Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 1:10 - ಕನ್ನಡ ಸತ್ಯವೇದವು J.V. (BSI)

10 ನಾನು ಕರ್ತನ ದಿನದಲ್ಲಿ ದೇವರಾತ್ಮವಶನಾಗಿ ನನ್ನ ಹಿಂದುಗಡೆ ತುತೂರಿಯ ಶಬ್ದದಂತಿರುವ ಮಹಾ ಶಬ್ದವನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾನು ಕರ್ತನ ದಿನದಲ್ಲಿ ದೇವರಾತ್ಮವಶನಾಗಿರಲು, ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತ್ತೂರಿಯ ನಾದದಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಪ್ರಭುವಿನ ದಿನದಂದು ನಾನು ದೇವರಾತ್ಮ ವಶನಾದೆ. ಆಗ ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತೂರಿಯ ನಾದದಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಪ್ರಭುವಿನ ದಿನದಂದು ಪವಿತ್ರಾತ್ಮನು ನನ್ನನ್ನು ವಶಪಡಿಸಿಕೊಂಡನು. ಆಗ ನನ್ನ ಹಿಂಭಾಗದಲ್ಲಿ ಒಂದು ಮಹಾಶಬ್ದವನ್ನು ಕೇಳಿದೆನು. ಆ ಶಬ್ದವು ತುತೂರಿಯ ಧ್ವನಿಯಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾನು ಕರ್ತ ಯೇಸುವಿನ ದಿನದಲ್ಲಿ ಆತ್ಮಭರಿತನಾಗಿರಲು ನನ್ನ ಹಿಂದೆ ತುತೂರಿಯ ಶಬ್ದದಂತಿರುವ ಮಹಾಧ್ವನಿಯನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಧನಿಯಾಚ್ಯಾ ದಿಸಿ ಮಿಯಾ ಪವಿತ್ರ್ ಆತ್ಮ್ಯಾನ್ ಭರ್‍ಲೊ, ಅನಿ ಮಾಕಾ ಎಕ್ ಮೊಟೊ ಧನ್ ಆಯ್ಕೊ ಯೆಲೊ, ತೊ ಅವಾಜ್ ಎಕ್ ಮೊಟ್ಯಾ ಪಂವ್ಯಾಚ್ಯಾ ಅವಾಜಾ ಸರ್ಕೊ ಯೆವ್‍ಲಾಗಲ್ಲೊ, ತೊ ಮಾಜ್ಯಾ ಫಾಟಿಕ್ಡೆ ಬೊಲುಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 1:10
13 ತಿಳಿವುಗಳ ಹೋಲಿಕೆ  

ದೇವರಾತ್ಮವಶನಾದ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ ಯೆರೂಸಲೇಮೆಂಬ ಪರಿಶುದ್ಧ ಪಟ್ಟಣವು ದೇವರ ತೇಜಸ್ಸುಳ್ಳದ್ದಾಗಿ ಪರಲೋಕದೊಳಗಿಂದ ದೇವರ ಕಡೆಯಿಂದ ಇಳಿದುಬರುವದನ್ನು ನನಗೆ ತೋರಿಸಿದನು. ಪಟ್ಟಣದ ಪ್ರಕಾಶವು ಅಮೂಲ್ಯರತ್ನದ ಪ್ರಕಾಶಕ್ಕೆ ಸಮಾನವಾಗಿತ್ತು, ಥಳಥಳಿಸುವ ವಜ್ರವೋ ಎಂಬಂತೆ ಕಾಣಿಸಿತು.


ಆಗ ಅವನು ದೇವರಾತ್ಮವಶನಾದ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು. ಅಲ್ಲಿ ನಾನು ರಕ್ತವರ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ಕಂಡೆನು; ಆ ಮೃಗದ ಮೈಮೇಲೆಲ್ಲಾ ದೇವದೂಷಣೆಯ ಹೆಸರುಗಳು ತುಂಬಿದ್ದವು.


ವಾರದ ಮೊದಲನೆಯ ದಿವಸದಲ್ಲಿ ನಾವು ರೊಟ್ಟಿ ಮುರಿಯುವ ನಿಯಮಕ್ಕಾಗಿ ಕೂಡಿಬಂದಾಗ ಮರುದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಪ್ರಸಂಗಿಸುತ್ತಾ ಸರಿಹೊತ್ತಿನವರೆಗೂ ಉಪನ್ಯಾಸವನ್ನು ನಡಿಸಿದನು.


ನಾನು ಬಂದಾಗ ಹಣ ವಸೂಲುಮಾಡಬೇಕಾದ ಅವಶ್ಯವಾಗದಂತೆ ನಿಮ್ಮಲ್ಲಿ ಪ್ರತಿಯೊಬ್ಬನು ತನಗೆ ಬಂದ ಸಂಪಾದನೆಯ ಮೇರೆಗೆ ವಾರವಾರದ ಮೊದಲನೆಯ ದಿನದಲ್ಲಿ ಗಂಟುಮಾಡಿ ತನ್ನ ಮನೆಯಲ್ಲಿಟ್ಟುಕೊಂಡಿರಬೇಕು.


ಅದೇ ದಿವಸದ ಅಂದರೆ ವಾರದ ಮೊದಲನೆಯ ದಿವಸದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಲುಗಳನ್ನು ಮುಚ್ಚಿಕೊಂಡಿರಲು ಯೇಸು ಬಂದು ನಡುವೆ ನಿಂತು - ನಿಮಗೆ ಸಮಾಧಾನವಾಗಲಿ ಅಂದನು.


ದಾವೀದನ ಮಗನು ಎಂದು ಹೇಳಲು ಆತನು - ಹಾಗಾದರೆ ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಕೆಳಗೆ ಹಾಕುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು. ಎಂಬ ಮಾತಿನಲ್ಲಿ ದಾವೀದನು ಪವಿತ್ರಾತ್ಮಪ್ರೇರಿತನಾಗಿ ಆತನನ್ನು ಒಡೆಯನು ಅನ್ನುವದು ಹೇಗೆ?


ಎಂಟು ದಿವಸಗಳಾದ ಮೇಲೆ ಆತನ ಶಿಷ್ಯರು ತಿರಿಗಿ ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ನಡುವೆ ನಿಂತು - ನಿಮಗೆ ಸಮಾಧಾನವಾಗಲಿ ಅಂದನು.


ಅವನು ಕಣ್ಣೆತ್ತಿ ನೋಡಲಾಗಿ ಕುಲಗಳ ಪ್ರಕಾರ ಡೇರೆಗಳನ್ನು ಹಾಕಿಕೊಂಡಿದ್ದ ಇಸ್ರಾಯೇಲ್ಯರು ಅವನಿಗೆ ಕಾಣಿಸಿದರು.


ಹೀಗಿರುವದರಿಂದ ನಾನು ನಿಮಗೆ ತಿಳಿಸುವದನ್ನು ಕೇಳಿರಿ; ದೇವರಾತ್ಮನ ಪ್ರೇರಣೆಯಿಂದ ಮಾತಾಡುವ ಯಾವ ಮನುಷ್ಯನಾದರೂ ಯೇಸುವನ್ನು ಶಾಪಗ್ರಸ್ತನೆಂದು ಹೇಳುವದಿಲ್ಲ, ಮತ್ತು ಪವಿತ್ರಾತ್ಮನ ಪ್ರೇರಣೆಯಿಂದಲೇ ಹೊರತು ಯಾವ ಮನುಷ್ಯನಾದರೂ ಯೇಸುವನ್ನು ಕರ್ತನೆಂದು ಹೇಳಲಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು