ಪ್ರಕಟನೆ 12:9 - ಕನ್ನಡ ಸತ್ಯವೇದವು J.V. (BSI)9 ಭೂಲೋಕದವರನ್ನೆಲ್ಲಾ ಮರುಳುಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾತನ ಸರ್ಪವು ದೊಬ್ಬಲ್ಪಟ್ಟು ಭೂವಿುಗೆ ಬಿದ್ದನು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಸಮಸ್ತ ಜಗತ್ತನ್ನೂ ವಂಚಿಸುತ್ತಿದ್ದ ಆ ಮಹಾಘಟಸರ್ಪವನ್ನು ಭೂಮಿಗೆ ತಳ್ಳಲಾಯಿತು. ಈ ಪುರಾತನ ಸರ್ಪಕ್ಕೆ ‘ಪಿಶಾಚಿ’ ಎಂತಲೂ ‘ಸೈತಾನ’ ಎಂತಲೂ ಹೆಸರು. ಅದರ ದೂತರನ್ನು ಅದರೊಡನೆ ತಳ್ಳಲಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆ ಘಟಸರ್ಪವನ್ನು ಪರಲೋಕದಿಂದ (ಆ ಘಟಸರ್ಪಕ್ಕೆ ಸೈತಾನನೆಂತಲೂ ಪಿಶಾಚನೆಂತಲೂ ಹೆಸರಿದೆ. ಅದು ಲೋಕವನ್ನೆಲ್ಲಾ ತಪ್ಪು ಮಾರ್ಗಕ್ಕೆ ಎಳೆಯುತ್ತಿತ್ತು.) ಅದರ ದೂತರೊಂದಿಗೆ ಭೂಮಿಯ ಮೇಲೆ ಎಸೆಯಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಭೂಲೋಕದವರನ್ನೆಲ್ಲಾ ವಂಚಿಸುತ್ತಿದ್ದ ಆ ಮಹಾ ಘಟಸರ್ಪನು ಎಂದರೆ ಪಿಶಾಚನೆಂತಲೂ ಸೈತಾನನೆಂತಲೂ ಕರೆಯಲಾದ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರನ್ನೂ ಅವನೊಂದಿಗೆ ತಳ್ಳಲಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ತ್ಯಾ ಭಯಾನಕ್ ಸಾಪಾಕ್ ಭಾಯ್ರ್ ಕಾಡುನ್ ಟಾಕುನ್ ಹೊತಾ, ಅದ್ಲ್ಯಾ ಕಾಲಾತ್ಲೊ ಸಾಪ್ ತೊ, ತೆಚೆ ನಾಂವ್ ಗಿರೊ ನಾಹೊಲ್ಯಾರ್ ಸೈತಾನ್. ತೆನಿ ಸಗ್ಳ್ಯಾ ಜಗಾಕ್ ಪಸ್ವುಲ್ಯಾನಾಯ್ ತೆಕಾ ಅನಿ ತ್ಯೆಚ್ಯಾ ಸಗ್ಳ್ಯಾ ದುತಾಕ್ನಿ ಜಿಮ್ನಿ ವರ್ತಿ ಟಾಕುನ್ ಹೊಲ್ಲೆ ಹಾಯ್ ಅಧ್ಯಾಯವನ್ನು ನೋಡಿ |
ಹದವಾದ ಇಬ್ಬಾಯಿಕತ್ತಿಯನ್ನು ಹಿಡಿದಾತನು ಹೇಳುವದೇನಂದರೆ - ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು; ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ; ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನೂ ಸಾಕ್ಷಿಯೂ ಆದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿಯಾದರೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಮರೆಮಾಡಲಿಲ್ಲ.
ಈ ಕಾರಣದಿಂದಲೂ ನನಗೆ ತಿಳಿಸಲ್ಪಟ್ಟ ರಹಸ್ಯಗಳು ಬಹು ವಿಶೇಷವಾಗಿರುವದರಿಂದಲೂ ನಾನು ಹೊಗಳಿಕೊಳ್ಳದೆ ಸುಮ್ಮನಿರುತ್ತೇನೆ. ನಾನು ನನ್ನನ್ನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂದು ಒಂದು ಶೂಲ ನನ್ನ ಶರೀರದಲ್ಲಿ ನಾಟಿದೆಯೋ ಎಂಬಂತೆ ನನ್ನನ್ನು ಗುದ್ದುವದಕ್ಕೆ ಸೈತಾನನ ದೂತರಲ್ಲಿ ಒಬ್ಬನು ನನ್ನ ಬಳಿಗೆ ಕಳುಹಿಸಲ್ಪಟ್ಟನು; ನಾನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂತಲೇ ಇದಾಯಿತು.