ಪ್ರಕಟನೆ 13:17 - ಕನ್ನಡ ಸತ್ಯವೇದವು J.V. (BSI)17 ಆ ಗುರುತು ಯಾರಿಗಿಲ್ಲವೋ ಅವರು ಕ್ರಯ ವಿಕ್ರಯಗಳನ್ನು ನಡಿಸಕೂಡದೆಂತಲೂ ಆಜ್ಞೆಮಾಡುತ್ತದೆ. ಆ ಗುರುತು ಯಾವದಂದರೆ ಮೊದಲನೆಯ ಮೃಗದ ಹೆಸರು ಅಥವಾ ಅದರ ಹೆಸರನ್ನು ಸೂಚಿಸುವ ಅಂಕೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆ ಗುರುತು ಯಾರಿಗಿಲ್ಲವೋ ಅವರು ಕ್ರಯ ವಿಕ್ರಯಗಳನ್ನು ನಡೆಸಲು ಸಾಧ್ಯವಿರಲಿಲ್ಲ. ಆ ಗುರುತು ಯಾವುದೆಂದರೆ ಮೊದಲನೆಯ ಮೃಗದ ಹೆಸರು ಅಥವಾ ಅದರ ಹೆಸರನ್ನು ಸೂಚಿಸುವ ಸಂಖ್ಯೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆ ಗುರುತಿನ ಹಚ್ಚೆಯನ್ನು ಯಾರು ಚುಚ್ಚಿಸಿಕೊಳ್ಳಲಿಲ್ಲವೋ ಅವರು ಕೊಳ್ಳುವುದಕ್ಕಾಗಲಿ, ಮಾರುವುದಕ್ಕಾಗಲಿ ಸಾಧ್ಯ ಇರಲಿಲ್ಲ. ಆ ಗುರುತಿನ ಮುದ್ರೆ ಏನೆಂದರೆ ಮೃಗದ ಹೆಸರು ಇಲ್ಲವೆ, ಆ ಹೆಸರನ್ನು ಸೂಚಿಸುವ ಸಂಖ್ಯೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಈ ಗುರುತಿಲ್ಲದೆ ಯಾರೂ ಕೊಳ್ಳುವಂತಿಲ್ಲ ಮತ್ತು ಮಾರುವಂತಿಲ್ಲ. ಈ ಗುರುತು ಏನೆಂದರೆ ಆ ಮೃಗದ ಹೆಸರು ಅಥವಾ ಅದರ ಹೆಸರಿನ ಸಂಖ್ಯೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆ ಗುರುತಾಗಲಿ, ಮೃಗದ ಹೆಸರಾಗಲಿ, ಅದರ ಹೆಸರಿನ ಸಂಖ್ಯೆಯಾಗಲಿ ಇಲ್ಲದವನು ಕ್ರಯ ವಿಕ್ರಯಗಳನ್ನು ಮಾಡದಂತೆಯೂ ಅದು ಮಾಡುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಕೊನ್‍ಬಿ ಹಿ ವಳಕ್ ನಸ್ತಾನಾ ಇಕಾತ್ ಘೆವ್ ನ್ಹಯ್ ನಾಹೊಲ್ಯಾರ್ ಇಕಾತ್ ದಿವ್ಚೆ ನ್ಹಯ್, ತ್ಯಾ ಭಯಾನಕ್ ಸಾಪಾಚೆ ನಾಂವ್ ತೆ, ನಾ ಹೊಲ್ಯಾರ್ ಭಯಾನಕ್ ಸಾಪಾಚ್ಯಾ ನಾವಾಸಾಟ್ನಿ ಮನುನ್ ಹೊತ್ತೆ ಆಂಕೆ ತೆ. ಅಧ್ಯಾಯವನ್ನು ನೋಡಿ |
ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಜನರು ಕೂತಿದ್ದರು; ನ್ಯಾಯತೀರಿಸುವ ಅಧಿಕಾರವು ಅವರಿಗೆ ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿವಿುತ್ತವಾಗಿಯೂ ದೇವರ ವಾಕ್ಯದ ನಿವಿುತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ನಮಸ್ಕರಿಸದೆ ತಮ್ಮ ಹಣೆಯ ಮೇಲೆ ಮತ್ತು ಕೈಯ ಮೇಲೆ ಗುರುತುಹಾಕಿಸಿಕೊಳ್ಳದೆ ಇರುವವರನ್ನೂ ಕಂಡೆನು. ಅವರು ಜೀವಿತರಾಗಿ ಎದ್ದು ಸಾವಿರ ವರುಷ ಕ್ರಿಸ್ತನೊಂದಿಗೆ ಆಳಿದರು.