Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 10:6 - ಕನ್ನಡ ಸತ್ಯವೇದವು J.V. (BSI)

6 ಪರಲೋಕವನ್ನೂ ಅದರಲ್ಲಿರುವ ಸಮಸ್ತವನ್ನೂ ಭೂವಿುಯನ್ನೂ ಅದರಲ್ಲಿರುವ ಸಮಸ್ತವನ್ನೂ ಸಮುದ್ರವನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಪರಲೋಕವನ್ನೂ ಅದರಲ್ಲಿರುವ ಸಮಸ್ತವನ್ನೂ, ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ, ಸಮುದ್ರವನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿ, ಯುಗಯುಗಾಂತರಗಳಲ್ಲಿಯೂ ಜೀವಿಸುವಾತನ ಮೇಲೆ ಆಣೆಯಿಟ್ಟು, “ಇನ್ನು ತಡಮಾಡದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅನಂತರ ಸ್ವರ್ಗ, ಭೂಮಿ, ಸಮುದ್ರ ಇವುಗಳನ್ನೂ ಇವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ ಹಾಗು ಯುಗಯುಗಾಂತರಕ್ಕೂ ಜೀವಿಸುವ ದೇವರ ಹೆಸರಿನಲ್ಲಿ ಶಪಥಮಾಡಿ ಹೀಗೆ ಹೇಳಿದನು : “ಇನ್ನು ನಿಧಾನಿಸುವಂತಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ದೇವದೂತನು ಯುಗ ಯುಗಾಂತರಗಳಲ್ಲಿಯೂ ನೆಲೆಸಿರುವಾತನ ಮತ್ತು ಆಕಾಶವನ್ನು ಮತ್ತು ಅದರಲ್ಲಿರುವ ಸಮಸ್ತವನ್ನು, ಭೂಮಿಯನ್ನು ಮತ್ತು ಅದರಲ್ಲಿರುವ ಸಮಸ್ತವನ್ನು, ಸಮುದ್ರವನ್ನು ಮತ್ತು ಅದರಲ್ಲಿರುವ ಸಮಸ್ತವನ್ನು ಸೃಷ್ಟಿಸ್ಟಿದಾತನ ಶಕ್ತಿಯಿಂದ ಹೀಗೆ ವಾಗ್ದಾನವನ್ನು ಮಾಡಿದನು: “ಇನ್ನು ಕಾಯುವ ಅಗತ್ಯವಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯುಗಯುಗಾಂತರಕ್ಕೂ ಜೀವಿಸುವವರೂ ಪರಲೋಕವನ್ನೂ ಅದರಲ್ಲಿರುವವುಗಳನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವವುಗಳನ್ನೂ ಸೃಷ್ಟಿಸಿದವರ ಮೇಲೆ ಆಣೆ ಇಟ್ಟು ಹೇಳಿದ್ದೇನೆಂದರೆ, “ಇನ್ನು ಆಲಸ್ಯವಾಗುವುದಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅನಿ ಸರ್ಗ್, ಜಿಮಿನ್, ಅನಿ ಸಮುಂದರ್ ಅನಿ ತೆಂಚ್ಯಾ ವೈನಿ ಹೊತ್ತೆ ಸಗ್ಳೆ ರಚಲ್ಲ್ಯಾ ಸದಾ ಸರ್ವತಾಕ್ ಝಿತ್ತೊ ರ್‍ಹಾತಲ್ಯಾ ದೆವಾಚ್ಯಾ ನಾವಾನ್ ಆನ್ ಘಾಟ್ಲ್ಯಾನ್. ತ್ಯಾ ದೆವಾಚ್ಯಾ ದುತಾನ್, ಅನಿ ಜಾಸ್ತಿ ಎಳ್ ಹೊಯ್ನಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 10:6
14 ತಿಳಿವುಗಳ ಹೋಲಿಕೆ  

ಕರ್ತನೇ, ನಮ್ಮ ದೇವರೇ, ನೀನು ಪ್ರಭಾವ ಮಾನ ಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಸಮಸ್ತವನ್ನು ಸೃಷ್ಟಿಸಿದಾತನು ನೀನೇ; ಎಲ್ಲವು ನಿನ್ನ ಚಿತ್ತದಿಂದಲೇ ಇದ್ದವು, ನಿನ್ನ ಚಿತ್ತದಿಂದಲೇ ನಿರ್ಮಿತವಾದವು ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಾರೆ.


ಏಳನೆಯವನು ತನ್ನ ಪಾತ್ರೆಯಲ್ಲಿದ್ದದ್ದನ್ನು ವಾಯುಮಂಡಲದ ಮೇಲೆ ಹೊಯ್ಯಲು ದೇವಾಲಯದಲ್ಲಿರುವ ಸಿಂಹಾಸನದ ಕಡೆಯಿಂದ ಮಹಾ ಶಬ್ದವು ಉಂಟಾಗಿ - ಆಯಿತು ಎಂದು ಹೇಳಿತು.


ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿ ಸಿಂಹಾಸನದ ಮೇಲೆ ಕೂತಿರುವಾತನಿಗೆ ಆ ನಾಲ್ಕು ಜೀವಿಗಳು ಪ್ರಭಾವಮಾನ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುವಾಗ್ಗೆ


ಆಸ್ತಿಯನ್ನು ನೀನೇ ತಕ್ಕೋ ಎಂದು ಹೇಳಲು ಅಬ್ರಾಮನು ಅವನಿಗೆ - ಒಂದು ದಾರವನ್ನಾಗಲಿ ಕೆರದ ಬಾರನ್ನಾಗಲಿ ನಿನ್ನದರಲ್ಲಿ ಯಾವದನ್ನೂ ತೆಗೆದುಕೊಳ್ಳುವದಿಲ್ಲವೆಂದು ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರದೇವರಾಗಿರುವ ಯೆಹೋವನ ಕಡೆಗೆ ಕೈಯೆತ್ತಿ ಪ್ರಮಾಣ ಮಾಡುತ್ತೇನೆ. ಅಬ್ರಾಮನು ನನ್ನ ಸೊತ್ತಿನಿಂದಲೇ ಐಶ್ವರ್ಯವಂತನಾದನೆಂದು ಹೇಳಿಕೊಳ್ಳುವದಕ್ಕೆ ನಿನಗೆ ಆಸ್ಪದವಾಗಬಾರದು, ನನಗೆ ಏನೂ ಬೇಡ.


ಇದಲ್ಲದೆ ಅಬ್ರಹಾಮ ಇಸಾಕ ಯಾಕೋಬರಿಗೆ ಕೊಡುವೆನೆಂದು ನಾನು ಪ್ರಮಾಣವಾಗಿ ಹೇಳಿದ ದೇಶಕ್ಕೆ ನಿಮ್ಮನ್ನು ಸೇರಿಸಿ ಅದನ್ನು ನಿಮಗೆ ಸ್ವದೇಶವನ್ನಾಗಿ ಕೊಡುವೆನು; ಯೆಹೋವನೇ ನಾನು; ಹೀಗೆ ಅವರಿಗೆ ಹೇಳು ಅಂದನು.


ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣಮಾಡಿ ಏಳನೆಯ ದಿನದಲ್ಲಿ ವಿಶ್ರವಿುಸಿಕೊಂಡನು. ಆದದರಿಂದ ಯೆಹೋವನು ಸಬ್ಬತ್ ದಿನವನ್ನು ತನ್ನ ದಿನವಾಗಿರಲಿ ಎಂದು ಆಶೀರ್ವದಿಸಿದನು.


ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರೇ ಹೊರತು ನಿಮ್ಮಲ್ಲಿ ಯಾರೂ ನಿಮ್ಮ ನಿವಾಸಕ್ಕಾಗಿ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಸೇರುವದಿಲ್ಲ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಯಾವ ದಿವಸದಲ್ಲಿ ನಾನು ಇಸ್ರಾಯೇಲನ್ನು ಆರಿಸಿಕೊಂಡು ಯಾಕೋಬ ಸಂತಾನದವರಿಗೆ ಮಾತುಕೊಟ್ಟು ನಾನು ನಿಮ್ಮ ದೇವರಾದ ಯೆಹೋವನು ಎಂದು ಐಗುಪ್ತ ದೇಶದಲ್ಲಿ ಪ್ರಮಾಣಪೂರ್ವಕವಾಗಿ ತಿಳಿಯಪಡಿಸಿದೆನೋ ಆ ದಿವಸದಲ್ಲಿ ನಾನು ಅವರಿಗೆ -


ಆಕಾಶದ ಕಡೆಗೆ ಎತ್ತಿಕೊಂಡು - ಶಾಶ್ವತ ಜೀವಸ್ವರೂಪನಾಣೆ, ಒಂದುಕಾಲ ಎರಡುಕಾಲ ಅರ್ಧಕಾಲ ಕಳೆಯಬೇಕು; ದೇವರ ಜನರ ಬಲವನ್ನು ಸಂಪೂರ್ಣವಾಗಿ ಮುರಿದುಬಿಟ್ಟ ಮೇಲೆ ಈ ಕಾರ್ಯಗಳೆಲ್ಲಾ ಮುಕ್ತಾಯವಾಗುವವು ಎಂಬದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.


ಸತ್ತವನಾದೆನು, ಮತ್ತು ಇಗೋ ಯುಗಯುಗಾಂತರಗಳಲ್ಲಿಯೂ ಬದುಕುವವನಾಗಿದ್ದೇನೆ; ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಅವೆ.


ಆ ಇಪ್ಪತ್ತುನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕೂತಾತನ ಪಾದಕ್ಕೆ ಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ -


ಅವರಲ್ಲಿ ಒಬ್ಬೊಬ್ಬನಿಗೆ ಒಂದೊಂದು ಬಿಳಿ ನಿಲುವಂಗಿಯು ಕೊಡಲ್ಪಟ್ಟಿತು. ಇದಲ್ಲದೆ - ನಿಮ್ಮ ಹಾಗೆ ಕೊಲೆಯಾಗಬೇಕಾಗಿರುವ ನಿಮ್ಮ ಸಹೋದರರ ಮತ್ತು ನಿಮ್ಮ ಜೊತೆದಾಸರ ಸಂಖ್ಯೆಯೂ ಪೂರ್ಣವಾಗುವ ತನಕ ಇನ್ನೂ ಸ್ವಲ್ಪ ಕಾಲ ವಿಶ್ರವಿುಸಿಕೊಂಡಿರಬೇಕೆಂದು ಅವರಿಗೆ ಉತ್ತರವಾಯಿತು.


ಪರಲೋಕವೇ, ಅದರಲ್ಲಿ ವಾಸಮಾಡುವವರೇ, ಹರ್ಷಗೊಳ್ಳಿರಿ. ಭೂವಿುಯೇ, ಸಮುದ್ರವೇ, ನಿಮ್ಮ ದುರ್ಗತಿಯನ್ನು ಏನು ಹೇಳಲಿ; ಸೈತಾನನು ತನಗಿರುವ ಕಾಲವು ಸ್ವಲ್ಪವೆಂದು ತಿಳಿದು ಮಹಾ ರೌದ್ರವುಳ್ಳವನಾಗಿ ನಿಮ್ಮ ಕಡೆಗೆ ಇಳಿದುಬಂದಿದ್ದಾನೆ ಎಂಬದಾಗಿ ಹೇಳಿತು.


ಆಗ ಸಿಂಹಾಸನದ ಮೇಲೆ ಕೂತಿದ್ದವನು - ಎಲ್ಲಾ ನೆರವೇರಿತು; ನಾನೇ ಆದಿಯೂ ಅಂತವೂ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಲ್ಲಿ ಕ್ರಯವಿಲ್ಲದೆ ಕುಡಿಯುವದಕ್ಕೆ ಕೊಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು