ಯೆಹೋವನು ನನಗೆ ಹೀಗೆ ಹೇಳಿದ್ದಾನೆ - ಸಿಂಹವು, ಪ್ರಾಯದ ಸಿಂಹವು, ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ ಬಹುಮಂದಿ ಕುರುಬರು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ ಅದು ಅವರ ಕೂಗಾಟಕ್ಕೆ ಹೆದರದೆ ಅವರ ಗದ್ದಲದಿಂದ ಹೇಗೆ ಧೈರ್ಯಗುಂದುವದಿಲ್ಲವೋ ಹಾಗೆಯೇ ಸೇನಾಧೀಶ್ವರನಾದ ಯೆಹೋವನು ಯುದ್ಧಮಾಡಲು ಚೀಯೋನ್ ಪರ್ವತದ ಶಿಖರದ ಮೇಲೆ ಇಳಿಯುವನು.
ಯೆಹೋವನು ಚೀಯೋನಿನಿಂದ ಗರ್ಜಿಸುತ್ತಾನೆ, ಯೆರೂಸಲೇವಿುನಿಂದ ದನಿಗೈಯುತ್ತಾನೆ; ಭೂಮ್ಯಾಕಾಶಗಳು ನಡುಗುತ್ತವೆ. ಆದರೆ ಯೆಹೋವನು ತನ್ನ ಜನರಿಗೆ ಆಶ್ರಯವೂ ಇಸ್ರಾಯೇಲ್ಯರಿಗೆ ರಕ್ಷಣದುರ್ಗವೂ ಆಗುವನು.
ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾಲಕ್ಷಣವು ನನಗೆ ಕಾಣಿಸಿತು. ಏಳು ಮಂದಿ ದೇವದೂತರ ಕೈಯಲ್ಲಿ ಏಳು ಉಪದ್ರವಗಳಿದ್ದವು; ಇವು ಕಡೇ ಉಪದ್ರವಗಳು; ಇವುಗಳಲ್ಲಿ ದೇವರ ರೌದ್ರವು ಮುಗಿದಿರುವದು.
ಇದಲ್ಲದೆ ಪರಲೋಕದ ಕಡೆಯಿಂದ ಜಲಪ್ರವಾಹದ ಘೋಷದಂತೆಯೂ ದೊಡ್ಡ ಗುಡುಗಿನ ಶಬ್ದದಂತೆಯೂ ಇದ್ದ ಶಬ್ದವನ್ನು ಕೇಳಿದೆನು. ನಾನು ಕೇಳಿದ ಆ ಶಬ್ದವು ವೀಣೆಗಳನ್ನು ನುಡಿಸಿಕೊಂಡು ಹಾಡುತ್ತಿರುವ ವೀಣೆಗಾರರ ಶಬ್ದದಂತಿತ್ತು.