Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 15:6 - ಕನ್ನಡ ಸತ್ಯವೇದವು J.V. (BSI)

6 ಅದರೊಳಗಿಂದ ಏಳು ಉಪದ್ರವಗಳನ್ನು ಕೈಯಲ್ಲಿ ಹಿಡಿದಿರುವ ಆ ಏಳು ಮಂದಿ ದೇವದೂತರು ಬಂದರು; ಅವರು ಪ್ರಕಾಶವೂ ನಿರ್ಮಲವೂ ಆದ ನಾರುಮಡಿಯನ್ನು ಧರಿಸಿಕೊಂಡಿದ್ದರು; ತಮ್ಮ ಎದೆಗಳಿಗೆ ಚಿನ್ನದ ಪಟ್ಟಿಯನ್ನು ಕಟ್ಟಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆ ಆಲಯದೊಳಗಿಂದ ಏಳು ಉಪದ್ರವಗಳನ್ನು ಕೈಯಲ್ಲಿ ಹಿಡಿದಿರುವ ಆ ಏಳು ಮಂದಿ ದೇವದೂತರು ಬಂದರು. ಅವರು ಶುಭ್ರವೂ, ಪ್ರಕಾಶವೂ ಆದ ನಾರುಮಡಿಯನ್ನು ಧರಿಸಿಕೊಂಡಿದ್ದರು. ಮತ್ತು ತಮ್ಮ ಎದೆಗಳ ಮೇಲೆ ಚಿನ್ನದ ಪಟ್ಟಿಯನ್ನು ಕಟ್ಟಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಏಳು ವಿಪತ್ತುಗಳನ್ನು ಹಿಡಿದಿದ್ದ ಏಳು ದೇವದೂತರು ಈ ದೇವಾಲಯದಿಂದ ಹೊರಗೆ ಬಂದರು. ಅವರು ಶುಭ್ರವಾದ ಮತ್ತು ಹೊಳೆಯುವ ಉಡುಪುಗಳನ್ನು ತೊಟ್ಟಿದ್ದರು; ಎದೆಗಳಿಗೆ ಚಿನ್ನದ ಪಟ್ಟಿಗಳನ್ನು ಕಟ್ಟಿಕೊಂಡು ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಏಳು ಉಪದ್ರವಗಳನ್ನು ತರುವ ಏಳು ಮಂದಿ ದೇವದೂತರು ಆಲಯದಿಂದ ಹೊರಗೆ ಬಂದರು. ಅವರು ಶುಭ್ರವಾದ ಮತ್ತು ಪ್ರಕಾಶಮಾನವಾದ ನಾರುಮಡಿಯನ್ನು ಧರಿಸಿದ್ದರು. ಅವರು ಎದೆಯ ಸುತ್ತಲೂ ಚಿನ್ನದ ಪಟ್ಟಿಗಳನ್ನು ಕಟ್ಟಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆ ದೇವಾಲಯದೊಳಗಿಂದ ಏಳು ಉಪದ್ರವಗಳನ್ನು ಹಿಡಿದು, ಆ ಏಳು ದೇವದೂತರು ಬಂದರು. ಅವರು ಪ್ರಕಾಶಮಯವಾದ ಶುಭ್ರವಾದ ನಾರುಮಡಿಯನ್ನು ಧರಿಸಿಕೊಂಡಿದ್ದರು. ತಮ್ಮ ಎದೆಗಳಿಗೆ ಚಿನ್ನದ ಪಟ್ಟಿಯನ್ನು ಕಟ್ಟಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತ್ಯಾ ಗುಡಿತ್ನಾ ಸಾತ್ ತರಾಸಾ ಧರಲ್ಲಿ ಸಾತ್ ದೆವಾಚ್ಯಾ ದುತಾ ಭಾಯ್ರ್ ಯೆಲಿ, ತೆನಿ ಎಗ್ದಮ್ ಪವಿತ್ರ್ ಹೊಳ್ವಳ್ತಲೆ ಮ್ಹಾಗ್ರೆ ಕಪ್ಡೆ ನೆಸಲ್ಲ್ಯಾನಿ ಅನಿ ತೆಂಚ್ಯಾ ಹಿರ್‍ದ್ಯಾಕ್ನಿ ಸೊನ್ಯಾಚ್ಯಾ ಪಟ್ಟಿಯಾ ಭಾಂದುನ್ ಘೆಟಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 15:6
9 ತಿಳಿವುಗಳ ಹೋಲಿಕೆ  

ತಿರುಗಿದಾಗ ಏಳು ಚಿನ್ನದ ದೀಪಸ್ತಂಭಗಳನ್ನೂ ಆ ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತೆ ಇರುವವನನ್ನೂ ಕಂಡೆನು. ಆತನು ನಿಲುವಂಗಿಯನ್ನು ತೊಟ್ಟು ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.


ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾಲಕ್ಷಣವು ನನಗೆ ಕಾಣಿಸಿತು. ಏಳು ಮಂದಿ ದೇವದೂತರ ಕೈಯಲ್ಲಿ ಏಳು ಉಪದ್ರವಗಳಿದ್ದವು; ಇವು ಕಡೇ ಉಪದ್ರವಗಳು; ಇವುಗಳಲ್ಲಿ ದೇವರ ರೌದ್ರವು ಮುಗಿದಿರುವದು.


ಆಗ ದೂತನಾದ ಮತ್ತೊಬ್ಬನು ದೇವಾಲಯದೊಳಗಿಂದ ಬಂದು ಮೇಘದ ಮೇಲೆ ಕುಳಿತಿದ್ದಾತನಿಗೆ - ಭೂವಿುಯ ಪೈರು ಮಾಗಿ ಒಣಗಿದೆ; ಕೊಯ್ಯುವ ಕಾಲ ಬಂತು; ನಿನ್ನ ಕುಡುಗೋಲನ್ನು ಹಾಕಿ ಕೊಯ್ಯಿ ಎಂದು ಮಹಾ ಶಬ್ದದಿಂದ ಕೂಗಿದನು.


ಈ ವಿಷಯದಲ್ಲಿ ಅವರಿಗೆ ಗಲಿಬಿಲಿ ಉಂಟಾದಾಗ ಹೊಳೆಯುವ ಉಡುಪನ್ನು ಧರಿಸಿದ್ದ ಇಬ್ಬರು ಪುರುಷರು ಅಕಸ್ಮಾತ್ತಾಗಿ ಅವರ ಬಳಿಯಲ್ಲಿ ನಿಂತುಕೊಂಡರು.


ಕಣ್ಣೆತ್ತಿ ನೋಡಲು ಇಗೋ, ನಾರಿನ ಬಟ್ಟೆಯನ್ನು ಹೊದ್ದುಕೊಂಡು ಊಫಜಿನ ಅಪರಂಜಿಯ ಪಟ್ಟಿಯನ್ನು ಸೊಂಟಕ್ಕೆ ಬಿಗಿದುಕೊಂಡ ಒಬ್ಬ ಪುರುಷನು ನನಗೆ ಕಾಣಿಸಿದನು;


ಮತ್ತೊಬ್ಬ ದೂತನು ಪರಲೋಕದಲ್ಲಿರುವ ದೇವಾಲಯದೊಳಗಿಂದ ಬಂದನು. ಅವನಲ್ಲಿ ಸಹ ಹದವಾದ ಕುಡುಗೋಲು ಇತ್ತು.


ಪ್ರಕಾಶಮಾನವೂ ನಿರ್ಮಲವೂ ಆದ ನಯವಾದ ನಾರುಮಡಿಯನ್ನು ಧರಿಸಿಕೊಳ್ಳುವದಕ್ಕೆ ಆಕೆಗೆ ಅನುಗ್ರಹಿಸೋಣವಾಗಿತ್ತು. ಆ ನಾರುಮಡಿ ಅಂದರೆ ದೇವಜನರ ಸತ್ಕಾರ್ಯಗಳೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು