Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 13:12 - ಕನ್ನಡ ಸತ್ಯವೇದವು J.V. (BSI)

12 ಈ ಮೃಗವು ಮೊದಲನೆಯ ಮೃಗದ ಅಧಿಕಾರವನ್ನೆಲ್ಲಾ ಅದರ ಸನ್ನಿಧಿಯಲ್ಲೇ ನಡಿಸುತ್ತದೆ. ಇದು ಮರಣಕರವಾದ ಗಾಯ ವಾಸಿಯಾದ ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ನಮಸ್ಕರಿಸುವಂತೆ ಮಾಡುವಂಥದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಈ ಮೃಗವು ಮೊದಲನೆಯ ಮೃಗದ ಎದುರು ತನ್ನ ಅಧಿಕಾರವನ್ನೆಲ್ಲಾ ನಡೆಸಿ, ಮರಣಕರವಾದ ಗಾಯ ವಾಸಿಯಾದ ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ಆರಾಧಿಸುವಂತೆ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಈ ಮೃಗವು, ಮೊದಲನೆಯ ಮೃಗಕ್ಕಿದ್ದ ಅಧಿಕಾರವನ್ನೆಲ್ಲಾ ಅದರ ಎದುರಿನಲ್ಲೇ ಚಲಾಯಿಸಿತು. ಮಾರಕವಾದ ಗಾಯದಿಂದ ಗುಣಹೊಂದಿದ ಆ ಮೊದಲನೆಯ ಮೃಗವನ್ನು ಭೂಲೋಕವು ಮತ್ತು ಅದರ ನಿವಾಸಿಗಳು ಆರಾಧಿಸುವಂತೆ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಈ ಮೃಗವು ಮೊದಲಿನ ಮೃಗದ ಅಧಿಕಾರವನ್ನೇ ಬಳಸುತ್ತದೆ. ಭೂಮಿಯ ಮೇಲೆ ವಾಸಿಸುವ ಜನರೆಲ್ಲರೂ ಮೊದಲಿನ ಮೃಗವನ್ನು ಆರಾಧಿಸುವಂತೆ ಮಾಡಲು ಅದು ತನ್ನ ಶಕ್ತಿಯನ್ನೆಲ್ಲಾ ಬಳಸುತ್ತದೆ. ಮರಣಕರವಾದ ಗಾಯದಿಂದ ಗುಣಮುಖವಾದದ್ದೇ ಮೊದಲನೆಯ ಮೃಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇದು ಮೊದಲನೆಯ ಮೃಗದ ಅಧಿಕಾರವನ್ನೆಲ್ಲಾ ಅದರ ಎದುರಿನಲ್ಲಿ ಚಲಾಯಿಸಿತು. ಇದು ಮರಣಕರವಾದ ಗಾಯದಿಂದ ವಾಸಿಯಾದ ಮೊದಲನೆಯ ಮೃಗವನ್ನು ಭೂಲೋಕವೂ ಭೂನಿವಾಸಿಗಳೂ ಆರಾಧಿಸುವಂತೆ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತೆನಿ ತ್ಯಾ ಪಯ್ಲೆಚ್ಯಾ ಭಯಾನಕ್ ಸಾಪಾಚ್ಯಾ ಇದ್ರಾಕುಚ್ ತೆಕಾ ದಿಲ್ಲ್ಯಾ ಮೊಟ್ಯಾ ಅದಿಕಾರಾಚೊ ಉಪಯೊಗ್ ಕರ್ಲ್ಯಾನ್ ತೆನಿ ಜಿಮ್ನಿಕ್ ಅನಿ ತ್ಯೆಚ್ಯಾ ವರ್ತಿ ಜಿವನ್ ಕರ್ತಾಲ್ಯಾ ಸಗ್ಳ್ಯಾನಿ ತ್ಯೆಚ್ಯಾವರ್ತಿ ಅನಿ ತ್ಯಾ ದುಕ್ ಗುನ್ ಹೊಲ್ಲ್ಯಾ ಜನಾವರಾಚೆ ಆರಾದನ್ ಕರುಕ್ ಜಬರ್ದಸ್ತಿ ಕರ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 13:12
12 ತಿಳಿವುಗಳ ಹೋಲಿಕೆ  

ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ನಮಸ್ಕರಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲ್ಪಟ್ಟರು;


ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ; ಮೃಗಕ್ಕೆ ಮತ್ತು ಅದರ ವಿಗ್ರಹಕ್ಕೆ ನಮಸ್ಕಾರಮಾಡುವವರೂ ಅದರ ಹೆಸರನ್ನು ಸೂಚಿಸುವ ಗುರುತನ್ನು ಹಾಕಿಸಿಕೊಂಡಿರುವವರೆಲ್ಲರೂ ಹಗಲಿರುಳು ಉಪಶಮನವಿಲ್ಲದೆ ಯಾತನೆಪಡುವರು ಎಂದು ಮಹಾ ಶಬ್ದದಿಂದ ಹೇಳಿದನು.


ಅವನ ಹಿಂದೆ ಮೂರನೆಯವನಾದ ಒಬ್ಬ ದೇವದೂತನು ಬಂದು - ಯಾವನಾದರೂ ಮೊದಲನೆಯ ಮೃಗಕ್ಕೂ ಅದರ ವಿಗ್ರಹಕ್ಕೂ ನಮಸ್ಕಾರಮಾಡಿ ತನ್ನ ಹಣೆಯ ಮೇಲಾಗಲಿ ಕೈಯ ಮೇಲಾಗಲಿ ಗುರುತುಹಾಕಿಸಿಕೊಂಡರೆ


ಯಾವದು ದೇವರೆನಿಸಿಕೊಳ್ಳುತ್ತದೋ ಯಾವದು ಪೂಜೆ ಹೊಂದುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಹೇಳಿಕೊಂಡು ದೇವರ ಗರ್ಭಗುಡಿಯಲ್ಲೇ ಕೂತುಕೊಳ್ಳುತ್ತಾನೆ.


ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು. ಅದಕ್ಕೆ ಘಟಸರ್ಪನು ಶಕ್ತಿಯನ್ನೂ ಸಿಂಹಾಸನವನ್ನೂ ಮಹಾ ಅಧಿಕಾರವನ್ನೂ ಕೊಟ್ಟನು.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಯಾರಾರ ಹೆಸರುಗಳು ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ನಮಸ್ಕಾರ ಮಾಡುವರು.


ಆಗ ಮೊದಲನೆಯವನು ಹೊರಟು ತನ್ನ ಪಾತ್ರೆಯಲ್ಲಿದ್ದದ್ದನ್ನು ಭೂವಿುಗೆ ಹೊಯ್ದನು; ಕೂಡಲೇ ಮೊದಲನೆಯ ಮೃಗದ ಗುರುತನ್ನು ಹೊಂದಿ ಅದರ ವಿಗ್ರಹಕ್ಕೆ ನಮಸ್ಕಾರಮಾಡುವ ಮನುಷ್ಯರ ಮೈಮೇಲೆ ಕೆಟ್ಟ ಉರಿಹುಣ್ಣು ಎದ್ದಿತು.


ನೀನು ಕಂಡ ಈ ಮೃಗವು ಮೊದಲು ಇತ್ತು, ಈಗ ಇಲ್ಲ, ಮತ್ತು ಅಧೋಲೋಕದಿಂದ ಏರಿಬಂದು ನಾಶಕ್ಕೆ ಹೋಗುವದು. ಭೂನಿವಾಸಿಗಳೊಳಗೆ ಯಾರಾರ ಹೆಸರುಗಳು ಲೋಕಾದಿಯಿಂದ ಜೀವಬಾಧ್ಯರ ಪಟ್ಟಿಯಲ್ಲಿ ಬರೆದಿರುವದಿಲ್ಲವೋ ಅವರು ಈ ಮೃಗವನ್ನು ನೋಡಿ ಇದು ಮೊದಲು ಇತ್ತು, ಈಗ ಇಲ್ಲ, ಇನ್ನು ಮೇಲೆ ಬರುವದು ಎಂದು ತಿಳಿದು ಆಶ್ಚರ್ಯಪಡುವರು.


ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಜನರು ಕೂತಿದ್ದರು; ನ್ಯಾಯತೀರಿಸುವ ಅಧಿಕಾರವು ಅವರಿಗೆ ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿವಿುತ್ತವಾಗಿಯೂ ದೇವರ ವಾಕ್ಯದ ನಿವಿುತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ನಮಸ್ಕರಿಸದೆ ತಮ್ಮ ಹಣೆಯ ಮೇಲೆ ಮತ್ತು ಕೈಯ ಮೇಲೆ ಗುರುತುಹಾಕಿಸಿಕೊಳ್ಳದೆ ಇರುವವರನ್ನೂ ಕಂಡೆನು. ಅವರು ಜೀವಿತರಾಗಿ ಎದ್ದು ಸಾವಿರ ವರುಷ ಕ್ರಿಸ್ತನೊಂದಿಗೆ ಆಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು