Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 16:5 - ಕನ್ನಡ ಸತ್ಯವೇದವು J.V. (BSI)

5 ಆಮೇಲೆ ಜಲಾಧಿಪತಿಯಾದ ದೂತನು - ಸದಾ ಇರುವಾತನೇ, ಪರಿಶುದ್ಧನೇ, ನೀನು ಹೀಗೆ ತೀರ್ಪುಮಾಡಿದ್ದರಲ್ಲಿ ನೀತಿಸ್ವರೂಪನಾಗಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆ ಮೇಲೆ ಜಲಾಧಿಪತಿಯಾದ ದೂತನು, “ನೀನು ಇರುವಾತನೂ ಇದ್ದಾತನೂ ಪರಿಶುದ್ಧನಾಗಿರುವಾತನು ಆಗಿರುವ ದೇವರು, ಏಕೆಂದರೆ ನೀನು ಈ ರೀತಿ ನ್ಯಾಯತೀರ್ಪುಗಳನ್ನು ಮಾಡಿದ್ದರಿಂದ ನೀತಿಸ್ವರೂಪನೇ ಆಗಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ಜಲಾಧಿಕಾರಿಯಾದ ದೂತನು : “ತ್ರಿಕಾಲಸ್ಥನು ಪರಿಶುದ್ಧನು ನೀನೇ ನೀನಿತ್ತ ತೀರ್ಪು ನ್ಯಾಯಬದ್ಧವಾದುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ನೀರಿನ ಅಧಿಪತಿಯಾದ ದೂತನು ದೇವರಿಗೆ ಹೇಳಿದ್ದು ನನಗೆ ಕೇಳಿಸಿತು: “ನೀನೇ ವರ್ತಮಾನ ಕಾಲದಲ್ಲಿರುವಾತನು. ನೀನೊಬ್ಬನೇ ಪರಿಶುದ್ಧನು. ನೀನು ನೀಡಿದ ಈ ತೀರ್ಪುಗಳಲ್ಲೆಲ್ಲಾ ನೀನು ನ್ಯಾಯವಂತನಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಜಲಾಶಯದ ಜಲಗಳ ದೂತನು: “ನೀವು ಇದ್ದವರೂ, ಇರುವವರೂ ಆಗಿರುವ ಪರಿಶುದ್ಧರು. ನೀವು ನೀತಿವಂತರಾಗಿದ್ದೀರಿ. ಏಕೆಂದರೆ, ನೀವು ಇವುಗಳಿಗೆ ನ್ಯಾಯತೀರಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಪಾನಿಯಾಚ್ಯಾ ವರ್ತಿ ಅದಿಕಾರ್ ಅಸಲ್ಲ್ಯಾ ದೆವಾಚ್ಯಾ ದುತಾನ್, “ತಿಯಾ ಕರಲ್ಲೊ ನಿರ್ನಯ್ ಸಮಾ ಹಾಯ್, ಯೆ ಪವಿತ್ರ್ ಅಸಲ್ಲ್ಯಾ, ತಿಯಾಚ್ ತೊ ಅತ್ತಾ ಅಸಲ್ಲೊ, ಅನಿ ಅದ್ದಿ ಅಸಲ್ಲೊ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 16:5
18 ತಿಳಿವುಗಳ ಹೋಲಿಕೆ  

ಕರ್ತನೇ, ಸರ್ವಶಕ್ತನಾದ ದೇವರೇ, ಸದಾ ಇರುವಾತನೇ, ನೀನು ನಿನ್ನ ಮಹಾ ಅಧಿಕಾರವನ್ನು ವಹಿಸಿಕೊಂಡು ಆಳಿದ್ದರಿಂದ ನಿನಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತೇವೆ.


ನಾನು ಆದಿಯೂ ಅಂತವೂ ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವವನೂ ಸರ್ವಶಕ್ತನೂ ಆಗಿದ್ದೇನೆ ಎಂದು ದೇವರಾದ ಕರ್ತನು ಹೇಳುತ್ತಾನೆ.


ಆಸ್ಯಸೀಮೆಯಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವದೇನಂದರೆ - ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವಾತನಿಂದ


ಯೆಹೋವನ ಮಾರ್ಗಗಳೆಲ್ಲಾ ನೀತಿಯುಳ್ಳವುಗಳು; ಆತನು ಎಲ್ಲಾ ಕಾರ್ಯಗಳಲ್ಲಿ ಕೃಪೆತೋರಿಸುವವನು.


ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಆ ಜೀವಿಗಳಿಗೆ ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರವಿುಸಿಕೊಳ್ಳದೆ - ದೇವರಾದ ಕರ್ತನು ಪರಿಶುದ್ಧನು ಪರಿಶುದ್ಧನು ಪರಿಶುದ್ಧನು; ಆತನು ಸರ್ವಶಕ್ತನು, ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವಂಥವನು ಎಂದು ಹೇಳುತ್ತವೆ.


ನೀನು ನಿನ್ನ ಮೊಂಡತನವನ್ನೂ ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸುವದರಿಂದ ನಿನಗೋಸ್ಕರ ದೇವರ ಕೋಪವನ್ನು ಕೂಡಿಟ್ಟುಕೊಳ್ಳುತ್ತಾ ಇದ್ದೀ. ದೇವರ ಕೋಪವೂ ನ್ಯಾಯವಾದ ತೀರ್ಪು ಪ್ರಕಟವಾಗುವ ದಿವಸ ಬರುತ್ತದಷ್ಟೆ.


ಆದರೆ ನೀತಿಸ್ವರೂಪನಾದ ಯೆಹೋವನು ದುಷ್ಟರು ಹಾಕಿದ ಬಂಧನಗಳನ್ನು ಛೇಧಿಸಿಬಿಟ್ಟನು.


ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ ಎಂದು ಹೇಳಲು ಯೆಹೋವನು -


ಆಮೇಲೆ ಯಜ್ಞವೇದಿಯು ಮಾತಾಡುತ್ತಾ - ದೇವರಾದ ಕರ್ತನೇ, ಸರ್ವಶಕ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ ನಿಜ ಎಂದು ಹೇಳುವದನ್ನು ಕೇಳಿದೆನು.


ನಾವು ನೀತಿ ತಪ್ಪಿನಡೆಯುವದರಿಂದ ದೇವರಲ್ಲಿರುವ ನೀತಿ ಪ್ರಸಿದ್ಧಿಗೆ ಬರುವದಾದರೆ ನಾವು ಏನು ಹೇಳೋಣ? ಉಗ್ರದಂಡನೆಯನ್ನು ಮಾಡುವ ದೇವರು ಅನ್ಯಾಯಸ್ಥನೇನು? (ಈ ಮಾತನ್ನು ಲೋಕರೀತಿಯಾಗಿ ಆಡಿದ್ದೇನೆ.) ಎಂದಿಗೂ ಅಲ್ಲ.


ಆದಕಾರಣ ಯೆಹೋವನು ಆ ಕೇಡನ್ನು ನೋಡಿಕೊಂಡಿದ್ದು ನಮ್ಮ ಮೇಲೆ ಬರಮಾಡಿದ್ದಾನೆ; ನಮ್ಮ ದೇವರಾದ ಯೆಹೋವನು ತಾನು ಮಾಡುವ ಸಕಲ ಕಾರ್ಯಗಳಲ್ಲಿ ಧರ್ಮಸ್ವರೂಪನೇ; ನಾವೋ ಆತನ ಮಾತನ್ನು ಕೇಳಲಿಲ್ಲ.


ಯೆಹೋವನು ನ್ಯಾಯಸ್ವರೂಪನು, ನಾನಾದರೋ ಆತನ ಆಜ್ಞೆಯನ್ನು ಮೀರಿದವಳು; ಜನಾಂಗಗಳೇ, ನೀವೆಲ್ಲರೂ ಕಿವಿಗೊಡಿರಿ, ನನ್ನ ವ್ಯಥೆಯನ್ನು ನೋಡಿರಿ; ನನ್ನ ಯುವತೀ ಯುವಕರು ಸೆರೆ ಹೋಗಿದ್ದಾರಲ್ಲಾ!


ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿ ಎರಡನೆಯ ಸಾರಿ -


ಮೂರನೆಯವನು ತನ್ನ ಪಾತ್ರೆಯಲ್ಲಿದ್ದದ್ದನ್ನು ನದಿಗಳ ಮೇಲೆಯೂ ನೀರಿನ ಬುಗ್ಗೆಗಳ ಮೇಲೆಯೂ ಹೊಯಿದನು; ಅವುಗಳ ನೀರು ರಕ್ತವಾಯಿತು.


ನೀತಿಸ್ವರೂಪನಾದ ತಂದೆಯೇ, ಲೋಕವಂತೂ ನಿನ್ನನ್ನು ತಿಳಿಯಲಿಲ್ಲ, ಆದರೆ ನಾನು ನಿನ್ನನ್ನು ತಿಳಿದಿದ್ದೇನೆ; ಮತ್ತು ಇವರು ನೀನೇ ನನ್ನನ್ನು ಕಳುಹಿಸಿಕೊಟ್ಟಿರುವದಾಗಿ ತಿಳುಕೊಂಡಿದ್ದಾರೆ.


ಅವರು - ಒಡೆಯನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂನಿವಾಸಿಗಳು ನಮ್ಮನ್ನು ಕೊಂದದ್ದಕ್ಕಾಗಿ ನೀನು ಎಷ್ಟು ಕಾಲದವರೆಗೂ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ? ಎಂದು ಮಹಾಶಬ್ದದಿಂದ ಕೂಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು