Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 11:15 - ಕನ್ನಡ ಸತ್ಯವೇದವು J.V. (BSI)

15 ಏಳನೆಯ ದೇವದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾ ಶಬ್ದಗಳುಂಟಾಗಿ - ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ಉಂಟಾಯಿತು; ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು ಎಂದು ಹೇಳಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳು ಉಂಟಾದವು. ಆ ಶಬ್ದಗಳು ಹೀಗೆ ಹೇಳಿದವು: “ಈ ಲೋಕದ ರಾಜ್ಯವು ಈಗ ನಮ್ಮ ಪ್ರಭುವಿನ ಮತ್ತು ಆತನವನಾಗಿರುವ ಕ್ರಿಸ್ತನ ರಾಜ್ಯವಾಗಿ ಮಾರ್ಪಾಟಾಯಿತು. ಆತನು ಯುಗಯುಗಾಂತರಗಳಲ್ಲಿಯೂ ಆಳುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಏಳನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾ ಧ್ವನಿಗಳುಂಟಾಗಿ, ಹೀಗೆ ಹೇಳಿದವು: “ಲೋಕದ ರಾಜ್ಯವು ನಮ್ಮ ದೇವರ ಮತ್ತು ಅವರಿಗೆ ಸೇರಿದ ಕ್ರಿಸ್ತ ಯೇಸುವಿನ ರಾಜ್ಯವಾಯಿತು, ಈ ಕ್ರಿಸ್ತ ಯೇಸುವೇ ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತನ್ನಾ ಸತ್ವ್ಯಾ ದೆವಾಚ್ಯಾ ದುತಾನ್ ಅಪ್ನಾಚೊ ಪಂವೊ ವಾಜ್ವುಲ್ಯಾನ್, ಅನಿ “ಸರ್ಗಾತ್, ಜಗಾಚೊ ಅಧಿಕಾರ್ ಅಮ್ಚ್ಯಾ ಧನಿಯಾಕ್, ಅನಿ ತೆಚ್ಯಾ ಕ್ರಿಸ್ತಾಕ್ ದಿಲ್ಲೊ ಹಾಯ್, ತೊ ಸದಾ ಸರ್ವತಾಕ್ ಅದಿಕಾರ್ ಚಾಲ್ವುತಾ!” ಮನ್ತಲಿ ಮೊಟಿ-ಮೊಟಿ ಧನಾ ಆಯ್ಕೊ ಯೆಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 11:15
54 ತಿಳಿವುಗಳ ಹೋಲಿಕೆ  

ಸಕಲಜನಾಂಗ ಕುಲಭಾಷೆಗಳವರು ಅವನನ್ನು ಸೇವಿಸಲೆಂದು ಅವನಿಗೆ ದೊರೆತನವೂ ಘನತೆಯೂ ರಾಜ್ಯವೂ ಕೊಡೋಣವಾದವು; ಅವನ ಆಳಿಕೆಯು ಅಂತ್ಯವಿಲ್ಲದ್ದು, ಶಾಶ್ವತವಾದದ್ದು; ಅವನ ರಾಜ್ಯವು ಎಂದಿಗೂ ಅಳಿಯದು.


ಆಗ ಅವನ ರಾಜ್ಯಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನ ಭಕ್ತಜನರಿಗೆ ಕೊಡೋಣವಾಗುವವು; ಆತನ ರಾಜ್ಯವು ಶಾಶ್ವತರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು ಎಂದು ಹೇಳಿದನು.


ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು. ಆಗ ಪರಲೋಕದಲ್ಲಿ ಮಹಾ ಶಬ್ದವನ್ನು ಕೇಳಿದೆನು, ಅದು - ಈಗ ಜಯವೂ ಶಕ್ತಿಯೂ ರಾಜ್ಯವೂ ನಮ್ಮ ದೇವರಿಗೆ ಉಂಟಾಯಿತು; ಆತನು ಅಭಿಷೇಕಿಸಿದವನ ಅಧಿಕಾರವು ಈಗ ಸ್ಥಾಪಿತವಾಯಿತು; ಹಗಲಿರುಳು ನಮ್ಮ ಸಹೋದರರ ಮೇಲೆ ನಮ್ಮ ದೇವರ ಮುಂದೆ ದೂರು ಹೇಳಿದ ದೂರುಗಾರನು ದೊಬ್ಬಲ್ಪಟ್ಟಿದ್ದಾನೆ.


ಯುಗಯುಗಾಂತರಗಳಲ್ಲಿಯೂ ಜೀವಿಸುವಾತನ ಮೇಲೆ ಆಣೆಯಿಟ್ಟು - ಇನ್ನು ಸಾವಕಾಶವಿರುವದಿಲ್ಲ; ಏಳನೆಯ ದೇವದೂತನು ಶಬ್ದ ಮಾಡುವ ದಿನಗಳಲ್ಲಿ ಅಂದರೆ ಅವನು ತುತೂರಿಯನ್ನು ಊದುವದಕ್ಕಿರುವ ಸಮಯದಲ್ಲಿ ದೇವರು ಇದುವರೆಗೆ ಗುಪ್ತವಾಗಿಟ್ಟಿದ್ದ ಸಂಕಲ್ಪವನ್ನು ತನ್ನ ದಾಸರಾದ ಪ್ರವಾದಿಗಳಿಗೆ ಶುಭವರ್ತಮಾನವಾಗಿ ತಿಳಿಸಿದ್ದ ಪ್ರಕಾರ ನೆರವೇರಿಸುವನು ಎಂದು ಹೇಳಿದನು.


ಯೆಹೋವನು ಭೂಲೋಕಕ್ಕೆಲ್ಲಾ ರಾಜನಾಗಿರುವನು; ಆ ದಿನದಲ್ಲಿ ಯೆಹೋವನೊಬ್ಬನೇ ದೇವರೆಂದೂ ಆತನ ಹೆಸರೊಂದೇ ಸ್ತುತ್ಯವೆಂದೂ ಎಲ್ಲರಿಗೂ ತಿಳಿದಿರುವದು.


ಇದಾದ ಮೇಲೆ ಪರಲೋಕದಲ್ಲಿ ದೊಡ್ಡ ಗುಂಪಿನ ಮಹಾ ಶಬ್ದವೋ ಎಂಬಂತೆ ಒಂದು ಶಬ್ದವನ್ನು ಕೇಳಿದೆನು. ಅವರು - ಹಲ್ಲೆಲೂಯಾ. ಜಯವೂ ಪ್ರಭಾವವೂ ಶಕ್ತಿಯೂ ನಮ್ಮ ದೇವರಲ್ಲಿ ಉಂಟು;


ಆತನು ಯಾಕೋಬನ ವಂಶವನ್ನು ಸದಾಕಾಲ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.


ಯೆಹೋವನೇ ಯುಗಯುಗಾಂತರಗಳಲ್ಲಿಯೂ ಆಳುವನು.


ಆದರೆ ರಾಜ್ಯವು ಪರಾತ್ಪರನ ಭಕ್ತರಿಗೆ ಲಭಿಸುವದು, ಅವರೇ ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವರು ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು.


ಏಳನೆಯವನು ತನ್ನ ಪಾತ್ರೆಯಲ್ಲಿದ್ದದ್ದನ್ನು ವಾಯುಮಂಡಲದ ಮೇಲೆ ಹೊಯ್ಯಲು ದೇವಾಲಯದಲ್ಲಿರುವ ಸಿಂಹಾಸನದ ಕಡೆಯಿಂದ ಮಹಾ ಶಬ್ದವು ಉಂಟಾಗಿ - ಆಯಿತು ಎಂದು ಹೇಳಿತು.


ಮಗನ ವಿಷಯದಲ್ಲಿಯಾದರೋ - ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನ್ಯಾಯದಂಡವೇ ನಿನ್ನ ರಾಜದಂಡವಾಗಿದೆ;


ಆ ಕುಂಟುಜನವನ್ನು ಉಳಿಸಿ ಕಾಪಾಡುವೆನು, ದೂರತಳ್ಳಲ್ಪಟ್ಟ ಪ್ರಜೆಯನ್ನು ಪ್ರಬಲ ಜನಾಂಗವನ್ನಾಗಿ ಮಾಡುವೆನು; ಯೆಹೋವನು ಚೀಯೋನ್ ಪರ್ವತದಲ್ಲಿ ಇಂದಿನಿಂದ ಎಂದೆಂದಿಗೂ ಅವರ ರಾಜನಾಗಿರುವನು.


ಕರ್ತನೇ, ನಿನ್ನಿಂದುಂಟಾದ ಎಲ್ಲಾ ಜನಾಂಗಗಳು ಬಂದು ನಿನಗೆ ಅಡ್ಡಬಿದ್ದು ನಿನ್ನ ನಾಮವನ್ನು ಘನಪಡಿಸುವವು.


ಅವನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವದು, ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವದು, ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವದು; ಸೇನಾಧೀಶ್ವರನಾದ ಯೆಹೋವನ ಆಗ್ರಹವು ಇದನ್ನು ನೆರವೇರಿಸುವದು.


ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಜಲಪ್ರವಾಹಘೋಷದಂತೆಯೂ ಗಟ್ಟಿಯಾದ ಗುಡುಗಿನ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ಕೇಳಿದೆನು. ಅದು - ಹಲ್ಲೆಲೂಯಾ; ಸರ್ವಶಕ್ತನಾಗಿರುವ ನಮ್ಮ ದೇವರಾದ ಕರ್ತನು ಆಳುತ್ತಾನೆ;


ಕರ್ತನೇ, ನಿನ್ನ ನಾಮಕ್ಕೆ ಭಯಪಡದವರೂ ಅದನ್ನು ಘನವಾದದ್ದೆಂದು ಒಪ್ಪಿಕೊಳ್ಳದವರೂ ಯಾರಾದರೂ ಇದ್ದಾರೇ? ನೀನೊಬ್ಬನೇ ಪರಿಶುದ್ಧನು; ನಿನ್ನ ನೀತಿಯುಳ್ಳ ಕೃತ್ಯಗಳು ಪ್ರಕಾಶಕ್ಕೆ ಬಂದದರಿಂದ ಎಲ್ಲಾ ಜನಾಂಗಗಳು ಬಂದು ನಿನ್ನ ಸನ್ನಿಧಾನದಲ್ಲಿ ನಮಸ್ಕಾರ ಮಾಡುವರು ಎಂದು ಹೇಳಿದರು.


ಅದರಂತೆ ಒಬ್ಬ ಪಾಪಿಯು ದೇವರ ಕಡೆಗೆ ತಿರುಗಿಕೊಳ್ಳುವ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವದೆಂದು ನಿಮಗೆ ಹೇಳುತ್ತೇನೆ ಅಂದನು.


ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವವು; ನಾನು ನಿನ್ನ ಮಧ್ಯದಲ್ಲಿ ವಾಸಿಸುವೆನು; ಆಗ ಸೇನಾಧೀಶ್ವರ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬದು ನಿನಗೆ ಗೊತ್ತಾಗುವದು.


ನನ್ನ ಸೇವಕನಾದ ಯಾಕೋಬನಿಗೆ ನಾನು ದಯಪಾಲಿಸಿದ ದೇಶದಲ್ಲಿ ಅವರು ವಾಸಿಸುವರು; ಹೌದು, ನಿಮ್ಮ ಪಿತೃಗಳು ವಾಸಿಸಿದ ದೇಶದಲ್ಲಿ ಅವರೂ ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು; ನನ್ನ ಸೇವಕನಾದ ದಾವೀದನು ಅವರಿಗೆ ಸದಾ ಪ್ರಭುವಾಗಿರುವನು.


ಆ ದಿನದಲ್ಲಿ ದೊಡ್ಡ ಕೊಂಬನ್ನೂದಲು ಅಶ್ಶೂರ ದೇಶದಲ್ಲಿ ಹಾಳಾದವರೂ ಐಗುಪ್ತ ಸೀಮೆಯಲ್ಲಿನ ದೇಶಭ್ರಷ್ಟರಾದವರೂ ಬಂದು ಪರಿಶುದ್ಧಪರ್ವತದ ಯೆರೂಸಲೇವಿುನಲ್ಲಿ ಯೆಹೋವನ ಮುಂದೆ ಅಡ್ಡಬೀಳುವರು.


ಯೆಹೋವನು ಸದಾಕಾಲವೂ ಅರಸನಾಗಿರುವನು; ಚೀಯೋನೇ, ನಿನ್ನ ದೇವರು ತಲತಲಾಂತರಕ್ಕೂ ಆಳುವನು. ಯಾಹುವಿಗೆ ಸ್ತೋತ್ರ!


ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; ಪಶ್ಚಾತ್ತಾಪಪಡುವದಿಲ್ಲ.


ಎಲ್ಲಾ ಅರಸರೂ ಅವನಿಗೆ ಸಾಷ್ಟಾಂಗವೆರಗಲಿ; ಸರ್ವಜನಾಂಗಗಳು ಅವನನ್ನು ಸೇವಿಸಲಿ.


ಯೆಹೋವನಿಗೂ ಆತನು ಅಭಿಷೇಕಿಸಿದವನಿಗೂ ವಿರೋಧವಾಗಿ ಭೂಪತಿಗಳು ಸನ್ನದ್ಧರಾಗಿ ನಿಂತಿದ್ದಾರೆ, ಅಧಿಕಾರಿಗಳು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ.


ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಜನರು ಕೂತಿದ್ದರು; ನ್ಯಾಯತೀರಿಸುವ ಅಧಿಕಾರವು ಅವರಿಗೆ ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿವಿುತ್ತವಾಗಿಯೂ ದೇವರ ವಾಕ್ಯದ ನಿವಿುತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ನಮಸ್ಕರಿಸದೆ ತಮ್ಮ ಹಣೆಯ ಮೇಲೆ ಮತ್ತು ಕೈಯ ಮೇಲೆ ಗುರುತುಹಾಕಿಸಿಕೊಳ್ಳದೆ ಇರುವವರನ್ನೂ ಕಂಡೆನು. ಅವರು ಜೀವಿತರಾಗಿ ಎದ್ದು ಸಾವಿರ ವರುಷ ಕ್ರಿಸ್ತನೊಂದಿಗೆ ಆಳಿದರು.


ಅವರು ಯಜ್ಞದ ಕುರಿಯಾದಾತನ ಮೇಲೆ ಯುದ್ಧಮಾಡುವರು, ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವದರಿಂದ ಅವರನ್ನು ಜಯಿಸುವನು; ಮತ್ತು ದೇವರು ಕರೆದವರೂ ದೇವರಾದುಕೊಂಡವರೂ ನಂಬಿಗಸ್ತರೂ ಆಗಿರುವ ಆತನ ಕಡೆಯವರು ಆ ಜಯದಲ್ಲಿ ಪಾಲುಗಾರರಾಗುವರು.


ಆರನೆಯ ದೇವದೂತನು ತುತೂರಿಯನ್ನೂದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ವೇದಿಯ ಕೊಂಬುಗಳಿಂದ ಹೊರಟ ಒಂದೇ ಧ್ವನಿಯನ್ನು ಕೇಳಿದೆನು.


ಐದನೆಯ ದೇವದೂತನು ತುತೂರಿಯನ್ನೂದಿದಾಗ ಆಕಾಶದಿಂದ ಭೂವಿುಗೆ ಬಿದ್ದ ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ ಅಧೋಲೋಕಕ್ಕೆ ಹೋಗುವ ಕೂಪದ ಬೀಗದಕೈ ಕೊಡಲ್ಪಟ್ಟಿತು.


ನಾಲ್ಕನೆಯ ದೇವದೂತನು ತುತೂರಿಯನ್ನೂದಿದಾಗ ಸೂರ್ಯ ಚಂದ್ರ ನಕ್ಷತ್ರಗಳೊಳಗೆ ಮೂರರಲ್ಲಿ ಒಂದು ಭಾಗವು ಬಡಿಯಲ್ಪಟ್ಟು ಕತ್ತಲಾಯಿತು. ಆದದರಿಂದ ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಇತ್ತು. ರಾತ್ರಿಯು ಹಾಗೆಯೇ ಆಯಿತು.


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೇಡಿನಿಂದ ನಮ್ಮನ್ನು ತಪ್ಪಿಸು.


ನಾನು ದೇಶದಲ್ಲಿ ಇಜ್ರೇಲನ್ನು ನನಗಾಗಿ ಬಿತ್ತಿಕೊಳ್ಳುವೆನು; ಲೋರುಹಾಮಳಿಗೆ ವಾತ್ಸಲ್ಯವನ್ನು ತೋರಿಸುವೆನು; ಲೋ ಅವ್ಮಿುಗೆ ನೀನು ನನ್ನ ಪ್ರಜೆಯೇ ಎಂದು ಹೇಳುವೆನು; ಅವರು ನನ್ನನ್ನು ನನ್ನ ದೇವರೇ ಎಂದು ಭಜಿಸುವರು.


ಮಹಾವೃದ್ಧನು ಅಯ್ತಂದು ಪರಾತ್ಪರನ ಭಕ್ತರಿಗಾಗಿ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದು ಕಣ್ಣುಳ್ಳದ್ದಾಗಿ ಬಾಯಿಂದ ಬಡಾಯಿಕೊಚ್ಚಿಕೊಳ್ಳುತ್ತಾ ವಿುಕ್ಕ ಕೊಂಬುಗಳಿಗಿಂತ ಬಿರಸಾಗಿ ನೋಡುತ್ತಾ ಇತ್ತೋ ಆ ಕೊಂಬಿನ ವಿಷಯವಾಗಿಯೂ ಸತ್ಯಾರ್ಥವನ್ನು ತಿಳಿದುಕೊಳ್ಳಬೇಕೆಂದು ಅಪೇಕ್ಷಿಸಿ ವಿಚಾರಿಸಿದೆನು.


ಎಲೈ, [ಇಸ್ರಾಯೇಲೇ], [ಅವನಂತೆ ನೀನೂ] ನಿನಗೆ ಗೊತ್ತಿಲ್ಲದ ಜನಾಂಗವನ್ನು ನಿನ್ನ ಅಧೀನಕ್ಕೆ ಕರೆಯುವಿ, ಇಸ್ರಾಯೇಲಿನ ಸದಮಲಸ್ವಾವಿು ಎನಿಸಿಕೊಳ್ಳುವ ನಿನ್ನ ದೇವರಾದ ಯೆಹೋವನು ನಿನಗೆ ವೈಭವ ಕೊಟ್ಟಿರುವದನ್ನು ನೋಡಿ ನಿನ್ನನ್ನು ತಿಳಿಯದ ಜನಾಂಗವು ನಿನ್ನ ಆಶ್ರಯಕ್ಕೆ ಓಡಿಬರುವದು.


ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ; ಭೂವಿುಯ ಅಧೋಭಾಗವೇ, ಆರ್ಭಟಿಸು; ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಕೋಲಾಹಲಮಾಡಿರಿ; ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು.


ಮನೆಗೆ ಬಂದು ಸ್ನೇಹಿತರನ್ನೂ ನೆರೆಹೊರೆಯವರನ್ನೂ ಕೂಡಿಸಿ - ಕಳೆದುಹೋಗಿದ್ದ ಕುರಿ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ ಎಂದು ಅವರಿಗೆ ಹೇಳುವನಲ್ಲವೇ.


ಸೂರ್ಯನು ಮೂಡುವ ದಿಕ್ಕಿನಿಂದ ಮುಣುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನೂ ಶುದ್ಧನೈವೇದ್ಯವನ್ನೂ ಅರ್ಪಿಸುತ್ತಾರೆ; ಹೌದು, ಅನ್ಯಜನಾಂಗಗಳಲ್ಲಿಯೇ ನನ್ನ ನಾಮವು ಘನವಾಗಿದೆ; ಇದು ಸೇನಾಧೀಶ್ವರ ಯೆಹೋವನ ನುಡಿ.


(ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ - ನಮ್ಮ ಪಿತೃಗಳು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ ಎಂದು ಅರಿಕೆ ಮಾಡುವರು.


ದೇವರೇ, ಏಳು; ಭೂಲೋಕದಲ್ಲಿ ನ್ಯಾಯವನ್ನು ಸ್ಥಾಪಿಸು. ನೀನು ಎಲ್ಲಾ ಜನಾಂಗಗಳ ಒಡೆಯನು ಅಲ್ಲವೋ?


ರಕ್ಷಕರು ಚೀಯೋನ್ ಪರ್ವತದಲ್ಲಿ ಎದ್ದು ಏಸಾವಿನ ಪರ್ವತವನ್ನು ಆಳುವರು; ಆಗ ರಾಜ್ಯವು ಯೆಹೋವನದಾಗಿರುವದು.


ಮತ್ತು ಆತನು ತುತೂರಿಯ ಮಹಾ ಶಬ್ದದಿಂದ ತನ್ನ ದೂತರನ್ನು ಕಳುಹಿಸುವನು. ಅವರು ಆತನು ಆದುಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕೂ ದಿಕ್ಕುಗಳಿಂದ ಒಟ್ಟುಗೂಡಿಸುವರು.


ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ವಿರೋಧವಾಗಿ ಭೂಪತಿಗಳು ಸನ್ನದ್ಧರಾಗಿ ನಿಂತರು, ಅಧಿಕಾರಿಗಳು ಏಕವಾಗಿ ಕೂಡಿಕೊಂಡರು ಎಂದು ಹೇಳಿಸಿದಿಯಲ್ಲವೇ.


ಅವನು ಮತ್ತೆ ಸಾವಿರ ಮೊಳ ಅಳೆದನು; ಅದು ನನ್ನಿಂದ ದಾಟಲಾಗದ ತೊರೆಯಾಗಿತ್ತು; ನೀರು ಏರಿ ಈಜಾಡುವಷ್ಟು ಪ್ರವಾಹವಾಗಿತ್ತು; ದಾಟಲಾಗದ ತೊರೆಯಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು