ಪ್ರಕಟನೆ 1:9 - ಕನ್ನಡ ಸತ್ಯವೇದವು J.V. (BSI)9 ನಿಮ್ಮ ಸಹೋದರನೂ ಯೇಸುವಿನ ನಿವಿುತ್ತ ಹಿಂಸೆಯಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸುವಿನ ವಿಷಯವಾದ ಸಾಕ್ಷಿಗೋಸ್ಕರವೂ ಪತ್ಮೊಸ್ ದ್ವೀಪದಲ್ಲಿದ್ದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಹಿಂಸೆಯಲ್ಲಿ, ರಾಜ್ಯದಲ್ಲಿ, ತಾಳ್ಮೆಯಲ್ಲಿ, ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರ ಯೇಸುವಿನ ವಿಷಯವಾಗಿ ಸಾಕ್ಷಿ ನೀಡಲು ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಾನು ಯೊವಾನ್ನ, ನಿಮ್ಮ ಸಹೋದರ; ಕ್ರಿಸ್ತೇಸುವಿನಲ್ಲಿ ದೇವರ ಸಾಮ್ರಾಜ್ಯಕ್ಕೆ ಸೇರಿರುವವರಿಗೆ ಬಂದೊದಗುವ ಕಷ್ಟಸಂಕಟಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವುದರಲ್ಲಿ ನಿಮ್ಮ ಪಾಲುಗಾರ. ದೇವರ ವಾಕ್ಯವನ್ನು ಸಾರಿದುದರಿಂದಲೂ ಕ್ರಿಸ್ತೇಸುವಿಗೆ ಸಾಕ್ಷಿ ನೀಡಿದುದರಿಂದಲೂ ನಾನು ಪತ್ಮೋಸ್ ದ್ವೀಪವಾಸವನ್ನು ಅನುಭವಿಸಬೇಕಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯೋಹಾನನೆಂಬ ನಾನು ಕ್ರಿಸ್ತನಲ್ಲಿ ನಿಮ್ಮ ಸಹೋದರನಾಗಿದ್ದೇನೆ. ನಾವೆಲ್ಲರೂ ಒಟ್ಟಾಗಿ ಯೇಸುವಿನ ನಿಮಿತ್ತ ಸಂಕಟಗಳಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ಪಾಲುಗಾರರಾಗಿದ್ದೇವೆ. ನಾನು ದೇವರ ಸಂದೇಶಕ್ಕೂ ಯೇಸುವಿನ ಸತ್ಯಕ್ಕೂ ನಂಬಿಗಸ್ತನಾಗಿದ್ದುದರಿಂದ ಪತ್ಮೊಸ್ ದ್ವೀಪದಲ್ಲಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಆಗುವ ಬಾಧೆಯಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸುವಿನ ವಿಷಯವಾದ ಸಾಕ್ಷಿಗೋಸ್ಕರವೂ ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಮಿಯಾ ಜುವಾಂವ್ ತುಮ್ಚೊಚ್ ಭಾವ್, ಕ್ರಿಸ್ತಾಚ್ಯಾ ರಾಜ್ವಾಡ್ಯಾಸಾಟಿ ಘಟ್ ಮನಾನಿ ತರಾಸ್ ಸೊಸ್ತಲ್ಯಾ ಜೆಜುಜ್ಯಾ ವಾಟೆನ್ ಚಲ್ತಲ್ಯಾನಿತ್ಲೊ ಎಕ್ಲೊ ತುಮ್ಚೊ ವಾಂಗ್ಡಿ. ದೆವಾಚ್ಯಾ ಗೊಸ್ಟಿಯಾ ಅನಿ ಜೆಜುನ್ ಮಾಕಾ ದಾಕ್ವುನ್ ದಿಲ್ಲೆ ಖರೆ ಮಿಯಾ ಲೊಕಾಕ್ನಿ ಪ್ರಚಾರ್ ಕರುಕ್ ಲಾಗಲ್ಲೊ, ತೆಚೆಸಾಟ್ನಿ ಮಾಕಾ ಸಮುಂದರಾಚ್ಯಾ ಮದ್ದಿ ಅಸಲ್ಲ್ಯಾ ಪಾತ್ಮೊಸ್ ಮನ್ತಲ್ಯಾ ಜಾಗ್ಯಾರ್ ಥವಲ್ಲೆ ಹೊತ್ತೆ. ಅಧ್ಯಾಯವನ್ನು ನೋಡಿ |
ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಜನರು ಕೂತಿದ್ದರು; ನ್ಯಾಯತೀರಿಸುವ ಅಧಿಕಾರವು ಅವರಿಗೆ ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿವಿುತ್ತವಾಗಿಯೂ ದೇವರ ವಾಕ್ಯದ ನಿವಿುತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ನಮಸ್ಕರಿಸದೆ ತಮ್ಮ ಹಣೆಯ ಮೇಲೆ ಮತ್ತು ಕೈಯ ಮೇಲೆ ಗುರುತುಹಾಕಿಸಿಕೊಳ್ಳದೆ ಇರುವವರನ್ನೂ ಕಂಡೆನು. ಅವರು ಜೀವಿತರಾಗಿ ಎದ್ದು ಸಾವಿರ ವರುಷ ಕ್ರಿಸ್ತನೊಂದಿಗೆ ಆಳಿದರು.