Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 16:15 - ಕನ್ನಡ ಸತ್ಯವೇದವು J.V. (BSI)

15 (ಇಗೋ, ಕಳ್ಳನು ಬರುವಂತೆ ಬರುತ್ತೇನೆ; ತಾನು ನಿರ್ವಾಣನಾಗಿ ತಿರುಗಾಡಿ ಅವಮಾನಕ್ಕೆ ಗುರಿಯಾದೇನೆಂದು ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ಇಗೋ ಕಳ್ಳನು ಬರುವಂತೆ ಬರುತ್ತೇನೆ. ತಾನು ಬೆತ್ತಲೆಯಾಗಿ ತಿರುಗಾಡಿ ಜನರಿಂದ ಅವಮಾನಕ್ಕೆ ಗುರಿಯಾಗದಂತೆ ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಜಾಗರೂಕತೆಯಿಂದ ಕಾಪಾಡಿಕೊಳ್ಳುವವನು ಧನ್ಯನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ಬೆತ್ತಲೆಯಾಗಿ ಎಲ್ಲರ ಮುಂದೆ ಕಾಣಿಸಿಕೊಂಡು ನಾಚಿಕೆಗೀಡಾಗದಂತೆ ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಧರಿಸಿಕೊಂಡಿರುವವನು ಭಾಗ್ಯವಂತನು!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಕೇಳಿರಿ! ನಾನು ಕಳ್ಳನಂತೆ ಬರುತ್ತೇನೆ. ಎಚ್ಚರವಾಗಿದ್ದು ತನ್ನ ಬಟ್ಟೆಗಳನ್ನು ಕಾಪಾಡಿಕೊಳ್ಳುವವನು ಭಾಗ್ಯವಂತನಾಗಿದ್ದಾನೆ. ಆಗ ಅವನು ಬಟ್ಟೆಯಿಲ್ಲದೆ ಹೊರಗೆ ಹೋಗಿ ತನ್ನನ್ನು ನಾಚಿಕೆಗೆ ಗುರಿಪಡಿಸಿಕೊಳ್ಳುವ ಅಗತ್ಯತೆವಿರುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಇಗೋ, ನಾನು ಕಳ್ಳನು ಬರುವಂತೆ ಬರುತ್ತೇನೆ. ಬೆತ್ತಲೆಯಾಗಿ ತಿರುಗಾಡಿ, ಜನರಿಂದ ಅವಮಾನಗೊಳ್ಳದಂತೆ ಎಚ್ಚರವಾಗಿದ್ದು ತನ್ನ ವಸ್ತ್ರವನ್ನು ಯಾವನು ಕಾಪಾಡಿಕೊಳ್ಳುತ್ತಾನೋ ಅವನು ಧನ್ಯನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 “ಆಯ್ಕಾ! ಮಿಯಾ ಎಕ್ ಚೊರಾಚ್ಯಾ ಸರ್ಕೆ ಯೆವ್‍ಲಾಲಾ ಅಪ್ನಿ ಲೊಕಾತ್ನಿ ನಾಗ್ಡೆ ಫಿರುನ್ ಅಪ್ನಾಚಿ ಮರ್‍ಯಾದ್ ಕಾಡುನ್ ಘೆಯ್‍ನಸ್ತಾನಾ ರ್‍ಹಾವ್‍ಸಾಟ್ನಿ ಮನುನ್ ಜಾಗೆ ರಾವ್ನ್ ಅಪ್ನಾಚೆ ಕಪ್ಡೆ ರಾಕುಂಗೆತ್ ರ್‍ಹಾತಲಿ ಲೊಕಾ ಕವ್ಡಿ ಸುಖಿ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 16:15
23 ತಿಳಿವುಗಳ ಹೋಲಿಕೆ  

ನೀನು ಐಶ್ವರ್ಯವಂತನಾಗುವಂತೆ ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ, ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದುಕೊಳ್ಳುವದಕ್ಕಾಗಿ ಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇನೆ.


ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವದು, ಸೂರ್ಯಚಂದ್ರ ನಕ್ಷತ್ರಗಳು ಉರಿದು ಲಯವಾಗಿ ಹೋಗುವವು, ಭೂವಿುಯೂ ಅದರಲ್ಲಿರುವ ಕೆಲಸಗಳೂ ಸುಟ್ಟುಹೋಗುವವು.


ಆದಕಾರಣ ಆ ದಿನವಾದರೂ ಗಳಿಗೆಯಾದರೂ ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರವಾಗಿರ್ರಿ.


ಅಂದರೆ ಆ ದಿನದಲ್ಲಿ ನಾವು ಇನ್ನೂ ದೇಹದಲ್ಲಿಯೇ ಇದ್ದರೆ ಆ ನಿವಾಸವನ್ನು ದೇಹದ ಮೇಲೆಯೇ ಧರಿಸಿಕೊಳ್ಳುವೆವು.


ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಮನಸ್ಸು ಸಿದ್ಧವಾಗಿದೆ ಸರಿ, ಆದರೆ ದೇಹಕ್ಕೆ ಬಲ ಸಾಲದು ಎಂದು ಹೇಳಿದನು.


ಆದಕಾರಣ ನಾನು ಕಣ್ಣೀರುಸುರಿಸುತ್ತಾ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿಹೇಳಿದೆನೆಂದು ನೀವು ಜ್ಞಾಪಕಮಾಡಿಕೊಂಡು ಎಚ್ಚರವಾಗಿರಿ.


ಆದಕಾರಣ ನಾವು ಇತರರಂತೆ ನಿದ್ದೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿರೋಣ.


ಆದರೆ ಬರುವದಕ್ಕಿರುವ ಇವೆಲ್ಲವುಗಳೊಳಗಿಂದ ತಪ್ಪಿಸಿಕೊಳ್ಳುವದಕ್ಕೂ ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವದಕ್ಕೂ ನೀವು ಪೂರ್ಣ ಶಕ್ತರಾಗುವಂತೆ ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆ ಮಾಡಿಕೊಳ್ಳುತ್ತಾ ಎಚ್ಚರವಾಗಿರ್ರಿ ಅಂದನು.


ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಮನಸ್ಸು ಸಿದ್ಧವಾಗಿದೆ ಸರಿ, ಆದರೆ ದೇಹಕ್ಕೆ ಬಲ ಸಾಲದು ಎಂದು ಹೇಳಿದನು.


ನಿನ್ನ ಮಾನವು ಬೈಲಿಗೆ ಬಿದ್ದು ನೀನು ನಾಚಿಕೆಗೀಡಾಗುವಿ, ನಾನು ಯಾರನ್ನೂ ಕರುಣಿಸದೆ ಮುಯ್ಯಿ ತೀರಿಸುವೆನು.


ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಜಿತೇಂದ್ರಿಯರಾಗಿಯೂ ಪ್ರಾರ್ಥನೆಗೆ ಸಿದ್ಧವಾಗಿರುವಂತೆ ಸ್ವಸ್ಥಚಿತ್ತರಾಗಿಯೂ ಇರ್ರಿ.


ಇವುಗಳನ್ನು ನಾನು ನೋಡಿ ನೀನು ರವಿುಸಿದ ನಿನ್ನ ಎಲ್ಲಾ ವಿುಂಡರನ್ನೂ ನೀನು ಮೋಹಿಸಿದ ಸಮಸ್ತರನ್ನೂ ನೀನು ಹಗೆಮಾಡಿದ ಎಲ್ಲರೊಂದಿಗೆ ಸುತ್ತುಮುತ್ತಲು ನಿನಗೆ ವಿರುದ್ಧವಾಗಿ ಕೂಡಿಸಿ ಅವರ ಕಣ್ಣೆದುರಿಗೆ ನಿನ್ನನ್ನು ಬೆತ್ತಲೆಗೈದು ನಿನ್ನ ಮಾನವನ್ನು ಬಟ್ಟಬೈಲುಮಾಡುವೆನು.


ಅಯ್ಯೋ, ನಿನ್ನ ರೋಷವನ್ನು ಪಾನಕಕ್ಕೆ ಬೆರಸಿ ನಿನ್ನ ನೆರೆಯವರಿಗೆ ಕುಡಿಸಿ ಅವರ ಬೆತ್ತಲೆತನವನ್ನು ನೋಡಬೇಕೆಂದು ಅವರನ್ನು ಅಮಲೇರಿಸಿದವನೇ, ನಿನ್ನ ಗತಿಯನ್ನು ಏನು ಹೇಳಲಿ!


ಇಲ್ಲವಾದರೆ ನಾನು ಅವಳ ಬಟ್ಟೆಯನ್ನು ಕಿತ್ತು ಅವಳನ್ನು ಹುಟ್ಟಿದಾಗ ಇದ್ದಂತೆ ಬೆತ್ತಲೆಯಾಗಿ ನಿಲ್ಲಿಸಿಬಿಟ್ಟು ಕಾಡನ್ನಾಗಿ ಮಾಡಿ ಮರುಭೂವಿುಯ ಸ್ಥಿತಿಗೆ ತಂದು ನೀರಡಿಕೆಯಿಂದ ಸಾಯಿಸುವೆನು;


ಜನರು ಅಂಕೆತಪ್ಪಿ ತಮ್ಮ ಇಷ್ಟಬಂದಂತೆ ಮಾಡುವದಕ್ಕೆ ಆರೋನನು ಅವರನ್ನು ಬಿಟ್ಟದ್ದರಿಂದ ಅವರ ವಿರೋಧಿಗಳು ಅಪಹಾಸ್ಯ ಮಾಡುವದಕ್ಕೆ ಆಸ್ಪದವಾಯಿತು.


ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ; ನೀವು ಕತ್ತಲೆಯಲ್ಲಿರುವವರಲ್ಲ.


ಬೇಗನೆ ಬರುತ್ತೇನೆ; ನಿನಗಿರುವದನ್ನು ಹಿಡಿದುಕೊಂಡಿರು; ನಿನ್ನ ಜಯಮಾಲೆಯನ್ನು ಯಾರೂ ಅಪಹರಿಸಬಾರದು.


ಇಗೋ, ಬೇಗನೆ ಬರುತ್ತೇನೆ. ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನೆಯ ಮಾತುಗಳನ್ನು ಕೈಕೊಂಡು ನಡೆಯುವವನು ಧನ್ಯನು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು