Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 1:11 - ಕನ್ನಡ ಸತ್ಯವೇದವು J.V. (BSI)

11 ಅದು - ನೀನು ನೋಡುವದನ್ನು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ ಎಂಬೀ ಏಳು ಪಟ್ಟಣಗಳ ಸಭೆಗಳಿಗೆ ಕಳುಹಿಸಬೇಕೆಂದು ನುಡಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅದು, “ನೀನು ನೋಡುವುದನ್ನು ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ, ಎಂಬೀ ಏಳು ಸಭೆಗಳಿಗೆ ಕಳುಹಿಸಬೇಕು” ಎಂದು ನುಡಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅದು ಹೀಗೆಂದು ನುಡಿಯಿತು: “ನೀನು ಕಾಣುತ್ತಿರುವುದನ್ನು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ ಮತ್ತು ಲವೊದಿಕೀಯ ಎಂಬ ಪಟ್ಟಣಗಳಲ್ಲಿರುವ ಏಳು ಸಭೆಗಳಿಗೆ ಕಳುಹಿಸು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆ ಧ್ವನಿಯು, “ನೀನು ನೋಡುವುದನ್ನೆಲ್ಲ ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ ಮತ್ತು ಲವೊದಿಕೀಯ ಎಂಬ ಏಳು ಸಭೆಗಳಿಗೆ ಕಳುಹಿಸು” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅದು, “ಕಾಣುತ್ತಿರುವುದನ್ನು ಸುರುಳಿಯಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯದಲ್ಲಿರುವ ಏಳು ಸಭೆಗಳಿಗೆ ಕಳುಹಿಸಬೇಕು,” ಎಂದು ನುಡಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತೆನಿ, “ತಿಯಾ ಕಾಯ್ ಬಗುಲೆ ತೆ ಸಗ್ಳೆ ಎಕ್ ಪುಸ್ತಕಾತ್ ಲಿವ್ನ್ ಘೆ, ಅನಿ ಹ್ಯಾ ಸಾತ್ ಶಾರಾನಿತ್ಲ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ತೆ ಧಾಡುನ್ ದಿ.” ಮಟ್ಲ್ಯಾನ್. ತಿ ಶಾರಾ ಹಿ - ಎಫೆಜ್, ಸ್ಮಿರ್‍ನಾ, ಪೆರ್‍ಗಾಮನ್, ಥೈಟಿರಾ, ಸಾರ್ದಿಸ್, ಫಿಲಾದಾಲ್ಫಿಯಾ, ಅನಿ ಲವೊದಿಸಿಯಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 1:11
37 ತಿಳಿವುಗಳ ಹೋಲಿಕೆ  

ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ - ದೇವರ ಏಳು ಆತ್ಮಗಳೂ ಏಳು ನಕ್ಷತ್ರಗಳೂ ಉಳ್ಳಾತನು ಹೇಳುವದೇನಂದರೆ - ನಿನ್ನ ಕೃತ್ಯಗಳನ್ನು ಬಲ್ಲೆನು; ಜೀವಿಸುವವನು ಎಂದು ಹೆಸರು ನಿನಗಿದ್ದರೂ ಸತ್ತವನಾಗಿದ್ದೀ ಎಂಬದನ್ನು ಬಲ್ಲೆನು.


ಆಸ್ಯಸೀಮೆಯಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವದೇನಂದರೆ - ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವಾತನಿಂದ


ಆಗ ಯೆಹೋವನು ನನಗೆ ಈ ಉತ್ತರವನ್ನು ದಯಪಾಲಿಸಿದನು - ನಿನಗಾದ ದರ್ಶನವನ್ನು ಬರೆ; ಓದುವವರು ಶೀಘ್ರವಾಗಿ ಓದುವಂತೆ ಹಲಿಗೆಗಳ ಮೇಲೆ ಅದನ್ನು ಕೆತ್ತು.


ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ನಾನು ನಿನಗೆ ಹೇಳಿರುವ ಮಾತುಗಳನ್ನೆಲ್ಲಾ ಗ್ರಂಥವಾಗಿ ಬರೆ.


ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ - ಆಮೆನ್ ಎಂಬಾತನು ಅಂದರೆ ನಂಬತಕ್ಕ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಮೂಲನೂ ಆಗಿರುವಾತನು ಹೇಳುವದೇನಂದರೆ -


ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ - ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯುವವನೂ ಯಾರೂ ತೆರೆಯದಂತೆ ಮುಚ್ಚುವವನೂ ಆಗಿರುವಾತನು ಹೇಳುವದೇನಂದರೆ -


ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ -


ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ -


ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ -


ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಎಫೆಸದಲ್ಲಿರುವ ದೇವಜನರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟಿರುವವರಿಗೂ ಬರೆಯುವದೇನಂದರೆ -


[ಯೆಹೋವನು ನನಗೆ ಹೀಗೆ ಹೇಳಿದನು] - ನೀನೀಗ ಮನೆಗೆ ಹೋಗಿ ಈ ಮಾತು ಮುಂದಿನ ಕಾಲದಲ್ಲಿ ಶಾಶ್ವತ ಸಾಕ್ಷಿಯಾಗಿರುವಂತೆ ಇವರೆದುರಿಗೆ ಹಲಿಗೆಯ ಮೇಲೆ ಕೆತ್ತು, ಪುಸ್ತಕದಲ್ಲಿ ಬರೆ.


ಆಗ ಸಿಂಹಾಸನದ ಮೇಲೆ ಕೂತಿದ್ದವನು - ಇಗೋ, ಎಲ್ಲವನ್ನು ಹೊಸದುಮಾಡುತ್ತೇನೆ ಅಂದನು. ಮತ್ತು ಒಬ್ಬನು ನನಗೆ - ಇದನ್ನು ಬರೆ; ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ ಎಂದು ಹೇಳಿದನು.


ಇದಲ್ಲದೆ ಅವನು ನನ್ನ ಸಂಗಡ ಮಾತಾಡುತ್ತಾ - ಯಜ್ಞದ ಕುರಿಯಾದಾತನ ವಿವಾಹದ ಔತಣಕ್ಕೆ ಕರಸಿಕೊಂಡವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿ - ಈ ಮಾತುಗಳು ದೇವರ ಸತ್ಯವಚನಗಳಾಗಿವೆ, ಅಂದನು.


ಪರಲೋಕದಿಂದ ಒಂದು ಶಬ್ದವು ನನಗೆ ಕೇಳಿಸಿತು. ಅದು - ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು - ಹೌದು, ಅವರು ಧನ್ಯರೇ; ಅವರ ಕಷ್ಟ ತೀರಿತು, ಅವರಿಗೆ ವಿಶ್ರಾಂತಿಯಾಗುವದು; ಅವರ ಸುಕೃತ್ಯಗಳು ಅವರೊಡನೆ ಬರುವವು ಎಂದು ಹೇಳುತ್ತಾನೆ.


ಕೂಗಿದಾಗ ಏಳು ಗುಡುಗುಗಳು ಒಂದೊಂದಾಗಿ ಧ್ವನಿಕೊಟ್ಟವು. ಆ ಏಳು ಗುಡುಗುಗಳು ನುಡಿದಾಗ ನಾನು ಬರೆಯಬೇಕೆಂದಿದ್ದೆನು. ಆದರೆ - ಆ ಏಳು ಗುಡುಗುಗಳು ನುಡಿದದ್ದನ್ನು ನೀನು ಬರೆಯದೆ ಗುಪ್ತವಾಗಿಡು ಎಂದು ಹೇಳುವ ಆಕಾಶವಾಣಿಯನ್ನು ಕೇಳಿದೆನು.


ಆದದರಿಂದ ನೀನು ಕಂಡವುಗಳನ್ನೂ ಈಗ ನಡೆಯುತ್ತಿರುವವುಗಳನ್ನೂ ಮುಂದೆ ಆಗಬೇಕಾದವುಗಳನ್ನೂ ಬರೆ.


ನಾನು ಆದಿಯೂ ಅಂತವೂ ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವವನೂ ಸರ್ವಶಕ್ತನೂ ಆಗಿದ್ದೇನೆ ಎಂದು ದೇವರಾದ ಕರ್ತನು ಹೇಳುತ್ತಾನೆ.


ನಾನು ಮಕೆದೋನ್ಯಕ್ಕೆ ಹೋಗುತ್ತಿದ್ದಾಗ ನೀನು ಎಫೆಸದಲ್ಲೇ ಇದ್ದುಕೊಂಡು ಅಲ್ಲಿರುವ ಕೆಲವರಿಗೆ - ನೀವು ಬೇರೆ ಉಪದೇಶವನ್ನು ಮಾಡಬಾರದೆಂತಲೂ


ಆದಕಾರಣ ನೀನು ಈ ಪದ್ಯವನ್ನು ಬರೆದುಕೊಂಡು ಇಸ್ರಾಯೇಲ್ಯರಿಗೆ ಕಲಿಸಿಕೊಡಬೇಕು. ಈ ಪದ್ಯವು ಇಸ್ರಾಯೇಲ್ಯರಿಗೆ ವಿರೋಧವಾಗಿ ನನ್ನ ಪಕ್ಷದಲ್ಲಿ ಸಾಕ್ಷಿಯಾಗಿರುವಂತೆ ಇದನ್ನು ಅವರಿಗೆ ಬಾಯಿ ಪಾಠಮಾಡಿಸು.


ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು - ಹೆದರಬೇಡ, ನಾನು ಮೊದಲನೆಯವನೂ ಕಡೆಯವನೂ ಸದಾ ಜೀವಿಸುವವನೂ ಆಗಿದ್ದೇನೆ.


ಯೋಹಾನನು ತಾನು ಕಂಡದ್ದನ್ನೆಲ್ಲಾ ತಿಳಿಸುವವನಾಗಿ ದೇವರ ವಾಕ್ಯದ ವಿಷಯವಾಗಿಯೂ ಯೇಸು ಕ್ರಿಸ್ತನು ಹೇಳಿದ ಸಾಕ್ಷಿಯ ವಿಷಯವಾಗಿಯೂ ಸಾಕ್ಷಿಕೊಟ್ಟನು.


ಪಂಚಾಶತ್ತಮ ದಿನದ ಹಬ್ಬದ ತನಕ ಎಫೆಸದಲ್ಲಿರುವೆನು;


ನಾನು ಎಫೆಸದಲ್ಲಿ ಮೃಗಗಳೊಂದಿಗೆ ಯುದ್ಧಮಾಡಿದ್ದು ಕೇವಲ ಮಾನುಷಾಭಿಪ್ರಾಯದಿಂದಾದರೆ ನನಗೇನು ಪ್ರಯೋಜನ? ಸತ್ತವರು ಎದ್ದು ಬರುವದಿಲ್ಲವಾದರೆ - ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.


ಅವನು ವಿುಲೇತದಿಂದ ಎಫೆಸಕ್ಕೆ ಹೇಳಿಕಳುಹಿಸಿ ಅಲ್ಲಿಯ ಸಭೆಯ ಹಿರಿಯರನ್ನು ಕರಿಸಿದನು.


ಅಷ್ಟರೊಳಗೆ ಅಲೆಕ್ಸಾಂದ್ರಿಯದಲ್ಲಿ ಹುಟ್ಟಿದ ಅಪೊಲ್ಲೋಸನೆಂಬ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಾಕ್ಚಾತುರ್ಯವುಳ್ಳವನು, ಶಾಸ್ತ್ರಗಳಲ್ಲಿ ಪ್ರವೀಣನು.


ನಮ್ಮ ಮಾತುಗಳನ್ನು ಕೇಳಿದವರಲ್ಲಿ ಲುದ್ಯಳೆಂಬ ಒಬ್ಬ ಸ್ತ್ರೀಯು ಇದ್ದಳು. ಆಕೆ ಧೂಮ್ರವರ್ಣದ ವಸ್ತ್ರಗಳನ್ನು ಮಾರುವವಳೂ ಥುವತೈರ ಎಂಬ ಊರಿನವಳೂ ದೇವಭಕ್ತಳೂ ಆಗಿದ್ದಳು. ಪೌಲನು ಹೇಳಿದ ಮಾತುಗಳಿಗೆ ಲಕ್ಷ್ಯಕೊಡುವದಕ್ಕೆ ಕರ್ತನು ಆಕೆಯ ಹೃದಯವನ್ನು ತೆರೆದನು.


ನಿಮಗೋಸ್ಕರವೂ ಲವೊದಿಕೀಯದವರಿಗೋಸ್ಕರವೂ ನನ್ನನ್ನು ಕಣ್ಣಾರೆ ಕಾಣದಿರುವವರೆಲ್ಲರಿಗೋಸ್ಕರವೂ ನನಗೆ ಬಹಳ ಹೋರಾಟ ಉಂಟೆಂಬದು ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ.


ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಗೂಢಾರ್ಥವನ್ನು ವಿವರಿಸುತ್ತೇನೆ - ಆ ಏಳು ನಕ್ಷತ್ರಗಳು ಅಂದರೆ ಆ ಏಳು ಸಭೆಗಳ ದೂತರು; ಆ ಏಳು ದೀಪಸ್ತಂಭಗಳು ಅಂದರೆ ಆ ಏಳು ಸಭೆಗಳು.


ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ - ಏಳು ನಕ್ಷತ್ರಗಳನ್ನು ಬಲಗೈಯಲ್ಲಿ ಹಿಡಿದುಕೊಂಡು ಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ತಿರುಗಾಡುವಾತನು ಹೇಳುವದೇನಂದರೆ -


ಆದರೆ ಥುವತೈರದಲ್ಲಿರುವ ಉಳಿದವರಿಗೆ, ಅಂದರೆ ಅಗಾಧ ಬೋಧೆಯೆಂದು ಹೇಳಿಸಿಕೊಂಡಿರುವ ಸೈತಾನನಿಂದ ಪ್ರೇರಿತವಾದ ದುರ್ಬೋಧನೆಯನ್ನು ನಿಮ್ಮಲ್ಲಿ ಯಾರಾರು ತಿಳಿಯದೆಯೂ ಅವಲಂಬಿಸದೆಯೂ ಇರುತ್ತಾರೋ ಅವರಿಗೆ ಹೇಳುವದೇನಂದರೆ -


ಆದರೂ ತಮ್ಮ ವಸ್ತ್ರಗಳನ್ನು ಮೈಲಿಗೆ ಮಾಡಿಕೊಳ್ಳದಿರುವ ಸ್ವಲ್ಪ ಜನರು ಸಾರ್ದಿಸಿನೊಳಗೆ ನಿನ್ನಲ್ಲಿದ್ದಾರೆ; ಅವರು ಯೋಗ್ಯರಾಗಿರುವದರಿಂದ ಶುಭ್ರವಸ್ತ್ರಗಳನ್ನು ಧರಿಸಿಕೊಂಡು ನನ್ನ ಜೊತೆಯಲ್ಲಿ ನಡೆಯುವರು.


ಇದಲ್ಲದೆ ಅವನು ನನಗೆ - ಈ ಪುಸ್ತಕದಲ್ಲಿರುವ ಪ್ರವಾದನವಾಕ್ಯಗಳನ್ನು ಗುಪ್ತವಾಗಿಡಬೇಡ; ಇವು ನೆರವೇರುವ ಸಮಯವು ಸಮೀಪವಾಗಿದೆ.


ಯೇಸುವೆಂಬ ನಾನು ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ವಿಷಯದಲ್ಲಿ ನಿಮಗೆ ಸಾಕ್ಷಿಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದವಂಶವೆಂಬ ಬುಡದಿಂದ ಹುಟ್ಟಿದ ಚಿಗುರೂ ಅವನ ಸಂತತಿಯೂ ಉದಯಸೂಚಕವಾದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು