Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 13:7 - ಕನ್ನಡ ಸತ್ಯವೇದವು J.V. (BSI)

7 ಇದಲ್ಲದೆ ದೇವಜನರ ಮೇಲೆ ಯುದ್ಧಮಾಡಿ ಅವರನ್ನು ಜಯಿಸುವದಕ್ಕೆ ಅದಕ್ಕೆ ಅಧಿಕಾರ ಕೊಡಲ್ಪಟ್ಟಿತು. ಮತ್ತು ಸಕಲ ಕುಲ ಪ್ರಜೆ ಭಾಷೆ ಜನಾಂಗಗಳ ಮೇಲೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇದಲ್ಲದೆ ದೇವಜನರ ಮೇಲೆ ಯುದ್ಧ ಮಾಡಿ ಅವರನ್ನು ಜಯಿಸುವುದಕ್ಕೆ ಅದಕ್ಕೆ ಅಧಿಕಾರ ಕೊಡಲ್ಪಟ್ಟಿತು ಮತ್ತು ಸಕಲ ಕುಲ, ಜನ, ಭಾಷೆ, ಜನಾಂಗಗಳ ಮೇಲೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇದಲ್ಲದೆ, ದೇವಜನರ ವಿರುದ್ಧ ಯುದ್ಧಮಾಡಿ, ಜಯಗಳಿಸುವಂತೆ ಅದಕ್ಕೆ ಅವಕಾಶವನ್ನು ಕೊಡಲಾಯಿತು. ಸಕಲ ದೇಶ, ಭಾಷೆ, ಕುಲ, ಗೋತ್ರಗಳ ಮೇಲೆ ಅದಕ್ಕೆ ಅಧಿಕಾರವನ್ನು ನೀಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರ ಪರಿಶುದ್ಧ ಜನರ ವಿರುದ್ಧ ಯುದ್ಧಮಾಡಿ, ಅವರನ್ನು ಸೋಲಿಸುವ ಶಕ್ತಿಯನ್ನು ಮೃಗಕ್ಕೆ ನೀಡಲಾಯಿತು. ಸಕಲ ಕುಲ, ಪ್ರಜೆ, ಭಾಷೆ ಮತ್ತು ಜನಾಂಗಗಳ ಮೇಲಿನ ಅಧಿಕಾರವನ್ನು ಆ ಮೃಗಕ್ಕೆ ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇದಲ್ಲದೆ ಅದಕ್ಕೆ ಪರಿಶುದ್ಧರ ಮೇಲೆ ಯುದ್ಧಮಾಡಿ, ಅವರನ್ನು ಜಯಿಸುವುದಕ್ಕೆ ಬಲವು ಕೊಡಲಾಯಿತು ಮತ್ತು ಸಕಲ ಕುಲ, ಪ್ರಜೆ, ಭಾಷೆ, ರಾಷ್ಟ್ರಗಳ ಮೇಲೆ ಅದಕ್ಕೆ ಅಧಿಕಾರವು ಸಹ ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ದೆವಾಚ್ಯಾ ಲೊಕಾಂಚ್ಯಾ ವಿರೊದ್ ಝಗ್ಡುಕ್ ತೆಕಾ ಅದಿಕಾರ್ ದಿಲ್ಲೊ ಹೊತ್ತೊ, ಸಗ್ಳ್ಯಾ ಕುಳಿಯಾಂಚ್ಯಾ, ದೆಶಾಂಚ್ಯಾ, ಘರಾನ್ಯಾಚ್ಯಾ, ಅನಿ ಬಾಶಾಂಚ್ಯಾ ಲೊಕಾಂಚ್ಯಾ ವರ್ತಿ ತೆಕಾ ಅದಿಕಾರ್ ದಿಲ್ಲೊ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 13:7
20 ತಿಳಿವುಗಳ ಹೋಲಿಕೆ  

ನಾನು ನೋಡುತ್ತಿದ್ದ ಹಾಗೆ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ ದೇವಭಕ್ತರೊಂದಿಗೆ ಯುದ್ಧಮಾಡಿ


ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದನಂತರ ಅಧೋಲೋಕದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು.


ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟು


ಪರಾತ್ಪರನಿಗೆ ವಿರುದ್ಧವಾಗಿ ಕೊಚ್ಚಿಕೊಂಡು ಪರಾತ್ಪರನ ಭಕ್ತರನ್ನು ಸವೆಯಿಸಿ ಕಟ್ಟಳೆಯ ಕಾಲಗಳನ್ನೂ ಧರ್ಮವಿಧಿಗಳನ್ನೂ ಮಾರ್ಪಡಿಸಲು ಮನಸ್ಸುಮಾಡುವನು; ಆ ಭಕ್ತರು ಒಂದುಕಾಲ ಎರಡುಕಾಲ ಅರ್ಧಕಾಲ ಅವನ ಕೈವಶವಾಗಿರುವರು.


ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ಮೀಕಾಯೇಲನು ಆ ಕಾಲದಲ್ಲಿ ಏಳುವನು; ಮೊಟ್ಟ ಮೊದಲು ಜನಾಂಗವು ಉಂಟಾದಂದಿನಿಂದ ಅಂದಿನವರೆಗೆ ಸಂಭವಿಸದಂಥ ಸಂಕಟವು ಸಂಭವಿಸುವದು; ಆಗ ನಿನ್ನ ಜನರೊಳಗೆ ಯಾರ ಹೆಸರುಗಳು [ಜೀವಬಾಧ್ಯರ] ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು.


ಇನ್ನೂ ಆ ದೇವದೂತನು ನನಗೆ ಹೇಳಿದ್ದು - ಆ ಜಾರಸ್ತ್ರೀಯು ವಾಸಿಸಿರುವ ನೀರುಗಳನ್ನು ಕಂಡಿಯಲ್ಲ? ಅವು ಪ್ರಜೆ ಸಮೂಹ ಜನ ಭಾಷೆಗಳನ್ನು ಸೂಚಿಸುತ್ತವೆ.


ಜನಾಂಗಗಳು ಕೋಪಿಸಿಕೊಂಡವು, ನಿನ್ನ ಕೋಪವೂ ಪ್ರಕಟವಾಯಿತು. ಸತ್ತವರು ತೀರ್ಪುಹೊಂದುವ ಸಮಯ ಬಂದದೆ; ನೀನು ನಿನ್ನ ದಾಸರಾದ ಪ್ರವಾದಿಗಳಿಗೂ ದೇವಜನರಿಗೂ ನಿನ್ನ ನಾಮಕ್ಕೆ ಭಯಪಡುವ ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲವನ್ನು ಕೊಟ್ಟು ಲೋಕನಾಶಕರನ್ನು ನಾಶಮಾಡುವಿ ಎಂದು ಆತನನ್ನು ಆರಾಧಿಸಿದರು.


ಅದಕ್ಕೆ ಯೇಸು - ಮೇಲಣಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪ ಉಂಟು ಅಂದನು.


ಆಮೇಲೆ - ಇನ್ನೂ ನೀನು ಅನೇಕವಾಗಿರುವ ಪ್ರಜೆ ಜನ ಭಾಷೆ ರಾಜ ಇವರ ವಿಷಯದಲ್ಲಿ ಪ್ರವಾದನೆ ಹೇಳಬೇಕೆಂದು ನನಗೆ ತಿಳಿಸಲ್ಪಟ್ಟಿತು.


ಅವರು ಹೊಸ ಹಾಡನ್ನು ಹಾಡುತ್ತಾ - ನೀನು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವದಕ್ಕೆ ಯೋಗ್ಯನೇ; ನೀನು ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿ;


ಇವೆಲ್ಲವುಗಳ ಅಧಿಕಾರವನ್ನೂ ಇವುಗಳ ವೈಭವವನ್ನೂ ನಿನಗೆ ಕೊಡುವೆನು; ಇದೆಲ್ಲಾ ನನಗೆ ಕೊಟ್ಟದೆ, ಇದನ್ನು ನನ್ನ ಮನಸ್ಸು ಬಂದವನಿಗೆ ಕೊಡುತ್ತೇನೆ;


ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೆ ಉಳಿಸಿದೆನು.


ಇಗೋ, ನಾನು ಬಡಗಣ ಜನಾಂಗಗಳನ್ನೆಲ್ಲಾ ಕರೆಯಿಸಿ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡಿ ಇವರೆಲ್ಲರನ್ನು ಈ ದೇಶದ ಮೇಲೂ ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ ಅವುಗಳನ್ನು ತುಂಬಾ ಹಾಳುಗೈದು ಬೆರಗಿನ ಸಿಳ್ಳಿಗೆ ಗುರಿಪಡಿಸಿ ನಿತ್ಯನಾಶನಕ್ಕೆ ಈಡುಮಾಡುವೆನು.


ಇದನ್ನು ನೀನು ಕೇಳಿಲ್ಲವೋ? ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದೆನು; ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದದರಿಂದ ಕೋಟೆಕೊತ್ತಲುಗಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವದು ನಿನಗೆ ಸಾಧ್ಯವಾಯಿತು;


ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೇ? ಗರಗಸವು ಆಡಿಸುವವನಿಗೆ ಪ್ರತಿಯಾಗಿ ತನ್ನನ್ನು ಹೆಚ್ಚಿಸಿಕೊಂಡೀತೇ? ಎತ್ತಿಕೊಂಡವನನ್ನು ಕೋಲು ಬೀಸಿದಂತಾಯಿತು, ಮರಕ್ಕಿಂತ ಶ್ರೇಷ್ಠನಾಗಿರುವ ಮನುಷ್ಯನನ್ನು ದೊಣ್ಣೆಯು ಎತ್ತಿಕೊಂಡ ಹಾಗಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು