Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 14:8 - ಕನ್ನಡ ಸತ್ಯವೇದವು J.V. (BSI)

8 ಅವನ ಹಿಂದೆ ಎರಡನೆಯವನಾದ ಒಬ್ಬ ದೇವದೂತನು ಬಂದು - ಬಿದ್ದಳು, ಬಿದ್ದಳು, ಬಾಬೆಲೆಂಬ ಮಹಾ ನಗರಿಯು ಬಿದ್ದಳು. ಆಕೆಯು ಸಕಲ ಜನಾಂಗಗಳಿಗೆ ತನ್ನ ಅತಿ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿಸಿದಳು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನ ಹಿಂದೆ ಎರಡನೆಯ ದೇವದೂತನು ಬಂದು, “ಬಿದ್ದಳು! ಬಿದ್ದಳು! ಬಾಬೆಲೆಂಬ ಮಹಾನಗರಿಯು ಬಿದ್ದಳು, ಆಕೆಯು ಸಕಲ ಜನಾಂಗಗಳಿಗೆ ತನ್ನ ಅತಿ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿಸಿದಳು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅನಂತರ ಎರಡನೆಯ ದೇವದೂತನು ಬಂದನು. ಆತನು, “ಪತನ ಹೊಂದಿದಳು, ಪತನ ಹೊಂದಿದಳು ಬಾಬಿಲೋನ್ ಮಹಾನಗರಿ; ಹಾದರವೆಂಬ ಕಾಮೋದ್ರೇಕದ ಮದ್ಯವನು ಸಕಲರಿಗೂ ಕುಡಿಸಿದ ನಗರಿ ಪತನವಾದಳು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಂತರ ಎರಡನೆಯ ದೇವದೂತನು ಮೊದಲನೆಯ ದೇವದೂತನನ್ನು ಹಿಂಬಾಲಿಸುತ್ತಾ, “ಅವಳು ನಾಶವಾದಳು! ಬಾಬಿಲೋನ್ ಎಂಬ ನಗರಿಯು ನಾಶವಾದಳು! ಆಕೆಯು ಸಕಲ ಜನಾಂಗಗಳಿಗೆ ತನ್ನ ಜಾರತ್ವವೆಂಬ ಮತ್ತು ದೇವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಸಿದಳು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವನ ಹಿಂದೆ ಎರಡನೆಯವನಾದ ಒಬ್ಬ ದೇವದೂತನು ಬಂದು, “ ‘ಬಿದ್ದಳು, ಬಾಬಿಲೋನ್ ಮಹಾನಗರಿಯು ಬಿದ್ದಳು!’ ಆಕೆಯು ಸಕಲ ಜನಾಂಗಗಳಿಗೆ ತನ್ನ ಅತ್ಯಾಸಕ್ತಿಯ ಅನೈತಿಕತೆವೆಂಬ ದ್ರಾಕ್ಷಾರಸವನ್ನು ಕುಡಿಸಿದಳು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತ್ಯೆಚ್ಯಾ ಫಾಟೊಫಾಟ್ ದೊನ್ವೆಚೊ ದೆವಾಚೊ ದುತ್ ಯೆಲೊ, ಅನಿ ತೆನಿ,“ತಿ ಪಡ್ಲಾ! ಮೊಟೆ ಬಾಬಿಲೊನ್ ಪಡ್ಲಾ!, ತೆನಿ ಅಪ್ನಾಚೆ ವಾಯ್ನ್ ವೆಭಿಚಾರಾಚೆ ಖಡಕ್ ವಾಯ್ನ್ ಸಗ್ಳ್ಯಾ ಲೊಕಾನಿ ಫಿ ಸರ್ಕೆ ಕರ್ಲಿನ್!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 14:8
17 ತಿಳಿವುಗಳ ಹೋಲಿಕೆ  

ಇಗೋ, ಸವಾರರು, ಜೋಡಿ ಜೋಡಿಯಾಗಿ ಬರುತ್ತಾರೆ ಎಂದು ಕೂಗಿ ಇನ್ನೂ ಹೇಳಿದ್ದೇನಂದರೆ - ಬಾಬೆಲ್ ಬಿತ್ತು, ಬಿತ್ತು! ಅದರ ದೇವತಾವಿಗ್ರಹಗಳನ್ನು ಒಡೆದು ನೆಲಸಮಮಾಡಿಬಿಟ್ಟರು ಎಂಬದೇ.


ಮಹಾ ಪಟ್ಟಣವು ಮೂರು ಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು. ಇದಲ್ಲದೆ ದೇವರು ದೊಡ್ಡ ಬಾಬೆಲನ್ನು ಜ್ಞಾಪಿಸಿಕೊಂಡು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಅವಳಿಗೆ ಕುಡಿಯಲು ಕೊಟ್ಟನು.


ಈ ಸಾಕ್ಷಿಗಳ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಗೂಢಾರ್ಥವಾಗಿ ಸೊದೋಮ್ ಎಂತಲೂ ಐಗುಪ್ತ ಎಂತಲೂ ಹೆಸರುಗಳುಂಟು; ಇವರ ಒಡೆಯನು ಸಹ ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟನು.


ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿ ಎರಡನೆಯ ಸಾರಿ -


ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಅಧಿಕಾರ ಹೊಂದಿರುವ ಮಹಾನಗರಿಯೇ.


ನಿನ್ನ ಗಾಯವು ಗುಣಹೊಂದದು, ನಿನ್ನ ಪೆಟ್ಟು ಗಡಸು; ನಿನ್ನ ಸುದ್ದಿಯನ್ನು ಕೇಳಿದವರೆಲ್ಲರೂ ನಿನಗೆ ಚಪ್ಪಾಳೆಹಾಕುತ್ತಾರೆ; ನಿನ್ನ ಕೆಡುಕಿಗೆ ನಿತ್ಯವೂ ಗುರಿಯಾಗದವರು ಎಲ್ಲಿದ್ದಾರೆ?


ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವದು ಇಗೋ, ಮಹಾಪಟ್ಟಣವಾದ ಈ ಬಾಬೆಲ್ ಎಂದು ಕೊಚ್ಚಿಕೊಂಡನು.


ಯೆಹೋವನು ಬಾಬೆಲಿಗೆ ಬರಮಾಡುವ ವಿಪತ್ತಿನಿಂದ ಆ ಪಟ್ಟಣವೂ ಹೀಗೆಯೇ ಮುಣುಗುವದು, ಮತ್ತೆ ಏಳದು ಎಂದು ಹೇಳು. ಜನಗಳು ಆಯಾಸಗೊಂಡು ದುಡಿದದ್ದು [ಬೆಂಕಿಗೆ ತುತ್ತಾಗುವದು] ಎಂಬ ಮಾತಿನವರೆಗೆ ಯೆರೆಮೀಯನ ಪ್ರವಾದನೆ.


ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡುಬಂದ ದೈವೋಕ್ತಿ.


ಯೆಹೋವನು ಪ್ರವಾದಿಯಾದ ಯೆರೆಮೀಯನಿಂದ ಕಸ್ದೀಯರ ದೇಶವಾದ ಬಾಬೆಲಿನ ವಿಷಯವಾಗಿ ನುಡಿಸಿದ ವಾಕ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು