Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 12:5 - ಕನ್ನಡ ಸತ್ಯವೇದವು J.V. (BSI)

5 ಆಕೆ ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳಬೇಕಾದ ಒಂದು ಗಂಡು ಮಗುವನ್ನು ಹೆತ್ತಳು; ಆ ಕೂಸು ಫಕ್ಕನೆ ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ಎತ್ತಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಕೆ ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳಬೇಕಾದ ಒಂದು ಗಂಡು ಮಗುವನ್ನು ಹೆತ್ತಳು. ಆಕೆಯ ಕೂಸು ಪಕ್ಕನೆ ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ಎತ್ತಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸರ್ವಜನಾಂಗಗಳನ್ನು ಕಬ್ಬಿಣದ ದಂಡದಿಂದ ಆಳಬಲ್ಲಂಥ ಒಂದು ಗಂಡುಮಗುವಿಗೆ ಆಕೆ ಜನ್ಮವಿತ್ತಳು. ಆದರೆ, ಆ ಮಗುವನ್ನು ಸಿಂಹಾಸನದಲ್ಲಿದ್ದ ದೇವರ ಬಳಿಗೆ ಕೊಂಡೊಯ್ಯಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆ ಸ್ತ್ರೀಯು ಅವನು ಎಲ್ಲಾ ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳುವ ಒಂದು ಗಂಡು ಮಗುವನ್ನು ಹೆತ್ತಳು. ಅವಳ ಮಗುವನ್ನು ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ತೆಗೆದುಕೊಂಡು ಹೋಗಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಕೆ, “ರಾಷ್ಟ್ರಗಳನ್ನು ಕಬ್ಬಿಣದ ಕೋಲಿನಿಂದ ಆಳಬೇಕಾದ” ಒಂದು ಗಂಡು ಮಗುವನ್ನು ಹೆತ್ತಳು. ಆಕೆಯ ಕೂಸು ದೇವರ ಬಳಿಗೂ ಅವರ ಸಿಂಹಾಸನದ ಬಳಿಗೂ ಎತ್ತಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತನ್ನಾ ತ್ಯಾ ಬಾಯ್ಕೊಮನ್ಸಿನ್ ಲೊಂಗ್ಟಾಚೊ ಸರಳ್ ಘೆವ್ನ್ ಸಗ್ಳ್ಯಾ ದೆಶಾಂಚ್ಯಾ ವರ್ತಿ ಅಧಿಕಾರ್ ಚಾಲ್ವುತಲ್ಯಾ ಎಕ್ ಲೆಕಾಕ್ ಜಲಮ್ ದಿಲಿನ್. ಖರೆ ತಾಬೊಡ್ತೊಬ್ ಪೊರಾಕ್ ದೆವಾ ಅನಿ ತ್ಯೆಚ್ಯಾ ಸಿವಾಸನಾಕ್ಡೆ ಉಕ್ಲುನ್ ಘೆವ್ನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 12:5
14 ತಿಳಿವುಗಳ ಹೋಲಿಕೆ  

ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಬರುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.


ಆಕೆಯು ಗರ್ಭಿಣಿಯಾಗಿದ್ದು ಪ್ರಸವವೇದನೆಯಿಂದ ಸಂಕಟಪಡುತ್ತಾ ಕೂಗುತ್ತಿದ್ದಳು. ಪರಲೋಕದಲ್ಲಿ ಮತ್ತೊಂದು ಲಕ್ಷಣವು ಕಾಣಿಸಿತು.


ಇದರಿಂದ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು.


ಆಮೇಲೆ ಅವರಿಗೆ - ಇಲ್ಲಿ ಮೇಲಕ್ಕೆ ಬನ್ನಿರಿ ಎಂದು ಆಕಾಶದ ಮಹಾವಾಣಿಯು ಹೇಳಿತು. ಅದನ್ನು ಅವರು ಕೇಳಿ ಮೇಘ ವಿಮಾನದಲ್ಲಿ ಪರಲೋಕಕ್ಕೆ ಏರಿಹೋದರು; ಅವರ ಶತ್ರುಗಳು ಅವರನ್ನು ನೋಡುತ್ತಾ ಇದ್ದರು.


ಆದರೆ ಆಕೆಯು ಗಂಡುಮಗನನ್ನು ಹಡೆಯುವ ತನಕ ಆಕೆಯನ್ನು ಅರಿಯಲಿಲ್ಲ. ಮಗುವಿಗೆ ಯೇಸುವೆಂದು ಹೆಸರಿಟ್ಟನು.


ಹೀಗಿರಲು ಪ್ರಸವವೇದನೆಪಡತಕ್ಕವಳು ಮಗನನ್ನು ಹೆರುವವರೆಗೂ ನನ್ನ ಜನರು ಶತ್ರುವಶವಾಗಿರುವಂತೆ ಮಾಡುವೆನು. ಅನಂತರ ಆ ಮಗನ ಸಹೋದರರಲ್ಲಿ ಉಳಿದವರು ಇಸ್ರಾಯೇಲ್ಯರೊಂದಿಗೆ ಹಿಂದಿರುಗುವರು.


ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು, ಅವನು ಹದಿನಾಲ್ಕು ವರುಷಗಳ ಹಿಂದೆ ಮೂರನೆಯ ಆಕಾಶದ ಪರಿಯಂತರಕ್ಕೂ ಒಯ್ಯಲ್ಪಟ್ಟನು. ಅವನು ದೇಹಸಹಿತನಾಗಿ ಒಯ್ಯಲ್ಪಟ್ಟನೋ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನರಿಯೆ, ದೇವರೇ ಬಲ್ಲನು.


ಯೇಸುಸ್ವಾವಿುಯು ಅವರ ಕೂಡ ಮಾತಾಡಿದ ಮೇಲೆ ಆಕಾಶಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ದ್ರೋಹಿಯಾದ ಮಗಳೇ, ಎಂದಿನವರೆಗೆ ಅತ್ತಿತ್ತ ಅಲೆದಾಡುವಿ? ಯೆಹೋವನು ಲೋಕದಲ್ಲಿ ಅಪೂರ್ವವಾದದ್ದನ್ನು ಉಂಟುಮಾಡಿದ್ದಾನೆ ನೋಡು, ಹೆಂಗಸು ಗಂಡಸನ್ನು ಕಾಪಾಡುವಳು.


ಆಹಾ, ಬೇನೆ ತಿನ್ನುವದರೊಳಗೆ ಹೆರಿಗೆಯಾಯಿತು, ಪ್ರಸವವೇದನೆ ಇನ್ನು ಕಾಣದಿರುವಲ್ಲಿ ಗಂಡನ್ನು ಹಡೆದಳು.


ಘಟಸರ್ಪನು ತಾನು ದೊಬ್ಬಲ್ಪಟ್ಟು ಭೂವಿುಗೆ ಬಿದ್ದಿರುವದನ್ನು ಕಂಡು ಗಂಡು ಮಗುವನ್ನು ಹೆತ್ತ ಸ್ತ್ರೀಯನ್ನು ಹಿಂಸಿಸುವದಕ್ಕೆ ಅಟ್ಟಿಸಿಕೊಂಡು ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು