Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 12:4 - ಕನ್ನಡ ಸತ್ಯವೇದವು J.V. (BSI)

4 ಅದರ ಬಾಲವು ಆಕಾಶದಲ್ಲಿರುವ ನಕ್ಷತ್ರಗಳೊಳಗೆ ಮೂರರಲ್ಲೊಂದು ಭಾಗವನ್ನು ಎಳೆದು ಭೂವಿುಗೆ ಹಾಕಿತು. ಹೆರುತ್ತಿದ್ದ ಆ ಸ್ತ್ರೀಯು ಹೆತ್ತಕೂಡಲೆ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟಸರ್ಪವು ಅಲ್ಲೇ ಕಾದುಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅದು ತನ್ನ ಬಾಲದಿಂದ ಆಕಾಶದ ನಕ್ಷತ್ರಗಳಲ್ಲಿ ಮೂರರಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಎಸೆಯಿತು. ಹೆರುತ್ತಿದ್ದ ಆ ಸ್ತ್ರೀಯು ಹೆತ್ತ ಕೂಡಲೇ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟಸರ್ಪವು ಆಕೆಯ ಮುಂದೆ ನಿಂತುಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅದು ತನ್ನ ಬಾಲದಿಂದ ಮೂರನೆಯ ಒಂದು ಭಾಗದಷ್ಟು ನಕ್ಷತ್ರಗಳನ್ನು ಆಕಾಶದಿಂದ ಸೆಳೆದೆಳೆದು ಅವುಗಳನ್ನು ಭೂಮಿಗೆ ಎಸೆಯಿತು. ಮಗು ಹುಟ್ಟಿದ ಕೂಡಲೇ ಅದನ್ನು ನುಂಗಿಬಿಡಬೇಕೆಂದು ಘಟಸರ್ಪವು ಆ ತುಂಬು ಗರ್ಭಿಣಿಯ ಬಳಿಯಲ್ಲಿಯೇ ಕಾಯ್ದುಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆ ಸರ್ಪದ ಬಾಲವು ಆಕಾಶದ ನಕ್ಷತ್ರಗಳಲ್ಲಿ ಮೂರನೆಯ ಒಂದು ಭಾಗವನ್ನು ಸೆಳೆದೆಳೆದು ಭೂಮಿಯ ಮೇಲೆ ಎಸೆಯಿತು. ಆ ಘಟಸರ್ಪವು ಪ್ರಸವ ವೇದನೆಪಡುತ್ತಿದ್ದ ಸ್ತ್ರೀಯ ಎದುರಿನಲ್ಲಿ ನಿಂತುಕೊಂಡಿತು. ಆ ಸ್ತ್ರೀಯು ಹೆರುವ ಮಗುವನ್ನು ನುಂಗಿಹಾಕಲು ಆ ಸರ್ಪವು ಕಾದುಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅದು ತನ್ನ ಬಾಲದಿಂದ ಆಕಾಶದ ನಕ್ಷತ್ರಗಳಲ್ಲಿ ಮೂರರಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಚೆಲ್ಲಿತು. ಹೆರುತ್ತಿದ್ದ ಆ ಸ್ತ್ರೀಯು ಹೆತ್ತ ಕೂಡಲೇ, ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟಸರ್ಪವು ಅವಳ ಮುಂದೆ ನಿಂತುಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತೆನಿ ಅಪ್ನಾಚ್ಯಾ ಸೆಪ್ಡಿನ್ ಮಾರುನ್ ಮಳ್ಬಾ ವೈಲ್ಯಾ ಚಿಕ್ಕಿಯಾಂಚೊ ತಿನಾತ್ಲೊ ಎಕ್ ಭಾಗ್ ಜಿಮ್ನಿಕ್ ಪಾಡ್ವುಲ್ಯಾನ್. ಜಲಮ್ ದಿಲ್ಲ್ಯಾ ತನ್ನಾಚ್ ಪೊರಾಕ್ ಖಾವ್‍ಸಾಟ್ನಿ ಮನುನ್ ತೊ ಬಾಯ್ಕೊಮನ್ಸಿಚ್ಯಾ ಇದ್ರಾಕ್ ಇಬೆ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 12:4
22 ತಿಳಿವುಗಳ ಹೋಲಿಕೆ  

ಭೂಲೋಕದವರನ್ನೆಲ್ಲಾ ಮರುಳುಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾತನ ಸರ್ಪವು ದೊಬ್ಬಲ್ಪಟ್ಟು ಭೂವಿುಗೆ ಬಿದ್ದನು;


ಸೈತಾನನು ನಿಮ್ಮ ತಂದೆ; ನೀವು ಆ ತಂದೆಯಿಂದ ಹುಟ್ಟಿದವರಾಗಿದ್ದು ನಿಮ್ಮ ತಂದೆಯ ದುರಿಚ್ಫೆಗಳನ್ನೇ ನಡಿಸಬೇಕೆಂದಿದ್ದೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ; ಅವನಲ್ಲಿ ಸತ್ಯವು ಇಲ್ಲವೇ ಇಲ್ಲ. ಅವನು ಸುಳ್ಳಾಡುವಾಗ ಸ್ವಭಾವಾನುಸಾರವಾಗಿ ಆಡುತ್ತಾನೆ; ಅವನು ಸುಳ್ಳುಗಾರನೂ ಸುಳ್ಳಿಗೆ ಮೂಲಪುರುಷನೂ ಆಗಿದ್ದಾನೆ.


ಆ ಕುದುರೆಗಳ ಸಾಮರ್ಥ್ಯವು ಅವುಗಳ ಬಾಯಲ್ಲಿಯೂ ಬಾಲಗಳಲ್ಲಿಯೂ ಇತ್ತು. ಅವುಗಳ ಬಾಲಗಳು ತಲೆಗಳುಳ್ಳವುಗಳಾಗಿ ಸರ್ಪಗಳ ಹಾಗೆ ಇದ್ದವು. ಅವುಗಳಿಂದ ಕೇಡನ್ನುಂಟುಮಾಡುತ್ತವೆ.


ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ ಕೊಂಡಿಗಳೂ ಉಂಟು; ಮನುಷ್ಯರನ್ನು ಐದು ತಿಂಗಳುಗಳವರೆಗೂ ಪೀಡಿಸುವ ಸಾಮರ್ಥ್ಯವು ಅವುಗಳ ಬಾಲಗಳಲ್ಲಿಯೇ ಇರುವದು.


ಮೊದಲನೆಯ ದೇವದೂತನು ತುತೂರಿಯನ್ನೂದಿದಾಗ ರಕ್ತದಲ್ಲಿ ಕಲಸಿದ್ದ ಆನೆಕಲ್ಲಿನ ಮಳೆಯೂ ಬೆಂಕಿಯೂ ಭೂವಿುಗೆ ಸುರಿಸಲ್ಪಟ್ಟವು; ಭೂವಿುಯೊಳಗೆ ಮೂರರಲ್ಲಿ ಒಂದು ಭಾಗ ಸುಟ್ಟುಹೋಯಿತು; ಮರಗಳೊಳಗೆ ಮೂರರಲ್ಲಿ ಒಂದು ಭಾಗ ಸುಟ್ಟುಹೋಯಿತು; ಹಸುರು ಹುಲ್ಲೆಲ್ಲಾ ಸುಟ್ಟುಹೋಯಿತು.


ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ; ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.


ಅವರಿಗೆ - ನೀವು ಇಬ್ರಿಯರ ಹೆಂಗಸರಿಗೆ ಹೆರಿಗೆ ಮಾಡಿಸುವಾಗ ಅವರು ಹೆರುವದು ಗಂಡುಮಗುವಾಗಿದ್ದರೆ ಕೊಲ್ಲಬೇಕು, ಹೆಣ್ಣಾಗಿದ್ದರೆ ಉಳಿಸಬೇಕು ಎಂದು ಹೇಳಿದನು.


ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಅಧಿಕಾರ ಹೊಂದಿರುವ ಮಹಾನಗರಿಯೇ.


ಆ ದಿನದಲ್ಲಿ ಯೆಹೋವನು ಕಠಿನವೂ ಮಹತ್ತೂ ಬಲವೂ ಆಗಿರುವ ತನ್ನ ಖಡ್ಗದಿಂದ ವೇಗವಾಗಿ ಓಡುವ ಸರ್ಪ, ಡೊಂಕಾಗಿ ಹರಿಯುವ ಸರ್ಪ, ಈ ಎರಡು ಹೆಬ್ಬಾವುಗಳನ್ನು ಹೊಡೆದು ಮಹಾ ನದಿಯಲ್ಲಿನ ಘಟಸರ್ಪವನ್ನೂ ಕೊಂದುಹಾಕುವನು.


ಎರಡನೆಯ ದೇವದೂತನು ತುತೂರಿಯನ್ನೂದಿದಾಗ ಬೆಂಕಿಹತ್ತಿ ಉರಿಯುವ ದೊಡ್ಡ ಬೆಟ್ಟವೋ ಎಂಬಂತಿರುವ ಒಂದು ವಸ್ತು ಸಮುದ್ರದಲ್ಲಿ ಹಾಕಲ್ಪಟ್ಟಿತು. ಆಗ ಸಮುದ್ರದೊಳಗೆ ಮೂರರಲ್ಲಿ ಒಂದು ಭಾಗ ರಕ್ತವಾಯಿತು;


ಸಮುದ್ರಜೀವಿಗಳೊಳಗೆ ಮೂರರಲ್ಲಿ ಒಂದು ಭಾಗ ಸತ್ತುಹೋಯಿತು; ಹಡಗುಗಳೊಳಗೆ ಮೂರರಲ್ಲಿ ಒಂದು ಭಾಗ ನಾಶವಾಯಿತು.


ಮೂರನೆಯ ದೇವದೂತನು ತುತೂರಿಯನ್ನೂದಿದಾಗ ಪಂಜಿನಂತೆ ಉರಿಯುವ ಒಂದು ದೊಡ್ಡ ನಕ್ಷತ್ರವು ಆಕಾಶದಿಂದ ಬಿತ್ತು. ಅದು ನದಿಗಳೊಳಗೆ ಮೂರರಲ್ಲಿ ಒಂದು ಭಾಗದ ಮೇಲೆಯೂ ನೀರಿನ ಒರತೆಗಳ ಮೇಲೆಯೂ ಬಿತ್ತು.


ಆ ನಕ್ಷತ್ರಕ್ಕೆ ಮಾಚಿಪತ್ರೆ ಎಂದು ಹೆಸರು. ನೀರಿನೊಳಗೆ ಮೂರರಲ್ಲಿ ಒಂದು ಭಾಗ ಮಾಚಿಪತ್ರೆಯಂತೆ ಕಹಿಯಾಯಿತು. ಆ ನೀರು ವಿಷವಾದದ್ದರಿಂದ ಮನುಷ್ಯರಲ್ಲಿ ಅನೇಕರು ಸತ್ತರು.


ನಾಲ್ಕನೆಯ ದೇವದೂತನು ತುತೂರಿಯನ್ನೂದಿದಾಗ ಸೂರ್ಯ ಚಂದ್ರ ನಕ್ಷತ್ರಗಳೊಳಗೆ ಮೂರರಲ್ಲಿ ಒಂದು ಭಾಗವು ಬಡಿಯಲ್ಪಟ್ಟು ಕತ್ತಲಾಯಿತು. ಆದದರಿಂದ ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಇತ್ತು. ರಾತ್ರಿಯು ಹಾಗೆಯೇ ಆಯಿತು.


ಪರಲೋಕದಲ್ಲಿ ಯುದ್ಧ ನಡೆಯಿತು. ಮೀಕಾಯೇಲನೂ ಅವನ ದೂತರೂ ಘಟಸರ್ಪನ ಮೇಲೆ ಯುದ್ಧಮಾಡುವದಕ್ಕೆ ಹೊರಟರು. ಘಟಸರ್ಪನೂ ಅವನ ದೂತರೂ ಯುದ್ಧಮಾಡಿ ಸೋತುಹೋದರು,


ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು. ಅದಕ್ಕೆ ಘಟಸರ್ಪನು ಶಕ್ತಿಯನ್ನೂ ಸಿಂಹಾಸನವನ್ನೂ ಮಹಾ ಅಧಿಕಾರವನ್ನೂ ಕೊಟ್ಟನು.


ಘಟಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವನಾದ್ದರಿಂದ ಅವರು ಆ ಘಟಸರ್ಪನಿಗೆ ನಮಸ್ಕಾರ ಮಾಡುವವರಾದರು. ಇದಲ್ಲದೆ ಆ ಮೃಗಕ್ಕೂ ನಮಸ್ಕಾರ ಮಾಡಿ - ಈ ಮೃಗಕ್ಕೆ ಸಮಾನರು ಯಾರು? ಇದರ ಮೇಲೆ ಯುದ್ಧಮಾಡುವದಕ್ಕೆ ಯಾರು ಶಕ್ತರು? ಅಂದರು.


ಮತ್ತು ಘಟಸರ್ಪ ಮೃಗ ಸುಳ್ಳುಪ್ರವಾದಿ ಇವರ ಬಾಯಿಗಳಿಂದ ಕಪ್ಪೆಗಳಂತಿದ್ದ ಮೂರು ಅಶುದ್ಧಾತ್ಮಗಳು ಬರುವದನ್ನು ಕಂಡೆನು.


ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನಸರ್ಪನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧನದಲ್ಲಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು