Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 13:3 - ಕನ್ನಡ ಸತ್ಯವೇದವು J.V. (BSI)

3 ಅದರ ತಲೆಗಳಲ್ಲಿ ಒಂದು ತಲೆ ಗಾಯಹೊಂದಿ ಸಾಯುವ ಹಾಗಿರುವದನ್ನು ಕಂಡೆನು. ಆ ಮರಣಕರವಾದ ಗಾಯವು ವಾಸಿಯಾಯಿತು; ಭೂಲೋಕದವರೆಲ್ಲರು ಆ ಮೃಗವನ್ನು ನೋಡುತ್ತಾ ಆಶ್ಚರ್ಯಪಟ್ಟರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅದರ ತಲೆಗಳಲ್ಲಿ ಒಂದು ತಲೆ ಗಾಯಹೊಂದಿ ಸಾಯುವ ಹಾಗಿರುವುದನ್ನು ಕಂಡೆನು. ಆ ಮರಣಕರವಾದ ಗಾಯವು ವಾಸಿಯಾಯಿತು, ಭೂಲೋಕದವರೆಲ್ಲರು ಆ ಮೃಗವನ್ನು ನೋಡುತ್ತಾ ಆಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅದರ ತಲೆಗಳಲ್ಲಿ ಒಂದು ತಲೆ ಗಾಯಗೊಂಡು ಅದು ಸಾಯುವ ಸ್ಥಿತಿಯಲ್ಲಿತ್ತು. ಆದರೆ ಮಾರಕವಾದ ಆ ಗಾಯವು ಗುಣವಾಯಿತು. ಇದನ್ನು ಕಂಡ ಭೂಲೋಕದವರೆಲ್ಲರೂ ವಿಸ್ಮಯಗೊಂಡು ಆ ಮೃಗವನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮೃಗದ ತಲೆಗಳಲ್ಲಿ ಒಂದು ತಲೆಯು ಗಾಯಗೊಂಡು ಸತ್ತಂತೆ ಕಾಣುತ್ತಿತ್ತು. ಆದರೆ ಮರಣಕರವಾದ ಈ ಗಾಯವನ್ನು ವಾಸಿಮಾಡಲಾಯಿತು. ಈ ಲೋಕದಲ್ಲಿದ್ದ ಜನರೆಲ್ಲರೂ ಆಶ್ಚರ್ಯಗೊಂಡು ಆ ಮೃಗವನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಮೃಗದ ತಲೆಗಳಲ್ಲಿ ಒಂದು ಮರಣಾಂತಿಕ ಗಾಯ ಹೊಂದಿದಂತಿರುವುದನ್ನು ನೋಡಿದೆನು. ಆದರೆ ಆ ಮರಣಕರವಾದ ಗಾಯವು ವಾಸಿಯಾಯಿತು. ಭೂಲೋಕವೆಲ್ಲಾ ಆ ಮೃಗವನ್ನು ಕಾಣುತ್ತಾ ಆಶ್ಚರ್ಯಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತ್ಯಾ ಭಯಾನಕ್ ಸಾಪ್ ಟಕ್ಲ್ಯಾನಿತ್ಲ್ಯಾ ಎಕ್ ಟಕ್ಲ್ಯಾಕ್ ವಾಯ್ಟ್ ಮಾರ್ ಬಸುನ್ ದುಕ್ಕ್ ಹೊಲ್ಲೆ ಹೊತ್ತೊ ಮಿಯಾ ಬಗಟ್ಲೊ. ಖರೆ ತೊ ದುಕ್ಕ್ ಹೊವ್ನ್ ಮರ್‍ತಲ್ಯಾ ಸ್ಥಿತಿರ್ ಹೊತ್ತೆ ಖರೆ ತೆ ಗುನ್ ಹೊಲೆ. ಸಗ್ಳಿ ಜಮ್ನಿ ವೈಲಿ ಲೊಕಾ ಅಜಾಪ್ ಹೊಲಿ ಅನಿ ತ್ಯಾ ಭಯಾನಕ್ ಸಾಪ್ ಫಾಟ್ನಾ ಗೆಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 13:3
15 ತಿಳಿವುಗಳ ಹೋಲಿಕೆ  

ನೀನು ಕಂಡ ಈ ಮೃಗವು ಮೊದಲು ಇತ್ತು, ಈಗ ಇಲ್ಲ, ಮತ್ತು ಅಧೋಲೋಕದಿಂದ ಏರಿಬಂದು ನಾಶಕ್ಕೆ ಹೋಗುವದು. ಭೂನಿವಾಸಿಗಳೊಳಗೆ ಯಾರಾರ ಹೆಸರುಗಳು ಲೋಕಾದಿಯಿಂದ ಜೀವಬಾಧ್ಯರ ಪಟ್ಟಿಯಲ್ಲಿ ಬರೆದಿರುವದಿಲ್ಲವೋ ಅವರು ಈ ಮೃಗವನ್ನು ನೋಡಿ ಇದು ಮೊದಲು ಇತ್ತು, ಈಗ ಇಲ್ಲ, ಇನ್ನು ಮೇಲೆ ಬರುವದು ಎಂದು ತಿಳಿದು ಆಶ್ಚರ್ಯಪಡುವರು.


ಆ ಮೊದಲನೆಯ ಮೃಗದ ಸನ್ನಿಧಿಯಲ್ಲಿ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವಿರುವದರಿಂದ ಭೂನಿವಾಸಿಗಳನ್ನು ಮರುಳುಗೊಳಿಸುತ್ತದೆ; ಅವರಿಗೆ - ಕತ್ತಿಯಿಂದ ಗಾಯಹೊಂದಿ ಸಾಯದೆ ಬದುಕಿದ ಮೃಗದ ಘನಕ್ಕಾಗಿ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಬೋಧಿಸುತ್ತದೆ.


ಯಾಕಂದರೆ ಅವರು ದೇವರ ಅಭಿಪ್ರಾಯವನ್ನು ನೆರವೇರಿಸುವದಕ್ಕೂ ಒಂದೇ ಅಭಿಪ್ರಾಯವುಳ್ಳವರಾಗಿದ್ದು ತಮ್ಮ ರಾಜ್ಯವನ್ನು ಮೃಗಕ್ಕೆ ಕೊಡುವದಕ್ಕೂ ದೇವರು ತನ್ನ ವಚನವು ನೆರವೇರುವ ತನಕ ಅವರ ಹೃದಯಗಳನ್ನು ಪ್ರೇರಿಸಿದನು.


ಇದಲ್ಲದೆ ಅವು ಏಳು ಮಂದಿ ಅರಸುಗಳನ್ನು ಸೂಚಿಸುತ್ತವೆ; ಅವರಲ್ಲಿ ಐದು ಮಂದಿ ಬಿದ್ದುಹೋಗಿದ್ದಾರೆ, ಒಬ್ಬನು ಇದ್ದಾನೆ, ಮತ್ತೊಬ್ಬನು ಇನ್ನೂ ಬಂದಿಲ್ಲ. ಬಂದ ಮೇಲೆ ಅವನು ಸ್ವಲ್ಪಕಾಲ ಇರಬೇಕು.


ನಾನು ಬಾಬೆಲಿನ ಅರಸನ ಕೈಗಳನ್ನು ಬಲಪಡಿಸಿ ನನ್ನ ಖಡ್ಗವನ್ನು ಅವನ ಕೈಗೆ ಕೊಟ್ಟು ಫರೋಹನ ಕೈಗಳನ್ನು ಮುರಿಸಲು ಗಾಯದಿಂದ ಪ್ರಾಣಸಂಕಟಪಡುವವನಂತೆ ಫರೋಹನು ಆ ಅರಸನ ಮುಂದೆ ನರಳಾಡುವನು.


ಅವರು ಒಂದೇ ಅಭಿಪ್ರಾಯವುಳ್ಳವರಾಗಿದ್ದು ತಮ್ಮ ಶಕ್ತಿಯನ್ನೂ ಅಧಿಕಾರವನ್ನೂ ಮೃಗಕ್ಕೆ ಕೊಡುತ್ತಾರೆ.


ಈ ಮೃಗವು ಮೊದಲನೆಯ ಮೃಗದ ಅಧಿಕಾರವನ್ನೆಲ್ಲಾ ಅದರ ಸನ್ನಿಧಿಯಲ್ಲೇ ನಡಿಸುತ್ತದೆ. ಇದು ಮರಣಕರವಾದ ಗಾಯ ವಾಸಿಯಾದ ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ನಮಸ್ಕರಿಸುವಂತೆ ಮಾಡುವಂಥದಾಗಿದೆ.


ಆಗ ಸೀಮೋನನು ಕೂಡ ನಂಬಿ ದೀಕ್ಷಾಸ್ನಾನಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಉಂಟಾಗುವದನ್ನು ನೋಡಿ ಬೆರಗಾದನು.


ಆ ಕಾಲದಲ್ಲಿ ರಾಜ್ಯವೆಲ್ಲಾ ಖಾನೆಷುಮಾರಿ ಬರಸಿಕೊಳ್ಳಬೇಕೆಂಬ ಆಜ್ಞೆಯು ಚಕ್ರವರ್ತಿಯಾದ ಔಗುಸ್ತನಿಂದ ಹೊರಟಿತು.


ಆ ಸ್ತ್ರೀಯು ದೇವಜನರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿ ಕೊಟ್ಟು ಹತರಾದವರ ರಕ್ತವನ್ನೂ ಕುಡಿದು ಮತ್ತಳಾಗಿರುವದನ್ನು ಕಂಡೆನು. ನಾನು ಅವಳನ್ನು ನೋಡಿ ಅತ್ಯಾಶ್ಚರ್ಯಪಟ್ಟೆನು.


ಹೀಗಿರಲಾಗಿ ಫರಿಸಾಯರು - ನಿಮ್ಮ ಯತ್ನವೇನೂ ಸಾಗಲಿಲ್ಲ, ನೋಡಿರಿ; ಲೋಕವೆಲ್ಲಾ ಆತನ ಹಿಂದೆ ಹೋಯಿತಲ್ಲಾ ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.


ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯ ಅರಸು; ಅವನು ಆ ಏಳು ಮಂದಿ ಅರಸುಗಳಿಗೆ ಸೇರಿದವನು; ನಾಶಕ್ಕೆ ಹೋಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು