Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 12:12 - ಕನ್ನಡ ಸತ್ಯವೇದವು J.V. (BSI)

12 ಪರಲೋಕವೇ, ಅದರಲ್ಲಿ ವಾಸಮಾಡುವವರೇ, ಹರ್ಷಗೊಳ್ಳಿರಿ. ಭೂವಿುಯೇ, ಸಮುದ್ರವೇ, ನಿಮ್ಮ ದುರ್ಗತಿಯನ್ನು ಏನು ಹೇಳಲಿ; ಸೈತಾನನು ತನಗಿರುವ ಕಾಲವು ಸ್ವಲ್ಪವೆಂದು ತಿಳಿದು ಮಹಾ ರೌದ್ರವುಳ್ಳವನಾಗಿ ನಿಮ್ಮ ಕಡೆಗೆ ಇಳಿದುಬಂದಿದ್ದಾನೆ ಎಂಬದಾಗಿ ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದ್ದರಿಂದ ಪರಲೋಕವೇ, ಅದರಲ್ಲಿ ವಾಸಮಾಡುವವರೇ, ಹರ್ಷಗೊಳ್ಳಿರಿ. ಆದರೆ ಭೂಮಿ, ಸಮುದ್ರಗಳೇ ನಿಮ್ಮ ದುರ್ಗತಿಯನ್ನು ಏನೆಂದು ಹೇಳಲಿ ಏಕೆಂದರೆ ಸೈತಾನನು ತನಗಿರುವ ಕಾಲವು ಇನ್ನು ಸ್ವಲ್ಪಮಾತ್ರವೆಂದು ತಿಳಿದು ಮಹಾ ರೋಷವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ” ಎಂಬುದಾಗಿ ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಎಂದೇ ಸ್ವರ್ಗಲೋಕ, ಸ್ವರ್ಗನಿವಾಸಿಗಳೆಲ್ಲ ನಲಿಯಲಿ ! ಕ್ಷಿತಿಸಾಗರಗಳಿಗೆ ಒದಗಿದೆ ದುರ್ಗತಿ. ಬಂದಿಹನು ಪಿಶಾಚಿ ಕಡುರೋಷದಿಂದ ತನಗಿರುವ ಕಾಲ ತುಸುವೆಂಬ ತವಕದಿಂದ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದ್ದರಿಂದ ಪರಲೋಕವೇ, ಅದರಲ್ಲಿ ವಾಸಮಾಡುವವರೆಲ್ಲರೇ, ಹರ್ಷಗೊಳ್ಳಿರಿ! ಆದರೆ ಭೂಮಿಯೇ, ಸಮುದ್ರವೇ, ಸೈತಾನನು ನಿಮ್ಮ ಬಳಿಗೆ ಬಂದಿರುವುದರಿಂದ ನಿಮಗೆ ದುರ್ಗತಿಯುಂಟಾಗುವುದು! ಸೈತಾನನು ಕೋಪದಿಂದ ತುಂಬಿಕೊಂಡಿದ್ದಾನೆ. ತನಗಿರುವುದು ಸ್ವಲ್ಪಕಾಲವೆಂಬುದು ಅವನಿಗೆ ತಿಳಿದಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದ್ದರಿಂದ ಪರಲೋಕವೇ, ಅದರಲ್ಲಿ ವಾಸಮಾಡುವವರೇ ಹರ್ಷಗೊಳ್ಳಿರಿ. ಭೂಮಿಯೇ, ಸಮುದ್ರವೇ, ನಿಮಗೆ ದುರ್ಗತಿ! ಎನ್ನುತ್ತೇನೆ. ಏಕೆಂದರೆ, ಪಿಶಾಚನು ತನಗಿರುವ ಕಾಲವು ಕೊಂಚವೆಂದು ತಿಳಿದು, ಮಹಾ ರೋಷವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ,” ಎಂಬುದಾಗಿ ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತಸೆ ಮನುನ್ ತುಮಿ ಸರ್ಗಾತ್ ಜಿವನ್ ಕರ್ತಲ್ಯಾ ಸಗ್ಳ್ಯಾನೊ ತುಮಿ ಖುಶಿ ಹೊವಾ! ಖರೆ ಜಿಮ್ನಿ ಅನಿ ಸಮುಂದರಾ ತುಮ್ಚಿ ಗತ್ ಕಾಯ್ ಸಾಂಗು! ಕಶ್ಯಾಕ್ ಮಟ್ಲ್ಯಾರ್ ಗಿರೊ ತುಮ್ಚ್ಯಾಕ್ಡೆ ಉತ್ರುನ್ ಯೆಲ್ಲೊ ಹಾಯ್, ಅನಿ ತೊ ರಾಗಾನ್ ತಾಪ್ಲಾ ಮಟ್ಲ್ಯಾರ್ ಅಪ್ನಾಚೊ ಅನಿ ಎಕ್ ಉಲ್ಲೊಸೊ ಎಳ್ ಹುರ್‍ಲಾ ಮನುನ್ ತೆಕಾ ಗೊತ್ತ್ ಹೊಲಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 12:12
18 ತಿಳಿವುಗಳ ಹೋಲಿಕೆ  

ಆಮೇಲೆ ನಾನು ನೋಡಲಾಗಿ ಇಗೋ, ಒಂದೇ ಗರುಡಪಕ್ಷಿಯು ಆಕಾಶಮಧ್ಯದಲ್ಲಿ ಹಾರಾಡುತ್ತಿತ್ತು. ಅದು - ಅಯ್ಯೋ, ಅಯ್ಯೋ, ಅಯ್ಯೋ, ಊದಬೇಕಾಗಿರುವ ಮೂವರು ದೇವದೂತರ ವಿುಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿಗಳಿಗೆ ಎಂಥಾ ವಿಪತ್ತುಗಳು ಸಂಭವಿಸುವವು ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.


ಆಕಾಶವೇ, ಹರ್ಷಧ್ವನಿಗೈ! ಭೂವಿುಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಕೋಲಾಹಲಮಾಡಿರಿ! ಯೆಹೋವನು ತನ್ನ ಪ್ರಜೆಯನ್ನು ಸಂತೈಸಿ ದಿಕ್ಕಿಲ್ಲದ ತನ್ನ ಜನರನ್ನು ಕರುಣಿಸುತ್ತಿದ್ದಾನೆ.


ಪರಲೋಕವೇ, ಆನಂದಪಡು; ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ, ಇವಳು ನಿಮಗೆ ಅನ್ಯಾಯಮಾಡಿದ್ದಕ್ಕಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದರಿಂದ ಆನಂದಪಡಿರಿ ಎಂದು ಆ ಶಬ್ದ ಹೇಳಿತು.


ಪರಲೋಕವನ್ನೂ ಅದರಲ್ಲಿರುವ ಸಮಸ್ತವನ್ನೂ ಭೂವಿುಯನ್ನೂ ಅದರಲ್ಲಿರುವ ಸಮಸ್ತವನ್ನೂ ಸಮುದ್ರವನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿ


ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಪೀಡಿಸಿದ್ದರಿಂದ ಇವರು ಸತ್ತದ್ದಕ್ಕೆ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.


ಮೊದಲನೆಯ ವಿಪತ್ತು ಕಳೆದುಹೋಯಿತು; ಇಗೋ, ಇನ್ನೂ ಎರಡು ವಿಪತ್ತುಗಳು ಬರಬೇಕು.


ಅದರಂತೆ ಒಬ್ಬ ಪಾಪಿಯು ದೇವರ ಕಡೆಗೆ ತಿರುಗಿಕೊಳ್ಳುವ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವದೆಂದು ನಿಮಗೆ ಹೇಳುತ್ತೇನೆ ಅಂದನು.


ಎರಡನೆಯ ವಿಪತ್ತು ಕಳೆದುಹೋಯಿತು; ಇಗೋ, ಮೂರನೆಯ ವಿಪತ್ತು ಬೇಗನೆ ಬರುತ್ತದೆ.


ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರುಷಗಳಂತೆಯೂ ಸಾವಿರ ವರುಷಗಳು ಒಂದು ದಿನದಂತೆಯೂ ಅವೆ ಎಂಬದನ್ನು ಮಾತ್ರ ಮರೆಯಬೇಡಿರಿ.


ಬರುವಾತನು ಇನ್ನು ಸ್ಪಲ್ಪಕಾಲದಲ್ಲಿ ಬರುವನು, ತಡಮಾಡುವದಿಲ್ಲ;


ಮೇಲಣಲೋಕಗಳಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ಮನುಷ್ಯರೊಳಗೆ ಸಮಾಧಾನ ದೇವರು ಅವರಿಗೆ ಒಲಿಯುತ್ತಾನೆ ಎಂದು ದೇವರನ್ನು ಕೊಂಡಾಡುತ್ತಾ ಹೇಳಿದರು.


ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ; ಭೂವಿುಯ ಅಧೋಭಾಗವೇ, ಆರ್ಭಟಿಸು; ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಕೋಲಾಹಲಮಾಡಿರಿ; ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು.


ಭೂಲೋಕದವರನ್ನೆಲ್ಲಾ ಮರುಳುಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾತನ ಸರ್ಪವು ದೊಬ್ಬಲ್ಪಟ್ಟು ಭೂವಿುಗೆ ಬಿದ್ದನು;


ಅದು ಬಾಯಿತೆರೆದು ದೇವರನ್ನು ದೂಷಿಸಿದ್ದಲ್ಲದೆ ಆತನ ನಾಮವನ್ನೂ ಆತನ ನಿವಾಸವನ್ನೂ ಪರಲೋಕ ನಿವಾಸಿಗಳನ್ನೂ ದೂಷಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು