Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 8:8 - ಕನ್ನಡ ಸತ್ಯವೇದವು J.V. (BSI)

8 ಸ್ತನಬಾರದ ತಂಗಿಯು ನಮಗುಂಟು; ಅವಳನ್ನು ಕೇಳತಕ್ಕ ಸಮಯದಲ್ಲಿ ಅವಳ ಹಿತಕ್ಕೆ ಏನು ಮಾಡೋಣ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸ್ತನಬಾರದ ತಂಗಿಯು ನಮಗುಂಟು; ಅವಳನ್ನು ವರಿಸಲು ಯಾರಾದರು ಬಂದರೆ ಅವಳ ಹಿತಕ್ಕೆ ಏನು ಮಾಡೋಣ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇನ್ನೂ ಸ್ತನ ಬಾರದ ತಂಗಿ ನಮಗಿದ್ದಾಳೆ ನಾವೇನು ಮಾಡೋಣ ಅವಳನ್ನು ವರಿಸಲು ಬಂದರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಮಗೆ ಚಿಕ್ಕ ತಂಗಿಯಿದ್ದಾಳೆ, ಆಕೆಯ ಸ್ತನಗಳು ಇನ್ನೂ ಬೆಳೆದಿಲ್ಲ. ಆಕೆಯ ನಿಶ್ಚಿತಾರ್ಥ ದಿನದಲ್ಲಿ ನಮ್ಮ ತಂಗಿಗೋಸ್ಕರ ನಾವೇನು ಮಾಡಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಪ್ರಾಯಕ್ಕೆ ಬಾರದ ತಂಗಿ ಒಬ್ಬಳು ನಮಗಿದ್ದಾಳೆ. ಅವಳನ್ನು ಮದುವೆಗಾಗಿ ಮಾತಾಡಲು ಯಾರಾದರೂ ಬಂದರೆ, ನಾವೇನು ಮಾಡೋಣ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 8:8
29 ತಿಳಿವುಗಳ ಹೋಲಿಕೆ  

ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಅಕ್ರಮಗಾರರೆಂದು ನಿಂದಿಸುತ್ತಾರೋ ಆ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ವಿಚಾರಣೆಯ ದಿನದಲ್ಲಿ ದೇವರನ್ನು ಕೊಂಡಾಡುವರು.


ನೀನು ಕೇಳಿಕೊಂಡರೆ ನಾನು ಅನ್ಯಜನಗಳನ್ನೆಲ್ಲಾ ನಿನಗೆ ಅಧೀನ ಮಾಡುವೆನು; ಭೂವಿುಯ ಕಟ್ಟಕಡೆಯವರೆಗೂ ಇರುವ ಎಲ್ಲಾ ದೇಶಗಳನ್ನೂ ನಿನಗೆ ಸ್ವಾಸ್ತ್ಯವಾಗಿ ಕೊಡುವೆನು.


ಆತನು - ನೀನು ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುತ್ತೇನೆಂದು ಹೇಳಿದನು.


ಅಲ್ಲಿ ರಾತ್ರಿಕಾಲದಲ್ಲಿ ಪೌಲನಿಗೆ ಒಂದು ದರ್ಶನವಾಯಿತು, ಏನಂದರೆ - ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು - ನೀನು ಸಮುದ್ರವನ್ನು ದಾಟಿ ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕೆಂದು ಅವನನ್ನು ಬೇಡಿಕೊಳ್ಳುತ್ತಿದ್ದನು.


ಕೈಸರೈಯದಲ್ಲಿ ಇತಾಲ್ಯದ ಪಟಾಲಮೆನಿಸಿಕೊಳ್ಳುವ ಒಂದು ಪಟಾಲವಿುನ ಶತಾಧಿಪತಿಯಾದ ಕೊರ್ನೇಲ್ಯನೆಂಬ ಒಬ್ಬ ಮನುಷ್ಯನಿದ್ದನು.


ಅವನೇ ಸೀನಾಯಿಬೆಟ್ಟದಲ್ಲಿ ತನ್ನೊಡನೆ ಮಾತಾಡಿದ ದೂತನಿಗೂ ನಮ್ಮ ಪಿತೃಗಳಿಗೂ ಅಡವಿಯಲ್ಲಿದ್ದ ಸಭೆಯೊಳಗೆ ಮಧ್ಯಸ್ಥನಾಗಿದ್ದು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು.


ಇದಲ್ಲದೆ ಈ ಹಟ್ಟಿಗೆ ಸೇರದಿರುವ ಇನ್ನು ಬೇರೆ ಕುರಿಗಳು ನನಗೆ ಅವೆ, ಅವುಗಳನ್ನೂ ನಾನು ತರಬೇಕು; ಅವು ನನ್ನ ಸ್ವರಕ್ಕೆ ಕಿವಿಗೊಡುವವು; ಆಗ ಒಂದೇ ಹಿಂಡು ಆಗುವದು, ಒಬ್ಬನೇ ಕುರುಬನಿರುವನು.


ಸಮಾರ್ಯಳೆಂಬ ನಿನ್ನ ಅಕ್ಕನು ಕುಡಿದ ಬೆಚ್ಚುಬೆರಗಿನ ಪಾತ್ರೆಯಲ್ಲಿ ನೀನೂ ಕುಡಿದು ಕುಡಿದು ಪೂರಾ ಅಮಲೇರಿ ದುಃಖಭರಿತಳಾಗುವಿ.


ಇದಕ್ಕನುಸಾರ ನಾನು ಕುಮಾರ್ತೆಯರನ್ನೋ ಎಂಬಂತೆ ನಿನಗೆ ದಯಪಾಲಿಸುವ ನಿನ್ನ ಅಕ್ಕಂದಿರೂ ತಂಗಿಯರೂ ನಿನ್ನಲ್ಲಿ ಸೇರಿಕೊಳ್ಳುವಾಗ ನೀನು ನಿನ್ನ ದುರ್ಮಾರ್ಗಗಳನ್ನು ನೆನಸಿಕೊಂಡು ನಾಚಿಕೆಪಡುವಿ; ಈ ನನ್ನ ದಯೆ ನಿನ್ನ [ಹಿಂದಿನ] ಒಡಂಬಡಿಕೆಯ ಫಲವಲ್ಲ.


ನಿನ್ನೆಡಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯ ನಿನ್ನ ಅಕ್ಕ, ಬಲಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.


ಭೂವಿುಯಲ್ಲಿ ಮೊಳಿಕೆಯನ್ನೋ ಎಂಬಂತೆ ನಾನು ನಿನ್ನನ್ನು ಬೆಳೆಯಿಸಲು ನೀನು ಬಲಿತು ಪ್ರಾಯತುಂಬಿ ಅತಿಸುಂದರಿಯಾದಿ; ನಿನಗೆ ಸ್ತನಬಂತು, ನಿನ್ನ ಕೂದಲು ಉದ್ದವಾಯಿತು; ಆದರೆ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿದ್ದಿ.


ಆತನೇ ಈಗ ಹೀಗನ್ನುತ್ತಾನೆ - ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪಕಾರ್ಯವೇ ಸರಿ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.


ನಾನು ಕೋಟೆ; ನನ್ನ ಸ್ತನಗಳು ಅದರ ಬುರುಜುಗಳು, ಹೀಗಿದ್ದು ಸೊಲೊಮೋನನ ದೃಷ್ಟಿಯಲ್ಲಿ [ಜಯಶಾಲಿನಿಯಾಗಿ] ಸಮಾಧಾನ ಹೊಂದಿದೆನು.


ನಿನ್ನ ಎರಡು ಸ್ತನಗಳು ಎರಳೆಯ ಅವಳಿಮರಿಗಳೇ.


ನಿನ್ನ ಎರಡು ಸ್ತನಗಳು ನೆಲದಾವರೆಗಳ ಮಧ್ಯದಲ್ಲಿ ಮೇಯುವ ಎರಳೆಯ ಅವಳಿಮರಿಗಳಂತಿವೆ.


ಅವಳು ಕೋಟೆಯಾದರೆ ಅದರ ಮೇಲೆ ಬೆಳ್ಳಿಯ ಬುರುಜನ್ನು ಕಟ್ಟುವೆವು, ಬಾಗಿಲಾದರೆ ದೇವದಾರು ಹಲಿಗೆಗಳಿಂದ ಭದ್ರಪಡಿಸುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು