Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 16:8 - ಕನ್ನಡ ಸತ್ಯವೇದವು J.V. (BSI)

8 ನಾಲ್ಕನೆಯವನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸೂರ್ಯನ ಮೇಲೆ ಹೊಯ್ದನು; ಆಗ ಸೂರ್ಯನಿಗೆ ಕಡುಬಿಸಿಲಿನಿಂದ ಮನುಷ್ಯರನ್ನು ಕಂದಿಸುವ ಶಕ್ತಿಯು ಕೊಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾಲ್ಕನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಸೂರ್ಯನ ಮೇಲೆ ಸುರಿದನು. ಆಗ ಸೂರ್ಯನಿಗೆ ಬೆಂಕಿಯಂಥ ಬಿಸಿಲಿನಿಂದ ಮನುಷ್ಯರನ್ನು ಸುಡುವ ಅನುಮತಿ ಕೊಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಾಲ್ಕನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಸೂರ್ಯನ ಮೇಲೆ ಸುರಿದನು. ಆಗ ಸೂರ್ಯನಿಗೆ, ಕಡುಬಿಸಿಲಿನಿಂದ ಮನುಷ್ಯರನ್ನು ಸುಡುವ ಶಕ್ತಿಯನ್ನು ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾಲ್ಕನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಸೂರ್ಯನ ಮೇಲೆ ಸುರಿದನು. ಜನರನ್ನು ಕಡುಬಿಸಿಲಿನಿಂದ ಕಂದಿಸುವ ಅಧಿಕಾರವನ್ನು ಸೂರ್ಯನಿಗೆ ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾಲ್ಕನೆಯ ದೇವದೂತನು ತನ್ನ ಬೋಗುಣಿಯೊಳಗಿರುವುದನ್ನು ಸೂರ್ಯನ ಮೇಲೆ ಸುರಿಯಲು, ಸೂರ್ಯನಿಗೆ ಮನುಷ್ಯರನ್ನು ಬೆಂಕಿಯಿಂದ ಕಂದಿಸುವ ಅಧಿಕಾರ ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಮಾನಾ ಚಾರ್‍ವೆಚ್ಯಾ ದೆವಾಚ್ಯಾ ದುತಾನ್ ಅಪ್ನಾಚ್ಯಾ ಕಟೊರ್‍ಯಾತ್ಲೆ ದಿಸಾಚ್ಯಾ ವರ್ತಿ ವೊತ್ಲ್ಯಾನ್, ತನ್ನಾ ತ್ಯೆಚ್ಯಾ ಝಳಾನ್ ಲೊಕಾಕ್ನಿ ಜಾಳ್ವುನ್ ಟಾಕ್ತಲಿ ಪರವಾನ್ಗಿ ತೆಕಾ ದಿವ್ನ್ ಹೊಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 16:8
11 ತಿಳಿವುಗಳ ಹೋಲಿಕೆ  

ತರುವಾಯ ಬೆಂಕಿಗೆ ಅಧಿಕಾರಿಯಾದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು ಆ ಹದವಾದ ಕುಡುಗೋಲಿನವನಿಗೆ - ನಿನ್ನ ಹದವಾದ ಕುಡುಗೋಲನ್ನು ಹಾಕಿ ಭೂವಿುಯ ದ್ರಾಕ್ಷೇಗೊಂಚಲುಗಳನ್ನು ಕೊಯ್ಯಿ; ಅದರ ಹಣ್ಣುಗಳು ಪೂರಾ ಮಾಗಿವೆ ಎಂದು ಮಹಾಶಬ್ದದಿಂದ ಕೂಗಿದನು.


ಆದರೆ ಬಿಸಿಲೇರಿದಾಗ ಬಾಡಿ ಬೇರಿಲ್ಲದ ಕಾರಣ ಒಣಗಿಹೋದವು.


ಸೂರ್ಯನು ಹುಟ್ಟಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆ ಹೋಗುವವನಾಗಿ ನಾನು ಬದುಕುವದಕ್ಕಿಂತ ಸಾಯುವದೇ ಲೇಸು ಎಂದು ಮರಣವನ್ನು ಕೇಳಿಕೊಂಡನು.


ಅವನು ಅಧೋಲೋಕದ ಕೂಪವನ್ನು ತೆರೆಯಲು ಕೂಪದಿಂದ ಬಂದ ಹೊಗೆ ದೊಡ್ಡ ಕುಲುಮೆಯ ಹೊಗೆಯಂತೆ ಏರಿತು; ಕೂಪದ ಹೊಗೆಯಿಂದ ಸೂರ್ಯನೂ ಆಕಾಶವೂ ಕತ್ತಲಾದವು.


ನಾಲ್ಕನೆಯ ದೇವದೂತನು ತುತೂರಿಯನ್ನೂದಿದಾಗ ಸೂರ್ಯ ಚಂದ್ರ ನಕ್ಷತ್ರಗಳೊಳಗೆ ಮೂರರಲ್ಲಿ ಒಂದು ಭಾಗವು ಬಡಿಯಲ್ಪಟ್ಟು ಕತ್ತಲಾಯಿತು. ಆದದರಿಂದ ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಇತ್ತು. ರಾತ್ರಿಯು ಹಾಗೆಯೇ ಆಯಿತು.


ಇನ್ನು ಮೇಲೆ ಅವರಿಗೆ ಹಸಿವೆ ಇಲ್ಲ, ಬಾಯಾರಿಕೆ ಇಲ್ಲ; ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ;


ಆತನು ಆರನೆಯ ಮುದ್ರೆ ಒಡೆಯುವದನ್ನು ಕಂಡೆನು. ಒಡೆದಾಗ ಮಹಾಭೂಕಂಪ ಉಂಟಾಯಿತು; ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು;


ಇದಲ್ಲದೆ ಸೂರ್ಯ ಚಂದ್ರ ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು. ಭೂವಿುಯ ಮೇಲೆ ಸಮುದ್ರದ ಮತ್ತು ತೆರೆಗಳ ಘೋಷದ ನಿವಿುತ್ತವಾಗಿ ಜನಗಳಿಗೆ ದಿಕ್ಕು ಕಾಣದೆ ಸಂಕಟವು ಉಂಟಾಗುವದು.


ಮತ್ತು ಚಂದ್ರನು ನಾಚಿಕೆಪಡುವನು, ಸೂರ್ಯನು ಲಜ್ಜೆಗೊಳ್ಳುವನು; ಸೇನಾಧೀಶ್ವರನಾದ ಯೆಹೋವನು ಚೀಯೋನ್ ಪರ್ವತದಲ್ಲಿ ಯೆರೂಸಲೇವಿುನೊಳಗೆ ಆಳುವನಷ್ಟೆ. ಆತನ [ಪರಿವಾರದ] ಹಿರಿಯರ ಮುಂದೆ ಪ್ರಭಾವವು ಪ್ರತ್ಯಕ್ಷವಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು