Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 1:7 - ಕನ್ನಡ ಸತ್ಯವೇದವು J.V. (BSI)

7 ಇಗೋ ಮೇಘಗಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂವಿುಯಲ್ಲಿರುವ ಎಲ್ಲಾ ಕುಲದವರು ಆತನನ್ನು ನೋಡಿ ಎದೆಬಡುಕೊಳ್ಳುವರು. ಹೌದು, ಹಾಗೆಯೇ ಆಗುವದು. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೋಡಿರಿ, ಆತನು ಮೇಘಗಳೊಂದಿಗೆ ಬರುತ್ತಾನೆ, ಎಲ್ಲರ ಕಣ್ಣುಗಳು ಆತನನ್ನು ನೋಡುವವು, ಆತನನ್ನು ಇರಿದವರು ಸಹ ಅದನ್ನು ಕಾಣುವರು, ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ದುಃಖಿಸುವರು. ಹೌದು, ಹಾಗೆಯೇ ಆಗುವುದು. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇಗೋ ನೋಡು, ಮೇಘಾರೂಢನಾಗಿ ಬರುತಿಹನು ಪ್ರತಿಯೊಂದು ಕಣ್ಣೂ ಕಾಣುವುದು ಆತನನು, ಆತನನ್ನು ಇರಿದವರೂ ವೀಕ್ಷಿಸುವರು, ಗೋಳಾಡುವರಾತನನ್ನು ಕಂಡು ಲೋಕದ ಜನರೆಲ್ಲರು. ಹೌದು, ಅದರಂತೆಯೇ ಆಗುವುದು, ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇಗೋ, ಯೇಸು ಮೋಡಗಳ ಸಂಗಡ ಬರುತ್ತಿದ್ದಾನೆ. ಪ್ರತಿಯೊಬ್ಬರು ಆತನನ್ನು ನೋಡುವರು, ಆತನನ್ನು ಇರಿದವರು ಸಹ ನೋಡುವರು. ಆತನನ್ನು ಕಂಡು ಲೋಕದ ಜನರೆಲ್ಲರೂ ಎದೆಬಡಿದುಕೊಂಡು ಗೋಳಾಡುವರು. ಹೌದು, ಇದು ಸಂಭವಿಸುತ್ತದೆ! ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಇಗೋ, ಯೇಸು ಮೇಘಗಳೊಂದಿಗೆ ಬರುತ್ತಾರೆ,” ಮತ್ತು “ಎಲ್ಲರ ಕಣ್ಣುಗಳು ಅವರನ್ನು ಕಾಣುವವು, ಅವರನ್ನು ಇರಿದವರು ಸಹ ಕಾಣುವರು.” ಭೂಲೋಕದಲ್ಲಿರುವ ಎಲ್ಲಾ ಜನರು, “ಅವರ ದೆಸೆಯಿಂದ ಗೋಳಾಡುವರು.” ಹೌದು, ಹಾಗೆಯೇ ಆಗುವುದು! ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 “ಬಗಾ, ತೊ ಮೊಡಾಂಚ್ಯಾ ವರ್ತಿ ಯೆವ್‍ಲಾಲಾ! ಹರಿಎಕ್ಲೊ ತೆಕಾ ಬಗ್ತಾ, ತೆಕಾ ಭೊಚಲ್ಲೊ ಸೈತ್ ತೆಕಾ ಬಗ್ತಾ” ಹ್ಯಾ ಜಗಾತ್ನಿ ಸಗ್ಳಿ ಲೊಕಾ ತೆಕಾ ಲಾಗುನ್ ಮರಗ್ತ್ಯಾತ್, ಹೆ ಖರೆಚ್ ಖರೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 1:7
36 ತಿಳಿವುಗಳ ಹೋಲಿಕೆ  

ಆಗ ಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವದು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವದನ್ನು ಕಾಣುವರು.


ದಾವೀದ ವಂಶದವರಲ್ಲಿಯೂ ಯೆರೂಸಲೇವಿುನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು, ಅವನನ್ನು ಆತನ ಸನ್ನಿಧಿಗೆ ತಂದರು.


ಮತ್ತು - ಅವರು ತಾವು ಇರಿದವನನ್ನು ದಿಟ್ಟಿಸಿನೋಡುವರು ಎಂದು ಶಾಸ್ತ್ರದಲ್ಲಿ ಮತ್ತೊಂದು ಮಾತು ಹೇಳಿ ಅದೆ.


ಯೇಸು - ನಾನೇ, ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳೊಂದಿಗೆ ಬರುವದನ್ನೂ ನೋಡುವಿರಿ ಅಂದನು.


ಆಗ ಮನುಷ್ಯಕುಮಾರನು ಬಲದಿಂದಲೂ ಬಹುಮಹಿಮೆಯಿಂದಲೂ ಮೇಘದಲ್ಲಿ ಬರುವದನ್ನು ಕಾಣುವರು.


ಆಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವದಕ್ಕಾಗಿ ಅವರ ಸಂಗಡಲೇ ಮೇಘವಾಹನರಾಗಿ ಫಕ್ಕನೆ ಒಯ್ಯಲ್ಪಡುವೆವು; ಹೀಗಾಗಿ ನಾವು ಸದಾಕಾಲವೂ ಕರ್ತನ ಜೊತೆಯಲ್ಲಿರುವೆವು.


ಆತನು ಸತ್ತವರೊಳಗಿಂದ ಎಬ್ಬಿಸಿದಂಥ ಆಕಾಶದೊಳಗಿಂದ ಬರುವಂಥ ಆತನ ಕುಮಾರನನ್ನು ಎದುರುನೋಡುವವರಾದಿರೆಂತಲೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು.


ಆಗ ಮನುಷ್ಯಕುಮಾರನು ಬಹು ಬಲದಿಂದಲೂ ಮಹಿಮೆಯಿಂದಲೂ ಮೇಘಗಳಲ್ಲಿ ಬರುವದನ್ನು ಕಾಣುವರು.


ಇಂಥವರ ವಿಷಯದಲ್ಲೇ ಆದಾಮನಿಗೆ ಏಳನೆಯ ತಲೆಯವನಾದ ಹನೋಕನು - ಇಗೋ ಕರ್ತನು ಲಕ್ಷಾಂತರ ಪರಿಶುದ್ಧದೂತರನ್ನು ಕೂಡಿಕೊಂಡು


ನೀನೇ ಹೇಳಿದ್ದೀ; ಇದಲ್ಲದೆ ಇನ್ನು ಮೇಲೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳ ಮೇಲೆ ಕುಳಿತು ಬರುವದನ್ನೂ ಕಾಣುವಿರಿ ಎಂದು ನಿಮಗೆ ಹೇಳುತ್ತೇನೆ ಅಂದನು.


ಈ ವಿಷಯಗಳಲ್ಲಿ ಸಾಕ್ಷಿಹೇಳುವವನು - ನಿಜವಾಗಿ ಬೇಗ ಬರುತ್ತೇನೆ ಎಂದು ಹೇಳುತ್ತಾನೆ. ಹಾಗೆಯೇ ಆಗಲಿ; ಕರ್ತನಾದ ಯೇಸುವೇ, ಬಾ.


ನಾಯಿಗಳು ನನ್ನನ್ನು ಸುತ್ತಿಕೊಂಡಿವೆ; ದುಷ್ಟರ ಗುಂಪು ನನ್ನನ್ನು ಆವರಿಸಿಕೊಂಡಿದೆ. ನನ್ನ ಕೈಕಾಲುಗಳನ್ನು ತಿವಿದಿದ್ದಾರೆ.


ಪ್ರಿಯರೇ, ಈಗ ದೇವರ ಮಕ್ಕಳಾಗಿದ್ದೇವೆ; ಮುಂದೆ ನಾವು ಏನಾಗುವೆವೋ ಅದು ಇನ್ನು ಪ್ರತ್ಯಕ್ಷವಾಗಲಿಲ್ಲ. ಕ್ರಿಸ್ತನು ಪ್ರತ್ಯಕ್ಷನಾಕುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು;


ಮುಗಿಲೂ ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ; ನೀತಿನ್ಯಾಯಗಳು ಆತನ ಸಿಂಹಾಸನದ ಅಸ್ತಿವಾರ.


ಯಾವನು ದೇವಕುಮಾರನನ್ನು ತುಳಿದು ಒಡಂಬಡಿಕೆಯನ್ನು ಸ್ಥಿರಪಡಿಸಿದಂಥ ತನ್ನನ್ನು ಪವಿತ್ರಮಾಡಿದಂಥ ರಕ್ತವನ್ನು ಅಶುದ್ಧವೆಂದೆಣಿಸಿ ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬದನ್ನು ಯೋಚಿಸಿರಿ.


ಅವನು ದೇವರನ್ನು ಪ್ರಾರ್ಥಿಸಿ ಆತನ ಒಲುಮೆಗೆ ಪಾತ್ರನಾಗಿ ಆತನ ದರ್ಶನ ಮಾಡಿ ಉತ್ಸಾಹಧ್ವನಿಗೈದು ತಿರಿಗಿ ಆತನಿಂದ ನೀತಿವಂತನೆನಿಸಿಕೊಳ್ಳುವನು.


ಐಗುಪ್ತದ ವಿಷಯವಾದ ದೈವೋಕ್ತಿ. ಇಗೋ, ಯೆಹೋವನು ವೇಗಮೇಘವಾಹನನಾಗಿ ಐಗುಪ್ತಕ್ಕೆ ಬರುವನು; ಆತನು ಸಮ್ಮುಖನಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತ್ಯರ ಹೃದಯವು ತಮ್ಮೊಳಗೆ ಕರಗಿ ನೀರಾಗುವದು.


ಯೆಹೋವನು ದೀರ್ಘಶಾಂತನಾಗಿದ್ದರೂ ಆತನ ಶಕ್ತಿಯು ಅಪಾರ, ಅಪರಾಧಿಗಳನ್ನು ಶಿಕ್ಷಿಸದೆ ಬಿಡನು; ಯೆಹೋವನು ಬಿರುಗಾಳಿಯಲ್ಲಿಯೂ ತುಫಾನಿನಲ್ಲಿಯೂ ನಡೆಯುತ್ತಾನೆ; ಮೋಡಗಳು ಆತನ ಹೆಜ್ಜೆಯಿಂದೇಳುವ ದೂಳು.


ಆದರೂ ಸಿಪಾಯಿಗಳಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು; ತಿವಿದ ಕೂಡಲೆ ರಕ್ತವೂ ನೀರೂ ಹೊರಟಿತು.


ಒಬ್ಬಾತನನ್ನು ನೋಡುತ್ತಿದ್ದೇನೆ, ಆತನು ಈಗಿನವನಲ್ಲ; ಆತನು ಕಾಣಿಸುತ್ತಾನೆ, ಆದರೆ ಸಮೀಪದಲ್ಲಿ ಅಲ್ಲ. ಯಾಕೋಬವಂಶದವರಲ್ಲಿ ನಕ್ಷತ್ರಪ್ರಾಯನೊಬ್ಬನು ಉದಯಿಸಿದ್ದಾನೆ; ಇಸ್ರಾಯೇಲ್ಯರಲ್ಲಿ ರಾಜದಂಡ ಹಿಡಿದವನು ಕಂಡುಬಂದಿದ್ದಾನೆ. ಅವನು ಮೋವಾಬ್ಯರ ತಲೆಯನ್ನು ಸೀಳಿಹಾಕಿದ್ದಾನೆ; ಯುದ್ಧವೀರರೆಲ್ಲರನ್ನೂ ಕೆಡವಿ ಬಿಟ್ಟಿದ್ದಾನೆ.


ದೇವರು ಎದ್ದು ಹೊರಡುವಾಗ ಆತನ ವೈರಿಗಳು ಚದರಿಹೋಗುವರು; ಆತನ ಹಗೆಗಾರರು ಬೆಂಗೊಟ್ಟು ಓಡಿಹೋಗುವರು.


ಯೆಹೋವನ ಎಲ್ಲಾ ಶತ್ರುಗಳೂ ಇವರಂತೆಯೇ ನಾಶವಾಗಲಿ; ಆತನ ಭಕ್ತರು ಪ್ರತಾಪದಿಂದ ಉದಯಿಸುವ ಸೂರ್ಯನಂತಿರಲಿ. ದೇಶದಲ್ಲಿ ನಾಲ್ವತ್ತು ವರುಷ ಸಮಾಧಾನವಿತ್ತು.


ಆತನ ದಾಸರು ಆತನಿಗೆ ಯಾಜಕಸೇವೆ ಮಾಡುವರು; ಅವರಿಗೆ ಆತನ ಮುಖದರ್ಶನವಾಗುವದು; ಅವರ ಹಣೆಗಳ ಮೇಲೆ ಆತನ ಹೆಸರು ಇರುವದು.


ಅವರಲ್ಲಿ ತಿರಿಗಿ ಮಾನಸಾಂತರವನ್ನು ಹುಟ್ಟಿಸುವದು ಅಸಾಧ್ಯ; ಯಾಕಂದರೆ ಅವರು ತಮ್ಮ ಪಾಲಿಗೆ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಎಲ್ಲರ ಮುಂದೆ ಅವಮಾನಪಡಿಸುವವರೂ ಆಗಿದ್ದಾರೆ.


ಮೆಗಿದ್ದೋವಿನ ತಗ್ಗಿನೊಳಗೆ ಹದದ್‍ರಿಮ್ಮೋನಿನಲ್ಲಿ ಗೋಳಾಟವಾಗುವಂತೆ ಯೆರೂಸಲೇವಿುನಲ್ಲಿ ಆ ದಿನ ದೊಡ್ಡ ಗೋಳಾಟವಾಗುವದು.


ಮನುಷ್ಯಕುಮಾರನು ತನ್ನ ತಂದೆಯ ಪ್ರಭಾವದೊಡನೆ ತನ್ನ ದೂತರ ಸಮೇತವಾಗಿ ಬರುವನು; ಆವಾಗ ಆತನು ಒಬ್ಬೊಬ್ಬನಿಗೆ ಅವನವನ ನಡತೆಗೆ ತಕ್ಕ ಫಲವನ್ನು ಕೊಡುವನು.


ನಿಮಗೆ ನಿಜವಾಗಿ ಹೇಳುತ್ತೇನೆ, ಇಲ್ಲಿ ನಿಂತವರೊಳಗೆ ಕೆಲವರು, ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವ ತನಕ ಮರಣಹೊಂದುವದಿಲ್ಲ ಅಂದನು.


ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಎಲ್ಲಾ ದೇವದೂತರೊಂದಿಗೆ ಕೂಡಿಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕೂತುಕೊಳ್ಳುವನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು