Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 14:15 - ಕನ್ನಡ ಸತ್ಯವೇದವು J.V. (BSI)

15 ಆಗ ದೂತನಾದ ಮತ್ತೊಬ್ಬನು ದೇವಾಲಯದೊಳಗಿಂದ ಬಂದು ಮೇಘದ ಮೇಲೆ ಕುಳಿತಿದ್ದಾತನಿಗೆ - ಭೂವಿುಯ ಪೈರು ಮಾಗಿ ಒಣಗಿದೆ; ಕೊಯ್ಯುವ ಕಾಲ ಬಂತು; ನಿನ್ನ ಕುಡುಗೋಲನ್ನು ಹಾಕಿ ಕೊಯ್ಯಿ ಎಂದು ಮಹಾ ಶಬ್ದದಿಂದ ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಮತ್ತೊಬ್ಬ ದೂತನು ದೇವಾಲಯದೊಳಗಿನಿಂದ ಬಂದು ಮೇಘದ ಮೇಲೆ ಕುಳಿತಿದ್ದಾತನಿಗೆ, “ಭೂಮಿಯ ಪೈರು ಮಾಗಿದೆ, ಕೊಯ್ಯುವ ಕಾಲ ಬಂದಿದೆ. ನಿನ್ನ ಕುಡುಗೋಲನ್ನು ಹಾಕಿ ಪೈರನ್ನು ಕೊಯ್ಯಿ” ಎಂದು ಮಹಾಧ್ವನಿಯಿಂದ ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇನ್ನೊಬ್ಬ ದೇವದೂತನು ದೇವಮಂದಿರದಿಂದ ಹೊರಗೆ ಬಂದನು. ಈತನು ಮೋಡದ ಮೇಲೆ ಕುಳಿತಿದ್ದ ಅವನನ್ನು ಉದ್ದೇಶಿಸಿ, “ಭೂಮಿಯ ಫಸಲು ಮಾಗಿದೆ, ಕೊಯ್ಲಿನ ಕಾಲ ಬಂದಿದೆ. ನಿನ್ನ ಕುಡುಗೋಲನ್ನು ತೆಗೆದು ಕೊಯಿಲು ಮಾಡಲು ಆರಂಭಿಸು,” ಎಂದು ಗಟ್ಟಿಯಾಗಿ ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಗ ಮತ್ತೊಬ್ಬ ದೇವದೂತನು ಆಲಯದಿಂದ ಹೊರಗೆ ಬಂದನು. ಈ ದೇವದೂತನು ಮೋಡದ ಮೇಲೆ ಕುಳಿತಿರುವಾತನಿಗೆ, “ನಿನ್ನ ಕುಡುಗೋಲನ್ನು ತೆಗೆದುಕೊಂಡು ಭೂಮಿಯ ಫಸಲನ್ನು ಒಟ್ಟುಗೂಡಿಸು. ಯಾಕೆಂದರೆ ಸುಗ್ಗಿಕಾಲವು ಬಂದಿದೆ. ಭೂಮಿಯ ಫಸಲು ಮಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಮತ್ತೊಬ್ಬ ದೂತನು ದೇವಾಲಯದೊಳಗಿಂದ ಬಂದು ಮೇಘದ ಮೇಲೆ ಕುಳಿತಿದ್ದವರಿಗೆ, “ಭೂಮಿಯ ಪೈರು ಮಾಗಿದೆ. ಕೊಯ್ಯುವ ಕಾಲ ಬಂದಿರುವುದರಿಂದ, ನಿನ್ನ ಕುಡುಗೋಲನ್ನು ಹಾಕಿ ಕೊಯ್ಯಿ!” ಎಂದು ಮಹಾಧ್ವನಿಯಿಂದ ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತನ್ನಾ ಅನಿಎಕ್ ದೆವ್‍ದುತಾ ಗುಡಿತ್ನಾ ಭಾಯ್ರ್ ಯೆಲೊ, ಅನಿ ತ್ಯಾ ಮೊಡಾ ವರ್ತಿ ಬಸಲ್ಲ್ಯಾಕ್ ಮೊಟ್ಯಾನ್, “ತುಜೊ ಧಾರ್‍ಲೊ ಇಳೊ ವಾಪರ್ ಅನಿ ಪಿಕ್ ಕಾತರ್ ಕಶ್ಯಾಕ್ ಮಟ್ಲ್ಯಾರ್ ಜಿಮ್ನಿಚ್ಯಾ ಕಾತ್ರನಿಚೊ ಎಳ್ ಯೆವ್ನ್ ಪಾವ್ಲಾ!” ಮನುನ್ ಬೊಬ್ ಮಾರುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 14:15
20 ತಿಳಿವುಗಳ ಹೋಲಿಕೆ  

[ಯೆಹೋವನ ಶೂರರೇ,] ಕುಡುಗೋಲನ್ನು ಹಾಕಿರಿ, ಫಲವು ಪಕ್ವವಾಗಿದೆ; ಬನ್ನಿರಿ, ತುಳಿಯಿರಿ; ದ್ರಾಕ್ಷೆಯ ಆಲೆಯು ಭರ್ತಿಯಾಗಿದೆ, ತೊಟ್ಟಿಗಳು ತುಂಬಿತುಳುಕುತ್ತಿವೆ; ಜನಾಂಗಗಳ ದುಷ್ಟತನವು ವಿಪರೀತವೇ ಸರಿ.


ಆದರೆ ಫಲಮಾಗಿದ ಕೂಡಲೆ ಅವನು ಸುಗ್ಗಿ ಕಾಲ ಬಂತೆಂದು ಕೊಯಿಸುತ್ತಾನೆ ಅಂದನು.


ಅದನ್ನು ಬಿತ್ತುವ ವೈರಿ ಅಂದರೆ ಸೈತಾನನು; ಸುಗ್ಗೀಕಾಲ ಅಂದರೆ ಯುಗದ ಸಮಾಪ್ತಿ; ಕೊಯ್ಯುವವರು ಅಂದರೆ ದೇವದೂತರು.


ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಬಾಬೆಲ್ ಪುರಿಯು ತುಳಿದು ತುಳಿದು ಸರಿಮಾಡುತ್ತಿರುವ ಕಣದಂತಿದೆ; ಸ್ವಲ್ಪ ಕಾಲವಾದ ಮೇಲೆ ಒಕ್ಕುವ ಸಮಯವು ಅದಕ್ಕೆ ಸಂಭವಿಸುವದು.


ತರುವಾಯ ಬೆಂಕಿಗೆ ಅಧಿಕಾರಿಯಾದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು ಆ ಹದವಾದ ಕುಡುಗೋಲಿನವನಿಗೆ - ನಿನ್ನ ಹದವಾದ ಕುಡುಗೋಲನ್ನು ಹಾಕಿ ಭೂವಿುಯ ದ್ರಾಕ್ಷೇಗೊಂಚಲುಗಳನ್ನು ಕೊಯ್ಯಿ; ಅದರ ಹಣ್ಣುಗಳು ಪೂರಾ ಮಾಗಿವೆ ಎಂದು ಮಹಾಶಬ್ದದಿಂದ ಕೂಗಿದನು.


ಸುಗ್ಗೀಕಾಲದ ತನಕ ಎರಡೂ ಕೂಡ ಬೆಳೆಯಲಿ; ಸುಗ್ಗೀಕಾಲದಲ್ಲಿ ನಾನು ಕೊಯ್ಯುವವರಿಗೆ - ಮೊದಲು ಹಣಜಿಯನ್ನು ಆರಿಸಿತೆಗೆದು ಅದನ್ನು ಸುಡುವದಕ್ಕೆ ಹೊರೆಕಟ್ಟಿಹಾಕಿ, ಗೋದಿಯನ್ನು ನನ್ನ ಕಣಜಕ್ಕೆ ತುಂಬಿರಿ ಎಂದು ಹೇಳುವೆನು ಅಂದನು.


ಏಳನೆಯವನು ತನ್ನ ಪಾತ್ರೆಯಲ್ಲಿದ್ದದ್ದನ್ನು ವಾಯುಮಂಡಲದ ಮೇಲೆ ಹೊಯ್ಯಲು ದೇವಾಲಯದಲ್ಲಿರುವ ಸಿಂಹಾಸನದ ಕಡೆಯಿಂದ ಮಹಾ ಶಬ್ದವು ಉಂಟಾಗಿ - ಆಯಿತು ಎಂದು ಹೇಳಿತು.


ಒಳ್ಳೇದು, ನೀವು ನಿಮ್ಮ ಹಿರಿಯರ ಪಾಪದ ಅಳತೆಯನ್ನು ಪೂರ್ತಿಮಾಡಿರಿ.


ಅದರೊಳಗಿಂದ ಏಳು ಉಪದ್ರವಗಳನ್ನು ಕೈಯಲ್ಲಿ ಹಿಡಿದಿರುವ ಆ ಏಳು ಮಂದಿ ದೇವದೂತರು ಬಂದರು; ಅವರು ಪ್ರಕಾಶವೂ ನಿರ್ಮಲವೂ ಆದ ನಾರುಮಡಿಯನ್ನು ಧರಿಸಿಕೊಂಡಿದ್ದರು; ತಮ್ಮ ಎದೆಗಳಿಗೆ ಚಿನ್ನದ ಪಟ್ಟಿಯನ್ನು ಕಟ್ಟಿಕೊಂಡಿದ್ದರು.


ನಾನು ನೋಡಲಾಗಿ ಇಗೋ, ಪ್ರಕಾಶಮಾನವಾದ ಒಂದು ಮೇಘವು ನನಗೆ ಕಾಣಿಸಿತು. ಆ ಮೇಘದ ಮೇಲೆ ಮನುಷ್ಯಕುಮಾರನಂತಿದ್ದವನೊಬ್ಬನು ಕೂತಿರುವದನ್ನು ಕಂಡೆನು. ಆತನ ತಲೆಯ ಮೇಲೆ ಚಿನ್ನದ ಕಿರೀಟವೂ ಆತನ ಕೈಯಲ್ಲಿ ಹದವಾದ ಕುಡುಗೋಲೂ ಇದ್ದವು.


ಅವರು - ಒಡೆಯನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂನಿವಾಸಿಗಳು ನಮ್ಮನ್ನು ಕೊಂದದ್ದಕ್ಕಾಗಿ ನೀನು ಎಷ್ಟು ಕಾಲದವರೆಗೂ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ? ಎಂದು ಮಹಾಶಬ್ದದಿಂದ ಕೂಗಿದರು.


ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅಡ್ಡಿಮಾಡುತ್ತಾರೆ; ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಪರಿಪೂರ್ಣಮಾಡುವದಕ್ಕೆ ಹೋಗುತ್ತಾರೆ. ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.


ಈ ಮೃಗವು ಮೊದಲನೆಯ ಮೃಗದ ಅಧಿಕಾರವನ್ನೆಲ್ಲಾ ಅದರ ಸನ್ನಿಧಿಯಲ್ಲೇ ನಡಿಸುತ್ತದೆ. ಇದು ಮರಣಕರವಾದ ಗಾಯ ವಾಸಿಯಾದ ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ನಮಸ್ಕರಿಸುವಂತೆ ಮಾಡುವಂಥದಾಗಿದೆ.


ಚೀಯೋನಿನ ಧರ್ಮವು ಪ್ರಕಾಶಗೊಳ್ಳುವ ತನಕ, ಯೆರೂಸಲೇವಿುನ ರಕ್ಷಣೆಯು ದೀವಿಟಿಗೆಯಂತೆ ಪ್ರಜ್ವಲಿಸುವವರೆಗೆ ನಾನು ಮೌನವಾಗಿರದೆ ಚೀಯೋನಿನ ಹಿತವನ್ನು ಲಕ್ಷಿಸುತ್ತಿರುವೆನು; ಸುಮ್ಮನಿರದೆ ಯೆರೂಸಲೇವಿುನ ಕ್ಷೇಮವನ್ನು ಚಿಂತಿಸುತ್ತಿರುವೆನು.


ಅಬ್ರಾಮನು ಯೆಹೋವನನ್ನು ನಂಬಿದನು; ಯೆಹೋವನು ಅವನ ನಂಬಿಕೆಯನ್ನು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಿದನು.


ಆಗ ಪರಲೋಕದಲ್ಲಿರುವ ದೇವಾಲಯವು ತೆರೆಯಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ವಿುಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.


ಮೇಘದ ಮೇಲೆ ಕುಳಿತಿದ್ದಾತನು ತನ್ನ ಕುಡುಗೋಲನ್ನು ಹಾಕಿ ಭೂವಿುಯ ಪೈರನ್ನು ಕೊಯಿದನು; ಭೂವಿುಯ ಪೈರು ಕೊಯ್ಯಲ್ಪಟ್ಟಿತು.


ಮತ್ತೊಬ್ಬ ದೂತನು ಪರಲೋಕದಲ್ಲಿರುವ ದೇವಾಲಯದೊಳಗಿಂದ ಬಂದನು. ಅವನಲ್ಲಿ ಸಹ ಹದವಾದ ಕುಡುಗೋಲು ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು