ಪ್ರಕಟನೆ 15:4 - ಕನ್ನಡ ಸತ್ಯವೇದವು J.V. (BSI)4 ಕರ್ತನೇ, ನಿನ್ನ ನಾಮಕ್ಕೆ ಭಯಪಡದವರೂ ಅದನ್ನು ಘನವಾದದ್ದೆಂದು ಒಪ್ಪಿಕೊಳ್ಳದವರೂ ಯಾರಾದರೂ ಇದ್ದಾರೇ? ನೀನೊಬ್ಬನೇ ಪರಿಶುದ್ಧನು; ನಿನ್ನ ನೀತಿಯುಳ್ಳ ಕೃತ್ಯಗಳು ಪ್ರಕಾಶಕ್ಕೆ ಬಂದದರಿಂದ ಎಲ್ಲಾ ಜನಾಂಗಗಳು ಬಂದು ನಿನ್ನ ಸನ್ನಿಧಾನದಲ್ಲಿ ನಮಸ್ಕಾರ ಮಾಡುವರು ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಕರ್ತನೇ, ನಿನಗೆ ಭಯಪಡದವರು ಮತ್ತು ನಿನ್ನ ನಾಮವನ್ನು ಮಹಿಮೆ ಪಡಿಸದವರು ಯಾರಾದರು ಇದ್ದಾರೆಯೇ? ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ನ್ಯಾಯತೀರ್ಪು ಬೆಳಕಿಗೆ ಬಂದುದರಿಂದ ಸರ್ವಜನಾಂಗಗಳು ನಿನ್ನ ಸನ್ನಿಧಾನಕ್ಕೆ ಬಂದು ನಿನ್ನನ್ನು ಆರಾಧಿಸುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಹೇ ಪ್ರಭೂ, ನಿನಗಂಜದವರಾರು? ನಿನ್ನ ನಾಮಸ್ತುತಿ ಮಾಡದವರಾರು? ಪರಮಪವಿತ್ರ ನೀನಲ್ಲದಿನ್ಯಾರು ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಪ್ರಭುವೇ, ಜನರೆಲ್ಲರೂ ನಿನಗೆ ಭಯಗೊಳ್ಳುತ್ತಾರೆ; ಜನರೆಲ್ಲರೂ ನಿನ್ನ ಹೆಸರನ್ನು ಸ್ತುತಿಸುತ್ತಾರೆ. ನೀನು ಮಾತ್ರ ಪರಿಶುದ್ಧನಾದವನು. ನೀನು ಯೋಗ್ಯವಾದ ಕಾರ್ಯಗಳನ್ನು ಮಾಡುತ್ತೀ ಎಂಬುದು ಸ್ಪಷ್ಟವಾಗಿರುವುದರಿಂದ ಜನರೆಲ್ಲರೂ ನಿನ್ನ ಸನ್ನಿಧಿಗೆ ಬಂದು ನಿನ್ನನ್ನು ಆರಾಧಿಸುತ್ತಾರೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರು? ಏಕೆಂದರೆ ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ಕೃತ್ಯಗಳು ಪ್ರಕಟವಾದ್ದರಿಂದ ಎಲ್ಲಾ ರಾಷ್ಟ್ರಗಳವರು ಬಂದು, ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಸರ್ವೆಸ್ವರಾ ತುಕಾ ಭಿಂಯ್ ನಸಲ್ಲೊ ಕೊನ್ ಹಾಯ್?, ತುಜ್ಯಾ ಮೊಟ್ಯಾಪಾನಾಚ್ಯಾ ವಿಶಯಾತ್ ಸಾಂಗಿನಸ್ತಾನಾ ಕೊನಾಕ್ ರ್‍ಹಾವ್ಕ್ ಹೊತಾ?, ತಿಯಾ ಎಕ್ಲೊಚ್ ಪವಿತ್ರ್. ಸಗ್ಳಿ ದೆಶಾ ಯೆತ್ಯಾತ್ ಅನಿ ತುಜೆ ಆರಾದನ್ ಕರ್‍ತ್ಯಾತ್, ಕಶ್ಯಾಕ್ ಮಟ್ಲ್ಯಾರ್ ತುಜಿ ನ್ಯಾಯ್ ಪಾನಾಚಿ ಕಾಮಾ ಸಗ್ಳ್ಯಾಕ್ನಿ ದಿಸುನ್ ಯೆಲ್ಯಾತ್”. ಅಧ್ಯಾಯವನ್ನು ನೋಡಿ |