Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 13:18 - ಕನ್ನಡ ಸತ್ಯವೇದವು J.V. (BSI)

18 ಇದರಲ್ಲಿ ಜ್ಞಾನವು ಅಡಕವಾಗಿದೆ. ಬುದ್ಧಿವಂತನು ಆ ಮೃಗದ ಅಂಕೆಯನ್ನು ಎಣಿಸಲಿ; ಅದು ಒಬ್ಬ ಮನುಷ್ಯನನ್ನು ಸೂಚಿಸುವ ಅಂಕೆಯಾಗಿದೆ; ಅದರ ಅಂಕೆಯು ಆರುನೂರ ಅರುವತ್ತಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇದನ್ನು ಗ್ರಹಿಸಲು ಜ್ಞಾನವು ಅಗತ್ಯವಾಗಿದೆ. ಬುದ್ಧಿವಂತನು ಆ ಮೃಗದ ಸಂಖ್ಯೆಯನ್ನು ಎಣಿಸಲಿ, ಅದು ಒಬ್ಬ ಮನುಷ್ಯನನ್ನು ಸೂಚಿಸುವ ಸಂಖ್ಯೆಯಾಗಿದೆ. ಅದರ ಸಂಖ್ಯೆಯು 666.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇದನ್ನು ಅರ್ಥಮಾಡಿಕೊಳ್ಳಲು ಜ್ಞಾನ ಬೇಕು. ಬುದ್ಧಿವಂತನು ಮೃಗದ ಸಂಖ್ಯೆಯನ್ನು ಎಣಿಸಲಿ. ಅದು ಒಬ್ಬ ಮನುಷ್ಯನನ್ನು ಸೂಚಿಸುವ ಸಂಖ್ಯೆ. ಆ ಸಂಖ್ಯೆಯು 666.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ತಿಳುವಳಿಕೆಯುಳ್ಳ ಮನುಷ್ಯನು ಮೃಗದ ಸಂಖ್ಯೆಯ ಅರ್ಥವನ್ನು ಕಂಡುಕೊಳ್ಳಲು ಸಾಧ್ಯ. ಇಲ್ಲಿ ಜ್ಞಾನದ ಅಗತ್ಯವಿದೆ. ಈ ಸಂಖ್ಯೆಯು ಮನುಷ್ಯನ ಸಂಖ್ಯೆಯಾಗಿದೆ. ಅವನ ಸಂಖ್ಯೆ 666.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇದರಲ್ಲಿ ಜ್ಞಾನವಿದೆ. ಬುದ್ಧಿಯುಳ್ಳವನು ಆ ಮೃಗದ ಸಂಖ್ಯೆಯನ್ನು ಎಣಿಸಲಿ, ಅದು ಒಬ್ಬ ಮನುಷ್ಯನ ಸಂಖ್ಯೆಯಾಗಿದೆ. ಅವನ ಸಂಖ್ಯೆಯು 666.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಶಾನೊ ಹೊತ್ತೊ ತೆ ಕಳ್ವುನ್ ಘೆಂವ್ದಿತ್, ಅನಿ ಬುದ್ದ್ ಹೊತ್ತೊ ತ್ಯಾ ಭಯಾನಕ್ ಸಾಪಾಚೆ ಅಂಕೆ ಮೆಜುಂದಿ. ತೆ ಎಕ್ ಮಾನ್ಸಾಚೆ ನಾಂವ್ ದಾಕ್ವುನ್ ದಿತಾ. ತೆ ಅಂಕೆ ಸಾಸೆ ಸಾಟಾರ್ ಸಾ. 666.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 13:18
10 ತಿಳಿವುಗಳ ಹೋಲಿಕೆ  

ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಏನೋ ಒಂದು ನನಗೆ ಕಾಣಿಸಿತು. ಆಗ ಮೃಗದ ವಿಗ್ರಹಕ್ಕೆ ನಮಸ್ಕರಿಸದೆಯೂ ಅದರ ಹೆಸರಿನ ಅಂಕೆಯನ್ನು ಮುದ್ರೆಹಾಕಿಸಿಕೊಳ್ಳದೆಯೂ ಅದರ ಮೇಲೆ ಜಯ ಹೊಂದಿದವರು ದೇವರ ಸೇವಾರ್ಥವಾದ ವೀಣೆಗಳನ್ನು ಕೈಯಲ್ಲಿ ಹಿಡಿದುಕೊಂಡು ಗಾಜಿನ ಸಮುದ್ರದ ಬಳಿಯಲ್ಲಿ ನಿಂತು


ಇದು ಬುದ್ಧಿವಂತನಿಗೆ ಮಾತ್ರ ಗೊತ್ತಾಗುವದು. ಆ ಏಳು ತಲೆಗಳು ಆ ಸ್ತ್ರೀ ಕೂತುಕೊಂಡಿರುವ ಏಳು ಬೆಟ್ಟಗಳೇ;


ಅದರ ಪ್ರಾಕಾರವನ್ನೂ ಅಳತೆಮಾಡಿದನು; ಅದು ನೂರನಾಲ್ಪತ್ತುನಾಲ್ಕು ಮೊಳವಾಯಿತು; ಈ ಲೆಕ್ಕದಲ್ಲಿ ಮನುಷ್ಯನ ಮೊಳ ಅಂದರೆ ದೇವದೂತನ ಮೊಳ.


ಈ ಪ್ರವಾದನವಾಕ್ಯಗಳನ್ನು ಓದುವಂಥವನೂ ಕೇಳುವಂಥವರೂ ಈ ಪ್ರವಾದನೆಯಲ್ಲಿ ಬರೆದಿರುವ ಮಾತುಗಳನ್ನು ಕೈಕೊಂಡು ನಡೆಯುವಂಥವರೂ ಧನ್ಯರು. ಅವು ನೆರವೇರುವ ಸಮಯವು ಸಮೀಪವಾಗಿದೆ.


ಇದಲ್ಲದೆ ಹಾಳುಮಾಡುವ ಅಸಹ್ಯ ವಸ್ತುವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ಕಾಣುವಾಗ (ಇದನ್ನು ಓದುವವನು ತಿಳುಕೊಳ್ಳಲಿ) ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ.


ಅನೇಕರು ತಮ್ಮನ್ನು ಶುದ್ಧೀಕರಿಸಿ ಶುಭ್ರಮಾಡಿಕೊಂಡು ಶೋಧಿತರಾಗುವರು; ದುಷ್ಟರು ದುಷ್ಟರಾಗಿಯೇ ನಡೆಯುವರು, ಅವರಲ್ಲಿ ಯಾರಿಗೂ ವಿವೇಕವಿರದು; ಜ್ಞಾನಿಗಳಿಗೆ ವಿವೇಕವಿರುವದು.


ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು; ಯೆಹೋವನ ಮಾರ್ಗಗಳು ರುಜುವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಎಡವಿಬೀಳುವರು.


ಜ್ಞಾನಿಗಳು ಈ ಸಂಗತಿಗಳನ್ನು ಗಮನಿಸಿ ಯೆಹೋವನ ಕೃಪಾಕಾರ್ಯಗಳನ್ನು ಗ್ರಹಿಸಿಕೊಳ್ಳಲಿ.


(ರೆಫಾಯರೊಳಗೆ ಬಾಷಾನಿನ ಅರಸನಾದ ಓಗನೊಬ್ಬನೇ ಉಳಿದಿದ್ದನು. ಅವನ ಮಂಚ ಕಬ್ಬಿಣದು; ಅಮ್ಮೋನಿಯರ ರಬ್ಬಾ ಎಂಬ ಪಟ್ಟಣದಲ್ಲಿ ಅದನ್ನು ಈಗಲೂ ನೋಡಬಹುದು. ಪುರುಷನ ಕೈಯಳತೆಯ ಪ್ರಕಾರ ಅದರ ಉದ್ದ ಒಂಭತ್ತು ಮೊಳ; ಅಗಲ ನಾಲ್ಕು ಮೊಳ.)


ನಾವು ನೀತಿ ತಪ್ಪಿನಡೆಯುವದರಿಂದ ದೇವರಲ್ಲಿರುವ ನೀತಿ ಪ್ರಸಿದ್ಧಿಗೆ ಬರುವದಾದರೆ ನಾವು ಏನು ಹೇಳೋಣ? ಉಗ್ರದಂಡನೆಯನ್ನು ಮಾಡುವ ದೇವರು ಅನ್ಯಾಯಸ್ಥನೇನು? (ಈ ಮಾತನ್ನು ಲೋಕರೀತಿಯಾಗಿ ಆಡಿದ್ದೇನೆ.) ಎಂದಿಗೂ ಅಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು