Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 14:4 - ಕನ್ನಡ ಸತ್ಯವೇದವು J.V. (BSI)

4 ಸ್ತ್ರೀ ಸಹವಾಸದಿಂದ ಮಲಿನರಾಗದವರು ಇವರೇ; ಇವರು ಕನ್ಯೆಯರಂತೆ ನಿಷ್ಕಳಂಕರು. ಯಜ್ಞದ ಕುರಿಯಾದಾತನು ಎಲ್ಲಿ ಹೋದರೂ ಇವರು ಆತನ ಹಿಂದೆ ಹೋಗುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ ಪ್ರಥಮಫಲದಂತಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇವರು ಕನ್ಯೆಯರಂತೆ ಕಳಂಕರಹಿತರು, ಸ್ತ್ರೀ ಸಹವಾಸದಿಂದ ಮಲಿನರಾಗದವರು. ಯಜ್ಞದ ಕುರಿಮರಿಯಾದಾತನು ಎಲ್ಲಿ ಹೋದರೂ ಇವರು ಆತನನ್ನು ಹಿಂಬಾಲಿಸುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ ಪ್ರಥಮಫಲದಂತಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇವರು ಸ್ತ್ರೀಸಂಸರ್ಗದಿಂದ ಮಲಿನರಾಗದವರು; ಕನ್ಯೆಯರಂತೆ ಕಳಂಕರಹಿತರು; ಇವರು ಯಜ್ಞದ ಕುರಿಮರಿ ಹೋದೆಡೆಯಲ್ಲೆಲ್ಲಾ ಹಿಂಬಾಲಿಸುವವರು; ದೇವರಿಗೂ ಯಜ್ಞದ ಕುರಿಮರಿಗೂ ಅರ್ಪಿತವಾದ ಪ್ರಥಮ ಫಲದಂತೆ ಮಾನವಕುಲದವರಲ್ಲಿ ವಿಮೋಚನೆಯನ್ನು ಹೊಂದಿದವರು ಇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇವರು ಸ್ತ್ರೀ ಸಹವಾಸದಿಂದ ಮಲಿನರಾಗದೆ ಕನ್ನಿಕೆಯರಂತೆ ಉಳಿದಿದ್ದರು. ಕುರಿಮರಿಯಾದಾತನು ಹೋದಕಡೆಯಲ್ಲೆಲ್ಲಾ ಅವರು ಆತನನ್ನು ಹಿಂಬಾಲಿಸುತ್ತಾರೆ. ಭೂಲೋಕದ ಜನರ ಮಧ್ಯದಿಂದ ಬಿಡುಗಡೆ ಹೊಂದಿದವರೇ 1,44,000 ಮಂದಿ. ದೇವರಿಗೂ ಕುರಿಮರಿಯಾದಾತನಿಗೂ ಅರ್ಪಿತರಾದವರಲ್ಲಿ ಇವರೇ ಮೊದಲಿಗರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಸ್ತ್ರೀ ಸಹವಾಸದಿಂದ ಮಲಿನರಾಗದವರು ಇವರೇ. ಏಕೆಂದರೆ ಇವರು ಕನ್ಯೆಯರಂತೆ ನಿಷ್ಕಳಂಕರು. ಕುರಿಮರಿ ಆಗಿರುವವರು ಹೋದಡೆಯಲ್ಲೆಲ್ಲಾ ಅವರ ಹಿಂದೆ ಹೋಗುವವರು ಇವರೇ. ಇವರು ಮನುಷ್ಯರೊಳಗಿಂದ ಕೊಂಡುಕೊಳ್ಳಲಾಗಿ ದೇವರಿಗೂ ಕುರಿಮರಿಯಾಗಿರುವವರಿಗೂ ಪ್ರಥಮಫಲದಂತಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತೆನಿ ಬಾಯ್ಕಾಮನ್ಸಾನಿಕ್ನಾ ಆಂಗಾಚೊ ಸಮಂದ್ ಕರಿನಸ್ತಾನಾ ಅಪ್ನಾಕುಚ್ ಪವಿತ್ರ್ ಕರುನ್ ಥವ್ನ್ ಘೆವ್ನ್ ಹಾತ್. ತೆನಿ ಲಗಿನ್ ಹೊಲ್ಲೆನಾತ್. ತೆನಿ ಬೊಕ್ಡು ಖೈಯ್ ಜಾತಾ ಥೈ ತ್ಯೆಚ್ಯಾ ಫಾಟ್ನಾ ಜಾತ್ಯಾತ್. ತೆಂಕಾ ಸಗ್ಳ್ಯಾ ಮಾನ್ಸಾಚ್ಯಾಕ್ನಾ ಘೆಟಲ್ಲೆ ಹಾಯ್ ಕುಳಿಯಾನಿತ್ನಾ ಎಚುನ್ ಕಾಡುನ್ ಸುಟ್ಕಾ ಹೊಲ್ಲೆ ಹಾಯ್.ಅಸೆ ತೆಂಕಾ ದೆವಾಕ್ ಅನಿ ಬೊಕ್ಡಾಕ್ ಅದ್ದಿಚೆ ಫಳ್ ಕರುನ್ ಒಪ್ಸುನ್ ದಿಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 14:4
32 ತಿಳಿವುಗಳ ಹೋಲಿಕೆ  

ಆದರೂ ತಮ್ಮ ವಸ್ತ್ರಗಳನ್ನು ಮೈಲಿಗೆ ಮಾಡಿಕೊಳ್ಳದಿರುವ ಸ್ವಲ್ಪ ಜನರು ಸಾರ್ದಿಸಿನೊಳಗೆ ನಿನ್ನಲ್ಲಿದ್ದಾರೆ; ಅವರು ಯೋಗ್ಯರಾಗಿರುವದರಿಂದ ಶುಭ್ರವಸ್ತ್ರಗಳನ್ನು ಧರಿಸಿಕೊಂಡು ನನ್ನ ಜೊತೆಯಲ್ಲಿ ನಡೆಯುವರು.


ಯಾಕಂದರೆ ದೇವರಲ್ಲಿರುವಂಥ ಚಿಂತೆಯಿಂದಲೇ ನಾನು ನಿಮ್ಮ ವಿಷಯದಲ್ಲಿ ಚಿಂತಿಸುತ್ತೇನೆ. ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ಧ ಕನ್ಯೆಯಂತೆ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯಮಾಡಿದೆನಲ್ಲಾ.


ಆತನು ತನ್ನ ಸುಚಿತ್ತದ ಪ್ರಕಾರ ಸತ್ಯಬೋಧನೆಯ ವಾಕ್ಯದಿಂದ ನಮ್ಮನ್ನು ಹುಟ್ಟಿಸಲಾಗಿ ನಾವು ಆತನ ಸೃಷ್ಟಿಗಳಲ್ಲಿ ಪ್ರಥಮಫಲದಂತಾದೆವು.


ಅವರು ಹೊಸ ಹಾಡನ್ನು ಹಾಡುತ್ತಾ - ನೀನು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವದಕ್ಕೆ ಯೋಗ್ಯನೇ; ನೀನು ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿ;


ಯಾವನಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ಹಿಂದೆ ಬರಲಿ; ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನು ಸಹ ಇರುವನು. ಯಾವನಾದರೂ ನನ್ನ ಸೇವೆಯನ್ನು ಮಾಡುವವನಾದರೆ ತಂದೆಯು ಅವನಿಗೆ ಬಹುಮಾನ ಮಾಡುವನು.


ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ; ನಾನು ಅವುಗಳನ್ನು ಬಲ್ಲೆನು; ಅವು ನನ್ನ ಹಿಂದೆ ಬರುತ್ತವೆ.


ಅವರು ಯಜ್ಞದ ಕುರಿಯಾದಾತನ ಮೇಲೆ ಯುದ್ಧಮಾಡುವರು, ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವದರಿಂದ ಅವರನ್ನು ಜಯಿಸುವನು; ಮತ್ತು ದೇವರು ಕರೆದವರೂ ದೇವರಾದುಕೊಂಡವರೂ ನಂಬಿಗಸ್ತರೂ ಆಗಿರುವ ಆತನ ಕಡೆಯವರು ಆ ಜಯದಲ್ಲಿ ಪಾಲುಗಾರರಾಗುವರು.


ನೀನು ಹಿಂದಿನ ಕಾಲದಲ್ಲಿ ಸ್ವಕುಲವಾಗಿರಬೇಕೆಂದು ಬಿಡಿಸಿ ಸಂಪಾದಿಸಿಕೊಂಡ ನಿನ್ನ ಮಂಡಲಿಯನ್ನು ಜ್ಞಾಪಿಸಿಕೋ; ನಿನ್ನ ವಾಸಸ್ಥಾನವಾಗಿದ್ದ ಚೀಯೋನ್‍ಗಿರಿಯನ್ನು ಮರೆಯಬೇಡ.


ನೀವು ನಿಮ್ಮ ಸ್ವಂತ ಸೊತ್ತಲ್ಲ; ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು; ಆದಕಾರಣ ನಿಮ್ಮ ದೇಹದಲ್ಲಿ ದೇವರ ಪ್ರಭಾವವನ್ನು ಪ್ರಕಾಶಪಡಿಸಿರಿ.


ಯೇಸು ತಿರಿಗಿ ಅವರ ಸಂಗಡ ಮಾತಾಡಲಾರಂಭಿಸಿ - ನಾನೇ ಲೋಕಕ್ಕೆ ಬೆಳಕು; ನನ್ನನ್ನು ಅನುಸರಿಸುವವನು ಕತ್ತಲೆಯಲ್ಲಿ ನಡೆಯದೆ ಜೀವಕೊಡುವ ಬೆಳಕನ್ನು ಹೊಂದಿದವನಾಗಿರುವನು ಎಂದು ಹೇಳಿದನು.


ಇಸ್ರಾಯೇಲು ಯೆಹೋವನ ಬೆಳೆಯ ಪ್ರಥಮಫಲವಾಗಿ ಆತನಿಗೆ ಮೀಸಲಾಗಿತ್ತು; ಅದನ್ನು ತಿಂದುಬಿಟ್ಟವರೆಲ್ಲರೂ ದೋಷಿಗಳಾಗಿ ಕೇಡಿಗೆ ಗುರಿಯಾದರು ಎಂದು ಯೆಹೋವನು ಅನ್ನುತ್ತಾನೆ.


ನೀವಾದರೋ ನಿಮ್ಮನ್ನು ಕತ್ತಲೆಯೊಳಗಿಂದ ಕರೆದು ತನ್ನ ಆಶ್ಚರ್ಯಕರವಾದ ಬೆಳಕಿನಲ್ಲಿ ಸೇರಿಸಿದಾತನ ಗುಣಾತಿಶಯಗಳನ್ನು ಪ್ರಚಾರಮಾಡುವವರಾಗುವಂತೆ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನವೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ.


ದೇವರು ಸಂಪಾದಿಸಿಕೊಂಡ ಜನರಿಗೆ ವಿಮೋಚನೆಯಾಗುವದೆಂಬದಕ್ಕೆ ಪವಿತ್ರಾತ್ಮನು ನಮ್ಮ ಬಾಧ್ಯತೆಗೆ ಸಂಚಕಾರವಾಗಿದ್ದಾನೆ. ಆ ವಿಮೋಚನೆಯು ದೇವರ ಮಹಿಮೆಗೆ ಎಷ್ಟೋ ಪ್ರಖ್ಯಾತಿಯನ್ನು ಉಂಟುಮಾಡುವದು.


ಸ್ತೆಫನನ ಮನೆಯವರು ಅಖಾಯದಲ್ಲಿನ ಪ್ರಥಮಫಲವೆಂದೂ ಅವರು ದೇವಜನರಿಗೆ ಸೇವೆಮಾಡುವದಕ್ಕಾಗಿ ಕೈಹಾಕಿದರೆಂದೂ ನೀವು ಬಲ್ಲಿರಷ್ಟೆ.


ದೇವರು ಸ್ವರಕ್ತದಿಂದ ಸಂಪಾದಿಸಿಕೊಂಡ ಸಭೆಯನ್ನು ಪರಿಪಾಲಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.


ಪೇತ್ರನು ಆತನಿಗೆ - ಸ್ವಾಮೀ, ನಾನು ಯಾಕೆ ಈಗ ನಿನ್ನ ಹಿಂದೆ ಬರಲಾರೆನು? ನಿನಗಾಗಿ ನನ್ನ ಪ್ರಾಣವನ್ನಾದರೂ ಕೊಟ್ಟೇನು ಎಂದು ಹೇಳಲು


ಆಗ ಪರಲೋಕರಾಜ್ಯವು ಆರತಿಗಳನ್ನು ತೆಗೆದುಕೊಂಡು ಮದಲಿಂಗನನ್ನು ಎದುರುಗೊಳ್ಳುವದಕ್ಕೆ ಹೊರಟಂಥ ಹತ್ತು ಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವದು.


ಆಗ ಒಬ್ಬ ಶಾಸ್ತ್ರಿಯು ಹತ್ತರಕ್ಕೆ ಬಂದು ಆತನಿಗೆ - ಗುರುವೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನ ಹಿಂದೆ ಬರುತ್ತೇನೆ ಎಂದು ಹೇಳಲು


ನಿನ್ನ ತೈಲವು ಸುಗಂಧ; ನಿನ್ನ ಹೆಸರು ಸುರಿದ ತೈಲದ ಸುಗಂಧದಂತೆ ವ್ಯಾಪಿಸಿರುವದರಿಂದ ತರುಣಿಯರು ನಿನ್ನನ್ನು ಪ್ರೀತಿಸುವರು.


ಅವರನ್ನು ಮರುಳುಗೊಳಿಸಿ ಮದುವೆಯಾಗಬಾರದೆಂತಲೂ ಇಂಥಿಂಥ ಆಹಾರವನ್ನು ತಿನ್ನಬಾರದೆಂತಲೂ ಹೇಳುವರು. ಆದರೆ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಸಕಲ ವಿಧವಾದ ಆಹಾರವನ್ನೂ ಉಂಟುಮಾಡಿದನು.


ಒಂದು ವೇಳೆ ನೀನು ಮದುವೆಮಾಡಿಕೊಂಡರೂ ಪಾಪವಿಲ್ಲ. ಕನ್ನಿಕೆಯು ಮದುವೆಮಾಡಿಕೊಂಡರೂ ಪಾಪವಿಲ್ಲ. ಆದರೆ ಮದುವೆಮಾಡಿಕೊಂಡವರಿಗೆ ಶರೀರಸಂಬಂಧವಾಗಿ ಕಷ್ಟಸಂಭವಿಸುವದು; ಇದು ನಿಮಗೆ ಉಂಟಾಗಬಾರದೆಂದು ನನ್ನ ಅಪೇಕ್ಷೆ.


ಅಯ್ಯೋ, ಚೀಯೋನಿನಲ್ಲಿ ನೆಮ್ಮದಿಯಾಗಿರುವವರ ಗತಿಯನ್ನು ಏನೆಂದು ಹೇಳಲಿ! ಪ್ರಮುಖಜನಾಂಗದಲ್ಲಿ ಹೆಸರುಗೊಂಡು ಇಸ್ರಾಯೇಲ್ಯರ ನ್ಯಾಯ ವಿಚಾರಕರಾಗಿ ಸಮಾರ್ಯದ ಬೆಟ್ಟದಲ್ಲಿ ನಿಶ್ಚಿಂತರಾಗಿರುವವರ ಪಾಡನ್ನು ಎಂಥದೆನ್ನಲಿ!


ಅರುವತ್ತು ಮಂದಿ ರಾಣಿಯರೂ ಎಂಭತ್ತು ಜನ ಉಪಪತ್ನಿಯರೂ ಲೆಕ್ಕವಿಲ್ಲದ ಯುವತಿಯರೂ ನನಗುಂಟು.


ಆಕೆಯು ಬೂಟೇದಾರೀ ಕಸೂತಿಕೆಲಸದ ವಸ್ತ್ರಗಳನ್ನು ಧರಿಸಿಕೊಂಡು ಸಖಿಯರಾದ ಕನ್ಯೆಯರ ಪರಿವಾರದೊಡನೆ ಅರಸನ ಬಳಿಗೆ ಬರುವಳು.


ತಾಯಿಯ ಗರ್ಭದಿಂದ ನಪುಂಸಕರಾಗಿ ಹುಟ್ಟಿದವರು ಕೆಲವರು ಇದ್ದಾರೆ; ಮನುಷ್ಯರಿಂದ ನಪುಂಸಕರಾಗಿ ಮಾಡಲ್ಪಟ್ಟವರು ಕೆಲವರು ಇದ್ದಾರೆ; ಮತ್ತು ಪರಲೋಕರಾಜ್ಯದ ನಿವಿುತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗಿ ಮಾಡಿಕೊಂಡವರು ಕೆಲವರು ಇದ್ದಾರೆ. ಅಂಗೀಕರಿಸಬಲ್ಲವನು ಅಂಗೀಕರಿಸಲಿ ಎಂದು ಹೇಳಿದನು.


ಅದನ್ನು ಕಳಂಕ ಸುಕ್ಕು ಮುಂತಾದ್ದೊಂದೂ ಇಲ್ಲದ ಕನ್ನಿಕೆಯೋ ಎಂಬಂತೆ ಪರಿಶುದ್ಧವೂ ನಿರ್ದೋಷವೂ ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ವಾಕ್ಯೋಪದೇಶ ಸಹಿತವಾದ ಜಲಸ್ನಾನವನ್ನು ಮಾಡಿಸಿ ಶುದ್ಧಮಾಡಿದನು.


ಪರಲೋಕದಲ್ಲಿ ಹೆಸರು ಬರಸಿಕೊಂಡಿರುವ ಚೊಚ್ಚಲಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ ಸಿದ್ಧಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ


ಪಟ್ಟಣದಲ್ಲಿ ನಾನು ದೇವಾಲಯವನ್ನು ಕಾಣಲಿಲ್ಲ; ಯಾಕಂದರೆ ಸರ್ವಶಕ್ತನಾದ ದೇವರಾಗಿರುವ ಕರ್ತನೂ ಯಜ್ಞದ ಕುರಿಯಾದಾತನೂ ಅದರ ದೇವಾಲಯವಾಗಿದ್ದಾರೆ.


ಪಟ್ಟಣಕ್ಕೆ ಬೆಳಕನ್ನು ಕೊಡುವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಯಜ್ಞದ ಕುರಿಯಾದಾತನೇ ಅದರ ದೀಪವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು