8 ತಿಳಿವುಗಳ ಹೋಲಿಕೆ  

ಅವನು ಯಾವ ಈಡನ್ನೂ ಮುಟ್ಟನು; ಎಷ್ಟು ಲಂಚಕೊಟ್ಟರೂ ಒಪ್ಪನು.


ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು; ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಣುಗಿಸವು; ಉರಿಯಲ್ಲಿ ನಡೆಯುವಾಗ ನೀನು ಕಂದದಿರುವಿ, ಜ್ವಾಲೆಯು ನಿನ್ನನ್ನು ದಹಿಸದು.


ಅವನ ತಪ್ಪು ಬೈಲಾದರೆ ಅವನು ಏಳರಷ್ಟು ಕೊಡಬೇಕಾಗುವದು, ಅಥವಾ ತನ್ನ ಮನೆಯ ಆಸ್ತಿಯನ್ನೆಲ್ಲಾ ತೆತ್ತೇ ತೀರಬೇಕು.


ಅವನು ಭ್ರಷ್ಟರನ್ನು ಜರಿದುಬಿಟ್ಟವನೂ ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು.


ನಿನ್ನ ಸೇವಕನು ಈ ಮೇರೆಗೆ ನನಗೆ ಮಾಡಿದನೆಂಬದಾಗಿ ಆಕೆ ಹೇಳಿದ ಮಾತುಗಳನ್ನು ಯೋಸೇಫನ ದಣಿಯು ಕೇಳಿ ಬಹಳ ಸಿಟ್ಟುಗೊಂಡು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು