Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 12:15 - ಕನ್ನಡ ಸತ್ಯವೇದವು J.V. (BSI)

15 ಆ ಸರ್ಪನು ಸ್ತ್ರೀಯನ್ನು ಬಡಿಸಿಕೊಂಡು ಹೋಗಬೇಕೆಂದು ಆಕೆಯ ಹಿಂದೆ ತನ್ನ ಬಾಯೊಳಗಿಂದ ನೀರನ್ನು ನದಿಯಂತೆ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ಸರ್ಪನು ಪ್ರವಾಹದಿಂದ ಸ್ತ್ರೀಯನ್ನು ಸೆಳೆದುಕೊಂಡು ಹೋಗಬೇಕೆಂದು ಆಕೆಯ ಹಿಂದೆ ತನ್ನ ಬಾಯೊಳಗಿಂದ ನೀರನ್ನು ನದಿಯಂತೆ ಸುರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆ ಘಟಸರ್ಪ ತನ್ನ ಬಾಯಿಂದ ನೀರನ್ನು ನದಿಯಂತೆ ಸುರಿಸುತ್ತಾ ಅದರಲ್ಲಿ ಆ ಮಹಿಳೆಯನ್ನು ಕೊಚ್ಚಿಕೊಂಡು ಹೋಗುವಂತೆ ಮಾಡಲು ಯತ್ನಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಗ ಸರ್ಪವು ತನ್ನ ಬಾಯಿಂದ ನದಿಯಂತೆ ನೀರನ್ನು ಹೊರಚೆಲ್ಲಿತು. ಆ ಪ್ರವಾಹದ ನೀರು ಅವಳನ್ನು ಕೊಚ್ಚಿ ಕೊಂಡುಹೋಗಲಿ ಎಂಬುದೇ ಆ ಘಟಸರ್ಪದ ಉದ್ದೇಶವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆ ಸರ್ಪನು ಪ್ರವಾಹದಿಂದ ಸ್ತ್ರೀಯನ್ನು ಸೆಳೆದುಕೊಂಡು ಹೋಗಬೇಕೆಂದು ಆಕೆಯ ಹಿಂದೆ ತನ್ನ ಬಾಯೊಳಗಿಂದ ನೀರನ್ನು ನದಿಯಂತೆ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಅನಿ ತನ್ನಾ ತೊ ಭಯಾನಕ್ ಸಾಪ್ ತಿಕಾ ದುರ್ ಹೊವ್ನ್ ಘೆವ್ನ್ ಜಾವ್‍ಸಾಟ್ನಿ ಮನುನ್‍ ಅಪ್ನಾಚ್ಯಾ ತೊಂಡಾತ್ನಾ ತಿಚ್ಯಾ ಫಾಟಿ ಮೊಟೊ ಪಾನಿಯಾಚೊ ಹೊವಾರೊ ವೊತ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 12:15
12 ತಿಳಿವುಗಳ ಹೋಲಿಕೆ  

ಹೀಗಿರಲು ಪಡುವಣವರು ಯೆಹೋವನ ನಾಮಕ್ಕೆ ಹೆದರುವರು, ಮೂಡಣವರು ಆತನ ಮಹಿಮೆಗೆ ಅಂಜುವರು; ಬಿರುಗಾಳಿಯಿಂದ ಹೊಡೆಯಲ್ಪಟ್ಟು ಇಕ್ಕಟ್ಟಿನಲ್ಲಿ ಹರಿಯುವ ತೊರೆಯ ಹಾಗೆ ಆತನು ರಭಸದಿಂದ ಬರುವನಷ್ಟೆ;


ಇಗೋ, ಕರ್ತನು ಪೂರ್ಣಪ್ರತಾಪದಿಂದ ಕೂಡಿದ ಅಶ್ಶೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು;


ಮೃತ್ಯುಪಾಶಗಳು ನನಗೆ ಸುತ್ತಿಕೊಂಡವು; ನಾಶಪ್ರವಾಹವು ನನ್ನನ್ನು ನಡುಗಿಸಿತು.


ಆಹಾ, ಕರ್ತನು ಒಬ್ಬ ಮಹಾ ಬಲಿಷ್ಠನನ್ನು ನೇವಿುಸಿದ್ದಾನೆ; ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ ನಾಶಕವಾದ ಬಿರುಗಾಳಿಯೋಪಾದಿಯಲ್ಲಿಯೂ ಮುಣುಗಿಸುವ ಅತಿಧಾರಾವೃಷ್ಟಿಯ ಹಾಗೂ ಬಲಾತ್ಕಾರದಿಂದ [ಆ ಪಟ್ಟಣವನ್ನು] ನೆಲಕ್ಕೆ ಬೀಳಿಸುವನು.


ಸಮುದ್ರತರಂಗಗಳ ಘೋಷವನ್ನು ತಡೆಯುವವನೂ ಜನಾಂಗಗಳ ದೊಂಬಿಯನ್ನು ಶಾಂತಿಪಡಿಸುವವನೂ ಆಗಿದ್ದೀ.


ಇನ್ನೂ ಆ ದೇವದೂತನು ನನಗೆ ಹೇಳಿದ್ದು - ಆ ಜಾರಸ್ತ್ರೀಯು ವಾಸಿಸಿರುವ ನೀರುಗಳನ್ನು ಕಂಡಿಯಲ್ಲ? ಅವು ಪ್ರಜೆ ಸಮೂಹ ಜನ ಭಾಷೆಗಳನ್ನು ಸೂಚಿಸುತ್ತವೆ.


ಯೆಹೋವದೇವರು ಉಂಟುಮಾಡಿದ ಎಲ್ಲಾ ಭೂಜಂತುಗಳಲ್ಲಿ ಸರ್ಪವು ಯುಕ್ತಿಯುಳ್ಳದ್ದಾಗಿತ್ತು. ಅದು ಸ್ತ್ರೀಯ ಬಳಿಗೆ ಬಂದು - ಏನವ್ವಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ನೀವು ತಿನ್ನಬಾರದೆಂದು ದೇವರು ಅಪ್ಪಣೆಕೊಟ್ಟಿರುವದು ನಿಜವೋ ಎಂದು ಕೇಳಲು ಸ್ತ್ರೀಯು -


ಆದರೆ ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಮೋಸಹೋದಳೋ ಹಾಗೆಯೇ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ಪಾತಿವ್ರತ್ಯವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವುಂಟು.


ಭೂಲೋಕದವರನ್ನೆಲ್ಲಾ ಮರುಳುಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾತನ ಸರ್ಪವು ದೊಬ್ಬಲ್ಪಟ್ಟು ಭೂವಿುಗೆ ಬಿದ್ದನು;


ಆದರೆ ಭೂವಿುಯು ಆ ಸ್ತ್ರೀಯ ಸಹಾಯಕ್ಕೆ ಬಂದು ಬಾಯಿ ತೆರೆದು ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ನದಿಯನ್ನು ಕುಡಿದುಬಿಟ್ಟಿತು.


ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನಸರ್ಪನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧನದಲ್ಲಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು