Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 1:15 - ಕನ್ನಡ ಸತ್ಯವೇದವು J.V. (BSI)

15 ಆತನ ಕಣ್ಣುಗಳು ಬೆಂಕಿಯ ಉರಿಯಂತೆಯೂ ಆತನ ಪಾದಗಳು ಕುಲುಮೆಯಲ್ಲಿ ಕಾಯಿಸಿದ ತಾಮ್ರದಂತೆಯೂ ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆತನ ಪಾದಗಳು ಕುಲುಮೆಯಲ್ಲಿ ಕಾಯಿಸಿದ ತಾಮ್ರದಂತೆಯೂ, ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವರ ಪಾದಗಳು ಕುಲುಮೆಯಲ್ಲಿ ಕಾಯಿಸಿದ ತಾಮ್ರದಂತೆ ಥಳಥಳಿಸುತ್ತಾ ಇದ್ದವು. ಧ್ವನಿ, ಜಲಪಾತದಂತೆ ಭೋರ್ಗರೆಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಪಾದಗಳು ಕುಲುಮೆಯಲ್ಲಿ ಕಾಯಿಸಿದ ತಾಮ್ರದಂತಿದ್ದವು; ಧ್ವನಿಯು ಹರಿಯುವ ನೀರಿನ ಘೋಷದಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವರ ಪಾದಗಳು ಕುಲುಮೆಯಲ್ಲಿ ಹೊಳೆಯುವ ತಾಮ್ರದಂತೆಯೂ ಅವರ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತೆಚೆ ಡೊಳೆ ಪೆಟ್ತಲ್ಯಾ ಆಗಿ ಸಾರ್ಕೆ ಹೊತ್ತೆ,ಅನಿ ತೆಚೆ ಪಾಂಯೆ ಭಟ್ಟಿತ್ ಘಾಲುನ್ ಬರೆ ಕರುನ್ ಕಾಡಲ್ಲ್ಯಾ ಅನಿ ಪವಿತ್ರ್ ಕರಲ್ಲ್ಯಾ ಪಿತ್ಳಿಚ್ಯಾ ತಾಮ್ಯಾಚ್ಯಾ ಸಾರ್ಕೆ ಹೊತ್ತೆ, ಅನಿ ತೆಚೊ ಧನ್ ಮಟ್ಲ್ಯಾರ್ ದಬ್‍ದಬ್ಯಾಚ್ಯಾ ಅವಾಜಾ ಸರ್ಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 1:15
11 ತಿಳಿವುಗಳ ಹೋಲಿಕೆ  

ಇಗೋ, ಇಸ್ರಾಯೇಲಿನ ದೇವರ ತೇಜಸ್ಸು ಮೂಡಣ ಮಾರ್ಗವಾಗಿ ಬಂತು; ಆತನ ಧ್ವನಿಯು ಜಲಪ್ರವಾಹದ ಘೋಷದಂತಿತ್ತು; ಆತನ ತೇಜಸ್ಸಿನಿಂದ ಭೂವಿುಯು ಬೆಳಗಿತು.


ಅವನ ಶರೀರವು ಪೀತರತ್ನದ ಹಾಗೆ ಕಂಗೊಳಿಸಿತು, ಅವನ ಮುಖವು ವಿುಂಚಿನಂತೆ ಹೊಳೆಯಿತು, ಅವನ ಕಣ್ಣುಗಳು ಉರಿಯುವ ಪಂಜುಗಳೋಪಾದಿಯಲ್ಲಿ ನಿಗಿನಿಗಿಸಿದವು, ಅವನ ಕೈಕಾಲುಗಳು ಬೆಳಗಿದ ತಾಮ್ರದ ಹಾಗೆ ಥಳಥಳಿಸಿದವು, ಅವನ ಮಾತಿನ ಶಬ್ದವು ಸಂದಣಿಯ ಕೋಲಾಹಲದಂತೆ ಕೇಳಿಸಿತು.


ಇದಲ್ಲದೆ ಪರಲೋಕದ ಕಡೆಯಿಂದ ಜಲಪ್ರವಾಹದ ಘೋಷದಂತೆಯೂ ದೊಡ್ಡ ಗುಡುಗಿನ ಶಬ್ದದಂತೆಯೂ ಇದ್ದ ಶಬ್ದವನ್ನು ಕೇಳಿದೆನು. ನಾನು ಕೇಳಿದ ಆ ಶಬ್ದವು ವೀಣೆಗಳನ್ನು ನುಡಿಸಿಕೊಂಡು ಹಾಡುತ್ತಿರುವ ವೀಣೆಗಾರರ ಶಬ್ದದಂತಿತ್ತು.


ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಜಲಪ್ರವಾಹಘೋಷದಂತೆಯೂ ಗಟ್ಟಿಯಾದ ಗುಡುಗಿನ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ಕೇಳಿದೆನು. ಅದು - ಹಲ್ಲೆಲೂಯಾ; ಸರ್ವಶಕ್ತನಾಗಿರುವ ನಮ್ಮ ದೇವರಾದ ಕರ್ತನು ಆಳುತ್ತಾನೆ;


ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ -


ಜಲರಾಶಿಗಳ ಘೋಷಕ್ಕಿಂತಲೂ ಮಹಾತರಂಗಗಳ ಗರ್ಜನೆಗಿಂತಲೂ ಉನ್ನತದಲ್ಲಿರುವ ಯೆಹೋವನ ಮಹಿಮೆಯು ಗಾಂಭೀರ್ಯವುಳ್ಳದ್ದು.


ಅವುಗಳ ಕಾಲುಗಳು ನೆಟ್ಟಗಿದ್ದು ಬೆಳಗಿದ ತಾಮ್ರದ ಹಾಗೆ ನಿಗಿನಿಗಿಸುತ್ತಿದ್ದವು; ಹೆಜ್ಜೆಗಳು ಕರುವಿನ ಗೊರಸಿನಂತಿದ್ದವು.


ಆತನು ನನ್ನನ್ನು ಅಲ್ಲಿಗೆ ತರಲು ಇಗೋ, ತಾಮ್ರದಂತೆ ಹೊಳೆಯುವ ಒಬ್ಬ ಪುರುಷನು ನಾರಿನ ಹುರಿಯನ್ನೂ ಅಳತೇಕೋಲನ್ನೂ ಕೈಯಲ್ಲಿ ಹಿಡಿದುಕೊಂಡು ಬಾಗಿಲಲ್ಲಿ ನಿಂತಿದ್ದನು.


ಹೌದು, ಮಹಾ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತಿವೆ! ಆದರೆ ಆತನು ಅವರನ್ನು ಗದರಿಸುವಾಗ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ ಸುಂಟರಗಾಳಿಯಿಂದ ಸುತ್ತಿಯಾಡುವ ದೂಳಿನಂತೆಯೂ ಅಟ್ಟಲ್ಪಡುವರು. ಇಗೋ, ಸಂಜೆಯಲ್ಲಿ ದಿಗಿಲುಬಿದ್ದು ಉದಯದೊಳಗಾಗಿ ಇಲ್ಲವಾಗುವರು!


ಅವು ಮುಂದರಿಯುವಾಗ ಅವುಗಳ ರೆಕ್ಕೆಗಳ ಶಬ್ದವು ಜಲಪ್ರವಾಹದ ಘೋಷದಂತೆ, ಸರ್ವಶಕ್ತನ ಧ್ವನಿಯ ಹಾಗೆ, ಆರ್ಭಟಿಸುವ ಸೈನ್ಯದ ಕೋಲಾಹಲದೋಪಾದಿಯಲ್ಲಿ ನನಗೆ ಕೇಳಿಸಿತು; ಅವು ನಿಂತಾಗ ರೆಕ್ಕೆಗಳನ್ನು ಮುದುರಿಕೊಂಡವು.


ತರುವಾಯ ಬಲಿಷ್ಠನಾದ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು; ಅವನ ತಲೆಯ ಮೇಲೆ ಮುಗಿಲುಬಿಲ್ಲು ಇತ್ತು; ಅವನ ಮುಖವು ಸೂರ್ಯನೋಪಾದಿಯಲ್ಲಿತ್ತು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು