Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 13:15 - ಕನ್ನಡ ಸತ್ಯವೇದವು J.V. (BSI)

15 ಇದಲ್ಲದೆ ಆ ಮೃಗದ ವಿಗ್ರಹಕ್ಕೆ ಜೀವಕೊಡುವ ಸಾಮರ್ಥ್ಯವು ಇದಕ್ಕೆ ದೊರೆಯಿತು. ಆ ಮೃಗದ ವಿಗ್ರಹವು ಮಾತಾಡುವದು; ತನಗೆ ನಮಸ್ಕರಿಸದವರೆಲ್ಲರಿಗೂ ಮರಣದಂಡನೆ ಆಗುವಂತೆ ಮಾಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇದಲ್ಲದೆ ಆ ಮೃಗದ ವಿಗ್ರಹಕ್ಕೆ ಜೀವಕೊಡುವ ಸಾಮರ್ಥ್ಯವು ಇದಕ್ಕೆ ದೊರೆಯಿತು. ಆ ಮೃಗದ ವಿಗ್ರಹವು ಮಾತನಾಡುವುದಲ್ಲದೆ, ತನ್ನನ್ನು ಆರಾಧಿಸದವರೆಲ್ಲರಿಗೂ ಮರಣದಂಡನೆಯಾಗುವಂತೆ ಮಾಡುವ ಶಕ್ತಿಯು ಆದಕ್ಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆ ಮೃಗದ ವಿಗ್ರಹಕ್ಕೆ ಜೀವಶ್ವಾಸವನ್ನೂದಿ ಮಾತಾಡುವಂತೆಯೂ ಆ ವಿಗ್ರಹವನ್ನು ಆರಾಧಿಸದವರನ್ನು ಕೊಲ್ಲುವಂತೆಯೂ ಎರಡನೆಯ ಮೃಗಕ್ಕೆ ಅನುಮತಿಯನ್ನು ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಮೊದಲನೆಯ ಮೃಗದ ವಿಗ್ರಹಕ್ಕೆ ಜೀವ ಬರುವಂತೆ ಮಾಡುವ ಶಕ್ತಿಯನ್ನು ಎರಡನೆಯ ಮೃಗಕ್ಕೆ ಕೊಡಲಾಯಿತು. ಆಗ ಆ ವಿಗ್ರಹಕ್ಕೆ ಮಾತಾಡುವ ಶಕ್ತಿ ಬಂದಿತು. ಅದು ತನ್ನನ್ನು ಪೂಜಿಸದವರನ್ನೆಲ್ಲಾ ಕೊಲ್ಲುವುದಾಗಿ ಆಜ್ಞೆ ಹೊರಡಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆ ಮೃಗದ ವಿಗ್ರಹಕ್ಕೆ ಜೀವಕೊಡುವ ಸಾಮರ್ಥ್ಯವು ಕೊಡಲಾಗಿದ್ದರಿಂದ, ಆ ವಿಗ್ರಹವು ಮಾತನಾಡುವಂತೆಯೂ ತನ್ನನ್ನು ಆರಾಧನೆ ಮಾಡದವರನ್ನು ಕೊಲ್ಲುವಂತೆಯೂ ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಅಸೆ, ತಿ ಮುರ್ತಿ ಬೊಲುಚೆ ಅನಿ ಅಪ್ನಾಚೆ ಆರಾದನ್ ಕರಿನಸಲ್ಲ್ಯಾ ಸಗ್ಳ್ಯಾಕ್ನಿ ಜಿವಾನಿ ಮಾರುಚೆ ಮನುನ್ ತ್ಯಾ ದೊನ್ವೆಚ್ಯಾ ಜನಾವರಾನ್ ತ್ಯಾ ಪಯ್ಲೆಚ್ಯಾ ಜನಾವರಾಚ್ಯಾ ಮುರ್ತಿತ್ ಸ್ವಾಸ್ ಪುಕುಕ್ ಸೊಡಲ್ಲೆ ಹೊತ್ತೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 13:15
25 ತಿಳಿವುಗಳ ಹೋಲಿಕೆ  

ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಜನರು ಕೂತಿದ್ದರು; ನ್ಯಾಯತೀರಿಸುವ ಅಧಿಕಾರವು ಅವರಿಗೆ ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿವಿುತ್ತವಾಗಿಯೂ ದೇವರ ವಾಕ್ಯದ ನಿವಿುತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ನಮಸ್ಕರಿಸದೆ ತಮ್ಮ ಹಣೆಯ ಮೇಲೆ ಮತ್ತು ಕೈಯ ಮೇಲೆ ಗುರುತುಹಾಕಿಸಿಕೊಳ್ಳದೆ ಇರುವವರನ್ನೂ ಕಂಡೆನು. ಅವರು ಜೀವಿತರಾಗಿ ಎದ್ದು ಸಾವಿರ ವರುಷ ಕ್ರಿಸ್ತನೊಂದಿಗೆ ಆಳಿದರು.


ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ನಮಸ್ಕರಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲ್ಪಟ್ಟರು;


ಆಗ ಮೊದಲನೆಯವನು ಹೊರಟು ತನ್ನ ಪಾತ್ರೆಯಲ್ಲಿದ್ದದ್ದನ್ನು ಭೂವಿುಗೆ ಹೊಯ್ದನು; ಕೂಡಲೇ ಮೊದಲನೆಯ ಮೃಗದ ಗುರುತನ್ನು ಹೊಂದಿ ಅದರ ವಿಗ್ರಹಕ್ಕೆ ನಮಸ್ಕಾರಮಾಡುವ ಮನುಷ್ಯರ ಮೈಮೇಲೆ ಕೆಟ್ಟ ಉರಿಹುಣ್ಣು ಎದ್ದಿತು.


ಪರಲೋಕವೇ, ಆನಂದಪಡು; ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ, ಇವಳು ನಿಮಗೆ ಅನ್ಯಾಯಮಾಡಿದ್ದಕ್ಕಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದರಿಂದ ಆನಂದಪಡಿರಿ ಎಂದು ಆ ಶಬ್ದ ಹೇಳಿತು.


ಆ ಸ್ತ್ರೀಯು ದೇವಜನರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿ ಕೊಟ್ಟು ಹತರಾದವರ ರಕ್ತವನ್ನೂ ಕುಡಿದು ಮತ್ತಳಾಗಿರುವದನ್ನು ಕಂಡೆನು. ನಾನು ಅವಳನ್ನು ನೋಡಿ ಅತ್ಯಾಶ್ಚರ್ಯಪಟ್ಟೆನು.


ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ; ಮೃಗಕ್ಕೆ ಮತ್ತು ಅದರ ವಿಗ್ರಹಕ್ಕೆ ನಮಸ್ಕಾರಮಾಡುವವರೂ ಅದರ ಹೆಸರನ್ನು ಸೂಚಿಸುವ ಗುರುತನ್ನು ಹಾಕಿಸಿಕೊಂಡಿರುವವರೆಲ್ಲರೂ ಹಗಲಿರುಳು ಉಪಶಮನವಿಲ್ಲದೆ ಯಾತನೆಪಡುವರು ಎಂದು ಮಹಾ ಶಬ್ದದಿಂದ ಹೇಳಿದನು.


ಅವನ ಹಿಂದೆ ಮೂರನೆಯವನಾದ ಒಬ್ಬ ದೇವದೂತನು ಬಂದು - ಯಾವನಾದರೂ ಮೊದಲನೆಯ ಮೃಗಕ್ಕೂ ಅದರ ವಿಗ್ರಹಕ್ಕೂ ನಮಸ್ಕಾರಮಾಡಿ ತನ್ನ ಹಣೆಯ ಮೇಲಾಗಲಿ ಕೈಯ ಮೇಲಾಗಲಿ ಗುರುತುಹಾಕಿಸಿಕೊಂಡರೆ


ಆ ಮೊದಲನೆಯ ಮೃಗದ ಸನ್ನಿಧಿಯಲ್ಲಿ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವಿರುವದರಿಂದ ಭೂನಿವಾಸಿಗಳನ್ನು ಮರುಳುಗೊಳಿಸುತ್ತದೆ; ಅವರಿಗೆ - ಕತ್ತಿಯಿಂದ ಗಾಯಹೊಂದಿ ಸಾಯದೆ ಬದುಕಿದ ಮೃಗದ ಘನಕ್ಕಾಗಿ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಬೋಧಿಸುತ್ತದೆ.


ಪರಾತ್ಪರನಿಗೆ ವಿರುದ್ಧವಾಗಿ ಕೊಚ್ಚಿಕೊಂಡು ಪರಾತ್ಪರನ ಭಕ್ತರನ್ನು ಸವೆಯಿಸಿ ಕಟ್ಟಳೆಯ ಕಾಲಗಳನ್ನೂ ಧರ್ಮವಿಧಿಗಳನ್ನೂ ಮಾರ್ಪಡಿಸಲು ಮನಸ್ಸುಮಾಡುವನು; ಆ ಭಕ್ತರು ಒಂದುಕಾಲ ಎರಡುಕಾಲ ಅರ್ಧಕಾಲ ಅವನ ಕೈವಶವಾಗಿರುವರು.


ಪ್ರವಾದಿಗಳ ರಕ್ತವೂ ದೇವಜನರ ರಕ್ತವೂ ಭೂವಿುಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವೂ ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.


ಯಾಕಂದರೆ ಅವರು ದೇವರ ಅಭಿಪ್ರಾಯವನ್ನು ನೆರವೇರಿಸುವದಕ್ಕೂ ಒಂದೇ ಅಭಿಪ್ರಾಯವುಳ್ಳವರಾಗಿದ್ದು ತಮ್ಮ ರಾಜ್ಯವನ್ನು ಮೃಗಕ್ಕೆ ಕೊಡುವದಕ್ಕೂ ದೇವರು ತನ್ನ ವಚನವು ನೆರವೇರುವ ತನಕ ಅವರ ಹೃದಯಗಳನ್ನು ಪ್ರೇರಿಸಿದನು.


ಎಲ್ಲರೂ ತಿಳುವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿವಿುತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು; ಅವನು ಎರಕಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.


ಎಲ್ಲರೂ ತಿಳುವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿವಿುತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು; ಅವನು ಎರಕ ಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.


ಇಂಥಾ ಬೊಂಬೆಗಳು ಸೌತೆಯ ತೋಟದ ಬೆದರುಗಂಬದಂತಿವೆ, ಮಾತಾಡಲಾರವು; ಹೊತ್ತುಕೊಂಡುಹೋಗಬೇಕು, ನಡೆಯಲಾರವು. ಅವುಗಳಿಗೆ ಅಂಜಬೇಡಿರಿ, ಕೇಡುಮಾಡಲಾರವು, ಮೇಲುಮಾಡಲಿಕ್ಕೂ ಅವುಗಳಿಗೆ ಸಾಮರ್ಥ್ಯವಿಲ್ಲ.


ಅವು ಬಾಯಿದ್ದರೂ ಮಾತಾಡುವದಿಲ್ಲ; ಕಣ್ಣಿದ್ದರೂ ನೋಡುವದಿಲ್ಲ.


ಹೀಗಿರಲು ಯೆಹೋವದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು; ಆಗ ಮನುಷ್ಯನು ಬದುಕುವ ಪ್ರಾಣಿಯಾದನು.


ಅವರು ಯಜ್ಞದ ಕುರಿಯಾದಾತನ ಮೇಲೆ ಯುದ್ಧಮಾಡುವರು, ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವದರಿಂದ ಅವರನ್ನು ಜಯಿಸುವನು; ಮತ್ತು ದೇವರು ಕರೆದವರೂ ದೇವರಾದುಕೊಂಡವರೂ ನಂಬಿಗಸ್ತರೂ ಆಗಿರುವ ಆತನ ಕಡೆಯವರು ಆ ಜಯದಲ್ಲಿ ಪಾಲುಗಾರರಾಗುವರು.


ಆಮೇಲೆ ಜಲಾಧಿಪತಿಯಾದ ದೂತನು - ಸದಾ ಇರುವಾತನೇ, ಪರಿಶುದ್ಧನೇ, ನೀನು ಹೀಗೆ ತೀರ್ಪುಮಾಡಿದ್ದರಲ್ಲಿ ನೀತಿಸ್ವರೂಪನಾಗಿದ್ದೀ.


ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದೇ.


ಮರಕ್ಕೆ ಎಚ್ಚತ್ತುಕೋ, ಜಡವಾದ ಕಲ್ಲಿಗೆ ಎದ್ದೇಳು ಎಂದು ಅಪ್ಪಣೆಕೊಡುವವನ ಗತಿಯನ್ನು ಅಯ್ಯೋ, ಏನು ಹೇಳಲಿ! ಇಂಥ ಬೊಂಬೆಯು ಬೋಧಿಸೀತೇ? ಇಗೋ, ಅದಕ್ಕೆ ಬೆಳ್ಳಿಬಂಗಾರವು ಹೊದಗಿಸಿದೆ, ಅದರೊಳಗೆ ಶ್ವಾಸವೇನೂ ಇಲ್ಲ.


ನಾಲ್ಕನೆಯ ಮೃಗದ ವಿಷಯವಾಗಿಯೂ ಅದರ ತಲೆಯ ಮೇಲಣ ಹತ್ತು ಕೊಂಬುಗಳ ವಿಷಯವಾಗಿಯೂ


ಸಮುದ್ರದಿಂದ ಮೃಗವು ಏರಿಬರುವದನ್ನು ಕಂಡೆನು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಕೊಂಬುಗಳ ಮೇಲೆ ಹತ್ತು ಮಕುಟಗಳೂ ತಲೆಗಳ ಮೇಲೆ ದೇವದೂಷಣನಾಮಗಳೂ ಇದ್ದವು. ನಾನು ಕಂಡ ಮೃಗವು ಚಿರತೆಯಂತಿತ್ತು;


ಈ ಮೃಗವು ಮೊದಲನೆಯ ಮೃಗದ ಅಧಿಕಾರವನ್ನೆಲ್ಲಾ ಅದರ ಸನ್ನಿಧಿಯಲ್ಲೇ ನಡಿಸುತ್ತದೆ. ಇದು ಮರಣಕರವಾದ ಗಾಯ ವಾಸಿಯಾದ ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ನಮಸ್ಕರಿಸುವಂತೆ ಮಾಡುವಂಥದಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು