Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 1:20 - ಕನ್ನಡ ಸತ್ಯವೇದವು J.V. (BSI)

20 ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಗೂಢಾರ್ಥವನ್ನು ವಿವರಿಸುತ್ತೇನೆ - ಆ ಏಳು ನಕ್ಷತ್ರಗಳು ಅಂದರೆ ಆ ಏಳು ಸಭೆಗಳ ದೂತರು; ಆ ಏಳು ದೀಪಸ್ತಂಭಗಳು ಅಂದರೆ ಆ ಏಳು ಸಭೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಗೂಢಾರ್ಥವನ್ನು ವಿವರಿಸುತ್ತೇನೆ. ಆ ಏಳು ನಕ್ಷತ್ರಗಳು ಅಂದರೆ ಏಳು ಸಭೆಗಳ ದೂತರು, ಆ ಏಳು ದೀಪಸ್ತಂಭಗಳು ಅಂದರೆ ಆ ಏಳು ಸಭೆಗಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ರಹಸ್ಯವಿಷ್ಟೆ: ಆ ಏಳು ನಕ್ಷತ್ರಗಳು ಏಳು ಸಭೆಗಳ ದೂತರನ್ನು ಸೂಚಿಸುತ್ತವೆ. ಆ ಏಳು ಚಿನ್ನದ ದೀಪಸ್ತಂಭಗಳು ಏಳು ಸಭೆಗಳನ್ನು ಸೂಚಿಸುತ್ತವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನನ್ನ ಬಲಗೈಯಲ್ಲಿ ನೀನು ನೋಡಿದ ಏಳು ನಕ್ಷತ್ರಗಳ ಮತ್ತು ನೀನು ಕಂಡ ಏಳು ಬಂಗಾರದ ದೀಪಸ್ತಂಭಗಳ ಗೂಢಾರ್ಥವು ಹೀಗಿದೆ: ಏಳು ನಕ್ಷತ್ರಗಳೆಂದರೆ ಏಳು ಸಭೆಗಳ ದೂತರು. ಏಳು ದೀಪಸ್ತಂಭಗಳೆಂದರೆ ಏಳು ಸಭೆಗಳು.” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ರಹಸ್ಯ ಏನೆಂದರೆ: ಆ ಏಳು ನಕ್ಷತ್ರಗಳು, ಆ ಏಳು ಸಭೆಗಳ ಸಂದೇಶಕರು, ಆ ಏಳು ದೀಪಸ್ತಂಭಗಳು, ಆ ಏಳು ಸಭೆಗಳಾಗಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಮಾಜ್ಯಾ ಉಜ್ವ್ಯಾ ಹಾತಿತ್ ಅಸಲ್ಲ್ಯಾ ಸಾತ್ ಚಿಕ್ಕಿಯಾಂಚೊ ಅನಿ ಸಾತ್ ಸೊನ್ಯಾಚ್ಯಾ ದಿವ್ಯಾಂಚ್ಯಾ ಖಾಂಬ್ಯಾಂಚೊ ಖರೊ ಅರ್ತ್ ಕಾಯ್ ಮಟ್ಲ್ಯಾರ್, ಸಾತ್ ಚಿಕ್ಕಿಯಾ ಸಾತ್ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಂಚಿ ದೆವ್‍ದುತಾ, ಅನಿ ಸಾತ್ ದಿವೆ ಮಟ್ಲ್ಯಾರ್ ಸಾತ್ ದೆವಾಚ್ಯಾ ಲೊಕಾಂಚ್ಯಾ ತಾಂಡೆ. ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 1:20
24 ತಿಳಿವುಗಳ ಹೋಲಿಕೆ  

ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ - ಏಳು ನಕ್ಷತ್ರಗಳನ್ನು ಬಲಗೈಯಲ್ಲಿ ಹಿಡಿದುಕೊಂಡು ಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ತಿರುಗಾಡುವಾತನು ಹೇಳುವದೇನಂದರೆ -


ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ - ದೇವರ ಏಳು ಆತ್ಮಗಳೂ ಏಳು ನಕ್ಷತ್ರಗಳೂ ಉಳ್ಳಾತನು ಹೇಳುವದೇನಂದರೆ - ನಿನ್ನ ಕೃತ್ಯಗಳನ್ನು ಬಲ್ಲೆನು; ಜೀವಿಸುವವನು ಎಂದು ಹೆಸರು ನಿನಗಿದ್ದರೂ ಸತ್ತವನಾಗಿದ್ದೀ ಎಂಬದನ್ನು ಬಲ್ಲೆನು.


ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಆತನ ಮುಖವು ಮಧ್ಯಾಹ್ನದಲ್ಲಿ ಪ್ರಕಾಶಿಸುವ ಸೂರ್ಯನಂತಿತ್ತು.


ಇಗೋ, ಏಳು ದೀಪಸ್ತಂಭಗಳುಳ್ಳ ಸುವರ್ಣಮಯವಾದ ಒಂದು ದೀಪಸ್ತಂಭವನ್ನು ನೋಡುತ್ತೇನೆ; ಅದರ ಮೇಲಿನ ದೀಪಗಳಿಗೆ ಏಳು ನಾಳಗಳಿವೆ; ಅದರ ಮೇಲ್ಗಡೆ ಎಣ್ಣೆಯ ಪಾತ್ರೆಯಿದೆ;


ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ - ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯುವವನೂ ಯಾರೂ ತೆರೆಯದಂತೆ ಮುಚ್ಚುವವನೂ ಆಗಿರುವಾತನು ಹೇಳುವದೇನಂದರೆ -


ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ - ಆಮೆನ್ ಎಂಬಾತನು ಅಂದರೆ ನಂಬತಕ್ಕ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಮೂಲನೂ ಆಗಿರುವಾತನು ಹೇಳುವದೇನಂದರೆ -


ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ -


ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ -


ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ -


ಆತನು - ದೇವರ ರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೇ ಕೊಟ್ಟದೆ, ಉಳಿದವರಿಗೆ ಕಣ್ಣಿದ್ದರೂ ನೋಡದಂತೆಯೂ, ಕಿವಿಯಿದ್ದರೂ ತಿಳುಕೊಳ್ಳದಂತೆಯೂ ಸಾಮ್ಯರೂಪವಾಗಿ ಹೇಳಲಾಗುತ್ತದೆ.


ಅದಕ್ಕಾತನು ಅವರಿಗೆ - ಪರಲೋಕರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೇ ಕೊಟ್ಟದೆ; ಅವರಿಗೆ ಕೊಟ್ಟಿಲ್ಲ.


ಜ್ಞಾನಾನುಸಾರವಾಗಿ ಮಾತಾಡುವದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳಿಕೊಳ್ಳತಕ್ಕದ್ದು .


ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು; ಆ ಹಣತೆಗಳಲ್ಲಿ ದೀಪಹಚ್ಚಲು ಎದುರಾಗಿ ಬೆಳಕು ಉಂಟಾಗುವದು.


ಅದರ ಏಳು ಹಣತೆಗಳನ್ನೂ ಅದರ ಕತ್ತರಿಗಳನ್ನೂ ದೀಪದ ಕುಡಿ ತೆಗೆಯುವ ಬಟ್ಟಲುಗಳನ್ನೂ ಚೊಕ್ಕಬಂಗಾರದಿಂದ ಮಾಡಿದನು.


ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬದಾಗಿ ಎಣಿಸಿಕೊಳ್ಳದಂತೆ ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ; ಅದೇನಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವದು;


ಆಸ್ಯಸೀಮೆಯಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವದೇನಂದರೆ - ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವಾತನಿಂದ


ಅದು - ನೀನು ನೋಡುವದನ್ನು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ ಎಂಬೀ ಏಳು ಪಟ್ಟಣಗಳ ಸಭೆಗಳಿಗೆ ಕಳುಹಿಸಬೇಕೆಂದು ನುಡಿಯಿತು.


ಆದದರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ ಅದನ್ನು ನಿನ್ನ ನೆನಪಿಗೆ ತಂದುಕೊಂಡು ದೇವರ ಕಡೆಗೆ ತಿರುಗಿಕೋ. ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನೀನು ದೇವರ ಕಡಗೆ ತಿರುಗಿಕೊಳ್ಳದೆ ಹೋದರೆ ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು.


ಅವಳ ಹಣೆಯ ಮೇಲೆ - ಬಾಬೆಲೆಂಬ ಮಹಾನಗರಿ, ಭೂವಿುಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ಕಾರ್ಯಗಳಿಗೂ ತಾಯಿ ಎಂದು ಗೂಢಾರ್ಥವುಳ್ಳ ಹೆಸರು ಬರೆದಿತ್ತು.


ಆಗ ಆ ದೇವದೂತನು ನನಗೆ ಹೇಳಿದ್ದು - ನೀನೇಕೆ ಆಶ್ಚರ್ಯಪಟ್ಟಿ? ಆ ಸ್ತ್ರೀಯಿಂದಲೂ ಅವಳ ವಾಹನವಾಗಿದ್ದು ಏಳು ತಲೆಗಳೂ ಹತ್ತು ಕೊಂಬುಗಳೂ ಉಳ್ಳ ಮೃಗದಿಂದಲೂ ಸೂಚಿತವಾದ ಗೂಢಾರ್ಥವನ್ನು ನಾನು ನಿನಗೆ ವಿವರಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು