Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 16:6 - ಕನ್ನಡ ಸತ್ಯವೇದವು J.V. (BSI)

6 ಅವರು ದೇವಜನರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ; ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರು ನೀತಿವಂತರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದ್ದರಿಂದ, ನೀನು ಅವರಿಗೆ ರಕ್ತವನ್ನೇ ಕುಡಿಯುವುದಕ್ಕೆ ಕೊಟ್ಟಿದ್ದೀ ಅದಕ್ಕೆ ಅವರು ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ದೇವಜನರ, ಪೂಜ್ಯಪ್ರವಾದಿಗಳ ರಕ್ತಪಾತಕರಿಗೆ ಕುಡಿಯಲು ನೀನಿತ್ತೆ ಆ ರಕ್ತವ ನೇ ಅವರ ಕೃತ್ಯಕ್ಕದುವೇ ತಕ್ಕ ಸಂಭಾವನೆ,” ಎಂದು ಹಾಡುವುದನ್ನು ನಾನು ಕೇಳಿಸಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ಜನರು ನಿನ್ನ ಪರಿಶುದ್ಧ ಜನರ ಮತ್ತು ನಿನ್ನ ಪ್ರವಾದಿಗಳ ರಕ್ತವನ್ನು ಸುರಿಸಿದರು. ಈಗ ನೀನು ಅವರಿಗೆ ಕುಡಿಯಲು ರಕ್ತವನ್ನೇ ನೀಡಿರುವೆ. ಅವರು ಇದಕ್ಕೆ ಪಾತ್ರರಾಗಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು ನಿಮ್ಮ ಭಕ್ತರ ಮತ್ತು ನಿಮ್ಮ ಪ್ರವಾದಿಗಳ ರಕ್ತವನ್ನು ಸುರಿಸಿದ್ದಾರೆ. ನೀವು ಅವರಿಗೆ ಕುಡಿಯುವುದಕ್ಕೆ ರಕ್ತವನ್ನೇ ಕೊಟ್ಟಿರುವಿರಿ. ಅವರು ಅದಕ್ಕೆ ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತೆನಿ ದೆವಾಚ್ಯಾ ಲೊಕಾಂಚೆ ಅನಿ ಪ್ರವಾದ್ಯಾಂಚೆ ರಗಾತ್ ವೊತ್ಲ್ಯಾನ್ ತಸೆ ಮನುನ್ ತಿಯಾ ತೆಂಕಾ ರಗಾತ್ ಫಿವ್ಕ್ ದಿಲೆಯ್. ತೆಂಕಾ ಕಾಯ್ ಗಾವುಚೆ ಮನುನ್ ಹೊತ್ತೆ, ತೆಚ್ ಗಾವುಲಾ!” ಮನುನ್ ಮನ್ತಲೆ ಮಿಯಾ ಆಯಿಕ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 16:6
25 ತಿಳಿವುಗಳ ಹೋಲಿಕೆ  

ನಿನ್ನ ಹಿಂಸಕರು ಸ್ವಮಾಂಸವನ್ನು ತಿನ್ನುವಂತೆ ಮಾಡುವೆನು; ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೇರುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನರಜನ್ಮದವರೆಲ್ಲರಿಗೂ ಗೊತ್ತಾಗುವದು.


ಜನಾಂಗಗಳು ಕೋಪಿಸಿಕೊಂಡವು, ನಿನ್ನ ಕೋಪವೂ ಪ್ರಕಟವಾಯಿತು. ಸತ್ತವರು ತೀರ್ಪುಹೊಂದುವ ಸಮಯ ಬಂದದೆ; ನೀನು ನಿನ್ನ ದಾಸರಾದ ಪ್ರವಾದಿಗಳಿಗೂ ದೇವಜನರಿಗೂ ನಿನ್ನ ನಾಮಕ್ಕೆ ಭಯಪಡುವ ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲವನ್ನು ಕೊಟ್ಟು ಲೋಕನಾಶಕರನ್ನು ನಾಶಮಾಡುವಿ ಎಂದು ಆತನನ್ನು ಆರಾಧಿಸಿದರು.


ಪ್ರವಾದಿಗಳ ರಕ್ತವೂ ದೇವಜನರ ರಕ್ತವೂ ಭೂವಿುಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವೂ ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.


ಇದಲ್ಲದೆ ಆ ಮೃಗದ ವಿಗ್ರಹಕ್ಕೆ ಜೀವಕೊಡುವ ಸಾಮರ್ಥ್ಯವು ಇದಕ್ಕೆ ದೊರೆಯಿತು. ಆ ಮೃಗದ ವಿಗ್ರಹವು ಮಾತಾಡುವದು; ತನಗೆ ನಮಸ್ಕರಿಸದವರೆಲ್ಲರಿಗೂ ಮರಣದಂಡನೆ ಆಗುವಂತೆ ಮಾಡುವದು.


ಅವುಗಳಿಗಾಗಿ ಆತನು ಯೆಹೂದ್ಯರನ್ನು ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದದರಿಂದ ಆತನ ಅಪ್ಪಣೆಯ ಪ್ರಕಾರ ಈ ಶಿಕ್ಷೆಯು ಅವರಿಗೆ ಆಯಿತು.


ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿ ಎರಡನೆಯ ಸಾರಿ -


ಚೀಯೋನಿನ ಮಧ್ಯದಲ್ಲಿ ಶಿಷ್ಟರ ರಕ್ತವನ್ನು ಸುರಿಸಿದ ಯಾಜಕಪ್ರವಾದಿಗಳ ಪಾಪದೋಷಗಳಿಂದಲೇ ಈ ಗತಿ ಬಂತು.


ಪರಲೋಕವೇ, ಆನಂದಪಡು; ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ, ಇವಳು ನಿಮಗೆ ಅನ್ಯಾಯಮಾಡಿದ್ದಕ್ಕಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದರಿಂದ ಆನಂದಪಡಿರಿ ಎಂದು ಆ ಶಬ್ದ ಹೇಳಿತು.


ಯಾವನು ದೇವಕುಮಾರನನ್ನು ತುಳಿದು ಒಡಂಬಡಿಕೆಯನ್ನು ಸ್ಥಿರಪಡಿಸಿದಂಥ ತನ್ನನ್ನು ಪವಿತ್ರಮಾಡಿದಂಥ ರಕ್ತವನ್ನು ಅಶುದ್ಧವೆಂದೆಣಿಸಿ ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬದನ್ನು ಯೋಚಿಸಿರಿ.


ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.


ಇದನ್ನು ಕೇಳಿ ಸರದಾರರೂ ಸಕಲ ಜನರೂ ಯಾಜಕಪ್ರವಾದಿಗಳಿಗೆ - ಇವನು ಮರಣ ದಂಡನೆಗೆ ತಕ್ಕವನಲ್ಲ; ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಇದನ್ನು ನಮಗೆ ನುಡಿದಿದ್ದಾನಷ್ಟೆ ಎಂದು ಹೇಳಿದ ತರುವಾಯ ದೇಶದ ಹಿರಿಯರಲ್ಲಿ ಕೆಲವರು ಎದ್ದು -


ಯಾಜಕರೂ ಪ್ರವಾದಿಗಳೂ ಇವನು ಮರಣ ದಂಡನೆಗೆ ತಕ್ಕವನು; ಇವನು ಈ ಪಟ್ಟಣಕ್ಕೆ ಅಹಿತನುಡಿದದ್ದನ್ನು ನೀವು ಕಿವಿಯಾರೆ ಕೇಳಿದಿರಷ್ಟೆ ಎಂದು ಸರದಾರರಿಗೂ ಎಲ್ಲಾ ಜನರಿಗೂ ಹೇಳಿದರು.


ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ತಿದ್ದುಪಾಟಾಗಲಿಲ್ಲ; ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.


ತಿಳಿಯದೆ ಪೆಟ್ಟುಗಳಿಗೆ ಯೋಗ್ಯವಾದದ್ದನ್ನು ನಡಿಸಿದವನು ಸ್ವಲ್ಪ ಪೆಟ್ಟು ತಿನ್ನುವನು. ಯಾವನಿಗೆ ಬಹಳವಾಗಿ ಕೊಟ್ಟದೆಯೋ ಅವನ ಕಡೆಯಿಂದ ಬಹಳವಾಗಿ ನಿರೀಕ್ಷಿಸಲ್ಪಡುವದು; ಇದಲ್ಲದೆ ಯಾವನ ವಶಕ್ಕೆ ಬಹಳವಾಗಿ ಒಪ್ಪಿಸಿದೆಯೋ ಅವನ ಕಡೆಯಿಂದ ಇನ್ನೂ ಹೆಚ್ಚಾಗಿ ಕೇಳುವರು.


ಆದದರಿಂದ ಯೆಹೋವನು ಮತ್ತೆ ಹೇಳುವದೇನಂದರೆ - ನೀನು ನನ್ನನ್ನು ಯೆಹೋವನೆಂದು ತಿಳಿದುಕೊಳ್ಳುವದಕ್ಕಾಗಿ ನನ್ನ [ಸೇವಕನ] ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡಿಸುವೆನು; ಆಗ ಅದು ರಕ್ತವಾಗುವದು.


ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು, ಬರೆಗೆ ಬರೆ, ಗಾಯಕ್ಕೆ ಗಾಯ, ಏಟಿಗೆ ಏಟು,


ನಿನ್ನ ರಕ್ತ ಪ್ರವಾಹದಿಂದ ದೇಶವನ್ನು ಬೆಟ್ಟಗಳ ತನಕ ತೋಯಿಸುವೆನು; ಹಳ್ಳಗಳು ನಿನ್ನಿಂದ ತುಂಬುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು