Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 15:1 - ಕನ್ನಡ ಸತ್ಯವೇದವು J.V. (BSI)

1 ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾಲಕ್ಷಣವು ನನಗೆ ಕಾಣಿಸಿತು. ಏಳು ಮಂದಿ ದೇವದೂತರ ಕೈಯಲ್ಲಿ ಏಳು ಉಪದ್ರವಗಳಿದ್ದವು; ಇವು ಕಡೇ ಉಪದ್ರವಗಳು; ಇವುಗಳಲ್ಲಿ ದೇವರ ರೌದ್ರವು ಮುಗಿದಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾ ಚಿಹ್ನೆಯನ್ನು ನಾನು ನೋಡಿದೆನು. ಏಳು ಮಂದಿ ದೇವದೂತರ ಕೈಯಲ್ಲಿ ಏಳು ಉಪದ್ರವಗಳಿದ್ದವು, ಇವು ಕಡೇ ಉಪದ್ರವಗಳು. ಇವುಗಳೊಂದಿಗೆ ದೇವರ ರೌದ್ರವು ಸಂಪೂರ್ಣವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸ್ವರ್ಗದಲ್ಲಿ ಮತ್ತೊಂದು ಚಿಹ್ನೆಯನ್ನು ಕಂಡೆ. ಅದು ಅತ್ಯಾಶ್ಚರ್ಯಕರವಾಗಿ ಇತ್ತು. ಏಳು ದೇವದೂತರ ಕೈಯಲ್ಲಿ ಏಳು ವಿಪತ್ತುಗಳು ಇದ್ದವು. ಇವು ಅಂತಿಮವಾಗಿ ಬಂದೆರಗುವ ವಿಪತ್ತುಗಳು. ಏಕೆಂದರೆ, ಅವುಗಳೊಡನೆ ದೇವರ ಕೋಪಾಗ್ನಿ ಪೂರ್ತಿಯಾಗಿ ಬಂದೆರಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಂತರ ಪರಲೋಕದಲ್ಲಿ ಮತ್ತೊಂದು ಅದ್ಭುತವನ್ನು ನಾನು ನೋಡಿದೆನು. ಅದು ಮಹಾ ಆಶ್ಚರ್ಯಕರವಾಗಿತ್ತು. ಏಳು ಉಪದ್ರವಗಳನ್ನು ತರುವ ಏಳು ಮಂದಿ ದೇವದೂತರು ಅಲ್ಲಿದ್ದರು. ದೇವರ ಕೋಪವು ಈ ಉಪದ್ರವಗಳೊಂದಿಗೆ ಮುಗಿಯುತ್ತಿದ್ದುದರಿಂದ ಇವು ಕಡೆಯ ಉಪದ್ರವಗಳಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಾನು ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾ ಚಿಹ್ನೆಯನ್ನು ಕಂಡೆನು. ಏಳುಮಂದಿ ದೂತರಲ್ಲಿ ಕಡೆಯ ಏಳು ಉಪದ್ರವಗಳಿದ್ದವು. ಏಕೆಂದರೆ, ಅವುಗಳಲ್ಲಿ ದೇವರ ಕೋಪವು ಸಂಪೂರ್ಣವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಾನಾ ಮಳ್ಬಾರ್ ಅನಿಎಕ್ ಮೊಟಿ ಅನಿ ವಿಚಿತ್ರ್ ವಳಕ್ ಮಿಯಾ ಬಗಟ್ಲೊ. ಸಾತ್ ದೆವ್‍ದುತಾ ಸಾತ್ ಆಕ್ರಿಚಿ ತರಾಸಾ ಘೆವ್ನ್ ಇಬೆ ಹೊತ್ತಿ ಕಶ್ಯಾಕ್ ಮಟ್ಲ್ಯಾರ್ ಹಿ ತರಾಸಾ ದೆವಾಚ್ಯಾ ರಾಗಾಚಿ ಆಕ್ರಿಚಿ ಫಿಡಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 15:1
21 ತಿಳಿವುಗಳ ಹೋಲಿಕೆ  

ನೀವು ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧವಾಗಿ ನಡೆದರೆ ನಾನು ನಿಮ್ಮ ಪಾಪಗಳ ನಿವಿುತ್ತ ಇನ್ನೂ ಏಳರಷ್ಟಾಗಿ ನಿಮ್ಮನ್ನು ಬಾಧಿಸುವೆನು.


ಕಡೇ ಏಳು ಉಪದ್ರವಗಳಿಂದ ತುಂಬಿದ ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತಾಡುತ್ತಾ - ಬಾ, ಯಜ್ಞದ ಕುರಿಯಾದಾತನಿಗೆ ಹೆಂಡತಿಯಾಗತಕ್ಕ ಮದಲಗಿತ್ತಿಯನ್ನು ನಿನಗೆ ತೋರಿಸುವೆನು ಎಂದು ಹೇಳಿ


ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಬರುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.


ಆಗ ಪವಿತ್ರಸ್ಥಾನದಿಂದ ಬಂದ ಮಹಾ ಶಬ್ದವನ್ನು ಕೇಳಿದೆನು. ಅದು ಆ ಏಳು ಮಂದಿ ದೇವದೂತರಿಗೆ - ನೀವು ಹೋಗಿ ಆ ಏಳು ಪಾತ್ರೆಗಳಲ್ಲಿರುವ ದೇವರ ರೌದ್ರವನ್ನು ಭೂವಿುಯ ಮೇಲೆ ಹೊಯ್ಯಿರಿ ಎಂದು ಹೇಳಿತು.


ಆಗ ಆ ದೂತನು ತನ್ನ ಕುಡುಗೋಲನ್ನು ಭೂವಿುಗೆ ಹಾಕಿ ಭೂವಿುಯ ದ್ರಾಕ್ಷೇಬಳ್ಳಿಯ ಹಣ್ಣನ್ನು ಕೊಯಿದು ದೇವರ ರೌದ್ರವೆಂಬ ದೊಡ್ಡ ತೊಟ್ಟಿಯಲ್ಲಿ ಹಾಕಿದನು.


ಅವನು ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೆ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು; ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.


ಆತನು ಉದ್ಧರಿಸುವವನೂ ರಕ್ಷಿಸುವವನೂ ಭೂಮ್ಯಾಕಾಶಗಳಲ್ಲಿ ಅದ್ಭುತಮಹತ್ವಗಳನ್ನು ನಡಿಸುವವನೂ ಆಗಿದ್ದಾನೆ; ಆತನೇ ದಾನಿಯೇಲನನ್ನು ಸಿಂಹಗಳ ಕೈಯಿಂದ ತಪ್ಪಿಸಿದನು.


ಎರಡನೆಯ ವಿಪತ್ತು ಕಳೆದುಹೋಯಿತು; ಇಗೋ, ಮೂರನೆಯ ವಿಪತ್ತು ಬೇಗನೆ ಬರುತ್ತದೆ.


ಸಿಂಹವು ಗರ್ಜಿಸುವ ಪ್ರಕಾರ ಮಹಾ ಶಬ್ದದಿಂದ ಕೂಗಿದನು.


ಏಳು ತುತೂರಿಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರು ತುತೂರಿಗಳನ್ನೂದುವದಕ್ಕೆ ಸಿದ್ಧಮಾಡಿಕೊಂಡರು.


ಆಮೇಲೆ ನಾನು ನೋಡಲಾಗಿ ಇಗೋ, ಒಂದೇ ಗರುಡಪಕ್ಷಿಯು ಆಕಾಶಮಧ್ಯದಲ್ಲಿ ಹಾರಾಡುತ್ತಿತ್ತು. ಅದು - ಅಯ್ಯೋ, ಅಯ್ಯೋ, ಅಯ್ಯೋ, ಊದಬೇಕಾಗಿರುವ ಮೂವರು ದೇವದೂತರ ವಿುಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿಗಳಿಗೆ ಎಂಥಾ ವಿಪತ್ತುಗಳು ಸಂಭವಿಸುವವು ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.


ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ಮಂದಿ ದೇವದೂತರನ್ನು ಕಂಡೆನು; ಅವರಿಗೆ ಏಳು ತುತೂರಿಗಳು ಕೊಡಲ್ಪಟ್ಟವು.


ಉಪದ್ರವಗಳಿಂದ ಸಾಯದೆ ಉಳಿದ ಜನರು ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು ದೇವರ ಕಡೆಗೆ ತಿರುಗಲಿಲ್ಲ; ಅವರು ದೆವ್ವಗಳ ಪೂಜೆಯನ್ನೂ ಬಂಗಾರ ಬೆಳ್ಳಿ ತಾಮ್ರ ಕಲ್ಲು ಮರ ಇವೇ ಮುಂತಾದವುಗಳಿಂದ ಮಾಡಲ್ಪಟ್ಟು ನೋಡಲಾರದೆ ಕೇಳಲಾರದೆ ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ.


ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತಾಡಿ - ಬಾ, ಬಹಳ ನೀರುಗಳ ಮೇಲೆ ವಾಸಿಸಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಿನಗೆ ತೋರಿಸುತ್ತೇನೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು