Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 16:11 - ಕನ್ನಡ ಸತ್ಯವೇದವು J.V. (BSI)

11 ತಮ್ಮ ಕೃತ್ಯಗಳ ವಿಷಯದಲ್ಲಿ ಮಾನಸಾಂತರಮಾಡಿಕೊಳ್ಳದೆ ತಮ್ಮ ಕಷ್ಟಗಳ ದೆಸೆಯಿಂದಲೂ ಹುಣ್ಣುಗಳ ದೆಸೆಯಿಂದಲೂ ಪರಲೋಕ ದೇವರನ್ನು ದೂಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ತಮ್ಮ ಯಾತನೆಗಳಿಗಾಗಿಯೂ ಹುಣ್ಣುಗಳ ದೆಸೆಯಿಂದಲೂ ಪರಲೋಕದ ದೇವರನ್ನು ದೂಷಿಸಿದಲ್ಲದೆ. ಅವರು ತಮ್ಮ ಕೃತ್ಯಗಳಿಗಾಗಿ ಮಾನಸಾಂತರ ಹೊಂದಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ತಮ್ಮ ನೋವು ಬಾಧೆಗಳ ನಿಮಿತ್ತವೂ ತಮ್ಮ ಉರಿ ಹುಣ್ಣುಗಳ ನಿಮಿತ್ತವೂ ಸ್ವರ್ಗದ ದೇವರನ್ನು ದೂಷಿಸಿದರು. ತಮ್ಮ ದುಷ್ಕೃತ್ಯಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಜನರು ತಮಗಾದ ಹುಣ್ಣುಗಳಿಂದ ಮತ್ತು ನೋವಿನಿಂದ ಪರಲೋಕದ ದೇವರನ್ನು ದೂಷಿಸಿದರು. ಆದರೆ ಜನರು ತಾವು ಮಾಡುವ ಕೆಟ್ಟಕಾರ್ಯಗಳನ್ನು ತೊರೆದುಬಿಟ್ಟು ತಮ್ಮ ಹೃದಯಗಳನ್ನು ಮಾರ್ಪಡಿಸಿಕೊಳ್ಳಲು ಒಪ್ಪಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ತಮ್ಮ ನೋವುಗಳಿಗಾಗಿಯೂ ಹುಣ್ಣುಗಳಿಗಾಗಿಯೂ ಪರಲೋಕದ ದೇವರನ್ನು ದೂಷಿಸಿದರು. ಆದರೆ ಅವರು, ತಮ್ಮ ಕೃತ್ಯಗಳಿಗಾಗಿ ಪಶ್ಚಾತ್ತಾಪ ಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಅನಿ ತೆನಿ ತೆಂಚ್ಯಾ ತರಾಸಾಸಾಟ್ನಿ ಅನಿ ತ್ಯಾ ದುಕ್ಕಾಂಚ್ಯಾಸಾಟ್ನಿ ಸರ್ಗಾಚ್ಯಾ ದೆವಾಕ್ ಸರಾಪ್ಲ್ಯಾನಿ, ಖರೆ ತೆನಿ ಅಪ್ಲ್ಯಾ ಅಪ್ಲ್ಯಾ ಬುರ್ಶ್ಯಾ ವಾಟಾ ಸೊಡುಕ್‍ನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 16:11
20 ತಿಳಿವುಗಳ ಹೋಲಿಕೆ  

ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರಮಾಡಿಕೊಳ್ಳದೆ ಈ ಉಪದ್ರವಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು.


ಮತ್ತು ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆನೇಕಲ್ಲಿನ ಮಳೆ ಸುರಿಯಿತು; ಒಂದೊಂದು ಕಲ್ಲು ಹೆಚ್ಚುಕಡಿಮೆ ನಾಲ್ಕುಮಣ ತೂಕವಾಗಿತ್ತು. ಆ ಆನೇಕಲ್ಲಿನ ಮಳೆಯ ಕಾಟವು ಬಹಳ ಹೆಚ್ಚಾಗಿದ್ದದರಿಂದ ಆ ಮಳೆಯಲ್ಲಿ ಸಿಕ್ಕಿಕೊಂಡ ಮನುಷ್ಯರು ದೇವರನ್ನು ದೂಷಿಸಿದರು.


ಆಗ ಮೊದಲನೆಯವನು ಹೊರಟು ತನ್ನ ಪಾತ್ರೆಯಲ್ಲಿದ್ದದ್ದನ್ನು ಭೂವಿುಗೆ ಹೊಯ್ದನು; ಕೂಡಲೇ ಮೊದಲನೆಯ ಮೃಗದ ಗುರುತನ್ನು ಹೊಂದಿ ಅದರ ವಿಗ್ರಹಕ್ಕೆ ನಮಸ್ಕಾರಮಾಡುವ ಮನುಷ್ಯರ ಮೈಮೇಲೆ ಕೆಟ್ಟ ಉರಿಹುಣ್ಣು ಎದ್ದಿತು.


ಅದೇ ಗಳಿಗೆಯಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದಂಶವು ಬಿದ್ದುಹೋಯಿತು; ಆ ಭೂಕಂಪದಿಂದ ಏಳು ಸಾವಿರ ಮಂದಿ ಸತ್ತುಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕ ದೇವರನ್ನು ಘನಪಡಿಸಿದರು.


ದೇವರ ಕಡೆಗೆ ತಿರುಗಿಕೊಳ್ಳುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ದೇವರ ಕಡೆಗೆ ತಿರುಗಿಕೊಂಡು ತನ್ನ ಜಾರತ್ವವನ್ನು ಬಿಟ್ಟುಬಿಡುವದಕ್ಕೆ ಅವಳಿಗೆ ಇಷ್ಟವಿಲ್ಲ.


ಆದರೆ ದುಷ್ಟರೂ ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.


ಪರಲೋಕದಲ್ಲಿರುವ ದೇವರಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನ ಕೃಪೆಯು ಶಾಶ್ವತವಾದದ್ದು.


ಅರಸನ ಮತ್ತು ಅವನ ಸಂತಾನದವರ ರಾಜ್ಯದ ಮೇಲೆ ದೇವಕೋಪವುಂಟಾಗದ ಹಾಗೆ ನೀವು ಪರಲೋಕ ದೇವರ ಆಜ್ಞಾನುಸಾರ ಬೇಕಾದದ್ದನ್ನೆಲ್ಲಾ ಯಾವ ಕೊರತೆಯೂ ಇಲ್ಲದೆ ಒದಗಿಸಿಕೊಡಬೇಕು.


ಅವರಾದರೋ ಪರಲೋಕದೇವರಿಗೆ ಸುಗಂಧಹೋಮಗಳನ್ನು ಸಮರ್ಪಿಸಿ ರಾಜನ ಮತ್ತು ರಾಜಪುತ್ರರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥನೆ ಮಾಡಲಿ.


ಪಾರಸಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ - ಪರಲೋಕದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನೂ ಕೊಟ್ಟು ತನಗೋಸ್ಕರ ಯೆಹೂದ ದೇಶದ ಯೆರೂಸಲೇವಿುನಲ್ಲಿ ಆಲಯವನ್ನು ಕಟ್ಟಿಸಬೇಕು ಎಂದು ಆಜ್ಞಾಪಿಸಿದ್ದಾನೆ.


ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು, ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮ ಮಾಡಿ ಶಾಶ್ವತವಾಗಿ ನಿಲ್ಲುವದು.


ಆಗ ಅರಸನು ನನ್ನನ್ನು - ನಿನ್ನ ಅಪೇಕ್ಷೆಯೇನು ಎಂದು ಕೇಳಿದನು. ನಾನು ಪರಲೋಕದ ದೇವರನ್ನು ಪ್ರಾರ್ಥಿಸಿ ಅರಸನಿಗೆ - ರಾಜರ ಚಿತ್ತವಿರುವದಾದರೆ ಮತ್ತು


ನಾನು ಈ ವರ್ತಮಾನವನ್ನು ಕೇಳಿದಾಗ ನೆಲದ ಮೇಲೆ ಕೂತುಕೊಂಡು ಅತ್ತೆನು; ಕೆಲವು ದಿವಸಗಳವರೆಗೂ ಶೋಕಿಸುತ್ತಾ ಉಪವಾಸವಾಗಿದ್ದು ಪರಲೋಕ ದೇವರ ಮುಂದೆ ವಿಜ್ಞಾಪನೆ ಮಾಡುತ್ತಾ ಇದ್ದೆನು.


ಅರ್ತಷಸ್ತರಾಜನಾದ ನಾನು ಹೊಳೆಯಾಚೆಯ ಪ್ರಾಂತಗಳ ಭಂಡಾರಮುಖ್ಯಸ್ಥರಿಗೆ ಆಜ್ಞಾಪಿಸುವದು - ಯಾಜಕನೂ ಪರಲೋಕದೇವರ ಧರ್ಮಾಚಾರ್ಯನೂ ಆದ ಎಜ್ರನು ಕೇಳಿಕೊಳ್ಳುವದನ್ನೆಲ್ಲಾ ನೀವು ತಪ್ಪದೆ ಕೊಡಬೇಕು.


ರಾಜಾಧಿರಾಜನಾದ ಅರ್ತಷಸ್ತನು ಯಾಜಕನೂ ಪರಲೋಕದೇವರ ಧರ್ಮಶಾಸ್ತ್ರದಲ್ಲಿ ಪ್ರವೀಣನೂ ಆದ ಎಜ್ರನಿಗೆ ಇತ್ಯಾದಿ.


ಪಾರಸಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ - ಪರಲೋಕದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನು ಒಪ್ಪಿಸಿ ತನಗೋಸ್ಕರ ಯೆಹೂದದೇಶದ ಯೆರೂಸಲೇವಿುನಲ್ಲಿ ಆಲಯವನ್ನು ಕಟ್ಟಬೇಕೆಂದು ಆಜ್ಞಾಪಿಸಿದ್ದಾನೆ. ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ ಅವರು ಸ್ವದೇಶಕ್ಕೆ ಹೋಗಲಿ; ಅವರ ದೇವರಾದ ಯೆಹೋವನು ಅವರ ಸಂಗಡ ಇರುವನು ಎಂದು ಪ್ರಕಟಿಸಿದನು.


ಕಡಲನ್ನೂ ಒಣನೆಲವನ್ನೂ ಸೃಷ್ಟಿಸಿದ ಪರಲೋಕದೇವರಾದ ಯೆಹೋವನ ಭಕ್ತನು ಎಂದು ಹೇಳಿದನು.


ಕಷ್ಟ ಬಂದಾಗ ಅರಸನಾದ ಆಹಾಜನು ಯೆಹೋವನಿಗೆ ಮತ್ತಷ್ಟು ದ್ರೋಹಿಯಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು