Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 13:4 - ಕನ್ನಡ ಸತ್ಯವೇದವು J.V. (BSI)

4 ಘಟಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವನಾದ್ದರಿಂದ ಅವರು ಆ ಘಟಸರ್ಪನಿಗೆ ನಮಸ್ಕಾರ ಮಾಡುವವರಾದರು. ಇದಲ್ಲದೆ ಆ ಮೃಗಕ್ಕೂ ನಮಸ್ಕಾರ ಮಾಡಿ - ಈ ಮೃಗಕ್ಕೆ ಸಮಾನರು ಯಾರು? ಇದರ ಮೇಲೆ ಯುದ್ಧಮಾಡುವದಕ್ಕೆ ಯಾರು ಶಕ್ತರು? ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಘಟಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವನಾದ್ದರಿಂದ ಅವರು ಆ ಘಟಸರ್ಪನಿಗೆ ಆರಾಧನೆ ಮಾಡಿದರು. ಇದಲ್ಲದೆ ಆ ಮೃಗಕ್ಕೂ ಆರಾಧನೆ ಮಾಡಿ, “ಈ ಮೃಗಕ್ಕೆ ಸಮಾನರು ಯಾರು? ಇದರ ವಿರುದ್ಧ ಯುದ್ಧ ಮಾಡುವುದಕ್ಕೆ ಯಾರು ಶಕ್ತರು?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಜನರು ಆ ಮೃಗವನ್ನು ಮಾತ್ರವಲ್ಲ, ಅದಕ್ಕೆ ಅಧಿಕಾರವನ್ನು ಕೊಟ್ಟ ಘಟಸರ್ಪವನ್ನೂ ಆರಾಧಿಸಿದರು. ಮೃಗವನ್ನು ಕುರಿತು, “ಈ ಮೃಗಕ್ಕೆ ಸಮಾನರು ಯಾರು? ಇದರೊಡನೆ ಯುದ್ಧಮಾಡಬಲ್ಲವರು ಯಾರು?” ಎಂದು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆ ಘಟಸರ್ಪವು ತನ್ನ ಶಕ್ತಿಯನ್ನೆಲ್ಲಾ ಆ ಮೃಗಕ್ಕೆ ನೀಡಿದ್ದರಿಂದ ಜನರೆಲ್ಲರೂ ಆ ಸರ್ಪವನ್ನೂ ಆ ಮೃಗವನ್ನೂ ಆರಾಧಿಸಿ, “ಮೃಗಕ್ಕಿಂತಲೂ ಅಧಿಕ ಬಲಶಾಲಿಗಳು ಯಾರಿದ್ದಾರೆ? ಅದರ ವಿರುದ್ಧ ಯಾರು ಹೋರಾಡಬಲ್ಲರು?” ಎಂದು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಜನರು ಘಟಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟಿದ್ದರಿಂದ, ಆ ಘಟಸರ್ಪನನ್ನು ಆರಾಧಿಸಿದರು. ಇದಲ್ಲದೆ ಆ ಮೃಗವನ್ನೂ ಆರಾಧಿಸಿ, “ಈ ಮೃಗಕ್ಕೆ ಸಮಾನರು ಯಾರು? ಇದರೊಡನೆ ಯುದ್ಧಮಾಡಬಲ್ಲವರು ಯಾರು?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಸಗ್ಳೆಜಾನಾನಿ ಭಯಾನಕ್ ಸಾಪಾಚೆ ಆರಾದಾನ್ ಕರ್ಲ್ಯಾನಿ, ಕಶ್ಯಾಕ್ ಮಟ್ಲ್ಯಾರ್ ತೆನಿ ಅಪ್ನಾಚೊ ಸಗ್ಳೊ ಅದಿಕಾರ್ ತ್ಯಾ ಭಯಾನಕ್ ಸಾಪ್ ದಿಲ್ಲ್ಯಾನ್. ತೆನಿ, ಹ್ಯಾ ಭಯಾನಕ್ ಸಾಪ್ ಸರ್ಕೆ ಕೊನ್ ಹಾಯ್? ಹೆಚ್ಯಾ ವಾಂಗ್ಡಾ ಕುಸ್ತಿ ಧರುನ್ ಕೊನಾಕ್ ಹೊತಾ? ಮನುನ್ಗೆತ್ ಭಯಾನಕ್ ಸಾಪ್‍ಬಿ ಆರಾದನ್ ಕರ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 13:4
18 ತಿಳಿವುಗಳ ಹೋಲಿಕೆ  

ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು. ಅದಕ್ಕೆ ಘಟಸರ್ಪನು ಶಕ್ತಿಯನ್ನೂ ಸಿಂಹಾಸನವನ್ನೂ ಮಹಾ ಅಧಿಕಾರವನ್ನೂ ಕೊಟ್ಟನು.


ಅವಳ ದಹನದಿಂದೇರುವ ಹೊಗೆಯನ್ನು ನೋಡುತ್ತಾ - ಈ ಮಹಾ ಪಟ್ಟಣಕ್ಕೆ ಸಮಾನವಾದದ್ದು ಯಾವದು ಎಂದು ಕೂಗಿ ಹೇಳಿದರು.


ಇದಲ್ಲದೆ ಆ ಮೃಗದ ವಿಗ್ರಹಕ್ಕೆ ಜೀವಕೊಡುವ ಸಾಮರ್ಥ್ಯವು ಇದಕ್ಕೆ ದೊರೆಯಿತು. ಆ ಮೃಗದ ವಿಗ್ರಹವು ಮಾತಾಡುವದು; ತನಗೆ ನಮಸ್ಕರಿಸದವರೆಲ್ಲರಿಗೂ ಮರಣದಂಡನೆ ಆಗುವಂತೆ ಮಾಡುವದು.


ಅದೇನಂದರೆ ಕೆಂಪಾದ ಮಹಾ ಘಟಸರ್ಪವಿತ್ತು; ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು; ಅದರ ತಲೆಗಳ ಮೇಲೆ ಏಳು ಮಕುಟಗಳಿದ್ದವು.


ಯಾವದು ದೇವರೆನಿಸಿಕೊಳ್ಳುತ್ತದೋ ಯಾವದು ಪೂಜೆ ಹೊಂದುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಹೇಳಿಕೊಂಡು ದೇವರ ಗರ್ಭಗುಡಿಯಲ್ಲೇ ಕೂತುಕೊಳ್ಳುತ್ತಾನೆ.


ಯೆಹೋವನೇ, ದೇವರುಗಳಲ್ಲಿ ನಿನ್ನ ಸಮಾನನು ಯಾವನು? ಪರಿಶುದ್ಧತ್ವದಿಂದ ಸರ್ವೋತ್ತಮನೂ ಪ್ರಖ್ಯಾತ ಕೃತ್ಯಗಳನ್ನು ಮಾಡಿರುವದರಿಂದ ಭಯಂಕರನೂ ಅದ್ಭುತಗಳನ್ನು ನಡಿಸುವವನೂ ಆಗಿರುವ ನಿನಗೆ ಸಮಾನನು ಎಲ್ಲಿ?


ಅವರು ಯಜ್ಞದ ಕುರಿಯಾದಾತನ ಮೇಲೆ ಯುದ್ಧಮಾಡುವರು, ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವದರಿಂದ ಅವರನ್ನು ಜಯಿಸುವನು; ಮತ್ತು ದೇವರು ಕರೆದವರೂ ದೇವರಾದುಕೊಂಡವರೂ ನಂಬಿಗಸ್ತರೂ ಆಗಿರುವ ಆತನ ಕಡೆಯವರು ಆ ಜಯದಲ್ಲಿ ಪಾಲುಗಾರರಾಗುವರು.


ಉಪದ್ರವಗಳಿಂದ ಸಾಯದೆ ಉಳಿದ ಜನರು ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು ದೇವರ ಕಡೆಗೆ ತಿರುಗಲಿಲ್ಲ; ಅವರು ದೆವ್ವಗಳ ಪೂಜೆಯನ್ನೂ ಬಂಗಾರ ಬೆಳ್ಳಿ ತಾಮ್ರ ಕಲ್ಲು ಮರ ಇವೇ ಮುಂತಾದವುಗಳಿಂದ ಮಾಡಲ್ಪಟ್ಟು ನೋಡಲಾರದೆ ಕೇಳಲಾರದೆ ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ.


ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಸುವಾರ್ತೆಯ ಪ್ರಕಾಶವು ಉದಯವಾಗಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದನು.


ಇಸ್ರಾಯೇಲ್ಯರು ಅವನನ್ನು ನೋಡಿ ಬಹಳವಾಗಿ ಭಯಪಟ್ಟು ಅಲ್ಲಿಂದ ಓಡಿಹೋದರು.


ಆ ದೇಶದವರು ಅನಾಕ್ಯರೆಂಬ ಬಲಿಷ್ಠರಾದ ಉನ್ನತಪುರುಷರು. ಅವರ ವಿಷಯ ನಿಮಗೆ ತಿಳಿದೇ ಇದೆ; ಅನಾಕ್ಯರ ಮುಂದೆ ನಿಲ್ಲಬಲ್ಲವರು ಯಾರಿದ್ದಾರೆ ಎಂಬ ಮಾತನ್ನು ಕೇಳಿದ್ದೀರಷ್ಟೆ.


ನನ್ನನ್ನು ಯಾರಿಗೆ ಸರಿಕಟ್ಟಿ ಹೋಲಿಸೀರಿ, ಇಬ್ಬರೂ ಸಮಾನರೆಂದು ನನ್ನನ್ನು ಯಾರೊಡನೆ ಸಮಮಾಡೀರಿ?


ಅದರ ಬಾಲವು ಆಕಾಶದಲ್ಲಿರುವ ನಕ್ಷತ್ರಗಳೊಳಗೆ ಮೂರರಲ್ಲೊಂದು ಭಾಗವನ್ನು ಎಳೆದು ಭೂವಿುಗೆ ಹಾಕಿತು. ಹೆರುತ್ತಿದ್ದ ಆ ಸ್ತ್ರೀಯು ಹೆತ್ತಕೂಡಲೆ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟಸರ್ಪವು ಅಲ್ಲೇ ಕಾದುಕೊಂಡಿತ್ತು.


ಮತ್ತೊಂದು ಮೃಗವು ಭೂವಿುಯೊಳಗಿಂದ ಬರುವದನ್ನು ಕಂಡೆನು. ಇದಕ್ಕೆ ಟಗರಿಗಿರುವಂತೆ ಎರಡು ಕೊಂಬುಗಳಿದ್ದವು; ಘಟಸರ್ಪದಂತೆ ಮಾತಾಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು